AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs IRE: ಇಬ್ಬರು ಇನ್, ಇಬ್ಬರು ಔಟ್; ವೈಭವ್​ಗೆ ಸಿಗುತ್ತಾ ಅವಕಾಶ? ಹೀಗಿದೆ ಪ್ಲೇಯಿಂಗ್ 11

India vs Ireland T20: ಐರ್ಲೆಂಡ್ ವಿರುದ್ಧದ ನಿರ್ಣಾಯಕ ಕೊನೆಯ ಟಿ20 ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದ ಭಾರತ ತಂಡ ಗೆಲುವಿನ ನಿರೀಕ್ಷೆಯಲ್ಲಿದೆ. ಮೊದಲ ಪಂದ್ಯ ಸೋತಿದ್ದ ಭಾರತ, ಸರಣಿ ಸೋಲು ತಪ್ಪಿಸಲು ಆಡುವ ಹನ್ನೊಂದರ ಬಳಗದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿಕೊಳ್ಳಲಿದೆ. ವೈಭವ್ ಸೂರ್ಯವಂಶಿ ಮತ್ತು ಪ್ರಿನ್ಸ್ ಯಾದವ್​ಗೆ ಅವಕಾಶ ದೊರೆಯುವ ಸಾಧ್ಯತೆಗಳಿದ್ದು, ಟೀಂ ಇಂಡಿಯಾ ಬಲಿಷ್ಠ ಸಂಯೋಜನೆಯೊಂದಿಗೆ ಕಣಕ್ಕಿಳಿಯಲು ಸಜ್ಜಾಗಿದೆ.

IND vs IRE: ಇಬ್ಬರು ಇನ್, ಇಬ್ಬರು ಔಟ್; ವೈಭವ್​ಗೆ ಸಿಗುತ್ತಾ ಅವಕಾಶ? ಹೀಗಿದೆ ಪ್ಲೇಯಿಂಗ್ 11
Ind Vs Ire
ಪೃಥ್ವಿಶಂಕರ
|

Updated on: Jun 27, 2026 | 8:22 PM

Share

ಶ್ರೇಯಸ್ ಅಯ್ಯರ್ (Shreyas Iyer) ನಾಯಕತ್ವದ ಭಾರತ ತಂಡ, ಐರ್ಲೆಂಡ್ (India vs Ireland) ವಿರುದ್ಧದ ಕೊನೆಯ ಟಿ20 ಪಂದ್ಯವನ್ನು ಜೂನ್ 28 ರಂದು ಆಡಲಿದೆ. ಈ ಪಂದ್ಯ ಕೂಡ ಮೊದಲ ಪಂದ್ಯ ನಡೆದ ಬೆಲ್‌ಫಾಸ್ಟ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಈ ಮೈದಾನದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ವಿಶ್ವ ಚಾಂಪಿಯನ್ ಟೀಂ ಇಂಡಿಯಾ 34 ರನ್‌ಗಳಿಂದ ಸೋತಿತು. ಹೀಗಾಗಿ ಈ ಪಂದ್ಯ ಉಭಯ ತಂಡಗಳಿಗೆ ನಿರ್ಣಾಯಕವಾಗಿದೆ. ಅದರಲ್ಲೂ ಸರಣಿ ಸೋಲಿನ ಆತಂಕದಲ್ಲಿರುವ ಟೀಂ ಇಂಡಿಯಾ ಕಳೆದ ಪಂದ್ಯಗಳಲ್ಲಿ ಮಾಡಿದ ತಪ್ಪುಗಳನ್ನು ತಿದ್ದಿಕೊಂಡು ಕಣಕ್ಕಿಳಿಯಬೇಕಾಗಿದೆ. ಇದರರ್ಥ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲೇಬೇಕಿದೆ. ಹಾಗಿದ್ದರೆ ಕೊನೆಯ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಏನೆಲ್ಲ ಬದಲಾವಣೆಯಾಗಲಿದೆ ಎಂಬುದನ್ನು ನೋಡುವುದಾದರೆ..

ವೈಭವ್​ಗೆ ಅವಕಾಶ

ಟೀಂ ಇಂಡಿಯಾದ ಬ್ಯಾಟಿಂಗ್‌ ವಿಭಾಗದಲ್ಲಿ ಬದಲಾವಣೆಗಳಾಗುವ ಸಾಧ್ಯತೆಗಳು ಕಡಿಮೆ. ಆದರೆ ಬ್ಯಾಟಿಂಗ್‌ ಬಲವನ್ನು ಹೆಚ್ಚಿಸುವ ಸಲುವಾಗಿ ಈ ಪಂದ್ಯದಲ್ಲಿ ವೈಭವ್ ಸೂರ್ಯವಂಶಿಯನ್ನು ಆಡಿಸಬಹುದು. ಅಂದರೆ ವೈಭವ್ ಸೂರ್ಯವಂಶಿ ಹಾಗೂ ಅಭಿಷೇಕ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯಬಹುದು. ಮೂರನೇ ಕ್ರಮಾಂಕದಲ್ಲಿ ಎಂನದಿನಂತೆ ಇಶಾನ್ ಕಿಶನ್ ಬಂದರೆ, 4ನೇ ಕ್ರಮಾಂಕದಲ್ಲಿ ನಾಯಕ ಶ್ರೇಯಸ್ ಅಯ್ಯರ್ ಬ್ಯಾಟ್ ಬೀಸಲಿದ್ದಾರೆ. ಐದನೇ ಕ್ರಮಾಂಕದಲ್ಲಿ ತಿಲಕ್ ವರ್ಮಾ ಆಡಲಿದ್ದಾರೆ.

ಸುಂದರ್ ಔಟ್

ವೈಭವ್ ಸೂರ್ಯವಂಶಿಗೆ ಆರಂಭಿಕ ಸ್ಥಾನವನ್ನು ಬಿಟ್ಟುಕೊಟ್ಟರೆ, ಸಂಜು ಸ್ಯಾಮ್ಸನ್ ಫಿನಿಶರ್ ಪಾತ್ರದಲ್ಲಿ ಕಾಣಿಸಿಕೊಳ್ಳಬಹುದು. ಕಳೆದ ಪಂದ್ಯದಲ್ಲಿ ಬ್ಯಾಟಿಂಗ್‌ ಹಾಗೂ ಬೌಲಿಂಗ್ ಎರಡರಲ್ಲೂ ವಿಫಲರಾಗಿದ್ದ ವಾಷಿಂಗ್ಟನ್ ಸುಂದರ್​ಗೆ ಈ ಪಂದ್ಯದಿಂದ ಕೋಕ್ ಸಿಗಬಹುದು. ಇದರರ್ಥ ಸುಂದರ್ ಬದಲಿಗೆ ವೈಭವ್​ಗೆ ಅವಕಾಶ ನೀಡಬಹುದು. ಶಿವಂ ದುಬೆ ಬೌಲಿಂಗ್ ಆಲ್‌ರೌಂಡರ್ ಆಗಿ ಆಡಿದರೆ, ಅಕ್ಷರ್ ಪಟೇಲ್ ಸ್ಪಿನ್ ಆಲ್‌ರೌಂಡರ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

ಬೌಲಿಂಗ್​ ವಿಭಾಗದಲ್ಲೂ ಬದಲಾವಣೆ

ಬೌಲಿಂಗ್ ವಿಭಾಗದಲ್ಲಿ ಒಂದು ಬದಲಾವಣೆಯಾಗುವುದು ಖಚಿತವಾಗಿದೆ. ಕಳೆದ ಪಂದ್ಯದಲ್ಲಿ 4 ಓವರ್ ಬೌಲ್ ಮಾಡಿ ಬರೋಬ್ಬರಿ 57 ರನ್ ಬಿಟ್ಟುಕೊಟ್ಟು ತಂಡದ ಸೋಲಿಗೆ ಕಾರಣರಾಗಿದ್ದ ಪ್ರಸಿದ್ಧ್ ಕೃಷ್ಣರನ್ನು ಈ ಪಂದ್ಯದಿಂದ ಕೈಬಿಡಬಹುದು. ಅವರ ಸ್ಥಾನದಲ್ಲಿ ಯುವ ವೇಗಿ ಪ್ರಿನ್ಸ್ ಯಾದವ್ ಆಡುವ ಸಾಧ್ಯತೆಗಳಿವೆ. ಉಳಿದಂತೆ ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ.

IND vs IRE: ಸೋಲಿನ ಆಘಾತದ ನಡುವೆ ಕೊನೆಯ ಟಿ20 ಪಂದ್ಯಕ್ಕೆ ಟೀಂ ಇಂಡಿಯಾ ರೆಡಿ

ಉಭಯ ತಂಡಗಳು

ಭಾರತ ಸಂಭಾವ್ಯ ತಂಡ: ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್ ಮತ್ತು ಪ್ರಿನ್ಸ್ ಯಾದವ್.

ಐರ್ಲೆಂಡ್‌ ಸಂಭಾವ್ಯ ತಂಡ: ಟಿಮ್ ಟೆಕ್ಟರ್, ರಾಯ್ ಅಡೈರ್, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್, ಬೆಂಜಮಿನ್ ಕ್ಯಾಲಿಟ್ಜ್, ಗ್ಯಾರೆತ್ ಡೆಲಾನಿ, ಜಾರ್ಜ್ ಡಾಕ್ರೆಲ್, ಲಿಯಾಮ್ ಮೆಕಾರ್ಥಿ, ಮ್ಯಾಥ್ಯೂ ಹಂಫ್ರೀಸ್, ಜೇ ಮುಂದ್ರಾ, ಮ್ಯಾಥ್ಯೂ ಹೊಲ್ಲಾರ್ಡ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ
ಲಿಂಗನಮಕ್ಕಿ ಡ್ಯಾಂನಲ್ಲಿ ತೀವ್ರ ನೀರಿನ ಕೊರತೆ: ವಿದ್ಯುತ್ ಉತ್ಪಾದನೆ ಸ್ಥಗಿತ
ಲಿಂಗನಮಕ್ಕಿ ಡ್ಯಾಂನಲ್ಲಿ ತೀವ್ರ ನೀರಿನ ಕೊರತೆ: ವಿದ್ಯುತ್ ಉತ್ಪಾದನೆ ಸ್ಥಗಿತ
ಪ್ರತಿ ವರ್ಷ ಒಂದೊಂದು ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ ಆಚರಣೆ: ಸಿಎಂ
ಪ್ರತಿ ವರ್ಷ ಒಂದೊಂದು ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ ಆಚರಣೆ: ಸಿಎಂ