ಬಾಂಗ್ಲಾ ತಂಡವನ್ನು ಮಣಿಸಿದ ಭಾರತಕ್ಕೆ ಎರಡೆರಡು ಲಾಭ; ಅಣತಿ ದೂರದಲ್ಲಿ ಡಬ್ಲ್ಯುಟಿಸಿ ಫೈನಲ್ ಟಿಕೆಟ್ ..!

IND vs BAN: ಚಟ್ಟೋಗ್ರಾಮ್ ಟೆಸ್ಟ್‌ನಲ್ಲಿ ಬಾಂಗ್ಲಾದೇಶವನ್ನು ಸೋಲಿಸಿದ ಭಾರತ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಪಾಯಿಂಟ್‌ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ.

ಬಾಂಗ್ಲಾ ತಂಡವನ್ನು ಮಣಿಸಿದ ಭಾರತಕ್ಕೆ ಎರಡೆರಡು ಲಾಭ; ಅಣತಿ ದೂರದಲ್ಲಿ ಡಬ್ಲ್ಯುಟಿಸಿ ಫೈನಲ್ ಟಿಕೆಟ್ ..!
ಟೀಂ ಇಂಡಿಯಾ
Follow us
TV9 Web
| Updated By: ಪೃಥ್ವಿಶಂಕರ

Updated on:Dec 18, 2022 | 11:31 AM

ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಭಾರತ (India vs Bangladesh) ಗೆದ್ದು ಬೀಗಿದೆ. ಇದರೊಂದಿಗೆ 2 ಟೆಸ್ಟ್‌ಗಳ ಸರಣಿಯಲ್ಲಿ ಅಜೇಯ 1-0 ಮುನ್ನಡೆ ಸಾಧಿಸಿದೆ. ಚಟ್ಟೋಗ್ರಾಮ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ 4ನೇ ದಿನದಾಟದ ಅಂತ್ಯಕ್ಕೆ ಬಾಂಗ್ಲಾದೇಶ 6 ವಿಕೆಟ್‌ ಕಳೆದುಕೊಂಡು 272 ರನ್ ಗಳಿಸಿತ್ತು. ಇಲ್ಲಿಂದ 5ನೇ ದಿನದಾಟವನ್ನು ಆರಂಭಿಸಿದ ಬಾಂಗ್ಲಾ ಉಳಿದ ತನ್ನ 4 ವಿಕೆಟ್​ಗಳನ್ನು ಕೇವಲ 52 ರನ್​ಗಳಿಗೆ ಕಳೆದುಕೊಳ್ಳುವ ಮೂಲಕ ಆಲೌಟ್ ಆಯಿತು. ಈ ಮೂಲಕ ಭಾರತಕ್ಕೆ ಮೊದಲ ಟೆಸ್ಟ್‌ನಲ್ಲಿ 188 ರನ್‌ಗಳ ಭರ್ಜರಿ ಜಯ ತೋರಿತಿದೆ. ಈ ಗೆಲುವಿನ ಮೂಲಕ ಟೀಂ ಇಂಡಿಯಾ (Team India) ಎರಡೆರಡು ಲಾಭ ಗಳಿಸಿದೆ. ಮೊದಲನೆಯದು ಏಕದಿನ ಸರಣಿಗೆ ಟೀಂ ಇಂಡಿಯಾ ಸೇಡು ತೀರಿಸಿಕೊಳ್ಳುವ ಮೊದಲ ಹೆಜ್ಜೆ ಇಟ್ಟಿದ್ದರೆ, ಎರಡನೆಯದ್ದು, ಬಾಂಗ್ಲಾದೇಶವನ್ನು ಸೋಲಿಸುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ (World Test Championship) ಪಾಯಿಂಟ್‌ ಪಟ್ಟಿಯಲ್ಲಿ ಭಾರತ, ಶ್ರೀಲಂಕಾವನ್ನು ಹಿಂದಿಕ್ಕಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂತಿಮ ಪಂದ್ಯವನ್ನು ಆಡುವ ಉದ್ದೇಶದ ದೃಷ್ಟಿಯಿಂದ, ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯು ಭಾರತಕ್ಕೆ ಬಹಳ ಮುಖ್ಯವಾಗಿದೆ.

ಚಟ್ಟೋಗ್ರಾಮ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಭಾರತ 188 ರನ್‌ಗಳಿಂದ ಬಾಂಗ್ಲಾದೇಶವನ್ನು ಸೋಲಿಸಿತು. ಈ ದೊಡ್ಡ ಗೆಲುವಿನೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಪಾಯಿಂಟ್‌ ಪಟ್ಟಿಯಲ್ಲಿ 12 ಅಂಕಗಳನ್ನು ಪಡೆಯುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿದೆ. ಇದರೊಂದಿಗೆ ಒಂದು ಸ್ಥಾನ ಜಿಗಿತವನ್ನೂ ಸಹ ಸಾಧಿಸಲಾಗಿದೆ.

2. ಭಾರತಕ್ಕೆ ಒಂದು ಸ್ಥಾನದ ಲಾಭ

ಚಟ್ಟೋಗ್ರಾಮ್ ಟೆಸ್ಟ್‌ನಲ್ಲಿ ಬಾಂಗ್ಲಾದೇಶವನ್ನು ಸೋಲಿಸಿದ ಭಾರತ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಪಾಯಿಂಟ್‌ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಈ ಹಿಂದೆ ಭಾರತ ನಾಲ್ಕನೇ ಸ್ಥಾನದಲ್ಲಿತ್ತು. ಆದರೆ ಬಾಂಗ್ಲಾದೇಶವನ್ನು ಸೋಲಿಸಿದ ನಂತರ, ಈಗ ಮೂರನೇ ಸ್ಥಾನಕ್ಕೆ ಬಂದಿದೆ. ಅಂದರೆ, ಈಗ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಮಾತ್ರ ಟೀಂ ಇಂಡಿಯಾಕ್ಕಿಂತ ಮುಂದಿವೆ.

IND vs BAN 1st Test: ಕುಲ್ದೀಪ್-ಅಕ್ಷರ್ ಸ್ಪಿನ್ ಮೋಡಿಗೆ ಬಾಂಗ್ಲಾ ತತ್ತರ: ಮೊದಲ ಟೆಸ್ಟ್​ನಲ್ಲಿ ಭಾರತಕ್ಕೆ 188 ರನ್​ಗಳ ಭರ್ಜರಿ ಜಯ

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್‌ ಪಟ್ಟಿಯಲ್ಲಿ ಭಾರತ ಶೇಕಡ 55.33 ಗೆಲುವಿನ ಸರಾಸರಿಯೊಂದಿಗೆ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಇದರಲ್ಲಿ ಶ್ರೀಲಂಕಾದ ಗೆಲುವಿನ ಸರಾಸರಿ ಶೇಕಡಾ 53.33 ರಷ್ಟಿದ್ದು. 75% ನೊಂದಿಗೆ ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದೆ. ಹಾಗೆಯೇ ಗೆಲುವಿನ ಸರಾಸರಿ ಶೇಕಡಾ 60 ರಷ್ಟಿರುವ ದಕ್ಷಿಣ ಆಫ್ರಿಕಾ ಎರಡನೇ ಸ್ಥಾನದಲ್ಲಿದೆ.

3. ಪಾಕಿಸ್ತಾನ ಈಗಾಗಲೇ ರೇಸ್‌ನಿಂದ ಹೊರಬಿದ್ದಿದೆ

ಪಾಕಿಸ್ತಾನ ತಂಡ ಈಗಾಗಲೇ WTC ಫೈನಲ್ ರೇಸ್‌ನಿಂದ ಹೊರಗುಳಿದಿದೆ. ಅದೇ ಸಮಯದಲ್ಲಿ, ಇಂಗ್ಲೆಂಡ್ ಹಾದಿ ಕೂಡ ಕಠಿಣವಾಗಿದೆ. ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿ ಇಂಗ್ಲೆಂಡ್ ಇದ್ದರೆ, ಪಾಕಿಸ್ತಾನ ಆರನೇ ಸ್ಥಾನದಲ್ಲಿದೆ. ಹೀಗಾಗಿ ಡಬ್ಲ್ಯುಟಿಸಿ ಫೈನಲ್‌ಗೆ ಪಾಯಿಂಟ್ ಪಟ್ಟಿಯ ಅಗ್ರ ಮೂರು ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ.

ಡಿಸೆಂಬರ್ 22 ರಿಂದ ಎರಡನೇ ಟೆಸ್ಟ್ ಪಂದ್ಯ

ಭಾರತ ಈಗ ಡಿಸೆಂಬರ್ 22 ರಿಂದ ಬಾಂಗ್ಲಾದೇಶದಿಂದ ಎರಡನೇ ಟೆಸ್ಟ್ ಪಂದ್ಯವನ್ನು ಆಡಬೇಕಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ತನ್ನ ಸ್ಥಾನವನ್ನು ಇನ್ನಷ್ಟು ಬಲಪಡಿಸಲು, ಭಾರತ ಈ ಟೆಸ್ಟ್‌ನಲ್ಲೂ ದೊಡ್ಡ ಗೆಲುವಿನ ನಿರೀಕ್ಷೆಯಲ್ಲಿದೆ. ಬಾಂಗ್ಲಾದೇಶದ ಸರಣಿಯ ನಂತರ ಭಾರತ ತವರಿನಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಬೇಕಾಗಿದೆ. ಆ ಟೆಸ್ಟ್ ಸರಣಿಯೂ ಭಾರತಕ್ಕೆ ಬಹಳ ಪ್ರಮುಖವಾಗಿರಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:28 am, Sun, 18 December 22

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ