ಐಸಿಸಿ ಏಕದಿನ ವಿಶ್ವಕಪ್ (ICC World Cup) ಟೂರ್ನಿಯಲ್ಲಿ ಭಾರತ ಭರ್ಜರಿ ಪ್ರದರ್ಶನ ತೋರುತ್ತಿದೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ 6 ವಿಕೆಟ್ಗಳ ಜಯ ಸಾಧಿಸಿ ಶುಭಾರಂಭ ಮಾಡಿದ್ದ ಟೀಮ್ ಇಂಡಿಯಾ ಬುಧವಾರ ನಡೆದ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ 8 ವಿಕೆಟ್ಗಳ ಜಯ ಸಾಧಿಸಿತು. ಈ ಮೂಲಕ ಭಾರತ ಪಾಯಿಂಟ್ ಟೇಬಲ್ನಲ್ಲಿ ನಾಲ್ಕು ಅಂಕ ಸಂಪಾದಿಸಿ ಎರಡನೇ ಸ್ಥಾನದಲ್ಲಿದೆ. ಸದ್ಯ ಹ್ಯಾಟ್ರಿಕ್ ಜಯದ ಕನಸಿನಲ್ಲಿರುವ ರೋಹಿತ್ ಶರ್ಮಾ ಪಡೆಯ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ? ನೋಡೋಣ.
ವಿಶ್ವಕಪ್ನಲ್ಲಿ ಭಾರತದ ಮುಂದಿನ ಎದುರಾಳಿ ಯಾರು?
ವಿಶ್ವಕಪ್ನಲ್ಲಿ ಭಾರತದ ಮುಂದಿನ ಪಂದ್ಯ ಪಾಕಿಸ್ತಾನ ವಿರುದ್ಧ ನಡೆಯಲಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯ ಅಕ್ಟೋಬರ್ 14 ರಂದು (ಶನಿವಾರ) ನಡೆಯಲಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯ ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.
ICC Rankings: ಭರ್ಜರಿ ಮುಂಬಡ್ತಿ ಪಡೆದ ಕೊಹ್ಲಿ- ರಾಹುಲ್; ನಂ.1 ಪಟ್ಟ ಕಳೆದುಕೊಂಡ ಸಿರಾಜ್..!
ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2:00 ಗಂಟೆಗೆ ಆರಂಭವಾಗಲಿದೆ.
ಭಾರತ ಮತ್ತು ಪಾಕಿಸ್ತಾನ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹುದು?
ನೀವು ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.
ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?
ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನೆಲ್‌ಗಳಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು.
ಉಭಯ ತಂಡಗಳು
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್. , ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.
ಪಾಕಿಸ್ತಾನ ತಂಡ: ಬಾಬರ್ ಅಝಂ (ನಾಯಕ), ಶಾದಾಬ್ ಖಾನ್, ಮುಹಮ್ಮದ್ ರಿಜ್ವಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಸೌದ್ ಶಕೀಲ್, ಫಖರ್ ಜಮಾನ್, ಹಾರಿಸ್ ರೌಫ್, ಹಸನ್ ಅಲಿ, ಇಫ್ತಿಕರ್ ಅಹ್ಮದ್, ಮುಹಮ್ಮದ್ ನವಾಜ್, ಮುಹಮ್ಮದ್ ವಾಸಿಂ ಜೂನಿಯರ್ , ಅಘಾ ಸಲ್ಮಾನ್, ಶಾಹೀನ್ ಶಾ ಅಫ್ರಿದಿ, ಒಸಾಮಾ ಮಿರ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ