ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಟೀಮ್ ಇಂಡಿಯಾದ ಮಾಸ್ಟರ್ ಪ್ಲ್ಯಾನ್
Champions Trophy 2025: ಚಾಂಪಿಯನ್ಸ್ ಟ್ರೋಫಿ 2025ರ ಚಾಂಪಿಯನ್ಸ್ ಟ್ರೋಫಿ ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಭಾರತ ತಂಡವು ಪಾಕ್ನಲ್ಲಿ ಪಂದ್ಯವಾಡಲು ನಿರಾಕರಿಸಿರುವ ಕಾರಣ, ಪಿಸಿಬಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಲು ನಿರ್ಧರಿಸಿದೆ. ಅದರಂತೆ ಭಾರತದ ಪಂದ್ಯಗಳು ದುಬೈನಲ್ಲಿ ಜರುಗಲಿದ್ದು, ಉಳಿದ ಮ್ಯಾಚ್ಗಳು ಪಾಕಿಸ್ತಾನದಲ್ಲೇ ನಡೆಯಲಿದೆ.
ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಫೆಬ್ರವರಿ 19 ರಿಂದ ಆರಂಭವಾಗಲಿರುವ ಈ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಅದರಂತೆ ಬಹುತೇಕ ಪಂದ್ಯಗಳು ಪಾಕಿಸ್ತಾನದಲ್ಲಿ ನಡೆದರೆ, ಟೀಮ್ ಇಂಡಿಯಾ ಮ್ಯಾಚ್ಗಳು ಯುಎಇನಲ್ಲಿ ಜರುಗಲಿದೆ. ಆದರೆ ಇದಕ್ಕೂ ಮುನ್ನ ಯುಎಇ ಪರಿಸ್ಥಿತಿಗೆ ಹೊಂದಿಕೊಳ್ಳಬೇಕಾದ ಅನಿವಾರ್ಯತೆ ಭಾರತ ತಂಡದ ಮುಂದಿದೆ.
ಇದಕ್ಕಾಗಿ ಇದೀಗ ಟೀಮ್ ಇಂಡಿಯಾ ಅಭ್ಯಾಸ ಪಂದ್ಯಗಳನ್ನಾಡಲು ಪ್ಲ್ಯಾನ್ ರೂಪಿಸಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಣ 3 ಪಂದ್ಯಗಳ ಏಕದಿನ ಸರಣಿಯು ಫೆಬ್ರವರಿ 12 ಕ್ಕೆ ಮುಗಿಯಲಿದೆ. ಇದಾಗಿ ಚಾಂಪಿಯನ್ಸ್ ಟ್ರೋಫಿ ಶುರುವಾಗಲು ಒಂದು ವಾರ ಸಮಯವಕಾಶವಿದೆ.
ಈ ಅವಧಿಯೊಳಗೆ ಯುಎಇನಲ್ಲಿ ಅಭ್ಯಾಸ ಪಂದ್ಯವನ್ನು ಏರ್ಪಡಿಸಲು ಬಿಸಿಸಿಐ ಚಿಂತಿಸಿದೆ. ಅದರಂತೆ ಟೀಮ್ ಇಂಡಿಯಾ ಯುಎಇ ಅಥವಾ ಬಾಂಗ್ಲಾದೇಶ್ ವಿರುದ್ಧ ಅಭ್ಯಾಸ ಪಂದ್ಯವನ್ನಾಡುವ ಸಾಧ್ಯತೆಯಿದೆ.
ಟೀಮ್ ಇಂಡಿಯಾ ಅಭಿಯಾನ:
ಚಾಂಪಿಯನ್ಸ್ ಟ್ರೋಫಿಯು ಫೆಬ್ರವರಿ 19 ರಿಂದ ಶುರುವಾದರೂ ಟೀಮ್ ಇಂಡಿಯಾದ ಅಭಿಯಾನ ಆರಂಭವಾಗುವುದು ಫೆಬ್ರವರಿ 20 ರಂದು. ಅದು ಸಹ ಬಾಂಗ್ಲಾದೇಶ್ ತಂಡವನ್ನು ಎದುರಿಸುವ ಮೂಲಕ. ಅಂದರೆ ಬಾಂಗ್ಲಾ ತಂಡವು ತನ್ನ ಮೊದಲ ಪಂದ್ಯವನ್ನು ಆಡಲು ದುಬೈಗೆ ಬರಲಿದೆ.
ಇದೇ ವೇಳೆ ಟೀಮ್ ಇಂಡಿಯಾ ಕೂಡ ದುಬೈನಲ್ಲೇ ಇರುವುದರಿಂದ ಟೂರ್ನಿ ಆರಂಭಕ್ಕೂ ಮುನ್ನ ಉಭಯ ತಂಡಗಳ ನಡುವೆ ಅಭ್ಯಾಸ ಪಂದ್ಯ ಏರ್ಪಡಿಸಲು ಬಿಸಿಸಿಐ ಚಿಂತಿಸಿದೆ.
ಒಂದು ವೇಳೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ಈ ಅಭ್ಯಾಸ ಪಂದ್ಯಕ್ಕೆ ಸಮ್ಮತಿಸದಿದ್ದರೆ, ಟೀಮ್ ಇಂಡಿಯಾ ಯುಎಇ ವಿರುದ್ಧ ಅಭ್ಯಾಸ ಪಂದ್ಯವಾಡುವ ಸಾಧ್ಯತೆಯಿದೆ. ಅದರಂತೆ ಚಾಂಪಿಯನ್ಸ್ ಟ್ರೋಫಿಗೂ ಮುನ್ನವೇ ಟೀಮ್ ಇಂಡಿಯಾ ಅಭ್ಯಾಸ ಪಂದ್ಯಗಳ ಮೂಲಕ ದುಬೈ ಪರಿಸ್ಥಿತಿಗೆ ಹೊಂದಿಕೊಳ್ಳಲು ಮಾಸ್ಟರ್ ಪ್ಲ್ಯಾನ್ ರೂಪಿಸಿದೆ.
ಭಾರತ ತಂಡದ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ:
- ಭಾರತ vs ಬಾಂಗ್ಲಾದೇಶ್: ಫೆಬ್ರವರಿ 20 (ದುಬೈ)
- ಭಾರತ vs ಪಾಕಿಸ್ತಾನ್: ಫೆಬ್ರವರಿ 23 (ದುಬೈ)
- ಭಾರತ vs ನ್ಯೂಝಿಲೆಂಡ್: ಮಾರ್ಚ್ 2 (ದುಬೈ)
- ಸೆಮಿಫೈನಲ್ (ಅರ್ಹತೆ ಪಡೆದರೆ): ಮಾರ್ಚ್ 4 (ದುಬೈ)
- ಫೈನಲ್ (ಅರ್ಹತೆ ಪಡೆದರೆ): ಮಾರ್ಚ್ 9 (ದುಬೈ)
ಇದನ್ನೂ ಓದಿ: ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ವಿಶೇಷ ದಾಖಲೆ ಬರೆದ ಫಾಫ್ ಡುಪ್ಲೆಸಿಸ್
ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಬ್ ಪಂತ್, ರವೀಂದ್ರ ಜಡೇಜಾ.
Published On - 2:30 pm, Mon, 27 January 25