Team India: ಆಡಿದ್ದು 3ನೇ ದಿನ: ಅದರಲ್ಲೂ ದಂಡ ಕಟ್ಟಿದ ಟೀಮ್ ಇಂಡಿಯಾ

Team India: ಪಾಕಿಸ್ತಾನ್ ತಂಡವು 5ನೇ ಸ್ಥಾನದಲ್ಲಿ ಕಾಣಿಸಿಕೊಂಡರೆ, ಟೀಮ್ ಇಂಡಿಯಾ 6ನೇ ಸ್ಥಾನಕ್ಕೆ ಕುಸಿದಿದೆ. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಗೆಲ್ಲುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಪಾಯಿಂಟ್ಸ್​ ಟೇಬಲ್​ನಲ್ಲಿ ಮೇಲೇರುವ ಅನಿವಾರ್ಯತೆ ಟೀಮ್ ಇಂಡಿಯಾ ಮುಂದಿದೆ.

Team India: ಆಡಿದ್ದು 3ನೇ ದಿನ: ಅದರಲ್ಲೂ ದಂಡ ಕಟ್ಟಿದ ಟೀಮ್ ಇಂಡಿಯಾ
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on:Dec 30, 2023 | 8:22 AM

ಸೆಂಚುರಿಯನ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಹೀನಾಯ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲ ಇನಿಂಗ್ಸ್ ಆರಂಭಿಸಿದ ಭಾರತ ತಂಡವು ಕೆಎಲ್ ರಾಹುಲ್ (101) ಅವರ ಶತಕದ ನೆರವಿನಿಂದ 245 ರನ್​ ಕಲೆಹಾಕಿ ಆಲೌಟ್ ಆಯಿತು.

ಇದರ ಬೆನ್ನಲ್ಲೇ ಇನಿಂಗ್ಸ್ ಆರಂಭಿಸಿದ ಸೌತ್ ಆಫ್ರಿಕಾ ತಂಡವು ಡೀನ್ ಎಲ್ಗರ್ (185) ಅವರ ಭರ್ಜರಿ ಶತಕದ ನೆರವಿನಿಂದ 408 ರನ್​ ಕಲೆಹಾಕಿತು. ಇತ್ತ 163 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ ಆರಂಭಿಸಿದ ಭಾರತ ತಂಡದ ಪರ ಕ್ರೀಸ್ ಕಚ್ಚಿ ನಿಂತದ್ದು ವಿರಾಟ್ ಕೊಹ್ಲಿ ಮಾತ್ರ.

ಒಂದೆಡೆ ವಿರಾಟ್ ಕೊಹ್ಲಿ (76) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರೆ ಮತ್ತೊಂದೆಡೆ ಟೀಮ್ ಇಂಡಿಯಾ ಬ್ಯಾಟರ್​ಗಳು ಪೆವಿಲಿಯನ್ ಪರೇಡ್ ನಡೆಸಿದರು. ಪರಿಣಾಮ ಭಾರತ ತಂಡವು 131 ರನ್​ಗಳಿಗೆ ಆಲೌಟ್ ಆಯಿತು. ಈ ಮೂಲಕ ಸೌತ್ ಆಫ್ರಿಕಾ ತಂಡವು ಇನಿಂಗ್ಸ್ ಹಾಗೂ 32 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ದಂಡ ಕಟ್ಟಿದ ಟೀಮ್ ಇಂಡಿಯಾ:

ಸೌತ್ ಆಫ್ರಿಕಾ ವಿರುದ್ಧದ ಈ ಪಂದ್ಯವು ಕೇವಲ 3 ದಿನಗಳಲ್ಲೇ ಮುಕ್ತಾಯಗೊಂಡಿತು. ಈ ಪಂದ್ಯದಲ್ಲಿ ಭಾರತ ತಂಡ ಒಂದು ಇನಿಂಗ್ಸ್​ನಲ್ಲಿ ಮಾತ್ರ ಬೌಲಿಂಗ್ ಮಾಡಿದ್ದರು. ಆದರೆ ಅದರಲ್ಲೂ ಸ್ಲೋ ಓವರ್​ ರೇಟ್ ತಪ್ಪಸೆಗಿದೆ. ಸೌತ್ ಆಫ್ರಿಕಾ ಇನಿಂಗ್ಸ್​ ವೇಳೆ ನಿಧಾನಗತಿಯ ಓವರ್-ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಭಾರತ ತಂಡಕ್ಕೆ ಪಂದ್ಯದ ಶುಲ್ಕದ ಶೇಕಡಾ 10 ರಷ್ಟು ದಂಡ ವಿಧಿಸಲಾಗಿದೆ.

ಅಷ್ಟೇ ಅಲ್ಲದೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಅಂಕಗಳಿಂದ 2 ಪಾಯಿಂಟ್ಸ್​ ಅನ್ನು ಕಡಿತಗೊಳಿಸಲಾಗಿದೆ. ಇದರಿಂದ ಇದೀಗ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಪಾಯಿಂಟ್ಸ್​ ಟೇಬಲ್​ನಲ್ಲಿ ಭಾರತ ತಂಡವು 6ನೇ ಸ್ಥಾನಕ್ಕೆ ಕುಸಿದಿದೆ.

ಇದನ್ನೂ ಓದಿ: Virat Kohli: ಸಚಿನ್​ರ ಮತ್ತೊಂದು ದಾಖಲೆ ಮುರಿಯುವ ಹೊಸ್ತಿಲಲ್ಲಿ ಕಿಂಗ್ ಕೊಹ್ಲಿ

WTC ಪಟ್ಟಿಯಲ್ಲಿ ಸದ್ಯ ಸೌತ್ ಆಫ್ರಿಕಾ ತಂಡವು ಅಗ್ರಸ್ಥಾನದಲ್ಲಿದ್ದು, ನ್ಯೂಝಿಲೆಂಡ್ ತಂಡವು ದ್ವಿತೀಯ ಸ್ಥಾನದಲ್ಲಿದೆ. ಹಾಗೆಯೇ ಆಸ್ಟ್ರೇಲಿಯಾ, ಬಾಂಗ್ಲಾದೇಶ್ ತಂಡಗಳು ಕ್ರಮವಾಗಿ 3ನೇ ಮತ್ತು 4ನೇ ಸ್ಥಾನಗಳಲ್ಲಿದೆ.

ಇನ್ನು ಪಾಕಿಸ್ತಾನ್ ತಂಡವು 5ನೇ ಸ್ಥಾನದಲ್ಲಿ ಕಾಣಿಸಿಕೊಂಡರೆ, ಟೀಮ್ ಇಂಡಿಯಾ 6ನೇ ಸ್ಥಾನಕ್ಕೆ ಕುಸಿದಿದೆ. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಗೆಲ್ಲುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಪಾಯಿಂಟ್ಸ್​ ಟೇಬಲ್​ನಲ್ಲಿ ಮೇಲೇರುವ ಅನಿವಾರ್ಯತೆ ಟೀಮ್ ಇಂಡಿಯಾ ಮುಂದಿದೆ.

Published On - 8:21 am, Sat, 30 December 23

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ