ಮೊದಲ ಏಕದಿನಕ್ಕೆ ಟೀಮ್ ಇಂಡಿಯಾ ಆಟಗಾರರ ಅಭ್ಯಾಸ ಹೇಗಿದೆ ನೋಡಿ
Team India Practice, IND vs AUS 1st ODI: ಗುರುವಾರ ಸಂಜೆ ಸುಮಾರು 6 ಗಂಟೆ ಹೊತ್ತಿಗೆ ಟೀಮ್ ಇಂಡಿಯಾ ಆಟಗಾರರು ಮೊಹಾಲಿ ಮೈದಾನಕ್ಕೆ ಬಂದು ಕಠಿಣ ಅಭ್ಯಾಸ ನಡೆಸಿದರು. ಶುಭ್ಮನ್ ಗಿಲ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್ ನೆಟ್ನಲ್ಲಿ ಬ್ಯಾಟಿಂಗ್ ಪ್ರ್ಯಾಕ್ಟೀಸ್ ನಡೆಸಿದದರು.
ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಮಧ್ಯಾಹ್ನ ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಇಂಡೋ-ಆಸೀಸ್ ಮೊದಲ ಏಕದಿನ ಪಂದ್ಯ ಆಯೋಜಿಸಲಾಗಿದೆ. ಈಗಾಗಲೇ ಉಭಯ ತಂಡಗಳು ಮೊಹಾಲಿಗೆ ತಲುಪಿದ್ದು, ಅಭ್ಯಾಸದಲ್ಲಿ ನಿರತರಾಗಿದ್ದಾರೆ. ರೋಹಿತ್ ಶರ್ಮಾ ವಿಶ್ರಾಂತಿ ಪಡೆದುಕೊಂಡಿರುವ ಕಾರಣ ಕೆಎಲ್ ರಾಹುಲ್ ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ. ವಿರಾಟ್ ಕೊಹ್ಲಿ ಕೂಡ ಮೊದಲ ಎರಡು ಏಕದಿನ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.
ಗುರುವಾರ ಸಂಜೆ ಸುಮಾರು 6 ಗಂಟೆ ಹೊತ್ತಿಗೆ ಟೀಮ್ ಇಂಡಿಯಾ ಆಟಗಾರರು ಮೊಹಾಲಿ ಮೈದಾನಕ್ಕೆ ಬಂದು ಕಠಿಣ ಅಭ್ಯಾಸ ನಡೆಸಿದರು. ಶುಭ್ಮನ್ ಗಿಲ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್ ನೆಟ್ನಲ್ಲಿ ಬ್ಯಾಟಿಂಗ್ ಪ್ರ್ಯಾಕ್ಟೀಸ್ ನಡೆಸಿದರೆ, ಮೊಹಮ್ಮದ್ ಶಮಿ, ಜಸ್ಪ್ರಿತ್ ಬುಮ್ರಾ, ಆರ್. ಅಶ್ವಿನ್ ಹಾಗೂ ಜಡೇಜಾ ಬೌಲಿಂಗ್ ಅಭ್ಯಾಸ ನಡೆಸುತ್ತಿರುವುದು ಕಂಡುಬಂತು. ಭಾರತೀಯ ಆಟಗಾರರು ಅಭ್ಯಾಸ ನಡೆಸುತ್ತಿರುವ ಫೋಟೋವನ್ನು ಬಿಸಿಸಿಐ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.
ಟೀಮ್ ಇಂಡಿಯಾ ಆಟಗಾರರು ಅಭ್ಯಾಸ ನಡೆಸುತ್ತಿರುವ ಫೋಟೋ:
Preps before the start of a cracking series 👌 😎#TeamIndia | #INDvAUS pic.twitter.com/Jmwm7FkfmN
— BCCI (@BCCI) September 21, 2023
— BCCI (@BCCI) September 21, 2023
— BCCI (@BCCI) September 21, 2023
ಇತ್ತ ಆಸ್ಟ್ರೇಲಿಯಾ ತಂಡ ಕೂಡ ಮೊಹಾಲಿಯ ಪಿಸಿಎ ಕ್ರೀಡಾಂಗಣದಲ್ಲಿ ಮಧ್ಯಾಹ್ನ 1 ಗಂಟೆಯಿಂದ ತರಬೇತಿ ಪಡೆಯಿತು. ಇಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್ ಕಣಕ್ಕಿಳಿಯುವುದಿಲ್ಲ. ಹಾಗೆಯೇ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಕೂಡ ಮೊದಲ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂದು ಆಸೀಸ್ ಕ್ಯಾಪ್ಟನ್ ಪ್ಯಾಟ್ ಕಮಿನ್ಸ್ ತಿಳಿಸಿದ್ದಾರೆ. ಹೀಗಿದ್ದರೂ ಕಾಂಗರೂ ಪಡೆ ಬಲಿಷ್ಠವಾಗಿದೆ.
ನಾಲ್ವರು ಆರಂಭಿಕರು: ಟೀಮ್ ಇಂಡಿಯಾದ ಓಪನಿಂಗ್ ಜೋಡಿ ಯಾರು?
ಇನ್ನು ಇಂದಿನ ಪಂದ್ಯಕ್ಕೆ ಪ್ರಸ್ತುತ ನಂ. 1 ಏಕದಿನ ಬೌಲರ್ ಮೊಹಮ್ಮದ್ ಸಿರಾಜ್ ವಿಶ್ರಾಂತಿ ಪಡೆದುಕೊಳ್ಳುವ ಸಂಭವವಿದೆ. ಪ್ರಸಿದ್ಧ್ ಕೃಷ್ಣ ಮತ್ತು ಮೊಹಮ್ಮದ್ ಶಮಿ ಕಣಕ್ಕಿಳಿಯಬಹುದು. ಹಾಗೆಯೆ ಅಚ್ಚರಿ ಎಂಬಂತೆ ಆಯ್ಕೆಯಾ್ ರವಿಚಂದ್ರನ್ ಅಶ್ವಿನ್ ಆಡುವುದು ಖಚಿತವಾಗಿದೆ. ಈ ಮೂಲಕ ಜಡೇಜಾ-ಅಶ್ವಿನ್ ಜೋಡಿ ಆರು ವರ್ಷಗಳ ಬಳಿಕ ಮೋಡಿ ಮಾಡಲು ತಯಾರಾಗಿದೆ. ರವಿ ಅಶ್ವಿನ್ ಅನುಭವ ನಮಗೆ ತುಂಬಾ ಸಹಾಯ ಮಾಡುತ್ತಿದೆ. ಅವರು ನಂ. 8 ರಲ್ಲಿ ಬ್ಯಾಟಿಂಗ್ ಮೂಲಕ ಕೊಡುಗೆ ನೀಡಲಿದ್ದಾರೆ ಎಂದು ಕೋಚ್ ದ್ರಾವಿಡ್ ಕೂಡ ಹೇಳಿದ್ದಾರೆ.
ಭಾರತ ಸಂಭಾವ್ಯ ಪ್ಲೇಯಿಂಗ್ XI:
ಇಶಾನ್ ಕಿಶನ್, ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಆರ್. ಅಶ್ವಿನ್, ಮೊಹಮ್ಮದ್ ಶಮಿ, ಜಸ್ಪ್ರಿತ್ ಬುಮ್ರಾ, ಪ್ರಸಿದ್ಧ್ ಕೃಷ್ಣ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ