AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದಲ್ಲಿ ಬಿರುಕು? ಹಿರಿಯ ಆಟಗಾರರ ವಿರುದ್ಧ ಗಂಭೀರ್ ಅಸಮಾಧಾನ

Team India: ನ್ಯೂಝಿಲೆಂಡ್ ವಿರುದ್ಧದ ಸರಣಿಯಲ್ಲಿ 3-0 ಅಂತರದಿಂದ ಸೋತಿದ್ದ ಟೀಮ್ ಇಂಡಿಯಾ, ಆ ಬಳಿಕ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ 3-1 ಅಂತರದಿಂದ ಸೋಲನುಭವಿಸಿದೆ. ಈ ಸೋಲುಗಳಿಂದಾಗಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಮೂರನೇ ಬಾರಿ ಫೈನಲ್​ಗೇರುವ ಅವಕಾಶವನ್ನು ಟೀಮ್ ಇಂಡಿಯಾ ಕೈಚೆಲ್ಲಿಕೊಂಡಿತು. ಈ ಸೋಲುಗಳನ್ನು ಇದೀಗ ಬಿಸಿಸಿಐ ಗಂಭೀರವಾಗಿ ಪರಿಗಣಿಸಿದೆ.

ಟೀಮ್ ಇಂಡಿಯಾದಲ್ಲಿ ಬಿರುಕು? ಹಿರಿಯ ಆಟಗಾರರ ವಿರುದ್ಧ ಗಂಭೀರ್ ಅಸಮಾಧಾನ
Team India
ಝಾಹಿರ್ ಯೂಸುಫ್
|

Updated on: Jan 15, 2025 | 2:18 PM

Share

ಭಾರತ ತಂಡದಲ್ಲಿ ಎಲ್ಲವೂ ಸರಿಯಿಲ್ಲವೇ? ಈ ಪ್ರಶ್ನೆ ಮತ್ತೆ ಮುನ್ನಲೆಗೆ ಬಂದಿದೆ. ಅದು ಕೂಡ ಬಿಸಿಸಿಐ ಪರಿಶೀಲನಾ ಸಭೆಯ ಬಳಿಕ. ಬಾರ್ಡರ್ ಗವಾಸ್ಕರ್ ಸರಣಿಯಲ್ಲಿನ ಕಳಪೆ ಪ್ರದರ್ಶನದ ಬಗ್ಗೆ ಚರ್ಚಿಸಲು ಜನವರಿ 11 ರಂದು ಬಿಸಿಸಿಐ ಪರಿಶೀಲನಾ ಸಭೆ ನಡೆಸಿತ್ತು. ಈ ಸಭೆಯಲ್ಲಿ ಟೀಮ್ ಇಂಡಿಯಾದ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್, ಭಾರತ ತಂಡದ ಕೋಚ್ ಗೌತಮ್ ಗಂಭೀರ್ ಮತ್ತು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೂಡ ಭಾಗವಹಿಸಿದ್ದರು.

ಈ ಸಭೆಯಲ್ಲಿ ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಾಗಿದೆ. ಇದೇ ವೇಳೆ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಹಿರಿಯ ಆಟಗಾರರ ನಡೆಯ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ ಎಂದು ವರದಿಯಾಗಿದೆ.

ಟೀಮ್ ಇಂಡಿಯಾದಲ್ಲಿ ಎಲ್ಲವೂ ಸರಿಯಿಲ್ಲ:

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ವೇಳೆಯೇ ಟೀಮ್ ಇಂಡಿಯಾದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಸುದ್ದಿಯಾಗಿತ್ತು. ಅದರಲ್ಲೂ ಡ್ರೆಸ್ಸಿಂಗ್ ರೂಮ್ ವಿಚಾರಗಳು ಹೊರಬರುತ್ತಿದ್ದಂತೆ, ಭಾರತ ತಂಡದಲ್ಲಿ ಭಿನ್ನಾಭಿಪ್ರಾಯಗಳು ಇರುವುದು ಬಹಿರಂಗವಾಗಿತ್ತು.

ಇದೀಗ ಆಸ್ಟ್ರೇಲಿಯಾದಲ್ಲಿ ಟೀಮ್ ಇಂಡಿಯಾದ ಹಿರಿಯ ಆಟಗಾರರು ಅಭ್ಯಾಸ ವಿಷಯದಲ್ಲಿ ಮತ್ತು ಹೋಟೆಲ್‌ಗೆ ಸಂಬಂಧಿಸಿದಂತೆ ಕೆಲವು ವಿಶೇಷ ಬೇಡಿಕೆಗಳನ್ನು ಮುಂದಿಟ್ಟಿದ್ದರು ಎಂಬ ವಿಚಾರ ಬಹಿರಂಗವಾಗಿದೆ.

ಹೀಗಾಗಿ ಟೀಮ್ ಇಂಡಿಯಾದಲ್ಲಿನ ಸೂಪರ್‌ಸ್ಟಾರ್ ಸಂಸ್ಕೃತಿಯನ್ನು ಕೊನೆಗೊಳಿಸಬೇಕೆಂದು ಗೌತಮ್ ಗಂಭೀರ್ ಆಗ್ರಹಿಸಿದ್ದಾರೆ. ಇದರಿಂದ ಇತರೆ ಆಟಗಾರರಿಗೂ ಸಮಸ್ಯೆಯಾಗುತ್ತಿದೆ ಎಂಬ ಅಭಿಪ್ರಾಯವನ್ನು ಟೀಮ್ ಇಂಡಿಯಾ ಕೋಚ್ ಪರಿಶೀಲನಾ ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ ಎಂದು ವರದಿಯಾಗಿದೆ.

ಗಂಭೀರ್ ಬಗ್ಗೆನೂ ಅಸಮಾಧಾನ:

ಒಂದೆಡೆ ಗೌತಮ್ ಗಂಭೀರ್, ಟೀಮ್ ಇಂಡಿಯಾದಲ್ಲಿನ ವಿಚಾರ ಮುಂದಿಟ್ಟರೆ, ಮತ್ತೊಂದೆಡೆ ಆಯ್ಕೆಗಾರರು ಕೂಡ ಗಂಭೀರ್​ಗೆ ಕ್ಲಾಸ್ ತೆಗೆದಿದ್ದಾರೆ ಎಂದು ವರದಿಯಾಗಿದೆ. ಏಕೆಂದರೆ ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಸರಣಿಗಳಿಗೆ ಗಂಭೀರ್ ಬಯಸಿದ ತಂಡವನ್ನು ನೀಡಲಾಗಿದೆ.

ಇದಾಗ್ಯೂ ಟೀಮ್ ಇಂಡಿಯಾ ಈ ಎರಡು ಸರಣಿಗಳಲ್ಲೂ ವಿಫಲವಾಗಿದೆ. ಹೀಗಾಗಿ ಆಯ್ಕೆಗೆ ಸಂಬಂಧಿತ ವಿಷಯಗಳಿಂದ ದೂರ ಉಳಿಯಬೇಕೆಂದು ಗೌತಮ್ ಗಂಭೀರ್​ಗೆ ಆಯ್ಕೆ ಸಮಿತಿ ಸೂಚಿಸಿದೆ ಎಂದು ತಿಳಿದು ಬಂದಿದೆ.

ಇದರ ಜೊತೆಗೆ ಗೌತಮ್ ಗಂಭೀರ್ ತಮ್ಮ ಮ್ಯಾನೇಜರ್ ಗೌರವ್ ಅರೋರಾ ಅವರನ್ನು ಟೀಮ್ ಇಂಡಿಯಾ ಜತೆ ಕರೆದುಕೊಂಡು ಹೋಗುತ್ತಿರುವುದಕ್ಕೆ ಆಯ್ಕೆ ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ. ಅಡಿಲೇಡ್‌ ಟೆಸ್ಟ್ ಪಂದ್ಯದ ವೇಳೆ ಅರೋರಾ ಅವರು ಬಿಸಿಸಿಐನ ವಿಐಪಿ ಬಾಕ್ಸ್‌ನಲ್ಲಿ ಕಾಣಿಸಿಕೊಂಡಿದ್ದರು. ಇದನ್ನೇ ಪ್ರಸ್ತಾಪಿಸಿ ಆಯ್ಕೆ ಸಮಿತಿ ಅಧಿಕಾರಿಗಳು ಗೌತಮ್ ಗಂಭೀರ್​ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: 7 ವರ್ಷಗಳ ಬಳಿಕ ರಣಜಿ ಪಂದ್ಯವಾಡಲು ಸಜ್ಜಾದ ಟೀಮ್ ಇಂಡಿಯಾ ಆಟಗಾರ

ಒಟ್ಟಿನಲ್ಲಿ ಎರಡು ಹೀನಾಯ ಸೋಲುಗಳ ಬೆನ್ನಲ್ಲೇ ಬಿಸಿಸಿಐ ಎಚ್ಚೆತ್ತುಕೊಂಡಿದ್ದು, ಈ ಮೂಲಕ ಆಟಗಾರರಿಗೆ ಹಾಗೂ ಕೋಚ್​ಗೆ ಬಿಸಿ ಮುಟ್ಟಿಸಲು ನಿರ್ಧರಿಸಿದ್ದಾರೆ.

Follow Us
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!
ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!
ಹರಿಹರ ಪಂಚಮಸಾಲಿ ಮಠದಲ್ಲಿ 'ಲೆಕ್ಕ ಕೊಡಿ' ಅಭಿಯಾನ
ಹರಿಹರ ಪಂಚಮಸಾಲಿ ಮಠದಲ್ಲಿ 'ಲೆಕ್ಕ ಕೊಡಿ' ಅಭಿಯಾನ
ರಿಶಿ ಸುನಾಕ್ ಹೆಂಡತಿ ಕನ್ನಡದಲ್ಲಿ ಎಷ್ಟು ಚೆನ್ನಾಗಿ ಮಾತಾಡ್ತಾರೆ ಗೊತ್ತಾ?
ರಿಶಿ ಸುನಾಕ್ ಹೆಂಡತಿ ಕನ್ನಡದಲ್ಲಿ ಎಷ್ಟು ಚೆನ್ನಾಗಿ ಮಾತಾಡ್ತಾರೆ ಗೊತ್ತಾ?
ಚಿನ್ನದ ದರ ಇಳಿಕೆ ಬೆನ್ನಲ್ಲೇ ಜ್ಯುವೆಲ್ಲರಿಗಳಿಗೆ ಮುಗಿಬೀಳುತ್ತಿರುವ ಜನ!
ಚಿನ್ನದ ದರ ಇಳಿಕೆ ಬೆನ್ನಲ್ಲೇ ಜ್ಯುವೆಲ್ಲರಿಗಳಿಗೆ ಮುಗಿಬೀಳುತ್ತಿರುವ ಜನ!
ಗೃಹಬಳಕೆ ಎಲ್​ಪಿಜಿ ಸಿಲಿಂಡರ್​ಗಾಗಿ ರಾಜಧಾನಿ ಜನರ ಕ್ಯೂ!
ಗೃಹಬಳಕೆ ಎಲ್​ಪಿಜಿ ಸಿಲಿಂಡರ್​ಗಾಗಿ ರಾಜಧಾನಿ ಜನರ ಕ್ಯೂ!