ರಣಜಿ ಟೂರ್ನಿಯ ದ್ವಿತೀಯ ಸುತ್ತಿನ ಮೊದಲ ಪಂದ್ಯಗಳಲ್ಲಿ ಕಣಕ್ಕಿಳಿದ ಟೀಮ್ ಇಂಡಿಯಾ ಆಟಗಾರರು ಮೊದಲ ಇನಿಂಗ್ಸ್ಗಳಲ್ಲಿ ಅಟ್ಟರ್ ಫ್ಲಾಪ್ ಆಗಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಜಮ್ಮು ಕಾಶ್ಮೀರ ವಿರುದ್ಧದ ಪಂದ್ಯದಲ್ಲಿ ಮುಂಬೈ ಪರ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕ ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಅಜಿಂಕ್ಯ ರಹಾನೆ ಕಾಣಿಸಿಕೊಂಡಿದ್ದರು.
ಭಾರತ ತಂಡವು ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಹೀನಾಯವಾಗಿ ಸೋತಿದ್ದರಿಂದ, ಟೀಮ್ ಇಂಡಿಯಾ ಆಟಗಾರರು ರಣಜಿ ಟೂರ್ನಿ ಆಡುವುದನ್ನು ಬಿಸಿಸಿಐ ಕಡ್ಡಾಯಗೊಳಿಸಿದೆ.
ಈ ಕಟ್ಟಪ್ಪಣೆಯ ಬೆನ್ನಲ್ಲೇ ರಣಜಿ ಟೂರ್ನಿಯ ದ್ವಿತೀಯ ಸುತ್ತಿನ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಟೀಮ್ ಇಂಡಿಯಾ ಆಟಗಾರರೆಲ್ಲರೂ ಮೊದಲ ಇನಿಂಗ್ಸ್ನಲ್ಲಿ ವಿಫಲರಾಗಿದ್ದಾರೆ.
ಇದನ್ನೂ ಓದಿ: ಟೀಮ್ ಇಂಡಿಯಾ ಆರ್ಭಟಕ್ಕೆ ಪಾಕಿಸ್ತಾನ್ ತಂಡದ ದಾಖಲೆ ಉಡೀಸ್
ಹೀಗಾಗಿ ಮುಂಬರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ದೇಶೀಯ ಅಂಗಳದ ಪ್ರದರ್ಶನವನ್ನು ಪರಿಗಣಿಸಿ ಭಾರತ ತಂಡವನ್ನು ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿಬಹುದು. ಈ ಮೂಲಕ ಉತ್ತಮ ಫಾರ್ಮ್ನಲ್ಲಿರುವ ಆಟಗಾರರಿಗೆ ಮಣೆ ಹಾಕಲು ಬಿಸಿಸಿಐ ಆಯ್ಕೆ ಸಮಿತಿ ಮುಂದಾಗುವ ಸಾಧ್ಯತೆಯಿದೆ.