ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅಮೋಘ ಪ್ರದರ್ಶನ ತೋರಿ ಸರಣಿಯನ್ನು ಕ್ಲೀನ್ ಸ್ವೀಪ್ ಸಾಧನೆ ಗೈದ ಭಾರತ (India vs New Zealand) ಇದೀಗ ಹೊಡಿಬಡಿ ಕದನಕ್ಕೆ ಸಜ್ಜಾಗಿದೆ. ಮೂರು ಪಂದ್ಯಗಳ ಟಿ20 ಸರಣಿ ಪೈಕಿ ಇಂದು ರಾಂಚಿಯ ಜೆಸ್ಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಮೊದಲ ಟಿ20 ಪಂದ್ಯ ನಡೆಯಲಿದೆ. ಹಾರ್ದಿಕ್ ಪಾಂಡ್ಯ (Hardik Pandya) ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು ಟೀಮ್ ಇಂಡಿಯಾ (Team India) ಯುವ ಪಡೆ ಯಾವರೀತಿ ಪ್ರದರ್ಶನ ತೋರುತ್ತೆ ಎಂಬುದು ನೋಡಬೇಕಿದೆ. ಜೊತೆಗೆ ಭಾರತದ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬುದು ಕುತೂಹಲ ಕೆರಳಸಿದೆ.
ಭಾರತ ಪರ ಭರ್ಜರಿ ಫಾರ್ಮ್ನಲ್ಲಿರುವ ಶುಭ್ಮನ್ ಗಿಲ್ ಮತ್ತು ಇಶಾನ್ ಕಿಶನ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ರುತುರಾಜ್ ಗಾಯಕ್ವಾಡ್ ಇಂಜುರಿಯಿಂದ ಹೊರಬಿದ್ದಿದ್ದು ಹೀಗಾಗಿ ಮೂರನೇ ಕ್ರಮಾಂಕ ಕೂಡ ಖಚಿತವಾಗಿದ್ದು ರಾಹುಲ್ ತ್ರಿಪಾಠಿ ಆಡಲಿದ್ದಾರೆ. ನಂತರದ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ ಕಣಕ್ಕಿಳಿಯಲಿದ್ದಾರೆ. ಹಾರ್ದಿಕ್ ಪಾಂಡ್ಯ, ದೀಪಕ್ ಹೂಡ ಹಾಗೂ ವಾಷಿಂಗ್ಟನ್ ಸುಂದರ್ ಹೀಗೆ ಒಟ್ಟು ಮೂವರು ಆಲ್ರೌಂಡರ್ ಆಡುವ ಸಾಧ್ಯತೆ. ಅರ್ಶ್ದೀಪ್ ಸಿಂಗ್ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದು ಉಮ್ರಾನ್ ಮಲಿಕ್ ಹಾಗೂ ಶಿವಂ ಮಾವಿ ಸಾಥ್ ನೀಡಲಿದ್ದಾರೆ. ಸ್ಪಿನ್ನರ್ಗಳ ಪೈಕಿ ಯುಜ್ವೇಂದ್ರ ಚಹಲ್ ಅಥವಾ ಕುಲ್ದೀಪ್ ಯಾದವ್ ಪೈಕಿ ಯಾರಿಗೆ ಸ್ಥಾನ ನೋಡಬೇಕಿದೆ.
ಇತ್ತ ನ್ಯೂಜಿಲೆಂಡ್ ತಂಡ ಏಕದಿನ ಸರಣಿಯಲ್ಲಿ ಮುಖಭಂಗ ಅನುಭವಿಸಿದ್ದರೂ ಟಿ20 ಯಲ್ಲಿ ಬಲಿಷ್ಠವಾಗಿದೆ. ಕಿವೀಸ್ ಪಡೆಯನ್ನು ಮಿಚೆಲ್ ಸ್ಯಾಂಟ್ನರ್ ಮುನ್ನಡೆಸಲಿದ್ದಾರೆ. ಆಲ್‌ರೌಂಡರ್ ಸ್ಯಾಂಟ್ನರ್ ತಂಡವನ್ನು ಸೋಲಿನ ಸುಳಿಯಿಂದ ತಪ್ಪಿಸುವ ಆಲೋಚನೆಯಲ್ಲಿದ್ದಾರೆ. ಬಲಿಷ್ಠ ಬೌಲಿಂಗ್ ಮತ್ತು ಬ್ಯಾಟಿಂಗ್ ಪಡೆಯನ್ನು ಹೊಂದಿರುವ ನ್ಯೂಜಿಲೆಂಡ್ ಭಾರತದ ಯುವ ತಂಡವನ್ನು ಹೇಗೆ ಎದುರಿಸಲಿದೆ ಎಂಬುದು ರೋಚಕತಡ ಸೃಷ್ಟಿಸಿದೆ.
ICC ODI Rankings: ಐಸಿಸಿ ಏಕದಿನ ರ‍್ಯಾಕಿಂಗ್ ಪ್ರಕಟ: ಟಾಪ್ 10 ನಲ್ಲಿ ಮೂವರು ಭಾರತೀಯರು
ಇನ್ನು ರಾಂಚಿಯ ಜೆಎಸ್‌ಸಿಎ ಸ್ಟೇಡಿಯಂನಲ್ಲಿ ಭಾರತ ಟಿ20 ಪಂದ್ಯಗಳ ದಾಖಲೆ ಉತ್ತಮವಾಗಿದೆ. ಇಲ್ಲಿಯವರೆಗೂ ಇಲ್ಲಿ ಟೀಮ್ ಇಂಡಿಯಾ ಒಂದೇ ಒಂದು ಟಿ20 ಪಂದ್ಯವನ್ನು ಸೋತಿಲ್ಲ. ಬ್ಲೂ ಬಾಯ್ಸ್ ಆಡಿದ 3 ಪಂದ್ಯಗಳಲ್ಲಿ ಎಲ್ಲವನ್ನೂ ಗೆದ್ದು ಬೀಗಿದೆ. 2016 ಫೆಬ್ರವರಿಯಲ್ಲಿ ಶ್ರೀಲಂಕಾವನ್ನು 69 ರನ್‌ಗಳಿಂದ, 2017 ಅಕ್ಟೋಬರ್‌ನಲ್ಲಿ ಆಸ್ಟ್ರೇಲಿಯಾವನ್ನು 9 ವಿಕೆಟ್‌ಗಳಿಂದ ಮತ್ತು 2021ರಲ್ಲಿ ನ್ಯೂಜಿಲೆಂಡ್ ಅನ್ನು 7 ವಿಕೆಟ್‌ಗಳಿಂದ ಸೋಲಿಸಿದ ದಾಖಲೆ ಹೊಂದಿದೆ.
ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೊದಲ ಏಕದಿನ ಟಿ20 ಪಂದ್ಯ ಸಂಜೆ 7:00 ಗಂಟೆಗೆ ಪ್ರಾರಂಭವಾಗುತ್ತದೆ. 6:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಬಹುತೇಕ ಚಾನೆಲ್‌ಗಳಲ್ಲಿ ಈ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು. ಹಾಗೆಯೆ ಡಿಸ್ನಿ ಹಾಟ್ಸ್ಟಾರ್ ಆ್ಯಪ್ನಲ್ಲೂ ಲೈವ್ ಸ್ಟ್ರೀಮ್ ಇರಲಿದೆ.
ಭಾರತ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್ಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಶದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ , ಪೃಥ್ವಿ ಶಾ, ಮುಖೇಶ್ ಕುಮಾರ್.
ನ್ಯೂಜಿಲೆಂಡ್ ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೇನ್ ಕ್ಲೀವರ್ (ವಿಕೆಟ್ ಕೀಪರ್), ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಜಾಕೋಬ್ ಡಫಿ, ಲಾಕಿ ಫರ್ಗುಸನ್, ಬೆನ್ ಲಿಸ್ಟರ್, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮೈಕೆಲ್ ರಿಪ್ಪನ್, ಹೆನ್ರಿ ಶಿಪ್ಲಿ, ಇಶ್ ಸೋಧಿ , ಬ್ಲೇರ್ ಟಿಕ್ನರ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:18 am, Fri, 27 January 23