ದೇಶೀಯ ಅಂಗಳದಲ್ಲಿ ಮುಗ್ಗರಿಸಿದ ಟೀಮ್ ಇಂಡಿಯಾ ಆಟಗಾರರು
Team India: ಟೀಮ್ ಇಂಡಿಯಾ ಆಟಗಾರರು ರಣಜಿ ಟೂರ್ನಿ ಆಡುವುದು ಕಡ್ಡಾಯಗೊಳಿಸಲಾಗಿದೆ. ಅದರಂತೆ ಇದೀಗ 10 ವರ್ಷಗಳ ಬಳಿಕ ಮುಂಬೈ ಪರ ಕಣಕ್ಕಿಳಿದಿರುವ ರೋಹಿತ್ ಶರ್ಮಾ ಕೇವಲ 3 ರನ್ಗಳಿಸಿ ನಿರಾಸೆ ಮೂಡಿಸಿದ್ದಾರೆ. ಮತ್ತೊಂದೆಡೆ 7 ವರ್ಷಗಳ ಬಳಿಕ ದೆಹಲಿ ಪರ ಬ್ಯಾಟ್ ಬೀಸಿರುವ ರಿಷಭ್ ಪಂತ್ಗೆ ಒಂದಂಕಿಗಿಂತ ಹೆಚ್ಚು ರನ್ ಗಳಿಸಲು ಸಾಧ್ಯವಾಗಲಿಲ್ಲ.
ರಣಜಿ ಟೂರ್ನಿಯ ದ್ವಿತೀಯ ಸುತ್ತಿನ ಮೊದಲ ಪಂದ್ಯಗಳಲ್ಲಿ ಕಣಕ್ಕಿಳಿದ ಟೀಮ್ ಇಂಡಿಯಾ ಆಟಗಾರರು ಮೊದಲ ಇನಿಂಗ್ಸ್ಗಳಲ್ಲಿ ಅಟ್ಟರ್ ಫ್ಲಾಪ್ ಆಗಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಜಮ್ಮು ಕಾಶ್ಮೀರ ವಿರುದ್ಧದ ಪಂದ್ಯದಲ್ಲಿ ಮುಂಬೈ ಪರ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕ ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಅಜಿಂಕ್ಯ ರಹಾನೆ ಕಾಣಿಸಿಕೊಂಡಿದ್ದರು.
- ಮುಂಬೈ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ 3 ರನ್ಗಳಿಸಿ ವಿಕೆಟ್ ಒಪ್ಪಿಸಿದರೆ, ಯಶಸ್ವಿ ಜೈಸ್ವಾಲ್ ಕೇವಲ 4 ರನ್ಗಳಿಸಿ ಔಟಾದರು.
- ಆ ಬಳಿಕ ಬಂದ ಅಜಿಂಕ್ಯ ರಹಾನೆ 12 ರನ್ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿದರು. ಇದರ ಬೆನ್ನಲ್ಲೇ ಶ್ರೇಯಸ್ ಅಯ್ಯರ್ (11) ಕೂಡ ಔಟಾದರು.
ಗಿಲ್, ಪಂತ್, ರುತುರಾಜ್ ವಿಫಲ:
- ಕರ್ನಾಟಕ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಪರ ಆರಂಭಿಕನಾಗಿ ಕಣಕ್ಕಿಳಿದ ಶುಭ್ಮನ್ ಗಿಲ್ ಕೇವಲ 4 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ.
- ಕೇರಳ ವಿರುದ್ಧ ಪಂದ್ಯದಲ್ಲಿ ಮಧ್ಯ ಪ್ರದೇಶ್ ಪರ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ರಜತ್ ಪಾಟಿದಾರ್ (0) ಸೊನ್ನೆ ಸುತ್ತಿ ಹಿಂತಿರುಗಿದ್ದಾರೆ.
- ಸೌರಾಷ್ಟ್ರ ವಿರುದ್ಧದ ಪಂದ್ಯದಲ್ಲಿ ದೆಹಲಿ ಪರ ಬ್ಯಾಟ್ ಬೀಸಿರುವ ರಿಷಭ್ ಪಂತ್ ಕಲೆಹಾಕಿರುವುದು ಕೇವಲ 1 ರನ್ ಮಾತ್ರ.
- ಬರೋಡಾ ವಿರುದ್ಧದ ಪಂದ್ಯದಲ್ಲಿ ಮಹಾರಾಷ್ಟ್ರ ತಂಡದ ನಾಯಕನಾಗಿ ಕಾಣಿಸಿಕೊಂಡಿರುವ ರುತುರಾಜ್ ಗಾಯಕ್ವಾಡ್ ಕೇವಲ 10 ರನ್ಗಳಿಸಿ ಔಟಾಗಿದ್ದಾರೆ.
ಸ್ಟಾರ್ ಆಟಗಾರರ ಕಳಪೆ ಪ್ರದರ್ಶನ:
ಭಾರತ ತಂಡವು ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಹೀನಾಯವಾಗಿ ಸೋತಿದ್ದರಿಂದ, ಟೀಮ್ ಇಂಡಿಯಾ ಆಟಗಾರರು ರಣಜಿ ಟೂರ್ನಿ ಆಡುವುದನ್ನು ಬಿಸಿಸಿಐ ಕಡ್ಡಾಯಗೊಳಿಸಿದೆ.
ಈ ಕಟ್ಟಪ್ಪಣೆಯ ಬೆನ್ನಲ್ಲೇ ರಣಜಿ ಟೂರ್ನಿಯ ದ್ವಿತೀಯ ಸುತ್ತಿನ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಟೀಮ್ ಇಂಡಿಯಾ ಆಟಗಾರರೆಲ್ಲರೂ ಮೊದಲ ಇನಿಂಗ್ಸ್ನಲ್ಲಿ ವಿಫಲರಾಗಿದ್ದಾರೆ.
ಇದನ್ನೂ ಓದಿ: ಟೀಮ್ ಇಂಡಿಯಾ ಆರ್ಭಟಕ್ಕೆ ಪಾಕಿಸ್ತಾನ್ ತಂಡದ ದಾಖಲೆ ಉಡೀಸ್
ಹೀಗಾಗಿ ಮುಂಬರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ದೇಶೀಯ ಅಂಗಳದ ಪ್ರದರ್ಶನವನ್ನು ಪರಿಗಣಿಸಿ ಭಾರತ ತಂಡವನ್ನು ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿಬಹುದು. ಈ ಮೂಲಕ ಉತ್ತಮ ಫಾರ್ಮ್ನಲ್ಲಿರುವ ಆಟಗಾರರಿಗೆ ಮಣೆ ಹಾಕಲು ಬಿಸಿಸಿಐ ಆಯ್ಕೆ ಸಮಿತಿ ಮುಂದಾಗುವ ಸಾಧ್ಯತೆಯಿದೆ.