Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಟಿಂಗ್‌ ವಿಭಾಗದ ಈ ಲೋಪವೆ ಟೀಂ ಇಂಡಿಯಾದ ಕಳಪೆ ಪ್ರದರ್ಶನಕ್ಕೆ ಕಾರಣ

Team India's Batting Collapse: ಭಾರತ ತಂಡದ ಇತ್ತೀಚಿನ ಟೆಸ್ಟ್ ಸರಣಿ ಸೋಲುಗಳಿಗೆ ಬ್ಯಾಟಿಂಗ್ ವಿಭಾಗದ ವೈಫಲ್ಯವೇ ಮುಖ್ಯ ಕಾರಣ ಎಂಬುದು ಸ್ಪಷ್ಟ. ಕಳೆದ 4 ವರ್ಷಗಳಲ್ಲಿ ಪ್ರಮುಖ ಆಟಗಾರರ ಸರಾಸರಿ 35 ಕ್ಕಿಂತ ಕಡಿಮೆಯಾಗಿದೆ. ರೋಹಿತ್, ಕೊಹ್ಲಿ, ಮತ್ತು ರಾಹುಲ್ ಅವರ ಇತ್ತೀಚಿನ ಪ್ರದರ್ಶನ ಇನ್ನಷ್ಟು ಕಳಪೆಯಾಗಿದೆ. ತಂಡವು 50 ಓವರ್‌ಗಳನ್ನೂ ಪೂರ್ಣಗೊಳಿಸಲು ಹೆಣಗಾಡುತ್ತಿದೆ.

ಬ್ಯಾಟಿಂಗ್‌ ವಿಭಾಗದ ಈ ಲೋಪವೆ ಟೀಂ ಇಂಡಿಯಾದ ಕಳಪೆ ಪ್ರದರ್ಶನಕ್ಕೆ ಕಾರಣ
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on:Dec 09, 2024 | 4:56 PM

ಪ್ರಸ್ತುತ ಆಸ್ಟ್ರೇಲಿಯಾ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿ ಆಡುತ್ತಿರುವ ಟೀಂ ಇಂಡಿಯಾ ಮೊದಲ ಟೆಸ್ಟ್​ನಲ್ಲಿ ಜಯದ ನಗೆ ಬೀರಿದ್ದರೆ, ಎರಡನೇ ಟೆಸ್ಟ್ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿದೆ. ಪರ್ತ್ ಟೆಸ್ಟ್‌ನಲ್ಲಿ ಅದ್ಭುತ ಗೆಲುವು ಸಾಧಿಸಿದ್ದ ಭಾರತ ತಂಡ ಅಡಿಲೇಡ್‌ನಲ್ಲಿ 10  ವಿಕೆಟ್​ಗಳ ಅವಮಾನಕರ ಸೋಲಿಗೆ ಕೊರಳೊಡ್ಡಬೇಕಾಯಿತು. ಪಿಂಕ್ ಬಾಲ್ ಟೆಸ್ಟ್​ನಲ್ಲಿ ತಂಡದ ಸೋಲಿಗೆ ಬ್ಯಾಟಿಂಗ್‌ ವಿಭಾಗದ ವೈಫಲ್ಯ ದೊಡ್ಡ ಕಾರಣ ಎಂಬುದರಲ್ಲಿ ಸಂದೇಹವಿಲ್ಲ. ಈ ಪಂದ್ಯದಲ್ಲಿ ಭಾರತ ತಂಡದ ಒಬ್ಬನೇ ಒಬ್ಬ ಬ್ಯಾಟ್ಸ್‌ಮನ್​ಗೂ ಅರ್ಧಶತಕದ ಇನ್ನಿಂಗ್ಸ್ ಆಡಲು ಸಾಧ್ಯವಾಗಲಿಲ್ಲ. ಎರಡೂ ಇನಿಂಗ್ಸ್‌ಗಳಲ್ಲಿ ಇಡೀ ತಂಡ 200 ರನ್‌ಗಳ ಒಳಗೆಯೇ ಆಲೌಟ್ ಆಯಿತು. ಇದಕ್ಕೆ ಪೂರಕವಾಗಿ ಪಂದ್ಯದ ನಂತರ ಮಾತನಾಡಿದ್ದ ನಾಯಕ ರೋಹಿತ್ ಶರ್ಮಾ ಕೂಡ ಬ್ಯಾಟಿಂಗ್ ವೈಫಲ್ಯವೇ ಸೋಲಿಗೆ ಕಾರಣ ಎಂಬುದನ್ನು ಒಪ್ಪಿಕೊಂಡಿದ್ದರು. ಏತನ್ಮಧ್ಯೆ, ಕಳೆದ 4 ವರ್ಷಗಳಿಂದ ಟೀಂ ಇಂಡಿಯಾ ಬ್ಯಾಟಿಂಗ್‌ ವಿಭಾಗವನ್ನು ಕಾಡುತ್ತಿರುವ ಅದೊಂದು ದೌರ್ಬಲ್ಯ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

ಸರಾಸರಿಯಲ್ಲಿ ಭಾರಿ ಕುಸಿತ

ವಾಸ್ತವವಾಗಿ, ಕಳೆದ 4 ವರ್ಷಗಳಲ್ಲಿ ಅಂದರೆ 2020 ರಿಂದ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್​ಗಳು 1000 ಕ್ಕೂ ಅಧಿಕ ರನ್ ಕಲೆಹಾಕಿದ್ದರಾದರೂ ಅವರ ಸರಾಸರಿ ಮಾತ್ರ 35 ಕ್ಕಿಂತ ಕಡಿಮೆ ಇದೆ. ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಮತ್ತು ಚೇತೇಶ್ವರ ಪೂಜಾರ ಅವರ ಹೆಸರು ಸೇರಿದೆ. ಕಳೆದ 4 ವರ್ಷಗಳಲ್ಲಿ ಕೊಹ್ಲಿ 32.15 ಸರಾಸರಿ, ರಾಹುಲ್ 33 ಮತ್ತು ಪೂಜಾರ 29.69 ಸರಾಸರಿಯಲ್ಲಿ ರನ್ ಕಲೆಹಾಕಿದ್ದಾರೆ. ಪೂಜಾರ ಸದ್ಯ ತಂಡದ ಭಾಗವಾಗಿಲ್ಲ. ತಂಡದ ಇತರ ಬ್ಯಾಟ್ಸ್‌ಮನ್‌ಗಳ ಸ್ಥಿತಿಯೂ ಇದಕ್ಕಿಂತ ಉತ್ತಮವಾಗಿಲ್ಲ.

ತಂಡದ ನಾಯಕ ರೋಹಿತ್ ಶರ್ಮಾ ಕಳೆದ 4 ವರ್ಷಗಳಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 37.66 ಸರಾಸರಿಯಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ಇನ್ನು 2020 ರಲ್ಲಿ ಟೆಸ್ಟ್ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದ ಶುಭ್‌ಮನ್ ಗಿಲ್ ಅಂದಿನಿಂದ ಇದುವರೆಗೆ 30 ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ ಅವರು 36.45 ಸರಾಸರಿಯಲ್ಲಿ ರನ್ ಕಲೆಹಾಕಿದ್ದಾರೆ. ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಕೂಡ ಕಳೆದ 4 ವರ್ಷಗಳಿಂದ ಉತ್ತಮ ಪ್ರದರ್ಶನ ನೀಡಿಲ್ಲ. 2022 ಅನ್ನು ಬಿಟ್ಟರೆ, ಅವರು 40 ಕ್ಕಿಂತ ಕಡಿಮೆ ಸರಾಸರಿಯಲ್ಲಿ ಬ್ಯಾಟ್ ಬೀಸಿದ್ದಾರೆ.

ಸರಾಸರಿ ಇನ್ನಷ್ಟು ಕುಸಿತ

ಪ್ರಸ್ತುತ ಭಾರತ ತಂಡದಲ್ಲಿರುವ ಐವರು ಅನುಭವಿ ಬ್ಯಾಟ್ಸ್‌ಮನ್‌ಗಳ ಪೈಕಿ ನಾಲ್ವರು ಆಟಗಾರರ ಇತ್ತೀಚಿನ ಪ್ರದರ್ಶನ ಇನ್ನಷ್ಟು ಹಳ್ಳ ಹಿಡಿದಿದೆ. ನಾಯಕ ರೋಹಿತ್ ಈ ವರ್ಷ ಆಡಿರುವ 23 ಇನ್ನಿಂಗ್ಸ್‌ಗಳಲ್ಲಿ ಕೇವಲ 27.2 ಸರಾಸರಿಯಲ್ಲಿ 598 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಅವರು ಕೇವಲ 2 ಶತಕ ಮತ್ತು 2 ಅರ್ಧ ಶತಕಗಳನ್ನು ಮಾತ್ರ ಸಿಡಿಸಿದ್ದಾರೆ. ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಈ ವರ್ಷ ಟೆಸ್ಟ್‌ನ 16 ಇನ್ನಿಂಗ್ಸ್‌ಗಳಲ್ಲಿ 26.6 ಸರಾಸರಿಯಲ್ಲಿ 373 ರನ್ ಗಳಿಸಿದ್ದಾರೆ. ಇದಲ್ಲದೆ, ಕೆಎಲ್ ರಾಹುಲ್ 2024 ರಲ್ಲಿ 12 ಟೆಸ್ಟ್ ಇನ್ನಿಂಗ್ಸ್‌ಗಳನ್ನಾಡಿದ್ದು 34.6 ಸರಾಸರಿಯಲ್ಲಿ 381 ರನ್ ಗಳಿಸಿದ್ದಾರೆ. ರಿಷಬ್ ಪಂತ್ ಕೂಡ ಈ ವರ್ಷ 39.2 ಸರಾಸರಿಯಲ್ಲಿ 509 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ.

ಇಡೀ ತಂಡಕ್ಕೆ ಪೂರ್ಣ 50 ಓವರ್ ಆಡಲು ಸಾಧ್ಯವಾಗುತ್ತಿಲ್ಲ

ತಂಡದ ಪ್ರಮುಖ ಬ್ಯಾಟ್ಸ್‌ಮನ್‌ಗಳ ಕಳಪೆ ಸರಾಸರಿಯು ಭಾರತವು ಟೆಸ್ಟ್‌ನಲ್ಲಿ ಏಕೆ ನಿರಂತರವಾಗಿ ಹೆಣಗಾಡುತ್ತಿದೆ ಎಂಬುದನ್ನು ಸ್ಪಷ್ಟಪಡಿಸುತ್ತದೆ. ರನ್ ಗಳಿಸುವ ಜವಾಬ್ದಾರಿಯನ್ನು ಹೆಗಲ ಮೇಲೆ ಹೊತ್ತುಕೊಂಡವರು ರನ್ ಗಳಿಸದಿದ್ದರೆ ಗೆಲ್ಲುವುದು ಹೇಗೆ?. ಬಾಂಗ್ಲಾದೇಶ ಟೆಸ್ಟ್ ಸರಣಿಯಲ್ಲೂ ಅಶ್ವಿನ್ ಮತ್ತು ಜಡೇಜಾ ಕೆಳ ಕ್ರಮಾಂಕದಲ್ಲಿ ರನ್ ಕಲೆಹಾಕಿದ್ದರು. ಆದರೆ ಅಗ್ರಕ್ರಮಾಂಕದ ಬ್ಯಾಟ್ಸ್​ಮನ್​ಗಳ ಪ್ರದರ್ಶನ ಅಷ್ಟು ಉತ್ತಮವಾಗಿರಲಿಲ್ಲ. ಇದರ ಜೊತೆಗೆ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಇಡೀ ತಂಡ 50 ಓವರ್​ಗಳ ಒಳಗೆಯೇ ಮೂರು ಬಾರಿ ಆಲೌಟ್ ಆಗಿತ್ತು. ಆಸ್ಟ್ರೇಲಿಯಾದಲ್ಲೂ ಇದೇ ಪ್ರವೃತ್ತಿ ಮುಂದುವರೆದಿದ್ದು, ಆಡಿರುವ 2 ಟೆಸ್ಟ್ ಪಂದ್ಯಗಳ 2 ಇನ್ನಿಂಗ್ಸ್​ಗಳಲ್ಲಿ ಇಡೀ ತಂಡಕ್ಕೆ ಪೂರ್ಣ 50 ಓವರ್‌ಗಳನ್ನು ಆಡಲು ಸಾಧ್ಯವಾಗಲಿಲ್ಲ. ಬ್ಯಾಟ್ಸ್‌ಮನ್‌ಗಳ ಈ ಕಳಪೆ ಸರಾಸರಿ ಹೀಗೆಯೇ ಮುಂದುವರಿದರೆ ಆಸ್ಟ್ರೇಲಿಯಾದಲ್ಲಿ ಮೂರನೇ ಬಾರಿಗೆ ಬಾರ್ಡರ್-ಗವಾಸ್ಕರ್ ಟ್ರೋಫಿ ಗೆಲ್ಲುವುದು ಕೇವಲ ಕನಸಾಗಿಯೇ ಉಳಿಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:49 pm, Mon, 9 December 24

ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ