AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranchi Weather Update: ಭಾರತ-ಇಂಗ್ಲೆಂಡ್ 4ನೇ ಟೆಸ್ಟ್​ನ ಇಂದಿನ 4ನೇ ದಿನದಾಟ ನಡೆಯುವುದು ಅನುಮಾನ?

India vs England 4th Test Day 4 Weather: ಟೀಮ್ ಇಂಡಿಯಾ 3-1 ಅಂತರದಿಂದ ಮುನ್ನಡೆ ಸಾಧಿಸಿ ಸರಣಿಯನ್ನು ವಶಪಡಿಸಿಕೊಳ್ಳುವ ಹಾದಿಯಲ್ಲಿದೆ. ಆದರೆ, ರಾಂಚಿ ಟೆಸ್ಟ್‌ನ ನಾಲ್ಕನೇ ದಿನ ಮಳೆ ಬರುವ ಸಾಧ್ಯತೆ ಇದೆ. ಅಕ್ಯುವೆದರ್ ಮುನ್ಸೂಚನೆಗಳು ರಾಂಚಿಯ ದಿನ 4 (ಫೆಬ್ರವರಿ 26) ತಾಪಮಾನವು 16 ರಿಂದ 27 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ.

Ranchi Weather Update: ಭಾರತ-ಇಂಗ್ಲೆಂಡ್ 4ನೇ ಟೆಸ್ಟ್​ನ ಇಂದಿನ 4ನೇ ದಿನದಾಟ ನಡೆಯುವುದು ಅನುಮಾನ?
IND vs ENG 4th Test Weather Report
Vinay Bhat
|

Updated on: Feb 26, 2024 | 7:18 AM

Share

ರಾಂಚಿಯ ಜೆಎಸ್​ಸಿಎ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಣ ನಾಲ್ಕನೇ ಟೆಸ್ಟ್ ಪಂದ್ಯ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಮೂರನೇ ದಿನದಾಟದಲ್ಲಿ ಎಲ್ಲವೂ ಬದಲಾಗಿದ್ದು, ಆಂಗ್ಲರು ಕೇವಲ 145 ರನ್​ಗಳಿಗೆ ಆಲೌಟ್ ಆಗುವ ಮೂಲಕ ಟೀಮ್ ಇಂಡಿಯಾಕ್ಕೆ ಗೆಲ್ಲಲು 192 ರನ್​ಗಳ ಟಾರ್ಗೆಟ್ ನೀಡಿತು. ಗುರಿ ಬೆನ್ನಟ್ಟಲು ಶುರುಮಾಡಿದ ಭಾರತ ಮೂರನೇ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 40 ರನ್ ಗಳಿಸಿದೆ. ರೋಹಿತ್ ಶರ್ಮಾ 24 ಹಾಗೂ ಯಶಸ್ವಿ ಜೈಸ್ವಾಲ್ 16 ರನ್ ಇಂದು ನಾಲ್ಕನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಆದರೆ, ನಾಲ್ಕನೇ ದಿನದಾಟ ನಡೆಯುತ್ತಾ?.

ಟೀಮ್ ಇಂಡಿಯಾ 3-1 ಅಂತರದಿಂದ ಮುನ್ನಡೆ ಸಾಧಿಸಿ ಸರಣಿಯನ್ನು ವಶಪಡಿಸಿಕೊಳ್ಳುವ ಹಾದಿಯಲ್ಲಿದೆ. ಆದರೆ, ರಾಂಚಿ ಟೆಸ್ಟ್‌ನ ನಾಲ್ಕನೇ ದಿನ ಮಳೆ ಬರುವ ಸಾಧ್ಯತೆ ಇದೆ. ಅಕ್ಯುವೆದರ್ ಮುನ್ಸೂಚನೆಗಳು ರಾಂಚಿಯ ದಿನ 4 (ಫೆಬ್ರವರಿ 26) ತಾಪಮಾನವು 16 ರಿಂದ 27 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ. 42 ರಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇದು ತುಂತುರು ಮಳೆಯಾಗುವ ನಿರೀಕ್ಷೆಯಿದೆ.

ಭಾರತದ ಗೆಲುವಿಗೆ ಬೇಕು 152 ರನ್ಸ್: ಆದರೆ ಇದು ಸುಲಭವಲ್ಲ, ಯಾಕೆ ಗೊತ್ತೇ?

ಬೆಳಿಗ್ಗೆ ಸ್ಪಷ್ಟವಾದ ಆಕಾಶವನ್ನು ನಿರೀಕ್ಷಿಸಲಾಗಿದೆ, ಆದರೆ ಮಧ್ಯಾಹ್ನದ ವೇಳೆಗೆ ಸರಿಸುಮಾರು 60 ಪ್ರತಿಶತದಷ್ಟು ಮೋಡ ಕವಿದ ವಾತಾವರಣ ಇರುತ್ತದೆ. ಈ ಸಮಯದಲ್ಲಿ ಆರ್ದ್ರತೆಯು ಸುಮಾರು 60% ಆಗಿರುತ್ತದೆ. ಇದಲ್ಲದೇ 5ನೇ ದಿನವೂ ಆಕಾಶದಲ್ಲಿ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ನಂತರ ಒಂದು ಅಥವಾ ಎರಡು ಬಾರಿ ಮಳೆಯಾಗುವ ಸಾಧ್ಯತೆ ಇದೆ. ಮಳೆಯು ಇಡೀ ದಿನದ ಆಟದ ಮೇಲೆ ಪರಿಣಾಮ ಬೀರುವುದಿಲ್ಲ. ಆದರೆ ಆಟವು ಸ್ವಲ್ಪ ಸಮಯ ಸ್ಥಗಿತಗೊಂಡು ನಂತರ ಮುಂದುವರೆಸಬೇಕಾಗಿ ಬರಬಹುದು.

ನಿನ್ನೆ ಮೂರನೇ ದಿನ ಭಾರತವನ್ನು 307 ರನ್​ಗೆ ಆಲೌಟ್ ಮಾಡಿ 46 ರನ್​ಗಳ ಮುನ್ನಡೆಯೊಂದಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್​ ಮತ್ತೊಮ್ಮೆ ಉತ್ತಮ ಆರಂಭ ಪಡೆಯಲಿಲ್ಲ. ಬೆನ್ ಡಕೆಟ್ ಕೇವಲ 15 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರೆ, ನಂತರ ಬಂದ ಒಲಿ ಪೋಪ್ ಮತ್ತೊಮ್ಮೆ ನಿರಾಸೆ ಮೂಡಿಸಿದರು. ಮೊದಲ ಇನ್ನಿಂಗ್ಸ್​ನಲ್ಲಿ ಅಜೇಯ ಶತಕ ಸಿಡಿಸಿದ್ದ ರೂಟ್ ಆಟ ಎರಡನೇ ಇನ್ನಿಂಗ್ಸ್​ನಲ್ಲಿ ಕೇವಲ 11 ರನ್​ಗೆ ಅಂತ್ಯವಾಯಿತು. ಒಂದರ ಹಿಂದೆ ಒಂದರಂತೆ ವಿಕೆಟ್ ಪತನದ ನಡುವೆಯೂ ಸ್ಫೋಟಕ ಬ್ಯಾಟಿಂಗ್ ಮಾಡಿದ ಆರಂಭಿಕ ಝಾಕ್ ಕ್ರೌಲಿ 91 ಎಸೆತಗಳಲ್ಲಿ 60 ರನ್​ಗಳ ಇನ್ನಿಂಗ್ಸ್ ಆಡಿದರು.

ಲೀಗ್​ನಲ್ಲಿ ಸತತ 2ನೇ ಗೆಲುವು ದಾಖಲಿಸಿದ ಮುಂಬೈ; ಗುಜರಾತ್​ಗೆ ಸೋಲಿನ ಆರಂಭ

ನಾಯಕ ಬೆನ್ ಸ್ಟೋಕ್ಸ್ ಮತ್ತೊಂದು ಕಳಪೆ ಇನ್ನಿಂಗ್ಸ್ ಆಡುವ ಮೂಲಕ ಸಿಂಗಲ್ ಡಿಜಿಟ್​ಗೆ ವಿಕೆಟ್ ಒಪ್ಪಿಸಿದರೆ ಜಾನಿ ಬೈರ್​ಸ್ಟೋವ್ 30 ರನ್​ಗಳ ಕಾಣಿಕೆ ನೀಡಿದರು. ಅಂತಿಮವಾಗಿ ಇಂಗ್ಲೆಂಡ್ ಕೇವಲ 145 ರನ್‌ಗಳಿಗೆ ಸರ್ವಪತನ ಕಂಡಿತು. ಭಾರತದ ಪರ ಮಾರಕ ದಾಳಿ ನಡೆಸಿದ ರವಿಚಂದ್ರನ್ ಅಶ್ವಿನ್ ಮತ್ತೊಮ್ಮೆ 5 ವಿಕೆಟ್​ ಕಿತ್ತ ಸಾಧನೆ ಮಾಡಿದರೆ, ಕುಲ್ದೀಪ್ ಯಾದವ್ 4 ಪ್ರಮುಖ ವಿಕೆಟ್ ಪಡೆದು ಆಂಗ್ಲರ ಪತನಕ್ಕೆ ಕಾರಣರಾದರು. ರವೀಂದ್ರ ಜಡೇಜಾ 1 ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!