AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಸೆನಾ ದೇಶಗಳಲ್ಲಿ ಅತ್ಯಧಿಕ ಗೆಲುವು; ಹೊಸ ಇತಿಹಾಸ ಸೃಷ್ಟಿಸಿದ ಟೀಂ ಇಂಡಿಯಾ

Team India's Historic Test Win: ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಎಡ್ಜ್‌ಬಾಸ್ಟನ್ ಟೆಸ್ಟ್ ಪಂದ್ಯವನ್ನು 336 ರನ್‌ಗಳಿಂದ ಗೆದ್ದು ದಾಖಲೆ ಬರೆದಿದೆ. ಇದರಲ್ಲಿ ಏಷ್ಯಾದ ತಂಡವೊಂದು ಸೆನಾ ದೇಶಗಳಲ್ಲಿ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದ ದಾಖಲೆಯೂ ಸೇರಿದೆ. ಶುಭ್ಮನ್ ಗಿಲ್ ನಾಯಕತ್ವದಲ್ಲಿ ಟೀಂ ಇಂಡಿಯಾ ಈ ಐತಿಹಾಸಿಕ ಗೆಲುವಿಗೆ ಸಾಕ್ಷಿಯಾಗಿದೆ.

IND vs ENG: ಸೆನಾ ದೇಶಗಳಲ್ಲಿ ಅತ್ಯಧಿಕ ಗೆಲುವು; ಹೊಸ ಇತಿಹಾಸ ಸೃಷ್ಟಿಸಿದ ಟೀಂ ಇಂಡಿಯಾ
Team India
ಪೃಥ್ವಿಶಂಕರ
|

Updated on:Jul 07, 2025 | 4:40 PM

Share

ಇಂಗ್ಲೆಂಡ್‌ ವಿರುದ್ಧ ನಡೆದ ಬರ್ಮಿಂಗ್ಹ್ಯಾಮ್ ಟೆಸ್ಟ್ ಪಂದ್ಯವನ್ನು 336 ರನ್​ಗಳಿಂದ ಗೆದ್ದುಕೊಂಡಿರುವ ಟೀಂ ಇಂಡಿಯಾಕ್ಕೆ (India vs England Test) ಪ್ರಶಂಸೆಯ ಮಳೆಗರೆಯಲಾಗುತ್ತಿದೆ. ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಇಂಗ್ಲೆಂಡ್‌ ಪ್ರವಾಸ ಮಾಡಿರುವ ಯಂಗ್ ಇಂಡಿಯಾಕ್ಕೆ, ಅನುಭವಿ ಆಂಗ್ಲರ ವಿರುದ್ಧ ಒಂದು ಪಂದ್ಯವನ್ನು ಗೆಲ್ಲುವುದು ಕಷ್ಟ ಎನ್ನುತ್ತಿದ್ದವರಿಗೆ ಭಾರತ ಯುವ ಪಡೆ ಸರಿಯಾದ ತಿರುಗೇಟು ನೀಡಿದೆ. ಅದರಲ್ಲೂ ಹಿಂದೆಂದೂ ಗೆಲುವು ಸಾಧಿಸಲು ಸಾಧ್ಯವಾಗದ ಎಡ್ಜ್‌ಬಾಸ್ಟನ್​ (Edgbaston Test Match) ಮೈದಾನದಲ್ಲಿ ಟೀಂ ಇಂಡಿಯಾ ವಿಜಯ ಪತಾಕೆ ಹಾರಿಸಿರುವುದು ತಂಡದ ಸಾಂಘಿಕ ಪ್ರದರ್ಶನಕ್ಕೊಂದು ಉದಾಹರಣೆಯಾಗಿದೆ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಹಲವಾರು ದಾಖಲೆಗಳನ್ನು ಬರೆದಿದೆ. ಅದರಲ್ಲಿ ಪ್ರಮುಖವಾದದ್ದೆಂದರೆ, ಸೆನಾ (SENA) ದೇಶಗಳಲ್ಲಿ ಅತ್ಯಧಿಕ ಟೆಸ್ಟ್ ಪಂದ್ಯಗಳನ್ನು ಗೆದ್ದ ಏಷ್ಯದ ಮೊದಲ ತಂಡವೆಂಬುದು.

ಐತಿಹಾಸಿಕ ಗೆಲುವು

ಸೆನಾ ದೇಶಗಳಲ್ಲಿ ಅಂದರೆ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್‌, ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯವನ್ನು ಗೆಲ್ಲುವುದು ಅಷ್ಟು ಸುಲಭದ ಮಾತಲ್ಲ. ಅದರಲ್ಲೂ ಈ ನಾಲ್ಕು ಬಲಿಷ್ಠ ತಂಡಗಳನ್ನು ಅವರ ನೆಲದಲ್ಲೇ ಮಣಿಸುವುದು ಕಬ್ಬಿಣದ ಕಡಲೆ ಇದ್ದಂತೆ. ಆದಾಗ್ಯೂ ಟೀಂ ಇಂಡಿಯಾ ಈ ನಾಲ್ಕು ದೇಶಗಳಲ್ಲಿ ವರ್ಷದಿಂದ ವರ್ಷಕ್ಕೆ ಗಮನಾರ್ಹ ಪ್ರದರ್ಶನ ನೀಡುತ್ತಿದ್ದು, ಹಲವು ಐತಿಹಾಸಿಕ ಗೆಲುವುಗಳಿಗೆ ಸಾಕ್ಷಿಯಾಗಿದೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಏಷ್ಯಾ ಖಂಡದಲ್ಲಿ ಟೆಸ್ಟ್ ಕ್ರಿಕೆಟ್​ನ ರಂಗು ಮಾಯಾವಾಗುತ್ತಿರುವ ಸಮಯದಲ್ಲಿ ಭಾರತ ಮಾತ್ರ ಏಕದಿನ, ಟಿ20 ಜೊತೆಗೆ ಬಲಿಷ್ಠ ಟೆಸ್ಟ್ ತಂಡವನ್ನು ಕಟ್ಟುವುದರಲ್ಲು ಯಶಸ್ವಿಯಾಗಿದೆ.

ಕೆಲವೇ ವರ್ಷಗಳ ಹಿಂದೆ ಟೆಸ್ಟ್ ಕ್ರಿಕೆಟ್​ನಲ್ಲಿ ಸಾಕಷ್ಟು ಹೆಸರು ಮಾಡಿದ್ದ ಪಾಕಿಸ್ತಾನ ಮತ್ತು ಶ್ರೀಲಂಕಾದಂತಹ ತಂಡಗಳು ಇದೀಗ ಈ ಮಾದರಿಯಲ್ಲಿ ಹೇಳ ಹೆಸರಿಲ್ಲದಂತ್ತಾಗಿವೆ. ಆದರೆ ಭಾರತ ಮಾತ್ರ ಟೆಸ್ಟ್ ಕ್ರಿಕೆಟ್​ನಲ್ಲಿ ತನ್ನ ಭಿಗಿ ಹಿಡಿತವನ್ನು ವರ್ಷದಿಂದ ವರ್ಷಕ್ಕೆ ಹೆಚ್ಚಿಸುತ್ತಲೇ ಇದೆ. ಇದೀಗ ಅದಕ್ಕೆ ಪೂರಕವೆಂಬಂತೆ ಎಡ್ಜ್‌ಬಾಸ್ಟನ್ ಟೆಸ್ಟ್ ಗೆದ್ದಿರುವ ಟೀಂ ಇಂಡಿಯಾ ಸೆನಾ ದೇಶಗಳಲ್ಲಿ ಅತ್ಯಧಿಕ ಟೆಸ್ಟ್ ಪಂದ್ಯಗಳನ್ನು ಗೆದ್ದ ಮೊದಲ ತಂಡವೆನಿಸಿಕೊಂಡಿದೆ.

ಸೆನಾ ದೇಶಗಳಲ್ಲಿ ಅತ್ಯಧಿಕ ಗೆಲುವು

ಎಡ್ಜ್‌ಬಾಸ್ಟನ್ ಟೆಸ್ಟ್ ಗೆದ್ದಿರುವ ಟೀಂ ಇಂಡಿಯಾ, ಈ ಗೆಲುವಿನೊಂದಿಗೆ ಸೆನಾ ದೇಶಗಳಲ್ಲಿ 30 ಟೆಸ್ಟ್ ಪಂದ್ಯಗಳನ್ನು ಗೆದ್ದ ಮೊದಲ ಏಷ್ಯನ್ ತಂಡ ಎಂಬ ವಿಶ್ವ ದಾಖಲೆ ನಿರ್ಮಿಸಿದೆ. ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡಗಳು ಇಲ್ಲಿಯವರೆಗೆ ಈ ನಾಲ್ಕು ದೇಶಗಳಲ್ಲಿ ಇಷ್ಟೊಂದು ಪಂದ್ಯಗಳನ್ನು ಗೆದ್ದಿಲ್ಲ. ಟೀಂ ಇಂಡಿಯಾ ಇಲ್ಲಿಯವರೆಗೆ ಸೆನಾ ದೇಶಗಳಲ್ಲಿ ಆಡಿರುವ 178 ಪಂದ್ಯಗಳಲ್ಲಿ 30 ಪಂದ್ಯಗಳನ್ನು ಗೆದ್ದಿದ್ದರೆ, ಎರಡನೇ ಸ್ಥಾನದಲ್ಲಿರುವ ಪಾಕಿಸ್ತಾನ 148 ಟೆಸ್ಟ್ ಪಂದ್ಯಗಳಲ್ಲಿ 29 ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಉಳಿದಂತೆ ಮೂರನೇ ಸ್ಥಾನದಲ್ಲಿರುವ ಶ್ರೀಲಂಕಾ ಆಡಿರುವ 76 ಟೆಸ್ಟ್ ಪಂದ್ಯಗಳಲ್ಲಿ ಕೇವಲ 9 ಪಂದ್ಯಗಳನ್ನು ಗೆದ್ದುಕೊಂಡಿದೆ.

ಟೆಸ್ಟ್ ಮತ್ತು ಏಕದಿನದಲ್ಲಿ ದ್ವಿಶತಕ ಬಾರಿಸಿರುವವರ ಪಟ್ಟಿಯಲ್ಲಿ ಭಾರತೀಯರದ್ದೇ ಪಾರುಪತ್ಯ

ಮೊದಲ ಏಷ್ಯನ್ ನಾಯಕ

ಇದು ಮಾತ್ರವಲ್ಲದೆ ಎಡ್ಜ್‌ಬಾಸ್ಟನ್ ಮೈದಾನದಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದ ಮೊದಲ ಏಷ್ಯನ್ ನಾಯಕ ಎಂಬ ಹೆಗ್ಗಳಿಕೆಗೆ ಶುಭಮನ್ ಗಿಲ್ ಪಾತ್ರರಾಗಿದ್ದಾರೆ. ಗಿಲ್ ಹೊರತುಪಡಿಸಿ ಬೇರೆ ಯಾವುದೇ ಏಷ್ಯನ್ ತಂಡವು ಈ ಮೈದಾನದಲ್ಲಿ ಟೆಸ್ಟ್ ಪಂದ್ಯ ಗೆಲ್ಲುವಲ್ಲಿ ಯಶಸ್ವಿಯಾಗಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:36 pm, Mon, 7 July 25

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ