AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಲಾರ್ಡ್ಸ್‌ ಟೆಸ್ಟ್ ಸೋತಿರುವ ಟೀಂ ಇಂಡಿಯಾದಿಂದ ಈ ಮೂವರು ಆಟಗಾರರಿಗೆ ಕೋಕ್?

India vs England Test Series: ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾದ ಸೋಲು ತಂಡದಲ್ಲಿ ಹಲವು ಬದಲಾವಣೆಗಳಿಗೆ ಕಾರಣವಾಗಬಹುದು. ಕರುಣ್ ನಾಯರ್​ಗೆ ತಂಡದಿಂದ ಗೇಟ್ ಪಾಸ್ ಸಿಗುವುದು ಖಚಿತವಾಗಿದ್ದರೆ, ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಬಹುದಾಗಿದೆ. ವಾಷಿಂಗ್ಟನ್ ಸುಂದರ್ ಅವರ ಸ್ಥಾನದಲ್ಲಿ ಕುಲ್ದೀಪ್ ಯಾದವ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯೂ ಇದೆ. ಮುಂದಿನ ಪಂದ್ಯಕ್ಕಾಗಿ ತಂಡದಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ನಿರೀಕ್ಷಿಸಲಾಗಿದೆ.

IND vs ENG: ಲಾರ್ಡ್ಸ್‌ ಟೆಸ್ಟ್ ಸೋತಿರುವ ಟೀಂ ಇಂಡಿಯಾದಿಂದ ಈ ಮೂವರು ಆಟಗಾರರಿಗೆ ಕೋಕ್?
Team India
ಪೃಥ್ವಿಶಂಕರ
|

Updated on: Jul 14, 2025 | 11:09 PM

Share

ಎಡ್ಜ್‌ಬಾಸ್ಟನ್‌ನಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ್ದ ಟೀಂ ಇಂಡಿಯಾಕ್ಕೆ ಲಾರ್ಡ್ಸ್‌ನಲ್ಲಿ (Lord’s Test) ಆ ಯಶಸ್ಸನ್ನು ಪುನರಾವರ್ತಿಸಲು ಸಾಧ್ಯವಾಗಲಿಲ್ಲ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ, ಶುಭ್​ಮನ್ ಗಿಲ್ ನಾಯಕತ್ವದ ಟೀಂ ಇಂಡಿಯಾ 22 ರನ್‌ಗಳಿಂದ ಸೋಲನ್ನು ಎದುರಿಸಬೇಕಾಯಿತು. ಈ ಸೋಲಿನೊಂದಿಗೆ, ಟೀಂ ಇಂಡಿಯಾ ಟೆಸ್ಟ್ ಸರಣಿಯಲ್ಲಿ 1-2 ರಿಂದ ಹಿನ್ನಡೆ ಅನುಭವಿಸಿದೆ. ಸರಣಿಯ ಮುಂದಿನ ಪಂದ್ಯ ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿದ್ದು, ಈ ಪಂದ್ಯದಿಂದ ತಂಡದ ಕೆಲವು ಆಟಗಾರರನ್ನು ಕೈಬಿಡುವ ಸಾಧ್ಯತೆಗಳಿದ್ದು, ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) ಕೂಡ ಅವರಲ್ಲಿ ಸೇರಿರಬಹುದು.

ಲಾರ್ಡ್ಸ್‌ನಲ್ಲಿ ನಡೆದ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಕಠಿಣ ಹೋರಾಟ ನೀಡಿತಾದರೂ ಪಂದ್ಯದ ಕೊನೆಯ ದಿನದಂದು ಸೋಲನ್ನು ಎದುರಿಸಬೇಕಾಯಿತು. ಈ ಪಂದ್ಯದಲ್ಲಿ, ಟೀಂ ಇಂಡಿಯಾದ ಬಹುತೇಕ ಎಲ್ಲಾ ಆಟಗಾರರು ಉತ್ತಮ ಪ್ರದರ್ಶನ ನೀಡಿದರು. ಆದರೆ ಎರಡನೇ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್‌ ವಿಭಾಗ ಕೈಕೊಟ್ಟಿತು. ಇದರ ಹೊರತಾಗಿಯೂ ಕನಿಷ್ಠ ಮೂವರು ಆಟಗಾರರು ಮುಂದಿನ ಟೆಸ್ಟ್ ಪಂದ್ಯದಿಂದ ಹೊರಗುಳಿಯಬೇಕಾಗಬಹುದು.

ಕರುಣ್ ನಾಯರ್​ಗೆ ಸ್ಥಾನ ಡೌಟ್

ಮೊದಲನೆಯದಾಗಿ, 8 ವರ್ಷಗಳ ನಂತರ ಈ ಸರಣಿಯ ಮೂಲಕ ಟೀಂ ಇಂಡಿಯಾಗೆ ಮರಳಿದ ಕರುಣ್ ನಾಯರ್, ಈ ಸರಣಿಯಲ್ಲಿ ಹೇಗೆ ಪ್ರದರ್ಶನ ನೀಡುತ್ತಾರೆ ಎಂಬುದನ್ನು ನೋಡಲು ಎಲ್ಲರ ಕಾಯುತ್ತಿದ್ದರು. ಆದರೆ ಲೀಡ್ಸ್​ನಿಂದ ಲಾರ್ಡ್ಸ್ ವರೆಗಿನ ಪ್ರತಿಯೊಂದು ಪಂದ್ಯದಲ್ಲೂ ಕರುಣ್ ನಾಯರ್ ನಿರಾಶೆ ಮೂಡಿಸಿದರು. ಮೊದಲ ಟೆಸ್ಟ್‌ನಲ್ಲಿ ಪಾದಾರ್ಪಣೆ ಮಾಡಿದ ಸಾಯಿ ಸುದರ್ಶನ್ ಅವರನ್ನು ಒಂದು ಟೆಸ್ಟ್​ ಪಂದ್ಯದ ಬಳಿಕ ಹೊರಗಿಡಲಾಯಿತು. ಆದಾಗ್ಯೂ ಕರುಣ್‌ಗೆ ಎರಡನೇ ಮತ್ತು ಮೂರನೇ ಟೆಸ್ಟ್‌ಗಳಲ್ಲಿಯೂ ಆಡುವ ಅವಕಾಶ ನೀಡಲಾಯಿತು. ಆದರೆ ಬಹುತೇಕ ಎಲ್ಲಾ ಇನ್ನಿಂಗ್ಸ್‌ಗಳಲ್ಲಿ ಕರುಣ್ ಉತ್ತಮ ಆರಂಭ ಪಡೆದರೂ, ಅದನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸಲು ಸಾಧ್ಯವಾಗಲಿಲ್ಲ. ಈ ಸರಣಿಯಲ್ಲಿ, ಟೀಂ ಇಂಡಿಯಾದ ಅಗ್ರ ಕ್ರಮಾಂಕದಿಂದ ಅರ್ಧಶತಕ ಬಾರಿಸದ ಏಕೈಕ ಬ್ಯಾಟ್ಸ್‌ಮನ್ ಎಂದರೆ ಅದು ನಾಯರ್. ನಾಯರ್ ಆಡಿರುವ 3 ಟೆಸ್ಟ್‌ಗಳ 6 ಇನ್ನಿಂಗ್ಸ್‌ಗಳಲ್ಲಿ ಕೇವಲ 131 ರನ್‌ ಮಾತ್ರ ಬಾರಿಸಿದ್ದಾರೆ.

ಬುಮ್ರಾಗೆ ವಿಶ್ರಾಂತಿ?

ಮುಂದಿನ ಟೆಸ್ಟ್​ನಿಂದ ನಾಯರ್ ಹೊರಗುಳಿಯುವುದು ಬಹುತೇಕ ಖಚಿತವೆನಿಸಿದರೂ, ಬುಮ್ರಾ ಆಡುವ ಬಗ್ಗೆಯೂ ಅನುಮಾನವಿದೆ. ಏಕೆಂದರೆ ಟೆಸ್ಟ್ ಸರಣಿಗೂ ಮುನ್ನ ಬುಮ್ರಾ ಈ ಸರಣಿಯಲ್ಲಿ ಕೇವಲ 3 ಟೆಸ್ಟ್ ಗಳನ್ನು ಆಡಲಿದ್ದಾರೆ ಎಂದು ಘೋಷಿಸಲಾಗಿತ್ತು. ಲೀಡ್ಸ್ ಮತ್ತು ಲಾರ್ಡ್ಸ್​ ಟೆಸ್ಟ್ ಆಡಿದ್ದ ಬುಮ್ರಾಗೆ ಎಡ್ಜ್​ಬಾಸ್ಟನ್ ಟೆಸ್ಟ್​ನಿಂದ ವಿಶ್ರಾಂತಿ ನೀಡಲಾಗಿತ್ತು. ಅಂತಹ ಪರಿಸ್ಥಿತಿಯಲ್ಲಿ, ಟೀಂ ಇಂಡಿಯಾ ಮುಂದಿನ ಟೆಸ್ಟ್​ನಲ್ಲೂ ಅವರಿಗೆ ವಿಶ್ರಾಂತಿ ನೀಡುತ್ತದೆಯೇ ಅಥವಾ ಇಲ್ಲವೇ ಎಂಬುದು ಈಗ ಪ್ರಶ್ನೆಯಾಗಿದೆ. ಮುಂದಿನ ಟೆಸ್ಟ್​ಗೆ 9 ದಿನಗಳ ವಿರಾಮವಿದೆ. ಹೀಗಿರುವಾಗ ಟೀಂ ಇಂಡಿಯಾ ಈ ವಿರಾಮವನ್ನು ಅವರ ಕೆಲಸದ ಹೊರೆ ನಿರ್ವಹಣೆಗೆ ಬಳಸಿಕೊಂಡು ಅವರನ್ನು ಮ್ಯಾಂಚೆಸ್ಟರ್​ನಲ್ಲಿ ಕಣಕ್ಕಿಳಿಸುತ್ತದೆಯೇ ಅಥವಾ ಇಲ್ಲವೇ ಎಂಬುದು ಕುತೂಹಲ ಮೂಡಿಸಿದೆ. ಗೌತಮ್ ಗಂಭೀರ್ ಮತ್ತು ನಾಯಕ ಶುಭ್​ಮನ್ ಗಿಲ್ ಈಗಾಗಲೇ ನಿರ್ಧರಿಸಿದ ಸೂತ್ರಕ್ಕೆ ಬದ್ಧರಾಗಿದ್ದರೆ, ಬುಮ್ರಾಗೆ ವಿಶ್ರಾಂತಿ ನೀಡುವುದು ಖಚಿತ.

IND vs ENG: ಉಚಿತವಾಗಿ 63 ರನ್ ನೀಡಿದ ಭಾರತ; 22 ರನ್‌ಗಳಿಂದ ಗೆದ್ದ ಇಂಗ್ಲೆಂಡ್‌

ಸುಂದರ್ ಬದಲಿಗೆ ಕುಲ್ದೀಪ್‌?

ಎಡ್ಜ್‌ಬಾಸ್ಟನ್ ಟೆಸ್ಟ್ ನಂತರ, ಲಾರ್ಡ್ಸ್‌ನಲ್ಲಿ ವಾಷಿಂಗ್ಟನ್ ಸುಂದರ್ ಆಯ್ಕೆಯ ಬಗ್ಗೆಯೂ ಪ್ರಶ್ನೆಗಳು ಎದಿದ್ದವು. ಮುಖ್ಯ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರನ್ನು ಹೊರಗಿಟ್ಟು ಸುಂದರ್ ಅವರನ್ನು ಮುಂದುವರೆಸಿದ್ದು, ಅಭಿಮಾನಿಗಳ ಕೋಪಕ್ಕೆ ಕಾರಣವಾಗಿತ್ತು. ಏಕೆಂದರೆ ಎಡ್ಜ್‌ಬಾಸ್ಟನ್‌ನಲ್ಲಿ ಸುಂದರ್ ಪ್ರದರ್ಶನ ವಿಶೇಷವಾಗಿರಲಿಲ್ಲ. ಆದರೆ ಲಾರ್ಡ್ಸ್ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ಸುಂದರ್ 4 ವಿಕೆಟ್ ಉರುಳಿಸುವಲ್ಲಿ ಯಶಸ್ವಿಯಾಗಿದ್ದರು. ಆದಾಗ್ಯೂ ಎರಡೂ ಇನ್ನಿಂಗ್ಸ್‌ಗಳಲ್ಲಿ ಬ್ಯಾಟಿಂಗ್‌ನಲ್ಲಿ ಅವರಿಗೆ ವಿಶೇಷವಾದ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಟೀಂ ಇಂಡಿಯಾ ಕುಲ್ದೀಪ್‌ಗೆ ಅಥವಾ ಅವರ ಸ್ಥಾನದಲ್ಲಿ ನಾಲ್ಕನೇ ವೇಗಿಗೆ ತಂಡದಲ್ಲಿ ಸ್ಥಾನ ನೀಡುತ್ತಾ ಎಂಬುದನ್ನು ಕಾದುನೋಡಬೇಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ