AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: ಟೀಂ ಇಂಡಿಯಾ ಸದಸ್ಯರ ತಾಯಿ ನಿಧನ; ದುಬೈನಿಂದ ಭಾರತಕ್ಕೆ ವಾಪಸ್

Champions Trophy 2025: ಭಾರತದ ಚಾಂಪಿಯನ್ಸ್ ಟ್ರೋಫಿ ತಂಡದ ವ್ಯವಸ್ಥಾಪಕ ಆರ್. ದೇವರಾಜ್ ಅವರ ತಾಯಿ ಕಮಲೇಶ್ವರಿ ಅವರು ನಿಧನರಾಗಿದ್ದಾರೆ. ದುಬೈನಲ್ಲಿರುವ ತಂಡವನ್ನು ಬಿಟ್ಟು ಅವರು ಅಂತ್ಯಕ್ರಿಯೆಗೆ ಹೈದರಾಬಾದ್‌ಗೆ ಮರಳಿದ್ದಾರೆ. ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ಸಂತಾಪ ಸೂಚಿಸಿದೆ. ದೇವರಾಜ್ ದುಬೈಗೆ ಮರಳುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಇದಕ್ಕೂ ಮುನ್ನ, ತಂಡದ ಬೌಲಿಂಗ್ ಕೋಚ್ ಮೋರ್ನೆ ಮೋರ್ಕೆಲ್ ಅವರ ತಂದೆಯೂ ನಿಧನರಾಗಿದ್ದರು.

Champions Trophy 2025: ಟೀಂ ಇಂಡಿಯಾ ಸದಸ್ಯರ ತಾಯಿ ನಿಧನ; ದುಬೈನಿಂದ ಭಾರತಕ್ಕೆ ವಾಪಸ್
Team India
ಪೃಥ್ವಿಶಂಕರ
|

Updated on:Mar 02, 2025 | 9:31 PM

Share

ಪ್ರಸ್ತುತ ಚಾಂಪಿಯನ್ಸ್ ಟ್ರೋಫಿ (Champions Trophy 2025) ಆಡುತ್ತಿರುವ ಟೀಂ ಇಂಡಿಯಾ (Team India) ದುಬೈನಲ್ಲಿದೆ. ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಗುಂಪು ಹಂತದ ಕೊನೆಯ ಪಂದ್ಯ ನಡೆಯುತ್ತಿದೆ. ಈ ಪಂದ್ಯಾವಳಿಯ ಮಧ್ಯದಲ್ಲಿ, ಟೀಂ ಇಂಡಿಯಾದ ಪ್ರಮುಖ ಸದಸ್ಯರೊಬ್ಬರ ಮನೆಯಲ್ಲಿ ಸೂತಕ ಮನೆ ಮಾಡಿದೆ. ವಾಸ್ತವವಾಗಿ, ತಂಡದ ವ್ಯವಸ್ಥಾಪಕ ಆರ್ ದೇವರಾಜ್ ಅವರ ತಾಯಿ ನಿಧನರಾಗಿದ್ದಾರೆ. ಹೀಗಾಗಿ ಅವರು ಚಾಂಪಿಯನ್ಸ್ ಟ್ರೋಫಿಯನ್ನು ಅರ್ಧದಲ್ಲೇ ಬಿಟ್ಟು ಭಾರತಕ್ಕೆ ವಾಪಸ್ಸಾಗಿದ್ದಾರೆ. ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ​​(HCA) ಅಭಿಮಾನಿಗಳಿಗೆ ಈ ಮಾಹಿತಿ ನೀಡಿದೆ.

ತಂಡದ ವ್ಯವಸ್ಥಾಪಕರ ತಾಯಿ ನಿಧನ

ಮೇಲೆ ಹೇಳಿದಂತೆ ಭಾರತ ತಂಡದ ವ್ಯವಸ್ಥಾಪಕ ಆರ್ ದೇವರಾಜ್ ಅವರ ತಾಯಿ ನಿಧನರಾಗಿದ್ದಾರೆ. ದೇವರಾಜ್ ಪ್ರಸ್ತುತ ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ​​(HCA) ನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ದೇವರಾಜ್ ಹೈದರಾಬಾದ್‌ಗೆ ಮರಳಿದ್ದಾರೆ. ಪ್ರಸ್ತುತ ಹೈದರಾಬಾದ್‌ಗೆ ಬಂದಿರುವ ಆರ್ ದೇವರಾಜ್ ದುಬೈಗೆ ಹಿಂತಿರುಗುತ್ತಾರೋ ಇಲ್ಲವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕ್ರಿಕ್‌ಬಜ್ ವರದಿಯ ಪ್ರಕಾರ, ಆರ್. ದೇವರಾಜ್ ದುಬೈಗೆ ಹಿಂತಿರುಗುತ್ತಾರೋ ಇಲ್ಲವೋ ಎಂಬ ಬಗ್ಗೆ ಮಂಗಳವಾರ ನಡೆಯಲಿರುವ ಸೆಮಿಫೈನಲ್ ಪಂದ್ಯದ ನಂತರ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ.

ದೇವರಾಜ್ ಅವರ ತಾಯಿಯ ಅಗಲಿಕೆಗೆ ​​ಸಂತಾಪ ವ್ಯಕ್ತಪಡಿಸಿರುವ ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್, ‘ನಮ್ಮ ಕಾರ್ಯದರ್ಶಿ ದೇವರಾಜ್ ಅವರ ತಾಯಿ ಕಮಲೇಶ್ವರಿ ಅವರು ಇಹಲೋಕ ತ್ಯಜಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ದೇವರಾಜ್ ಮತ್ತು ಅವರ ಕುಟುಂಬಕ್ಕೆ ನಮ್ಮ ಹೃತ್ಪೂರ್ವಕ ಸಂತಾಪಗಳು ಎಂದು ಬರೆದುಕೊಂಡಿದೆ.

ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿಗೆ ಜಸ್ಪ್ರೀತ್ ಬುಮ್ರಾ ಎಂಟ್ರಿ? NCA ಯಿಂದ ಹೊರಬಿತ್ತು ಗುಡ್​ ನ್ಯೂಸ್

ಬೌಲಿಂಗ್ ಕೋಚ್ ತಂದೆಯೂ ನಿಧನ

ವಾಸ್ತವವಾಗಿ ಚಾಂಪಿಯನ್ಸ್ ಟ್ರೋಫಿಗೆ ಸ್ವಲ್ಪ ಮೊದಲು, ಭಾರತ ತಂಡದ ಬೌಲಿಂಗ್ ಕೋಚ್ ಮೋರ್ನೆ ಮೋರ್ಕೆಲ್ ಅವರ ತಂದೆ ಕೂಡ ನಿಧನರಾದರು, ಇದರಿಂದಾಗಿ ಅವರು ದುಬೈನಿಂದ ದಕ್ಷಿಣ ಆಫ್ರಿಕಾದ ತಮ್ಮ ಮನೆಗೆ ಮರಳಬೇಕಾಯಿತು. ಆದಾಗ್ಯೂ, ಕರ್ಮಗಳನ್ನೆಲ್ಲ ಮುಗಿಸಿದ ಬಳಿಕ ಮೋರ್ನೆ ಮೋರ್ಕೆಲ್ ದುಬೈಗೆ ಮರಳಿ ಟೀಂ ಇಂಡಿಯಾವನ್ನು ಮತ್ತೆ ಕೂಡಿಕೊಂಡರು. ಆದರೆ ತಂಡದ ವ್ಯವಸ್ಥಾಪಕ ಆರ್. ದೇವರಾಜ್ ಹಿಂತಿರುಗುತ್ತಾರೋ ಇಲ್ಲವೋ ಎಂಬುದರ ಕುರಿತು ಯಾವುದೇ ಮಾಹಿತಿ ಇಲ್ಲ. ಪ್ರತಿ ಪ್ರಮುಖ ಟೂರ್ನಿಗಳಿಗೂ ಟೀಂ ಇಂಡಿಯಾಗೆ ಹೊಸ ಮ್ಯಾನೇಜರ್ ಆಯ್ಕೆಯಾಗುತ್ತಾರೆ. ವ್ಯವಸ್ಥಾಪಕರ ಜವಾಬ್ದಾರಿಗಳು ಸಾಮಾನ್ಯವಾಗಿ ಆಟಗಾರರ ಶಿಸ್ತು, ತರಬೇತುದಾರ ಮತ್ತು ತಂಡದ ನಡುವಿನ ಸಮನ್ವಯ ಮತ್ತು ಲಾಜಿಸ್ಟಿಕ್ಸ್ ನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡುವುದಾಗಿರುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:28 pm, Sun, 2 March 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ