Team India: ಒಂದು ಪಂದ್ಯವಾಡಲು ಅವಕಾಶ ಸಿಗದೇ ವಿದಾಯ ಹೇಳಿದ ಟೀಮ್ ಇಂಡಿಯಾ ಆಟಗಾರ..!

Ishwar Pandey Retirement: 2013 ರಲ್ಲಿ ಪುಣೆ ವಾರಿಯರ್ಸ್​ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಐಪಿಎಲ್​ಗೆ ಪದಾರ್ಪಣೆ ಮಾಡಿದ್ದ ಈಶ್ವರ್ ಪಾಂಡೆ, 2015 ರಲ್ಲಿ ಧೋನಿ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಪರ ಆಡಿದ್ದರು.

Team India: ಒಂದು ಪಂದ್ಯವಾಡಲು ಅವಕಾಶ ಸಿಗದೇ ವಿದಾಯ ಹೇಳಿದ ಟೀಮ್ ಇಂಡಿಯಾ ಆಟಗಾರ..!
Ishwar Pandey
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 13, 2022 | 3:54 PM

ಮಧ್ಯಪ್ರದೇಶದ ವೇಗದ ಬೌಲರ್ ಈಶ್ವರ್ ಪಾಂಡೆ (Ishwar Pandey )ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಕಳೆದ ಕೆಲ ವರ್ಷಗಳಿಂದ ದೇಶೀಯ ಅಂಗಳದಲ್ಲಿ ಮಿಂಚುತ್ತಿದ್ದ ಈಶ್ವರ್​ಗೆ ವರ್ಷಗಳ ಹಿಂದೆಯೇ  ಟೀಮ್ ಇಂಡಿಯಾದ ಬಾಗಿಲು ತೆರೆದಿತ್ತು. ಆದರೆ ಆ ಅದೃಷ್ಟ ಆ ಬಳಿಕ ದುರಾದೃಷ್ಟವಾಗಿದ್ದು ಮಾತ್ರ ವಿಪರ್ಯಾಸ. ಅಂದರೆ ಟೀಮ್ ಇಂಡಿಯಾ ಪರ ಆಯ್ಕೆಯಾಗಿದ್ದರೂ ಒಂದೇ ಒಂದು ಪಂದ್ಯವಾಡುವ ಅವಕಾಶ ಮಾತ್ರ ಸಿಕ್ಕಿರಲಿಲ್ಲ. ಇದೀಗ ತಮ್ಮ 33ನೇ ವಯಸ್ಸಿನಲ್ಲೇ ನಿವೃತ್ತಿಯ ನಿರ್ಧಾರ ತೆಗೆದುಕೊಂಡಿದ್ದಾರೆ.

ದೇಶೀಯ ಅಂಗಳದಲ್ಲಿ ಅತ್ಯುತ್ತಮ ಬಲಗೈ ವೇಗದ ಬೌಲರ್ ಆಗಿ ಕಾಣಿಸಿಕೊಂಡಿದ್ದ ಈಶ್ವರ್ ಪಾಂಡೆ, 75 ಪ್ರಥಮ ದರ್ಜೆ ಪಂದ್ಯಗಳಲ್ಲಿ 263 ವಿಕೆಟ್ ಗಳಿಸುವಲ್ಲಿ ಯಶಸ್ವಿಯಾಗಿದ್ದರು. ಹಾಗೆಯೇ ಲಿಸ್ಟ್ ಎ ನಲ್ಲಿ 63 ಮತ್ತು ಟಿ20 ಕ್ರಿಕೆಟ್‌ನಲ್ಲಿ 71 ವಿಕೆಟ್ ಪಡೆದು ಮಿಂಚಿದ್ದರು. ಪರಿಣಾಮ 2014 ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಈಶ್ವರ್ ಪಾಂಡೆ ಆಯ್ಕೆಯಾಗಿದ್ದರು. ಆದರೆ ಕಿವೀಸ್ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗಳಲ್ಲಿ ಕಣಕ್ಕಿಳಿಯಲು ಮಾತ್ರ ಅವಕಾಶ ಸಿಕ್ಕಿರಲಿಲ್ಲ.

2013 ರಲ್ಲಿ ಪುಣೆ ವಾರಿಯರ್ಸ್​ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಐಪಿಎಲ್​ಗೆ ಪದಾರ್ಪಣೆ ಮಾಡಿದ್ದ ಈಶ್ವರ್ ಪಾಂಡೆ, 2015 ರಲ್ಲಿ ಧೋನಿ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಪರ ಆಡಿದ್ದರು. ಅದರಂತೆ ಐಪಿಎಲ್‌ನಲ್ಲಿ 25 ಪಂದ್ಯಗಳನ್ನು ಆಡಿರುವ ಈಶ್ವರ್ ಪಾಂಡೆ ಒಟ್ಟು 18 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ. ಆದರೆ 2016 ರ ಬಳಿಕ ಮಧ್ಯಮ ಪ್ರದೇಶದ ಈ ವೇಗಿಯನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದರೊಂದಿಗೆ ಐಪಿಎಲ್​ನಿಂದಲೂ ಪಾಂಡೆ ಹೆಸರು ಮರೆಯಾಯಿತು.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇದೀಗ ಮತ್ತೆ ಈಶ್ವರ್ ಪಾಂಡೆ ಹೆಸರು ಕೇಳಿ ಬಂದಿರುವುದು 33 ವಯಸ್ಸಿನಲ್ಲಿ ಕ್ರಿಕೆಟ್ ಬದುಕಿಗೆ ವಿದಾಯ ಹೇಳುವ ಮೂಲಕ ಎಂಬುದು ವಿಶೇಷ. ಅಂದರೆ ಟೀಮ್ ಇಂಡಿಯಾ ಪರ ಅವಕಾಶ ಪಡೆದರೂ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳುವ ಭಾಗ್ಯ ಸಿಗದಿರುವ ನೋವು ಕಾಡುತ್ತಿದೆ ಎಂದು ಈಶ್ವರ್ ಪಾಂಡೆ ತಿಳಿಸಿದ್ದಾರೆ.

ಬಸ್‌ ಪ್ರಯಾಣ ದರ ಹೆಚ್ಚಿಸಿದ್ದಕ್ಕೆ ಸಂಸದ ಯದುವೀರ್ ಗರಂ
ಬಸ್‌ ಪ್ರಯಾಣ ದರ ಹೆಚ್ಚಿಸಿದ್ದಕ್ಕೆ ಸಂಸದ ಯದುವೀರ್ ಗರಂ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ