AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಹೊಸ ಕೋಚ್, ನೂತನ ನಾಯಕ: ಶ್ರೀಲಂಕಾ ಸರಣಿಗೆ ತೆರಳಿದ ಟೀಮ್ ಇಂಡಿಯಾ

India vs Sri Lanka: ಜುಲೈ 27 ರಿಂದ ಭಾರತ ಮತ್ತು ಶ್ರೀಲಂಕಾ ನಡುವಣ 6 ಪಂದ್ಯಗಳ ಸರಣಿ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲು 3 ಪಂದ್ಯಗಳ ಟಿ20 ಸರಣಿಯನ್ನು ಆಡಲಾಗುತ್ತದೆ. ಇದಾದ ಬಳಿಕ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಟಿ20 ಸರಣಿಯ ಪಂದ್ಯಗಳಿಗೆ ಪಲ್ಲೆಕೆಲೆಯ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಿದರೆ, ಏಕದಿನ ಸರಣಿಯು ಕೊಲಂಬೊದ ಆರ್​ ಪ್ರೇಮದಾಸ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

IND vs SL: ಹೊಸ ಕೋಚ್, ನೂತನ ನಾಯಕ: ಶ್ರೀಲಂಕಾ ಸರಣಿಗೆ ತೆರಳಿದ ಟೀಮ್ ಇಂಡಿಯಾ
Team IndiaImage Credit source: PC: Satej Shinde
ಝಾಹಿರ್ ಯೂಸುಫ್
|

Updated on:Jul 22, 2024 | 3:13 PM

Share

ಶ್ರೀಲಂಕಾ ವಿರುದ್ಧದ ಸರಣಿಗಾಗಿ ಭಾರತ ಟಿ20 ತಂಡದ ಆಟಗಾರರು ತೆರಳಿದ್ದಾರೆ. ಈ ಸರಣಿಯು ಜುಲೈ 27 ರಿಂದ ಶುರುವಾಗಲಿದ್ದು, ಇದಕ್ಕಾಗಿ ಟೀಮ್ ಇಂಡಿಯಾ (Team India) ಆಟಗಾರರು ಸೋಮವಾರ ಮುಂಬೈ ವಿಮಾನ ನಿಲ್ದಾಣದಿಂದ ಕೊಲಂಬೊಗೆ ಪ್ರಯಾಣ ಬೆಳೆಸಿದ್ದಾರೆ. ವಿಶೇಷ ಎಂದರೆ ಈ ಸರಣಿಯ ಮೂಲಕ ಭಾರತ ಟಿ20 ತಂಡದ ಪೂರ್ಣ ಪ್ರಮಾಣದ ನಾಯಕನಾಗಿ ಸೂರ್ಯಕುಮಾರ್ ಯಾದವ್ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ. ಹಾಗೆಯೇ ಈ ಸರಣಿಯೊಂದಿಗೆ ಟೀಮ್ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ಕಾರ್ಯಾರಂಭ ಮಾಡಲಿದ್ದಾರೆ. ಹೀಗಾಗಿ ಲಂಕಾ ವಿರುದ್ಧದ ಸರಣಿಯು ಟೀಮ್ ಇಂಡಿಯಾದ ಈ ಇಬ್ಬರ ಪಾಲಿಗೆ ತುಂಬಾ ಮಹತ್ವದ್ದು.

ರೋಹಿತ್ – ಕೊಹ್ಲಿ ಇಲ್ಲ:

ಟಿ20 ವಿಶ್ವಕಪ್ ಗೆಲುವಿನ ಬಳಿಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಟೀಮ್ ಇಂಡಿಯಾದ ಮುಂದಿನ ಟಿ20 ಸರಣಿಗಳಲ್ಲಿ ಕಿಂಗ್ ಕೊಹ್ಲಿ ಹಾಗೂ ಹಿಟ್​ಮ್ಯಾನ್ ಕಾಣಿಸಿಕೊಳ್ಳುವುದಿಲ್ಲ.

ಭಾರತ ಮತ್ತು ಶ್ರೀಲಂಕಾ ಸರಣಿ ಯಾವಾಗ ಶುರು?

ಜುಲೈ 27 ರಿಂದ ಭಾರತ ಮತ್ತು ಶ್ರೀಲಂಕಾ ನಡುವಣ 6 ಪಂದ್ಯಗಳ ಸರಣಿ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲು 3 ಪಂದ್ಯಗಳ ಟಿ20 ಸರಣಿಯನ್ನು ಆಡಲಾಗುತ್ತದೆ. ಇದಾದ ಬಳಿಕ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಟಿ20 ಸರಣಿಯ ಪಂದ್ಯಗಳಿಗೆ ಪಲ್ಲೆಕೆಲೆಯ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಿದರೆ, ಏಕದಿನ ಸರಣಿಯು ಕೊಲಂಬೊದ ಆರ್​ ಪ್ರೇಮದಾಸ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಬ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್ , ಖಲೀಲ್ ಅಹ್ಮದ್, ಮೊಹಮ್ಮದ್ ಸಿರಾಜ್.

ಮುಂಬೈ ಏರ್​ಪೋರ್ಟ್​ನಲ್ಲಿ ಟೀಮ್ ಇಂಡಿಯಾ ಆಟಗಾರರು:

ತಿಂಗಳಾಂತ್ಯದಲ್ಲಿ ಉಳಿದ ಆಟಗಾರರ ಪ್ರಯಾಣ:

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಏಕದಿನ ತಂಡದಲ್ಲಿರುವ ಆಟಗಾರರು ಜುಲೈ ತಿಂಗಳಾಂತ್ಯದಲ್ಲಿ ಶ್ರೀಲಂಕಾಗೆ ಪ್ರಯಾಣ ಬೆಳೆಸಲಿದ್ದಾರೆ. ಏಕೆಂದರೆ ಏಕದಿನ ಸರಣಿಯು ಆಗಸ್ಟ್ 2 ರಿಂದ ಆರಂಭವಾಗಲಿದ್ದು, ಹೀಗಾಗಿ ಓಡಿಐ ಟೀಮ್​ನಲ್ಲಿ ಸ್ಥಾನ ಪಡೆದಿರುವ ಆಟಗಾರರು ಈ ತಿಂಗಳಾಂತ್ಯದಲ್ಲಿ ಟೀಮ್ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ.

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಶ್ದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್ , ಖಲೀಲ್ ಅಹ್ಮದ್, ಹರ್ಷಿತ್ ರಾಣಾ.

ಭಾರತ ಮತ್ತು ಶ್ರೀಲಂಕಾ ಸರಣಿ ವೇಳಾಪಟ್ಟಿ:

  1. ಮೊದಲ ಟಿ20: ಜುಲೈ 27 (ಪಲ್ಲೆಕೆಲೆ) – 7 PM IST
  2. ಎರಡನೇ ಟಿ20: ಜುಲೈ 28 (ಪಲ್ಲೆಕೆಲೆ) – 7 PM IST
  3. ಮೂರನೇ ಟಿ20: ಜುಲೈ 30 (ಪಲ್ಲೆಕೆಲೆ) – 7 PM IST

ಇದನ್ನೂ ಓದಿ: ಚಾಂಪಿಯನ್ಸ್​ ಟ್ರೋಫಿಯಿಂದ ಟೀಮ್ ಇಂಡಿಯಾ ಹಿಂದೆ ಸರಿದರೆ, ಯಾವ ತಂಡಕ್ಕೆ ಚಾನ್ಸ್?

  1. ಮೊದಲ ಏಕದಿನ: ಆಗಸ್ಟ್ 2 (ಕೊಲಂಬೊ) – 2.30 PM IST
  2. ಎರಡನೇ ಏಕದಿನ: ಆಗಸ್ಟ್ 4 (ಕೊಲಂಬೊ) – 2.30 PM IST
  3. ಮೂರನೇ ಏಕದಿನ: ಆಗಸ್ಟ್ 7 (ಕೊಲಂಬೊ) – 2.30 PM IST

Published On - 2:10 pm, Mon, 22 July 24

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ