India vs South Africa: ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ XI ಹೇಗಿರಲಿದೆ?: ಇಲ್ಲಿದೆ ನೋಡಿ

India Playing XI vs South Africa: ಇಂದು ಪರ್ತ್ ಸ್ಟೇಡಿಯಂನಲ್ಲಿ ಭಾರತ ತಂಡ ಬಲಿಷ್ಠ ದಕ್ಷಿಣ ಅಫ್ರಿಕಾ ತಂಡವನ್ನು ಎದುರಿಸುತ್ತಿದೆ. ಇದರಲ್ಲಿ ರೋಹಿತ್ ಪಡೆ ಗೆದ್ದರೆ ಅಗ್ರಸ್ಥಾನದಲ್ಲಿ ಮುಂದುವರೆಯಲಿದೆ. ಹಾಗಾದರೆ ಆಫ್ರಿಕಾ ವಿರುದ್ಧದ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ?.

India vs South Africa: ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ XI ಹೇಗಿರಲಿದೆ?: ಇಲ್ಲಿದೆ ನೋಡಿ
India Playing XI vs SA
Follow us
TV9 Web
| Updated By: Vinay Bhat

Updated on: Oct 30, 2022 | 8:46 AM

ಐಸಿಸಿ ಟಿ20 ವಿಶ್ವಕಪ್ 2022 ರಲ್ಲಿ ಸತತವಾಗಿ ಎರಡು ಪಂದ್ಯಗಳನ್ನು ಗೆದ್ದು ಬೀಗಿರುವ ಟೀಮ್ ಇಂಡಿಯಾ (Team India) ಇದೀಗ ಹ್ಯಾಟ್ರಿಕ್ ಜಯದ ಮೇಲೆ ಕಣ್ಣಿಟ್ಟಿದೆ. ಇಂದು ಪರ್ತ್ ಸ್ಟೇಡಿಯಂನಲ್ಲಿ ಭಾರತ ತಂಡ ಬಲಿಷ್ಠ ದಕ್ಷಿಣ ಅಫ್ರಿಕಾ (India vs South Africa) ತಂಡವನ್ನು ಎದುರಿಸುತ್ತಿದೆ. ಟೂರ್ನಿಯಲ್ಲಿ ಈಗಾಗಲೇ ತಮ್ಮ ಸಾಮರ್ಥ್ಯ ತೋರ್ಪಡಿಸಿ ಸೋಲಿಲ್ಲದ ಸರದಾರರಂತೆ ಕಂಡುಬಂದಿರುವ ಉಭಯ ತಂಡಗಳ ನಡುವಣ ಕಾದಾಟ ಸಾಕಷ್ಟು ರೋಚಕತೆ ಸೃಷ್ಟಿಸಿದೆ. ಇಂದಿನ ಪಂದ್ಯದಲ್ಲಿ ರೋಹಿತ್ ಪಡೆ ಗೆದ್ದರೆ ಅಗ್ರಸ್ಥಾನದಲ್ಲಿ ಮುಂದುವರೆಯಲಿದೆ. ಹರಿಣಗಳ ಪಡೆ ಗೆದ್ದರೆ ಭಾರತ ದ್ವಿತೀಯ ಸ್ಥಾನಕ್ಕೆ ಕುಸಿಯುವ ಜೊತೆಗೆ ಪಾಕಿಸ್ತಾನ ತಂಡ ಬಹುತೇಕ ಟೂರ್ನಿಯಿಂದ ಹೊರಬಿದ್ದಂತೆ. ಹಾಗಾದರೆ ಆಫ್ರಿಕಾ ವಿರುದ್ಧದ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ (India Playing XI) ಇಲೆವೆನ್ ಹೇಗಿರಲಿದೆ?.

ಸತತ ಎರಡು ಗೆಲುವಿನ ಬಳಿಕ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕೆ ಬದಲಾವಣೆ ಮಾಡುವ ಸಂಭವ ಅಧಿಕವಿದೆ. ಓಪನರ್​ಗಳಾಗಿ ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಆಡುವುದು ಖಚಿತ. ತಂಡಕ್ಕೆ ಉತ್ತಮ ಆರಂಭಿಸಬೇಕಾದ ಒತ್ತಡದಲ್ಲಿ ಇವರಿಬ್ಬರೂ ಇದ್ದಾರೆ. ವಿರಾಟ್ ಕೊಹ್ಲಿ ಒನ್-ಡೌನ್ ಆಗಿ ಕಣಕ್ಕಿಳಿದರೆ ನಂತರ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟ್ ಬೀಸಲಿದ್ದಾರೆ. ಹಾರ್ದಿಕ್ ಪಾಂಡ್ಯ ಐದನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ದಿನೇಶ್ ಕಾರ್ತಿಕ್ ಕೂಡ ತಮ್ಮ ಸ್ಥಾನವನ್ನು ಭದ್ರ ಪಡಿಸಿಕೊಂಡಿದ್ದಾರೆ.

ಆಲ್ರೌಂಡರ್ ಜವಾಬ್ದಾರಿ ವಹಿಸಿರುವ ಅಕ್ಷರ್ ಪಟೇಲ್ ಬ್ಯಾಟಿಂಗ್​ನಲ್ಲಿ ಮಾತ್ರ ಸದ್ದು ಮಾಡುತ್ತಿಲ್ಲ. ಬೌಲಿಂಗ್​ನಲ್ಲಿ ಪಾಕ್ ವಿರುದ್ಧ ದುಬಾರಿ ಆಗಿದ್ದರು. ಹೀಗಾಗಿ ಇವರ ಬದಲು ಮತ್ತೊಬ್ಬ ಆಲ್ರೌಂಡರ್ ದೀಪಕ್ ಹೂಡಾಗೆ ಅವಕಾಶ ಸಿಗಬಹುದು. ಅಲ್ಲದೆ ಆಫ್ರಿಕಾ ತಂಡದಲ್ಲಿ ಹೆಚ್ಚಿನ ಬ್ಯಾಟರ್​ಗಳು ಲೆಫ್ಟ್ ಹ್ಯಾಂಡ್ ಆಗಿರುವುದರಿಂದ ಹೂಡಾಗೆ ಕೆಲ ಓವರ್ ಬೌಲಿಂಗ್ ನೀಡಿ ಆಡಿಸಿದರೆ ಅಚ್ಚರಿ ಪಡಬೇಕಿಲ್ಲ. ಜೊತೆಗೆ ರವಿಚಂದ್ರನ್ ಅಶ್ವಿನ್​ಗೆ ವಿಶ್ರಾಂತಿ ನೀಡಿ ಯುಜ್ವೇಂದ್ರ ಚಹಲ್ ಕೂಡ ಸ್ಥಾನ ಪಡೆಯುವ ಸಂಭವವಿದೆ.

ಇದನ್ನೂ ಓದಿ
Image
India vs South Africa: ಭಾರತಕ್ಕಿಂದು ದಕ್ಷಿಣ ಆಫ್ರಿಕಾ ಸವಾಲು: ಹ್ಯಾಟ್ರಿಕ್ ಜಯದ ವಿಶ್ವಾಸದಲ್ಲಿ ರೋಹಿತ್ ಪಡೆ
Image
India Vs South Africa Live Streaming: ಗೆದ್ದವರಿಗೆ ಸೇಮಿಸ್ ಟಿಕೆಟ್ ಖಚಿತ; ಪಂದ್ಯ ಆರಂಭ ಯಾವಾಗ?
Image
Virat Kohli: ಕಿಂಗ್ ಕೊಹ್ಲಿಯ ವಿಶ್ವ ದಾಖಲೆ ಮುರಿದ ಸಿಕಂದರ್ ರಾಝ
Image
T20 World Cup 2022: ಈ 4 ತಂಡಗಳೇ ಸೆಮಿಫೈನಲ್ ಆಡಲಿದೆ ಎಂದ ಗಂಗೂಲಿ

ಇತ್ತ ಆಫ್ರಿಕಾ ತಂಡದಲ್ಲಿ ಬದಲಾವಣೆ ಅನುಮಾನ. ನಾಯಕ ತೆಂಬಾ ಬವುಮಾ ಬಿಟ್ಟರೆ ಉಳಿದೆಲ್ಲ ಆಟಗಾರರು ಉತ್ತಮ ಲಯದಲ್ಲಿದ್ದಾರೆ. ಆಡಿದ ಎರಡು ಪಂದ್ಯಗಳಲ್ಲಿ ಒಂದು ಪಂದ್ಯ ಮಳೆಯಿಂದ ರದ್ದಾದರೆ, ಮತ್ತೊಂದರಲ್ಲಿ ಗೆಲುವು ಸಾಧಿಸಿತ್ತು. ಹೀಗಾಗಿ +5.200 ರನ್​ರೇಟ್​ನೊಂದಿಗೆ 3 ಅಂಕ ಪಡೆದು ಎರಡನೇ ಸ್ಥಾನಲ್ಲಿದೆ. ಜಿಂಬಾಬ್ವೆ ವಿರುದ್ಧದ ಮೊದಲನೇ ಪಂದ್ಯದಲ್ಲಿ ಅದೃಷ್ಟ ಕೈಕೊಟ್ಟಿದ್ದರಿಂದ, ಮಳೆಯಾದ ಕಾರಣ ಗೆಲುವಿನಿಂದ ತಪ್ಪಿಸಿಕೊಂಡಿತ್ತು. ಆದರೆ, ಎರಡನೇ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ 104 ರನ್‌ಗಳ ಅಂತರದ ಭರ್ಜರಿ ಜಯ ಸಾಧಿಸಿತ್ತು. ಬಾಂಗ್ಲಾ ಎದುರಿನ ಪಂದ್ಯದಲ್ಲಿ ಶತಕ ಗಳಿಸಿರುವ ರಿಲೀ ರೊಸೊ ಮಧ್ಯಮಕ್ರಮಾಂಕದ ಶಕ್ತಿಯಾಗಿದ್ದಾರೆ.

ಭಾರತ ಸಂಭಾವ್ಯ ಪ್ಲೇಯಿಂಗ್ XI: ರೋಹಿತ್ ಶರ್ಮಾ (ನಾಯಕ), ಕೆಎಲ್. ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಶ್​​ದೀಪ್ ಸಿಂಗ್, ಯುಜ್ವೇವೇಂದ್ರ ಚಹಲ್.

ದಕ್ಷಿಣ ಆಫ್ರಿಕಾ ಸಂಭಾವ್ಯ ಪ್ಲೇಯಿಂಗ್ XI: ತೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿಕಾಕ್ (ವಿಕೆಟ್ ಕೀಪರ್), ರಿಲೀ ರೋಸೊ, ಏಡನ್ ಮರ್ಕರಂ, ಟ್ರಿಸ್ಟನ್ ಸ್ಟಬ್ಸ್, ಡೇವಿಡ್ ಮಿಲ್ಲರ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ, ಕಗಿಸೊ ರಬಾಡ, ಎನ್ರಿಚ್ ನಾಕಿಯಾ, ತಬ್ರೇಜ್ ಶಮ್ಸಿ.

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ