ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆದ ಪಾಕಿಸ್ತಾನ ವಿರುದ್ಧದ ರೋಚಕ ಕದನದಲ್ಲಿ ಭಾರತ ಗೆದ್ದು ಟಿ20 ವಿಶ್ವಕಪ್ನಲ್ಲಿ (T20 World Cup) ಶುಭಾರಂಭ ಮಾಡಿದೆ. ಇಲ್ಲಿ ವಿರಾಟ್ ಕೊಹ್ಲಿ (Virat Kohli) ಹಾಗೂ ಹಾರ್ದಿಕ್ ಪಾಂಡ್ಯ ಆಟ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಅದರಲ್ಲೂ ಕೊಹ್ಲಿಯ ಮ್ಯಾಚ್ ವಿನ್ನಿಂಗ್ ಪ್ರದರ್ಶನಕ್ಕೆ ಮನಸೋತಿದ್ದರು. ಇದೀಗ ಮೊದಲ ಪಂದ್ಯದಲ್ಲಿ ಗೆದ್ದ ಬಳಿಕ ರೋಹಿತ್ ಪಡೆ ಸಿಡ್ನಿಗೆ ತಲುಪಿದೆ. ಭಾರತ ತಂಡ ಅಕ್ಟೋಬರ್ 27 ಗುರುವಾರದಂದು ನೆದರ್ಲೆಂಡ್ (India vs Netherlands) ವಿರುದ್ಧ ತನ್ನ ಎರಡನೇ ಪಂದ್ಯ ಆಡಲಿದೆ. ಇದು ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆಯಲಿರುವ ಕಾರಣ ಭಾರತ ಇಲ್ಲಿಗೆ ಪ್ರಯಾಣ ಬೆಳೆಸಿದೆ.
ಒಂದು ದಿನದ ವಿಶ್ರಾಂತಿ ಬಳಿಕ ಭಾರತ ಇಂದು ಎಸ್ಸಿಜಿ ನಲ್ಲಿ ಅಭ್ಯಾಸ ಕೂಡ ಆರಂಭಿಸಲಿದೆ. ಮೆಲ್ಬೋರ್ನ್ಗೆ ಹೋಲಿಸಿದರೆ ಸಿಡ್ನಿ ಪಿಚ್ ವಿಶೇಷವಾಗಿದೆ. ಇದುಕೂಡ ದೊಡ್ಡ ಮೈದಾನ ಆಗಿರುವುದರಿಂದ 160+ ರನ್ ಕಲೆಹಾಕುವುದು ಸುಲಭವಲ್ಲ. ಭಾರತವು ಇಲ್ಲಿನ ಪರಿಸ್ಥಿತಿಗಳಿಗೆ ಒಗ್ಗಿಕೊಳ್ಳಲು ಅಭ್ಯಾಸ ಮಾಡಲಿದೆ.
Hello Sydney ?
We are here for our 2⃣nd game of the #T20WorldCup! ? ?#TeamIndia pic.twitter.com/96toEZzvqe
— BCCI (@BCCI) October 25, 2022
ನೆದರ್ಲೆಂಡ್ ಭಾರತಕ್ಕೆ ಹೋಲಿಸಿದರೆ ದುರ್ಬಲ ಎಂದು ಹೇಳಬಹುದು. ಆದರೆ, ಬಾಂಗ್ಲಾದೇಶದ ವಿರುದ್ಧ ಅವರು ಯಾವ ರೀತಿ ಆಡಿದರು ಎನ್ನುವುದನ್ನು ಗಮನಿಸ ಬೇಕಿದೆ. ಯಾವುದೇ ತಂಡವನ್ನು ಹಗುರವಾಗಿ ಪರಿಣಿಸಲು ಸಾಧ್ಯವಿಲ್ಲದ ಕಾರಣ, ಭಾರತವು ಇನ್ನೂ ಜಾಗರೂಕತೆಯಿಂದ ಕೂಡಿರಬೇಕು. ಸೆಮಿಫೈನಲ್‌ಗೆ ಪೈಪೋಟಿ ಬಿಗಿಯಾಗಿರುವುದರಿಂದ, ನೆದರ್ಲೆಂಡ್ ವಿರುದ್ಧ ಹೆಚ್ಚಿನ ಅಂತರದಲ್ಲಿ ಗೆಲ್ಲುವ ಮೂಲಕ ರನ್‌ರೇಟ್ ಉತ್ತಮಪಡಿಸಿಕೊಳ್ಳ ಬೇಕಿದೆ.
ಟೀಮ್ ಇಂಡಿಯಾ ಬ್ಯಾಟಿಂಗ್ ವಿಭಾಗದಲ್ಲಿ ಸುಧಾರಣೆ ಕಾಣಬೇಕಿದೆ. ಓಪನರ್ಗಳಾದ ಕೆಎಲ್ ರಾಹುಲ್ ಹಾಗೂ ನಾಯಕ ರೋಹಿತ್ ಶರ್ಮಾ ತಂಡಕ್ಕೆ ಉತ್ತಮ ಆರಂಭ ಒದಗಿಸಬೇಕಿದೆ. ಸೂರ್ಯಕುಮಾರ್ ಯಾದವ್ ಕೂಡ ಎಚ್ಚರಿಕೆಯಿಂದ ಬ್ಯಾಟ್ ಬೀಸಬೇಕಿದೆ. ಕೊಹ್ಲಿ ಹಾರ್ದಿಕ್ ಉತ್ತಮ ಫಾರ್ಮ್ನಲ್ಲಿದ್ದಾರೆ. ದಿನೇಶ್ ಕಾರ್ತಿಕ್ ಕೊಡುಗೆ ತಂಡಕ್ಕೆ ಇನ್ನೂ ಬೇಕಾಗಿದೆ. ಬೌಲಿಂಗ್ ವಿಭಾಗದಲ್ಲಿ ಕೂಡ ಭಾರತ ಬಿಗಿಯಾಬೇಕಿದೆ. ಯುಜ್ವೇಂದ್ರ ಚಹಲ್, ಹರ್ಷಲ್ ಪಟೇಲ್, ರಿಷಭ್ ಪಂತ್, ದೀಪಕ್ ಹೂಡ ಅವಕಾಶಕ್ಕಾಗಿ ಕಾಯುತ್ತಿದ್ದಾರೆ.
ಸಂಭಾವ್ಯ ತಂಡ:
ಭಾರತ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್/ಯುಜ್ವೇಂದ್ರ ಚಹಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.
ನೆದರ್ಲೆಂಡ್: ಸ್ಕಾಟ್ ಎಡ್ವರ್ಡ್ಸ್ (ನಾಯಕ), ಮ್ಯಾಕ್ಸ್ ಓಡೌಡ್, ವಿಕ್ರಮಜಿತ್ ಸಿಂಗ್, ಬಾಸ್ ಡಿ ಲೀಡೆ, ಕಾಲಿನ್ ಅಕರ್ಮನ್, ಟಾಮ್ ಕೂಪರ್, ಟಿಮ್ ಪ್ರಿಂಗಲ್, ಪಾಲ್ ವ್ಯಾನ್ ಮೀಕೆರೆನ್, ಲೋಗನ್ ವ್ಯಾನ್ ಬೀಕ್, ಫ್ರೆಡ್ ಕ್ಲಾಸೆನ್, ಶರೀಜ್ ಅಹ್ಮದ್.
Published On - 9:23 am, Tue, 25 October 22