AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಅಡಿಲೇಡ್​ನಲ್ಲಿ ಭಾರತಕ್ಕೆ ಮತ್ತೊಂದು ಅಗ್ನಿಪರೀಕ್ಷೆ; ಗಿಲ್ ಪಡೆಗೆ ಗೆಲ್ಲಲೇಬೇಕಾದ ಒತ್ತಡ

India vs Australia 2nd ODI: ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಸೋತ ಭಾರತಕ್ಕೆ, ಅಡಿಲೇಡ್‌ನಲ್ಲಿ ನಡೆಯಲಿರುವ ಎರಡನೇ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಸರಣಿಯಲ್ಲಿ ಸಮಬಲ ಸಾಧಿಸಲು ಟೀಂ ಇಂಡಿಯಾ ಹೋರಾಡುತ್ತಿದ್ದರೆ, ಆಸ್ಟ್ರೇಲಿಯಾ ಈ ಪಂದ್ಯ ಗೆದ್ದು ಸರಣಿ ಕೈವಶ ಮಾಡಿಕೊಳ್ಳಲು ಯತ್ನಿಸುತ್ತಿದೆ. ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ಉತ್ತಮ ಪ್ರದರ್ಶನ ಭಾರತಕ್ಕೆ ನಿರ್ಣಾಯಕ.

IND vs AUS: ಅಡಿಲೇಡ್​ನಲ್ಲಿ ಭಾರತಕ್ಕೆ ಮತ್ತೊಂದು ಅಗ್ನಿಪರೀಕ್ಷೆ; ಗಿಲ್ ಪಡೆಗೆ ಗೆಲ್ಲಲೇಬೇಕಾದ ಒತ್ತಡ
Ind Vs Aus
ಪೃಥ್ವಿಶಂಕರ
|

Updated on: Oct 22, 2025 | 8:05 PM

Share

ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಂ ಇಂಡಿಯಾ (India vs Australia), ಪರ್ತ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿತ್ತು. ಇದೀಗ ಸರಣಿಯನ್ನು ಸಮಬಲಗೊಳಿಸುವ ಇರಾದೆಯಲ್ಲಿರುವ ಟೀಂ ಇಂಡಿಯಾಕ್ಕೆ ಅಡಿಲೇಡ್ ಅಗ್ನಿಪರೀಕ್ಷೆ ಎದುರಾಗಿದೆ. ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ಗುರುವಾರ, ಅಕ್ಟೋಬರ್ 23 ರಂದು ಅಡಿಲೇಡ್ ಓವಲ್‌ನಲ್ಲಿ (Adelaide Oval Match) ನಡೆಯಲಿದೆ. ಸರಣಿಯಲ್ಲಿ ಉಳಿಯಲು ಟೀಂ ಇಂಡಿಯಾ ಯಾವುದೇ ಬೆಲೆ ತೆತ್ತಾದರೂ ಎರಡನೇ ಏಕದಿನ ಪಂದ್ಯವನ್ನು ಗೆಲ್ಲಲೇಬೇಕು. ಇತ್ತ ಆಸ್ಟ್ರೇಲಿಯಾ ಮೊದಲ ಪಂದ್ಯವನ್ನು ಗೆದ್ದಿರುವ ಕಾರಣ, ಈ ಪಂದ್ಯವನ್ನು ಗೆದ್ದು ಸರಣಿಯನ್ನು ಕೈವಶ ಮಾಡಿಕೊಳ್ಳಲು ನೋಡುತ್ತಿದೆ. ಹೀಗಾಗಿ ಉಭಯ ತಂಡಗಳ ನಡುವೆ ಜಿದ್ದಾಜಿದ್ದಿನ ಹೋರಾಟವನ್ನು ನಿರೀಕ್ಷಿಸಲಾಗಿದೆ.

ಭಾರತಕ್ಕೆ ಗೆಲ್ಲಲೇಬೇಕಾದ ಒತ್ತಡ

ಮೇಲೆ ಹೇಳಿದಂತೆ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ 1-0 ಮುನ್ನಡೆಯಲ್ಲಿದೆ. ಸರಣಿಯನ್ನು ತನ್ನದಾಗಿಸಿಕೊಳ್ಳಲು ಎರಡನೇ ಪಂದ್ಯವನ್ನು ಗೆಲ್ಲುವ ಗುರಿಯನ್ನು ಆತಿಥೇಯರು ಹೊಂದಿದ್ದಾರೆ. ಆದರೆ ಸರಣಿಯಲ್ಲಿ ಉಳಿಯಲು ಟೀಮ್ ಇಂಡಿಯಾ ಅಡಿಲೇಡ್‌ನಲ್ಲಿ ಯಾವುದೇ ಬೆಲೆ ತೆತ್ತಾದರೂ ಗೆಲ್ಲಲೇಬೇಕು. ಇದಕ್ಕೆ ತಂಡದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಉತ್ತಮ ಪ್ರದರ್ಶನ ನೀಡಬೇಕಾಗುತ್ತದೆ. ಪರ್ತ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ನಾಯಕ ಶುಭ್‌ಮನ್ ಗಿಲ್ ಕೇವಲ 25 ರನ್‌ಗಳಿಗೆ ಔಟಾದರು. ಮಳೆಯಿಂದ ಪ್ರಭಾವಿತವಾದ ಪಂದ್ಯದಲ್ಲಿ ಭಾರತ ದೊಡ್ಡ ಮೊತ್ತವನ್ನು ಗಳಿಸಲು ಸಾಧ್ಯವಾಗಲಿಲ್ಲ. ಇದರ ಲಾಭ ಪಡೆದ ಆಸ್ಟ್ರೇಲಿಯಾ ಸುಲಭ ಜಯ ಸಾಧಿಸಿತು.

‘ಏಕದಿನ ತಂಡದಲ್ಲೂ ರಾಹುಲ್​ಗೆ ಅನ್ಯಾಯ’; ಮೂರ್ಖತನದ ನಿರ್ಧಾರ ಎಂದ ಮಾಜಿ ನಾಯಕ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯ ಗುರುವಾರ, ಅಕ್ಟೋಬರ್ 23 ರಂದು ನಡೆಯಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಪಂದ್ಯ ಯಾವ ಸಮಯಕ್ಕೆ ಪ್ರಾರಂಭವಾಗುತ್ತದೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಪಂದ್ಯ ಭಾರತೀಯ ಕಾಲಮಾನ ಬೆಳಿಗ್ಗೆ 9:00 ಗಂಟೆಗೆ ಆರಂಭವಾಗಲಿದೆ. ಟಾಸ್ ಅರ್ಧ ಗಂಟೆ ಮೊದಲು, ಬೆಳಿಗ್ಗೆ 8:30 ಕ್ಕೆ ನಡೆಯಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಈ ಪಂದ್ಯ ಅಡಿಲೇಡ್ ಓವಲ್ ಮೈದಾನದಲ್ಲಿ ನಡೆಯಲಿದೆ.

ಭಾರತ-ಆಸ್ಟ್ರೇಲಿಯಾ ಎರಡನೇ ಏಕದಿನ ಪಂದ್ಯವನ್ನು ಯಾವ ಟಿವಿ ಚಾನೆಲ್ ಪ್ರಸಾರ ಮಾಡುತ್ತದೆ?

ಏಕದಿನ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಹೆಚ್ಚುವರಿಯಾಗಿ, ಪಂದ್ಯಗಳನ್ನು ಡಿಡಿ ಸ್ಪೋರ್ಟ್ಸ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದು.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಈ ಪಂದ್ಯವನ್ನು ಎಲ್ಲಿ ಆನ್‌ಲೈನ್‌ನಲ್ಲಿ ಸ್ಟ್ರೀಮ್ ಮಾಡಲಾಗುತ್ತದೆ?

ಅಕ್ಟೋಬರ್ 23, ಗುರುವಾರ ನಡೆಯಲಿರುವ ಈ ಪಂದ್ಯದ ಆನ್‌ಲೈನ್ ಸ್ಟ್ರೀಮಿಂಗ್ ಅನ್ನು JIOHotstar ಅಪ್ಲಿಕೇಶನ್ ಅಥವಾ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ