AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾ ಮುಂದಿನ ಟೆಸ್ಟ್ ಸರಣಿಯನ್ನು ಯಾವಾಗ, ಎಲ್ಲಿ ಆಡಲಿದೆ?

India vs New Zealand Test Series: ಶ್ರೀಲಂಕಾ ಸರಣಿ ನಂತರ, WTC ಫೈನಲ್ ರೇಸ್‌ನಲ್ಲಿ ಟೀಂ ಇಂಡಿಯಾಗೆ ನ್ಯೂಜಿಲೆಂಡ್ ಪ್ರವಾಸ ಅತಿ ಮುಖ್ಯವಾಗಿದೆ. ನವೆಂಬರ್‌ನಲ್ಲಿ ಪ್ರಾರಂಭವಾಗುವ ಎರಡು ಟೆಸ್ಟ್ ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆಲ್ಲಲೇಬೇಕು. ಭಾರತ ತಂಡ ಆರುವರೆ ವರ್ಷಗಳ ನಂತರ ನ್ಯೂಜಿಲೆಂಡ್‌ಗೆ ತೆರಳುತ್ತಿದೆ. ಈ ಸರಣಿಯ ಫಲಿತಾಂಶ ಭಾರತದ WTC ಫೈನಲ್ ಸ್ಥಾನವನ್ನು ನಿರ್ಧರಿಸಲಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ಟೀಂ ಇಂಡಿಯಾ ಮುಂದಿನ ಟೆಸ್ಟ್ ಸರಣಿಯನ್ನು ಯಾವಾಗ, ಎಲ್ಲಿ ಆಡಲಿದೆ?
Team India
ಪೃಥ್ವಿಶಂಕರ
|

Updated on:Aug 28, 2026 | 6:12 PM

Share

ಟೀಂ ಇಂಡಿಯಾದ (Team India) ಶ್ರೀಲಂಕಾ ಪ್ರವಾಸ ಮುಕ್ತಾಯಗೊಂಡಿದೆ. ಈ ಪ್ರವಾಸದಲ್ಲಿ ನಡೆದ ಎರಡು ಟೆಸ್ಟ್ ಪಂದ್ಯಗಳಲ್ಲಿ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿದ್ದ ಟೀಂ ಇಂಡಿಯಾ ಎರಡನೇ ಟೆಸ್ಟ್ ಪಂದ್ಯವನ್ನು ಡ್ರಾ ಮಾಡಿಕೊಂಡಿತು. ಇದರೊಂದಿಗೆ ಸರಣಿಯನ್ನು 1-0 ಅಂತರದಲ್ಲಿ ಗೆದ್ದುಕೊಂಡಿತು. ಆದರೆ ಕೊನೆಯ ಟೆಸ್ಟ್ ಪಂದ್ಯವನ್ನು ಡ್ರಾ ಮಾಡಿಕೊಂಡಿರುವುದು ಡಬ್ಲ್ಯೂಟಿಸಿ ಫೈನಲ್ (WTC Final)​ ರೇಸ್​ನಲ್ಲಿರುವ ಭಾರತ ತಂಡಕ್ಕೆ ಕೊಂಚ ಹಿನ್ನಡೆಯನ್ನುಂಟು ಮಾಡಿದೆ. ಹೀಗಾಗಿ ಮುಂಬರುವ ಸರಣಿಯ ಎಲ್ಲಾ ಪಂದ್ಯಗಳನ್ನು ಗೆದ್ದರಷ್ಟೇ ಟೀಂ ಇಂಡಿಯಾ ಡಬ್ಲ್ಯೂಟಿಸಿ ಫೈನಲ್​ಗೇರಲಿದೆ. ಹಾಗಿದ್ದರೆ ಟೀಂ ಇಂಡಿಯಾ ತನ್ನ ಮುಂದಿನ ಟೆಸ್ಟ್ ಸರಣಿಯನ್ನು ಯಾವಾಗ? ಎಲ್ಲಿ? ಯಾರ ವಿರುದ್ಧ ಆಡಲಿದೆ ಎಂಬುದನ್ನು ನೋಡುವುದಾದರೆ.

ಭಾರತದ ನ್ಯೂಜಿಲೆಂಡ್ ಪ್ರವಾಸ

ಮುಂದಿನ ಮೂರು ತಿಂಗಳುಗಳ ಕಾಲ, ಭಾರತೀಯ ಆಟಗಾರರು ನೀಲಿ ಬಣ್ಣದ ಜೆರ್ಸಿಯಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದು, ಏಕದಿನ ಮತ್ತು ಟಿ20 ಸರಣಿಯನ್ನು ಆಡಲಿದ್ದಾರೆ. ಹೀಗಾಗಿ ಟೀಂ ಇಂಡಿಯಾದ ಮುಂದಿನ ಟೆಸ್ಟ್ ಸರಣಿಯು ನವೆಂಬರ್ 19 ರಂದು ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಪ್ರಾರಂಭವಾಗುವವರೆಗೆ ಅಭಿಮಾನಿಗಳು ಕಾಯಬೇಕಾಗುತ್ತದೆ. ಆರುವರೆ ವರ್ಷಗಳ ನಂತರ ಭಾರತ ತಂಡ ನ್ಯೂಜಿಲೆಂಡ್ ಪ್ರವಾಸ ಮಾಡುತ್ತಿದೆ. ಟೀಂ ಇಂಡಿಯಾ ಕೊನೆಯ ಬಾರಿಗೆ ನ್ಯೂಜಿಲೆಂಡ್‌ನಲ್ಲಿ ಟೆಸ್ಟ್ ಸರಣಿಯನ್ನು ಆಡಿದ್ದು ಫೆಬ್ರವರಿ 2020 ರಲ್ಲಿ.

ಅದಾದ ಬಳಿಕ ನ್ಯೂಜಿಲೆಂಡ್ ತಂಡ ಭಾರತಕ್ಕೆ ಬಂದು ಎರಡು ಟೆಸ್ಟ್ ಸರಣಿಗಳನ್ನು ಆಡಿದೆ. ಅದರಲ್ಲಿ ಒಂದು ಸರಣಿಯಲ್ಲಿ ಟೀಂ ಇಂಡಿಯಾವನ್ನು ಕ್ಲೀನ್ ಸ್ವೀಪ್ ಕೂಡ ಮಾಡಿದೆ. ಅಂದರೆ ಅರ್ಧ ದಶಕದ ನಂತರ ಟೀಂ ಇಂಡಿಯಾ ನ್ಯೂಜಿಲೆಂಡ್ ಪ್ರವಾಸ ಮಾಡುತ್ತಿದೆ. ಈ ಪ್ರವಾಸದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಎರಡು ಟೆಸ್ಟ್ ಪಂದ್ಯಗಳು ನಡೆಯಲಿದ್ದು, ನವೆಂಬರ್ 19 ರಂದು ವೆಲ್ಲಿಂಗ್ಟನ್‌ನಲ್ಲಿ ಪ್ರಾರಂಭವಾಗುತ್ತದೆ. ನಂತರ ಎರಡನೇ ಟೆಸ್ಟ್ ಪಂದ್ಯವು ನವೆಂಬರ್ 27 ರಂದು ಕ್ರೈಸ್ಟ್‌ಚರ್ಚ್‌ನಲ್ಲಿ ಪ್ರಾರಂಭವಾಗಲಿದೆ.

Asia Cup 2026: ದುಬೈ ತಲುಪಿದ ಟೀಂ ಇಂಡಿಯಾ; ಈ ದಿನದಂದು ಮೊದಲ ಪಂದ್ಯ

ನ್ಯೂಜಿಲೆಂಡ್ ಪ್ರವಾಸ ಏಕೆ ಮುಖ್ಯ?

ಶ್ರೀಲಂಕಾ ವಿರುದ್ಧದ ಕೊಲಂಬೊ ಟೆಸ್ಟ್ ಪಂದ್ಯ ಡ್ರಾ ಆದ ನಂತರ, ನ್ಯೂಜಿಲೆಂಡ್ ಪ್ರವಾಸವು ಟೀಂ ಇಂಡಿಯಾಗೆ ಇನ್ನಷ್ಟು ಮಹತ್ವದ್ದಾಗಿದೆ. 2027 ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ತಲುಪಲು, ಟೀಂ ಇಂಡಿಯಾ ಈ ಸರಣಿಯನ್ನು 2-0 ಅಂತರದಿಂದ ಗೆಲ್ಲಲೇಬೇಕು. ಟೀಂ ಇಂಡಿಯಾ ಪ್ರಸ್ತುತ ಡಬ್ಲ್ಯೂಟಿಸಿ ಪಾಯಿಂಟ್ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಹೀಗಾಗಿ ನ್ಯೂಜಿಲೆಂಡ್‌ ವಿರುದ್ಧದ ಟೆಸ್ಟ್ ಗೆಲುವು ಅಥವಾ ಸೋಲು ಡಬ್ಲ್ಯೂಟಿಸಿ ಫೈನಲ್‌ನಲ್ಲಿ ಟೀಂ ಇಂಡಿಯಾದ ಸ್ಥಾನವನ್ನು ನಿರ್ಧರಿಸಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:11 pm, Fri, 28 August 26

Follow Us