
ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಂ ಇಂಡಿಯಾ (India vs Australia), ಪರ್ತ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿತ್ತು. ಇದೀಗ ಸರಣಿಯನ್ನು ಸಮಬಲಗೊಳಿಸುವ ಇರಾದೆಯಲ್ಲಿರುವ ಟೀಂ ಇಂಡಿಯಾಕ್ಕೆ ಅಡಿಲೇಡ್ ಅಗ್ನಿಪರೀಕ್ಷೆ ಎದುರಾಗಿದೆ. ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ಗುರುವಾರ, ಅಕ್ಟೋಬರ್ 23 ರಂದು ಅಡಿಲೇಡ್ ಓವಲ್‌ನಲ್ಲಿ (Adelaide Oval Match) ನಡೆಯಲಿದೆ. ಸರಣಿಯಲ್ಲಿ ಉಳಿಯಲು ಟೀಂ ಇಂಡಿಯಾ ಯಾವುದೇ ಬೆಲೆ ತೆತ್ತಾದರೂ ಎರಡನೇ ಏಕದಿನ ಪಂದ್ಯವನ್ನು ಗೆಲ್ಲಲೇಬೇಕು. ಇತ್ತ ಆಸ್ಟ್ರೇಲಿಯಾ ಮೊದಲ ಪಂದ್ಯವನ್ನು ಗೆದ್ದಿರುವ ಕಾರಣ, ಈ ಪಂದ್ಯವನ್ನು ಗೆದ್ದು ಸರಣಿಯನ್ನು ಕೈವಶ ಮಾಡಿಕೊಳ್ಳಲು ನೋಡುತ್ತಿದೆ. ಹೀಗಾಗಿ ಉಭಯ ತಂಡಗಳ ನಡುವೆ ಜಿದ್ದಾಜಿದ್ದಿನ ಹೋರಾಟವನ್ನು ನಿರೀಕ್ಷಿಸಲಾಗಿದೆ.
ಮೇಲೆ ಹೇಳಿದಂತೆ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ 1-0 ಮುನ್ನಡೆಯಲ್ಲಿದೆ. ಸರಣಿಯನ್ನು ತನ್ನದಾಗಿಸಿಕೊಳ್ಳಲು ಎರಡನೇ ಪಂದ್ಯವನ್ನು ಗೆಲ್ಲುವ ಗುರಿಯನ್ನು ಆತಿಥೇಯರು ಹೊಂದಿದ್ದಾರೆ. ಆದರೆ ಸರಣಿಯಲ್ಲಿ ಉಳಿಯಲು ಟೀಮ್ ಇಂಡಿಯಾ ಅಡಿಲೇಡ್‌ನಲ್ಲಿ ಯಾವುದೇ ಬೆಲೆ ತೆತ್ತಾದರೂ ಗೆಲ್ಲಲೇಬೇಕು. ಇದಕ್ಕೆ ತಂಡದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಉತ್ತಮ ಪ್ರದರ್ಶನ ನೀಡಬೇಕಾಗುತ್ತದೆ. ಪರ್ತ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ನಾಯಕ ಶುಭ್‌ಮನ್ ಗಿಲ್ ಕೇವಲ 25 ರನ್‌ಗಳಿಗೆ ಔಟಾದರು. ಮಳೆಯಿಂದ ಪ್ರಭಾವಿತವಾದ ಪಂದ್ಯದಲ್ಲಿ ಭಾರತ ದೊಡ್ಡ ಮೊತ್ತವನ್ನು ಗಳಿಸಲು ಸಾಧ್ಯವಾಗಲಿಲ್ಲ. ಇದರ ಲಾಭ ಪಡೆದ ಆಸ್ಟ್ರೇಲಿಯಾ ಸುಲಭ ಜಯ ಸಾಧಿಸಿತು.
‘ಏಕದಿನ ತಂಡದಲ್ಲೂ ರಾಹುಲ್ಗೆ ಅನ್ಯಾಯ’; ಮೂರ್ಖತನದ ನಿರ್ಧಾರ ಎಂದ ಮಾಜಿ ನಾಯಕ
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯ ಗುರುವಾರ, ಅಕ್ಟೋಬರ್ 23 ರಂದು ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಪಂದ್ಯ ಭಾರತೀಯ ಕಾಲಮಾನ ಬೆಳಿಗ್ಗೆ 9:00 ಗಂಟೆಗೆ ಆರಂಭವಾಗಲಿದೆ. ಟಾಸ್ ಅರ್ಧ ಗಂಟೆ ಮೊದಲು, ಬೆಳಿಗ್ಗೆ 8:30 ಕ್ಕೆ ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಈ ಪಂದ್ಯ ಅಡಿಲೇಡ್ ಓವಲ್ ಮೈದಾನದಲ್ಲಿ ನಡೆಯಲಿದೆ.
ಏಕದಿನ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಹೆಚ್ಚುವರಿಯಾಗಿ, ಪಂದ್ಯಗಳನ್ನು ಡಿಡಿ ಸ್ಪೋರ್ಟ್ಸ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದು.
ಅಕ್ಟೋಬರ್ 23, ಗುರುವಾರ ನಡೆಯಲಿರುವ ಈ ಪಂದ್ಯದ ಆನ್‌ಲೈನ್ ಸ್ಟ್ರೀಮಿಂಗ್ ಅನ್ನು JIOHotstar ಅಪ್ಲಿಕೇಶನ್ ಅಥವಾ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ