
ನವೆಂಬರ್ ತಿಂಗಳಲ್ಲಿ ಟೀಂ ಇಂಡಿಯಾ ಬಹು ಮಾದರಿಯ ಸರಣಿಗಾಗಿ ನ್ಯೂಜಿಲೆಂಡ್ ಪ್ರವಾಸ ಮಾಡಲಿದೆ. ಈ ಪ್ರವಾಸದಲ್ಲಿ ಟೀಂ ಇಂಡಿಯಾ ಐದು ಟಿ20 ಪಂದ್ಯಗಳು, ಐದು ಏಕದಿನಗಳು ಮತ್ತು ಎರಡು ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲಿದೆ. ಅದರಲ್ಲೂ ಎರಡು ಪಂದ್ಯಗಳ ಟೆಸ್ಟ್ ಸರಣಿ, ಡಬ್ಲ್ಯೂಟಿಸಿ ಫೈನಲ್ ದೃಷ್ಟಿಯಿಂದ ಉಭಯ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ. ಏಕೆಂದರೆ ಈ ಸರಣಿಯಲ್ಲಿ ಒಂದೇ ಒಂದು ಪಂದ್ಯವನ್ನು ಸೋತರೂ ಟೀಂ ಇಂಡಿಯಾ ಡಬ್ಲ್ಯೂಟಿಸಿ ಫೈನಲ್ ರೇಸ್ನಿಂದ ಹೊರಬೀಳಲಿದೆ. ಹೀಗಾಗಿ ಗಿಲ್ ಪಡೆ ಶತಾಯಗತಾಯ ಈ ಸರಣಿಯನ್ನು ಗೆಲ್ಲಲೇಬೇಕಿದೆ. ಹೀಗಾಗಿ ಈ ಟೆಸ್ಟ್ ಸರಣಿಗೆ ತಯಾರಿ ನಡೆಸುವ ತೃಷ್ಟಿಯಿಂದ ಭಾರತ ಎ ತಂಡ ಮುನ್ನ ಭಾರತ ಎ ತಂಡ, ನ್ಯೂಜಿಲೆಂಡ್ ಎ ವಿರುದ್ಧ ನಾಲ್ಕು ದಿನಗಳ ಮೂರು ಪಂದ್ಯಗಳನ್ನು ಆಡಲಿದೆ.
ಭಾರತ ‘ಎ’ ತಂಡದ ಈ ಪ್ರವಾಸವು ಟೀಂ ಇಂಡಿಯಾದ ಟಿ20 ಮತ್ತು ಏಕದಿನ ಸರಣಿಗಳು ಹಾಗೂ ನಾಲ್ಕು ಭಾರತ A-ಮಟ್ಟದ ಪಂದ್ಯಗಳನ್ನು ಒಳಗೊಂಡಿರುತ್ತದೆ, ಇವುಗಳನ್ನು NZC ಯೂಟ್ಯೂಬ್ ಚಾನೆಲ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಈ ಮೂರು ಪಂದ್ಯಗಳು ಅಕ್ಟೋಬರ್ 24 ರಂದು ಪ್ರಾರಂಭವಾಗಿ ನವೆಂಬರ್ 10 ರವರೆಗೆ ನಡೆಯಲಿವೆ. ಮೊದಲ ಮತ್ತು ಮೂರನೇ ಪಂದ್ಯಗಳು ಲಿಂಕನ್‌ನ ಬರ್ಟ್ ಸಟ್‌ಕ್ಲಿಫ್ ಓವಲ್‌ನಲ್ಲಿ ನಡೆಯಲಿದ್ದು, ಎರಡನೇ ಪಂದ್ಯವು ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್‌ನಲ್ಲಿ ನಡೆಯಲಿದೆ.
2019 ರ ನಂತರ ಭಾರತ ತಂಡವು ಮೊದಲ ಬಾರಿಗೆ ನ್ಯೂಜಿಲೆಂಡ್‌ನಲ್ಲಿ ಟೆಸ್ಟ್ ಪಂದ್ಯವನ್ನು ಆಡಲಿದೆ. ಅಲ್ಲದೆ ಇದು 2022 ರ ನಂತರ ಟೀಂ ಇಂಡಿಯಾ ದ ನ್ಯೂಜಿಲೆಂಡ್ ತಂಡಕ್ಕೆ ಮೊದಲ ಬಿಳಿ ಚೆಂಡಿನ ಪ್ರವಾಸವಾಗಿದೆ. ಈ ಪ್ರವಾಸವು ಟಿ20 ಸರಣಿಯೊಂದಿಗೆ ಪ್ರಾರಂಭವಾಗುತ್ತದೆ, ಮೊದಲ ಪಂದ್ಯವು ಅಕ್ಟೋಬರ್ 22 ರಂದು ನಡೆಯಲಿದೆ. ಮುಂದಿನ ನಾಲ್ಕು ಪಂದ್ಯಗಳು ಅಕ್ಟೋಬರ್ 24, 27, 30 ಮತ್ತು ನವೆಂಬರ್ 1 ರಂದು ನಡೆಯಲಿವೆ.
ನವೆಂಬರ್ 4 ರಂದು ಏಕದಿನ ಸರಣಿ ಆರಂಭವಾಗಲಿದ್ದು, ನವೆಂಬರ್ 7, 10, 13 ಮತ್ತು 15 ರಂದು ಉಳಿದ ಪಂದ್ಯಗಳು ನಡೆಯಲಿವೆ. ಅಂತಿಮವಾಗಿ, ಎರಡು ಟೆಸ್ಟ್ ಪಂದ್ಯಗಳು ನಡೆಯಲಿದ್ದು, ಇದು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ದೃಷ್ಟಿಯಿಂದ ಭಾರತಕ್ಕೆ ನಿರ್ಣಾಯಕವಾಗಿದೆ. ಭಾರತ ಈ ಎರಡೂ ಪಂದ್ಯಗಳನ್ನು ಯಾವುದೇ ಬೆಲೆ ತೆತ್ತಾದರೂ ಗೆಲ್ಲಲೇಬೇಕು.