ಸೆಂಚುರಿಯನ್ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಹೀನಾಯ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲ ಇನಿಂಗ್ಸ್ ಆರಂಭಿಸಿದ ಭಾರತ ತಂಡವು ಕೆಎಲ್ ರಾಹುಲ್ (101) ಅವರ ಶತಕದ ನೆರವಿನಿಂದ 245 ರನ್ ಕಲೆಹಾಕಿ ಆಲೌಟ್ ಆಯಿತು.
ಇದರ ಬೆನ್ನಲ್ಲೇ ಇನಿಂಗ್ಸ್ ಆರಂಭಿಸಿದ ಸೌತ್ ಆಫ್ರಿಕಾ ತಂಡವು ಡೀನ್ ಎಲ್ಗರ್ (185) ಅವರ ಭರ್ಜರಿ ಶತಕದ ನೆರವಿನಿಂದ 408 ರನ್ ಕಲೆಹಾಕಿತು. ಇತ್ತ 163 ರನ್ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಭಾರತ ತಂಡದ ಪರ ಕ್ರೀಸ್ ಕಚ್ಚಿ ನಿಂತದ್ದು ವಿರಾಟ್ ಕೊಹ್ಲಿ ಮಾತ್ರ.
ಒಂದೆಡೆ ವಿರಾಟ್ ಕೊಹ್ಲಿ (76) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರೆ ಮತ್ತೊಂದೆಡೆ ಟೀಮ್ ಇಂಡಿಯಾ ಬ್ಯಾಟರ್ಗಳು ಪೆವಿಲಿಯನ್ ಪರೇಡ್ ನಡೆಸಿದರು. ಪರಿಣಾಮ ಭಾರತ ತಂಡವು 131 ರನ್ಗಳಿಗೆ ಆಲೌಟ್ ಆಯಿತು. ಈ ಮೂಲಕ ಸೌತ್ ಆಫ್ರಿಕಾ ತಂಡವು ಇನಿಂಗ್ಸ್ ಹಾಗೂ 32 ರನ್ಗಳ ಭರ್ಜರಿ ಜಯ ಸಾಧಿಸಿದೆ.
ಸೌತ್ ಆಫ್ರಿಕಾ ವಿರುದ್ಧದ ಈ ಪಂದ್ಯವು ಕೇವಲ 3 ದಿನಗಳಲ್ಲೇ ಮುಕ್ತಾಯಗೊಂಡಿತು. ಈ ಪಂದ್ಯದಲ್ಲಿ ಭಾರತ ತಂಡ ಒಂದು ಇನಿಂಗ್ಸ್ನಲ್ಲಿ ಮಾತ್ರ ಬೌಲಿಂಗ್ ಮಾಡಿದ್ದರು. ಆದರೆ ಅದರಲ್ಲೂ ಸ್ಲೋ ಓವರ್ ರೇಟ್ ತಪ್ಪಸೆಗಿದೆ. ಸೌತ್ ಆಫ್ರಿಕಾ ಇನಿಂಗ್ಸ್ ವೇಳೆ ನಿಧಾನಗತಿಯ ಓವರ್-ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಭಾರತ ತಂಡಕ್ಕೆ ಪಂದ್ಯದ ಶುಲ್ಕದ ಶೇಕಡಾ 10 ರಷ್ಟು ದಂಡ ವಿಧಿಸಲಾಗಿದೆ.
ಅಷ್ಟೇ ಅಲ್ಲದೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಅಂಕಗಳಿಂದ 2 ಪಾಯಿಂಟ್ಸ್ ಅನ್ನು ಕಡಿತಗೊಳಿಸಲಾಗಿದೆ. ಇದರಿಂದ ಇದೀಗ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ಸ್ ಟೇಬಲ್ನಲ್ಲಿ ಭಾರತ ತಂಡವು 6ನೇ ಸ್ಥಾನಕ್ಕೆ ಕುಸಿದಿದೆ.
ಇದನ್ನೂ ಓದಿ: Virat Kohli: ಸಚಿನ್ರ ಮತ್ತೊಂದು ದಾಖಲೆ ಮುರಿಯುವ ಹೊಸ್ತಿಲಲ್ಲಿ ಕಿಂಗ್ ಕೊಹ್ಲಿ
WTC ಪಟ್ಟಿಯಲ್ಲಿ ಸದ್ಯ ಸೌತ್ ಆಫ್ರಿಕಾ ತಂಡವು ಅಗ್ರಸ್ಥಾನದಲ್ಲಿದ್ದು, ನ್ಯೂಝಿಲೆಂಡ್ ತಂಡವು ದ್ವಿತೀಯ ಸ್ಥಾನದಲ್ಲಿದೆ. ಹಾಗೆಯೇ ಆಸ್ಟ್ರೇಲಿಯಾ, ಬಾಂಗ್ಲಾದೇಶ್ ತಂಡಗಳು ಕ್ರಮವಾಗಿ 3ನೇ ಮತ್ತು 4ನೇ ಸ್ಥಾನಗಳಲ್ಲಿದೆ.
🔹 Wins for Australia and South Africa
🔹 Penalty Points for IndiaPlenty of interesting changes in the #WTC25 table.
Full standings ➡️ https://t.co/zyrlr4dNfd pic.twitter.com/RucQhACcIS
— ICC (@ICC) December 29, 2023
ಇನ್ನು ಪಾಕಿಸ್ತಾನ್ ತಂಡವು 5ನೇ ಸ್ಥಾನದಲ್ಲಿ ಕಾಣಿಸಿಕೊಂಡರೆ, ಟೀಮ್ ಇಂಡಿಯಾ 6ನೇ ಸ್ಥಾನಕ್ಕೆ ಕುಸಿದಿದೆ. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಗೆಲ್ಲುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಪಾಯಿಂಟ್ಸ್ ಟೇಬಲ್ನಲ್ಲಿ ಮೇಲೇರುವ ಅನಿವಾರ್ಯತೆ ಟೀಮ್ ಇಂಡಿಯಾ ಮುಂದಿದೆ.
Published On - 8:21 am, Sat, 30 December 23