ಭಾರತ-ಇಂಗ್ಲೆಂಡ್ (India vs England 1st T20) ನಡುವಣ ಮೊದಲ ಟಿ20 ಪಂದ್ಯವು ನಾಳೆ (ಜುಲೈ 7) ನಡೆಯಲಿದೆ. 3 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಅಲಭ್ಯರಾಗಿದ್ದಾರೆ. ಇಂಗ್ಲೆಂಡ್ ವಿರುದ್ದ ಟೆಸ್ಟ್ ಪಂದ್ಯವಾಡಿದ್ದ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಹೀಗಾಗಿ ಮೊದಲ ಪಂದ್ಯಕ್ಕೆ ವಿರಾಟ್ ಕೊಹ್ಲಿ (Virat Kohli), ಜಸ್ಪ್ರೀತ್ ಬುಮ್ರಾ, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ (Ravindra Jadeja) ಹಾಗೂ ರಿಷಭ್ ಪಂತ್ (Rishabh Pant) ಅಲಭ್ಯರಾಗಲಿದ್ದಾರೆ. ಇತ್ತ ಪ್ರಮುಖ ಆಟಗಾರರ ಅನುಪಸ್ಥಿತಿ ನಡುವೆ ಟೀಮ್ ಇಂಡಿಯಾ (Team India Playing 11) ಪ್ಲೇಯಿಂಗ್ ಇಲೆವೆನ್ನಲ್ಲಿ ಯಾರಿಗೆಲ್ಲಾ ಅವಕಾಶ ಸಿಗಲಿದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.
ಏಕೆಂದರೆ ಐರ್ಲೆಂಡ್ ವಿರುದ್ದ ಕಾಣಿಸಿಕೊಂಡಿದ್ದ ಆಟಗಾರರೇ ಇಂಗ್ಲೆಂಡ್ ವಿರುದ್ದದ ಮೊದಲ ಟಿ20 ಪಂದ್ಯಕ್ಕೆ ಆಯ್ಕೆಯಾಗಿದ್ದಾರೆ. ಹಾಗೆಯೇ ರಾಹುಲ್ ದ್ರಾವಿಡ್ ಅವರ ಅನುಪಸ್ಥಿತಿಯಲ್ಲಿ ಮೊದಲ ಪಂದ್ಯದಲ್ಲಿ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಐರ್ಲೆಂಡ್ ವಿರುದ್ದ ಕೊನೆಯ ಟಿ20 ಪಂದ್ಯವಾಡಿದ್ದ ಬಳಗವನ್ನೇ ಲಕ್ಷ್ಮಣ್ ಕಣಕ್ಕಿಳಿಸಬಹುದು.
ಇದಾಗ್ಯೂ ತಂಡಕ್ಕೆ ನಾಯಕನಾಗಿ ರೋಹಿತ್ ಶರ್ಮಾ ಎಂಟ್ರಿ ಕೊಟ್ಟಿದ್ದು, ಹೀಗಾಗಿ ಒಬ್ಬ ಆಟಗಾರ ಬದಲಾಗುವುದು ಖಚಿತ. ಅದರಂತೆ ಪ್ಲೇಯಿಂಗ್ ಇಲೆವೆನ್ನಿಂದ ಅಕ್ಷರ್ ಪಟೇಲ್ ಹೊರಬೀಳುವ ಸಾಧ್ಯತೆಯಿದೆ. ಏಕೆಂದರೆ ತಂಡದಲ್ಲಿ ಆಲ್ರೌಂಡರ್ಗಳಾಗಿ ದೀಪಕ್ ಹೂಡಾ ಹಾಗೂ ಹಾರ್ದಿಕ್ ಪಾಂಡ್ಯ ಇದ್ದಾರೆ. ಇನ್ನು ಸ್ಪಿನ್ನರ್ ಆಗಿ ಯಜುವೇಂದ್ರ ಚಹಾಲ್ ಸ್ಥಾನ ಪಡೆಯಲಿದ್ದಾರೆ. ಇಲ್ಲಿ ದೀಪಕ್ ಹೂಡಾ ಕೂಡ ಪಾರ್ಟ್ ಟೈಮ್ ಸ್ಪಿನ್ನರ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ಹಾರ್ದಿಕ್ ಪಾಂಡ್ಯ ಕೂಡ ಬೌಲಿಂಗ್ ಮಾಡುತ್ತಿದ್ದಾರೆ.
ಇನ್ನು ವೇಗಿಗಳಾಗಿ ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್ ಹಾಗೂ ಅವೇಶ್ ಖಾನ್ ಕಾಣಿಸಿಕೊಳ್ಳಬಹುದು. ಅಂದರೆ ಇಲ್ಲಿ 6 ಬೌಲರ್ಗಳನ್ನು ಬಳಸಿಕೊಳ್ಳುವ ಆಯ್ಕೆ ಇರಲಿದೆ. ಹೀಗಾಗಿ ಅಕ್ಷರ್ ಪಟೇಲ್ ಟೀಮ್ ಇಂಡಿಯಾದಿಂದ ಹೊರಬೀಳುವುದು ಬಹುತೇಕ ಖಚಿತ ಎನ್ನಬಹುದು.
ಹಾಗೆಯೇ ಆರಂಭಿಕರಾಗಿ ನಾಯಕ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಕಾಣಿಸಿಕೊಂಡರೆ, 3ನೇ ಕ್ರಮಾಂಕದಲ್ಲಿ ಸಂಜು ಸ್ಯಾಮ್ಸನ್ ಅಥವಾ ದೀಪಕ್ ಹೂಡಾ ಬ್ಯಾಟ್ ಬೀಸುವ ಸಾಧ್ಯತೆ ಹೆಚ್ಚು. ಇನ್ನು 4ನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಆಡಿದ್ರೆ, 5ನೇ ಕ್ರಮಾಂಕ ಹಾರ್ದಿಕ್ ಪಾಂಡ್ಯಗೆ ಸೀಮಿತವಾಗಿರಲಿದೆ. ಇನ್ನು ಫಿನಿಶರ್ ಜವಾಬ್ದಾರಿಯೊಂದಿಗೆ ದಿನೇಶ್ ಕಾರ್ತಿಕ್ 7ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲ ಟಿ20 ಪಂದ್ಯಕ್ಕೆ ಬಲಿಷ್ಠ ಪ್ಲೇಯಿಂಗ್ ಇಲೆವೆನ್ನ್ನು ಕಣಕ್ಕಿಳಿಸಬಹುದು.
ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11 (Team India Playing 11): ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಯುಜುವೇಂದ್ರ ಚಹಲ್, ಅವೇಶ್ ಖಾನ್.
ಮೊದಲ ಟಿ20 ಪಂದ್ಯಕ್ಕೆ ಟೀಮ್ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್ , ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.