ಶ್ರೀಲಂಕಾ ವಿರುದ್ಧದ ಸರಣಿಗಾಗಿ ಭಾರತ ಟಿ20 ತಂಡದ ಆಟಗಾರರು ತೆರಳಿದ್ದಾರೆ. ಈ ಸರಣಿಯು ಜುಲೈ 27 ರಿಂದ ಶುರುವಾಗಲಿದ್ದು, ಇದಕ್ಕಾಗಿ ಟೀಮ್ ಇಂಡಿಯಾ (Team India) ಆಟಗಾರರು ಸೋಮವಾರ ಮುಂಬೈ ವಿಮಾನ ನಿಲ್ದಾಣದಿಂದ ಕೊಲಂಬೊಗೆ ಪ್ರಯಾಣ ಬೆಳೆಸಿದ್ದಾರೆ. ವಿಶೇಷ ಎಂದರೆ ಈ ಸರಣಿಯ ಮೂಲಕ ಭಾರತ ಟಿ20 ತಂಡದ ಪೂರ್ಣ ಪ್ರಮಾಣದ ನಾಯಕನಾಗಿ ಸೂರ್ಯಕುಮಾರ್ ಯಾದವ್ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ. ಹಾಗೆಯೇ ಈ ಸರಣಿಯೊಂದಿಗೆ ಟೀಮ್ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ಕಾರ್ಯಾರಂಭ ಮಾಡಲಿದ್ದಾರೆ. ಹೀಗಾಗಿ ಲಂಕಾ ವಿರುದ್ಧದ ಸರಣಿಯು ಟೀಮ್ ಇಂಡಿಯಾದ ಈ ಇಬ್ಬರ ಪಾಲಿಗೆ ತುಂಬಾ ಮಹತ್ವದ್ದು.
ಟಿ20 ವಿಶ್ವಕಪ್ ಗೆಲುವಿನ ಬಳಿಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಟೀಮ್ ಇಂಡಿಯಾದ ಮುಂದಿನ ಟಿ20 ಸರಣಿಗಳಲ್ಲಿ ಕಿಂಗ್ ಕೊಹ್ಲಿ ಹಾಗೂ ಹಿಟ್ಮ್ಯಾನ್ ಕಾಣಿಸಿಕೊಳ್ಳುವುದಿಲ್ಲ.
ಜುಲೈ 27 ರಿಂದ ಭಾರತ ಮತ್ತು ಶ್ರೀಲಂಕಾ ನಡುವಣ 6 ಪಂದ್ಯಗಳ ಸರಣಿ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲು 3 ಪಂದ್ಯಗಳ ಟಿ20 ಸರಣಿಯನ್ನು ಆಡಲಾಗುತ್ತದೆ. ಇದಾದ ಬಳಿಕ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಟಿ20 ಸರಣಿಯ ಪಂದ್ಯಗಳಿಗೆ ಪಲ್ಲೆಕೆಲೆಯ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಿದರೆ, ಏಕದಿನ ಸರಣಿಯು ಕೊಲಂಬೊದ ಆರ್ ಪ್ರೇಮದಾಸ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಬ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್ , ಖಲೀಲ್ ಅಹ್ಮದ್, ಮೊಹಮ್ಮದ್ ಸಿರಾಜ್.
INDIAN TEAM LEAVING TO SRI LANKA…!!!!
– It’s time for Gambhir 🤝 Surya in T20I. 🇮🇳 pic.twitter.com/DDKn5pcuZ4
— Johns. (@CricCrazyJohns) July 22, 2024
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಏಕದಿನ ತಂಡದಲ್ಲಿರುವ ಆಟಗಾರರು ಜುಲೈ ತಿಂಗಳಾಂತ್ಯದಲ್ಲಿ ಶ್ರೀಲಂಕಾಗೆ ಪ್ರಯಾಣ ಬೆಳೆಸಲಿದ್ದಾರೆ. ಏಕೆಂದರೆ ಏಕದಿನ ಸರಣಿಯು ಆಗಸ್ಟ್ 2 ರಿಂದ ಆರಂಭವಾಗಲಿದ್ದು, ಹೀಗಾಗಿ ಓಡಿಐ ಟೀಮ್ನಲ್ಲಿ ಸ್ಥಾನ ಪಡೆದಿರುವ ಆಟಗಾರರು ಈ ತಿಂಗಳಾಂತ್ಯದಲ್ಲಿ ಟೀಮ್ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ.
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಶ್ದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್ , ಖಲೀಲ್ ಅಹ್ಮದ್, ಹರ್ಷಿತ್ ರಾಣಾ.
ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿಯಿಂದ ಟೀಮ್ ಇಂಡಿಯಾ ಹಿಂದೆ ಸರಿದರೆ, ಯಾವ ತಂಡಕ್ಕೆ ಚಾನ್ಸ್?
Published On - 2:10 pm, Mon, 22 July 24