AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾ ಜೆರ್ಸಿಯಲ್ಲಿ ಪಾಕಿಸ್ತಾನದ ಹೆಸರು; ಬಿಸಿಸಿಐ ಮಹತ್ವದ ನಿರ್ಧಾರ

Team India Jersey Controversy Resolved: ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡದ ಜೆರ್ಸಿಯಲ್ಲಿ ಪಾಕಿಸ್ತಾನದ ಹೆಸರನ್ನು ಮುದ್ರಿಸುವ ಬಗ್ಗೆ ಉಂಟಾಗಿದ್ದ ಗೊಂದಲಕ್ಕೆ ಬಿಸಿಸಿಐ ತೆರೆ ಎಳೆದಿದೆ. ಐಸಿಸಿ ನಿಯಮಗಳ ಪ್ರಕಾರ, ಆತಿಥೇಯ ರಾಷ್ಟ್ರದ ಹೆಸರು ಜೆರ್ಸಿಯಲ್ಲಿ ಇರಲೇಬೇಕು ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಪಾಕಿಸ್ತಾನದ ಮಾಧ್ಯಮಗಳ ವರದಿಗಳನ್ನು ಬಿಸಿಸಿಐ ತಳ್ಳಿಹಾಕಿದೆ. ಭಾರತ ತಂಡ ಫೆಬ್ರವರಿ 20 ರಿಂದ ಬಾಂಗ್ಲಾದೇಶದ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದೆ.

ಟೀಂ ಇಂಡಿಯಾ ಜೆರ್ಸಿಯಲ್ಲಿ ಪಾಕಿಸ್ತಾನದ ಹೆಸರು; ಬಿಸಿಸಿಐ ಮಹತ್ವದ ನಿರ್ಧಾರ
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on: Jan 22, 2025 | 5:54 PM

Share

ಫೆಬ್ರವರಿ 19 ರಿಂದ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿ ಹೈಬ್ರಿಡ್ ಮಾದರಿಯಲ್ಲಿ ನಡೆಯುತ್ತಿರುವುದು ಹಳೆಯ ವಿಚಾರ. ಆ ಪ್ರಕಾರ ಟೀಂ ಇಂಡಿಯಾ ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಿದರೆ ಉಳಿದ ಎಲ್ಲಾ ತಂಡಗಳು ಪಾಕಿಸ್ತಾನದಲ್ಲಿ ಆಡಲಿವೆ. ಏತನ್ಮಧ್ಯೆ, ಈ ಐಸಿಸಿ ಟೂರ್ನಿಯಲ್ಲಿ ಆತಿಥೇಯ ರಾಷ್ಟ್ರ ಪಾಕಿಸ್ತಾನದ ಹೆಸರನ್ನು ತಮ್ಮ ಜೆರ್ಸಿಯಲ್ಲಿ ನಮೂದಿಸಲು ಭಾರತ ತಂಡ ನಿರಾಕರಿಸಿದೆ ಎಂದು ವರದಿಯಾಗಿತ್ತು. ನಿನ್ನೆಯಿಂದ ಈ ವಿಚಾರದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿದ್ದವು. ಸಾಮಾನ್ಯವಾಗಿ, ಐಸಿಸಿ ಪಂದ್ಯಾವಳಿಯನ್ನು ಆಯೋಜಿಸುವ ದೇಶದ ಹೆಸರು ಎಲ್ಲಾ ತಂಡಗಳ ಜೆರ್ಸಿಯ ಮೇಲೆ ನಮೂದಿಸಲೇಬೇಕು. ಆದರೀಗ ಬಿಸಿಸಿಐ, ಪಾಕಿಸ್ತಾನದ ಹೆಸರನ್ನು ತಂಡದ ಜೆರ್ಸಿಯ ಮೇಲೆ ನಮೂದಿಸಲು ತಗಾದೆ ತೆಗೆದಿದೆ ಎಂಬ ಸುದ್ದಿ ಎಲ್ಲೆಡೆ ಹಬ್ಬಿದ ಬಳಿಕ ಹೊಸ ವಿವಾದವೊಂದು ಹುಟ್ಟಿಕೊಂಡಿತ್ತು. ಆದರೆ, ಇದೀಗ ಈ ವಿಚಾರವಾಗಿ ಬಿಸಿಸಿಐ ಸ್ಪಷ್ಟನೆ ನೀಡಿ, ವದಂತಿಗಳಿಗೆ ತೆರೆ ಎಳೆದಿದೆ.

ಜೆರ್ಸಿಯಲ್ಲಿ ಪಾಕಿಸ್ತಾನದ ಹೆಸರು

ಐಸಿಸಿ ನಿಯಮಗಳ ಪ್ರಕಾರ, ಐಸಿಸಿ ಬ್ಯಾನರ್ ಅಡಿಯಲ್ಲಿ ನಡೆಯುವ ಎಲ್ಲಾ ಪಂದ್ಯಾವಳಿಗಳಲ್ಲಿ ಭಾಗವಹಿಸುವ ಎಲ್ಲಾ ತಂಡಗಳು ತಮ್ಮ ಜೆರ್ಸಿಯಲ್ಲಿ ಆತಿಥೇಯ ದೇಶದ ಹೆಸರು ಮತ್ತು ಪಂದ್ಯಾವಳಿಯ ವರ್ಷವನ್ನು ಪಂದ್ಯಾವಳಿಯ ಹೆಸರಿನೊಂದಿಗೆ ನಮೂದಿಸುವುದು ಕಡ್ಡಾಯವಾಗಿದೆ. ಆ ಪ್ರಕಾರ, ಇದೀಗ ಎದ್ದಿರುವ ವದಂತಿಗೆ ತೆರೆ ಎಳೆದಿರುವ ಬಿಸಿಸಿಐನ ಹೊಸ ಕಾರ್ಯದರ್ಶಿ ದೇವ್‌ಜಿತ್ ಸೈಕಿಯಾ ಅವರು ಐಸಿಸಿಯ ಪ್ರತಿಯೊಂದು ನಿಯಮವನ್ನು ಬಿಸಿಸಿಐ ಅನುಸರಿಸಲಿದೆ ಎಂದು ಖಚಿತಪಡಿಸಿದ್ದಾರೆ. ಅಂದರೆ ಈ ಟೂರ್ನಿಯ ಆತಿಥೇಯ ಪಾಕಿಸ್ತಾನದ ಹೆಸರು ಟೀಂ ಇಂಡಿಯಾದ ಜೆರ್ಸಿ ಮೇಲೆ ಕಾಣಿಸಿಕೊಳ್ಳಲಿದೆ.

ಇತ್ತೀಚೆಗಷ್ಟೇ ಪಾಕಿಸ್ತಾನದ ಮಾಧ್ಯಮಗಳು ಈ ವಿಷಯವನ್ನು ಪ್ರಸ್ತಾಪಿಸಿ ಟೀಂ ಇಂಡಿಯಾದ ಜೆರ್ಸಿಯಲ್ಲಿ ಪಾಕಿಸ್ತಾನದ ಹೆಸರನ್ನು ಮುದ್ರಿಸಲು ಬಿಸಿಸಿಐ ನಿರಾಕರಿಸಿದೆ ಎಂದು ಆರೋಪಿಸಿದ್ದವು. ಪಿಸಿಬಿ ಕೂಡ ಈ ಸಮಸ್ಯೆಯನ್ನು ಐಸಿಸಿ ಮುಂದಿಡಲು ಬಯಸಿತ್ತು. ಆದರೆ ಬಿಸಿಸಿಐ ಈಗ ಈ ಎಲ್ಲಾ ವರದಿಗಳನ್ನು ತಿರಸ್ಕರಿಸಿದ್ದು, ಜೆರ್ಸಿಗೆ ಸಂಬಂಧಿಸಿದ ಪ್ರತಿಯೊಂದು ಐಸಿಸಿ ನಿಯಮವನ್ನು ಅನುಸರಿಸುವುದಾಗಿ ಘೋಷಿಸಿದೆ.

ಟೀಂ ಇಂಡಿಯಾ ವೇಳಾಪಟ್ಟಿ

ಫೆಬ್ರವರಿ 20 ರಿಂದ ಈ ಟೂರ್ನಿಯಲ್ಲಿ ಟೀಂ ಇಂಡಿಯಾದ ಅಭಿಯಾನ ಆರಂಭವಾಗಲಿದ್ದು, ಚೊಚ್ಚಲ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ. ನಂತರ ಟೀಂ ಇಂಡಿಯಾ ತನ್ನ ಎರಡನೇ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಆಡಲಿದೆ. ಈ ಪಂದ್ಯ ಫೆಬ್ರವರಿ 23 ರಂದು ನಡೆಯಲಿದೆ. ಇದರ ನಂತರ, ಗುಂಪಿನ ಕೊನೆಯ ಪಂದ್ಯದಲ್ಲಿ, ಮಾರ್ಚ್ 2 ರಂದು ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಇದಾದ ಬಳಿಕ ಸೆಮಿಫೈನಲ್ ಮತ್ತು ಫೈನಲ್ ಪಂದ್ಯ ನಡೆಯಲಿದೆ. ಒಂದು ವೇಳೆ ಟೀಂ ಇಂಡಿಯಾ ಸೆಮಿಫೈನಲ್ ಮತ್ತು ಫೈನಲ್‌ಗೆ ಅರ್ಹತೆ ಪಡೆದರೆ, ಈ ಪಂದ್ಯಗಳು ಕೂಡ ದುಬೈನಲ್ಲಿ ಮಾತ್ರ ನಡೆಯಲಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್