AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 4ನೇ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 3 ಬದಲಾವಣೆ; ಯಾರು ಇನ್, ಯಾರು ಔಟ್?

IND vs ENG 4th T20: ರಾಜ್‌ಕೋಟ್‌ನಲ್ಲಿ ಟೀಂ ಇಂಡಿಯಾದ ಸೋಲಿನ ನಂತರ ಪುಣೆಯಲ್ಲಿ ನಡೆಯಲಿರುವ ನಾಲ್ಕನೇ ಟಿ20 ಪಂದ್ಯದಲ್ಲಿ ಗೆಲುವು ಸಾಧಿಸಲು ತಂಡ ಬದಲಾವಣೆಗಳನ್ನು ಮಾಡುವ ಸಾಧ್ಯತೆಯಿದೆ. ಹಾರ್ದಿಕ್ ಪಾಂಡ್ಯ ಮತ್ತು ಧ್ರುವ್ ಜುರೇಲ್‌ಗೆ ವಿಶ್ರಾಂತಿ ನೀಡಿ ಶಿವಂ ದುಬೆ ಮತ್ತು ರಿಂಕು ಸಿಂಗ್ ಅವರನ್ನು ಆಡಿಸುವ ಸಾಧ್ಯತೆ ಇದೆ. ಬೌಲಿಂಗ್‌ನಲ್ಲಿ ಅರ್ಷದೀಪ್ ಸಿಂಗ್ ಮತ್ತು ಮೊಹಮ್ಮದ್ ಶಮಿ ನಡುವೆ ಸ್ಥಾನಕ್ಕಾಗಿ ಪೈಪೋಟಿ ಇದೆ.

IND vs ENG: 4ನೇ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 3 ಬದಲಾವಣೆ; ಯಾರು ಇನ್, ಯಾರು ಔಟ್?
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on: Jan 30, 2025 | 10:06 PM

Share

ಜನವರಿ 28 ರಂದು ರಾಜ್‌ಕೋಟ್‌ನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಸೋತಿರುವ ಟೀಂ ಇಂಡಿಯಾಕ್ಕೆ ಗೆಲುವಿನ ಹಾದಿಗೆ ಮರಳಲು ಮತ್ತೊಂದು ಅವಕಾಶ ಎದುರಾಗಿದೆ. ಮೊದಲೆರಡು ಪಂದ್ಯಗಳಲ್ಲಿ ಆಂಗ್ಲರನ್ನು ಆರಾಮಾಗಿ ಮಣಿಸಿದ್ದ ಯುವ ಪಡೆ, ಮೂರನೇ ಟಿ20 ಪಂದ್ಯದಲ್ಲಿ ಎಡವಿತ್ತು. ಹೀಗಾಗಿ ಗೆಲುವಿನ ಲಯ ಕಂಡುಕೊಂಡಿರುವ ಬಲಿಷ್ಠ ಇಂಗ್ಲೆಂಡ್ ತಂಡವನ್ನು ಬಗ್ಗುಬಡಿಯುವುದರೊಂದಿಗೆ ಸರಣಿ ಗೆಲ್ಲುವ ಅವಕಾಶ ಹೊತ್ತು ನಾಲ್ಕನೇ ಟಿ20 ಪಂದ್ಯಕ್ಕೆ ಟೀಂ ಇಂಡಿಯಾ ಕಾಲಿಡುತ್ತಿದೆ. ಉಭಯ ತಂಡಗಳ ನಡುವಿನ ನಾಲ್ಕನೇ ಪಂದ್ಯ ಜನವರಿ 31 ರಂದು ನಡೆಯಲಿದೆ. ಪುಣೆಯಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆಗಳಾಗುವ ಸಾಧ್ಯತೆಗಳು ಹೆಚ್ಚಿವೆ.

ರಾಜ್‌ಕೋಟ್‌ನಲ್ಲಿ ಸತತ ಮೂರನೇ ಗೆಲುವಿನೊಂದಿಗೆ ಟೀಂ ಇಂಡಿಯಾ ಸರಣಿ ಗೆಲ್ಲುವ ಉತ್ತಮ ಅವಕಾಶವನ್ನು ಹೊಂದಿತ್ತು. ಹಾಗಾಗಿ ಇಂಗ್ಲೆಂಡ್‌ಗೆ ಇದು ‘ಮಾಡು ಇಲ್ಲವೇ ಮಡಿ’ ಪರಿಸ್ಥಿತಿಯಾಗಿತ್ತು. ಆದಾಗ್ಯೂ, ಸತತ ಎರಡು ಸೋಲುಗಳ ನಂತರ ಇಂಗ್ಲೆಂಡ್ ಪ್ರತಿದಾಳಿ ನಡೆಸಿ ಟೀಂ ಇಂಡಿಯಾವನ್ನು ಸೋಲಿಸಿತು. ಮೂರನೇ ಪಂದ್ಯದಲ್ಲಿ ಟೀಂ ಇಂಡಿಯಾದ ಸೋಲಿಗೆ ಬ್ಯಾಟ್ಸ್‌ಮನ್‌ಗಳ ವೈಫಲ್ಯವೇ ಕಾರಣವಾಗಿತ್ತು. ಅದರಲ್ಲೂ ಸತತ ಅವಕಾಶ ಸಿಕ್ಕರೂ ಕೆಲವು ಆಟಗಾರರು ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ಎಡವುತ್ತಿದ್ದಾರೆ. ಹೀಗಾಗಿ ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಸೂರ್ಯಕುಮಾರ್ ಯಾವ್ಯಾವ ಬದಲಾವಣೆ ಮಾಡಬಹುದು ಎಂಬುದನ್ನು ನೋಡುವುದಾದರೆ..

ಅರ್ಷದೀಪ್ ಇನ್

ವಾಸ್ತವವಾಗಿ ಮೂರನೇ ಟಿ20 ಪಂದ್ಯದಿಂದ ಅರ್ಷದೀಪ್ ಸಿಂಗ್‌ಗೆ ವಿಶ್ರಾಂತಿ ನೀಡಲಾಗಿತ್ತು. ಅರ್ಷದೀಪ್ ಬದಲಿಗೆ ಮೊಹಮ್ಮದ್ ಶಮಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದರು. ಶಮಿ ತಾನು ಫಿಟ್ ಎಂಬುದನ್ನು ಸಾಭೀತುಪಡಿಸಿದರಾದರೂ ವಿಕೆಟ್ ಪಡೆಯುವಲ್ಲಿ ವಿಫಲರಾದರು. ಆದರೆ ಈ ನಂತರವೂ ಶಮಿಗೆ ನಾಲ್ಕನೇ ಪಂದ್ಯಕ್ಕೆ ಅವಕಾಶ ಸಿಗಬಹುದು. ಇತ್ತ ಅರ್ಷದೀಪ್ ಕೂಡ ತಂಡದಲ್ಲಿ ಸ್ಥಾನ ಪಡೆಯಲಿದ್ದು, ರವಿ ಬಿಷ್ಣೋಯ್​ಗೆ ತಂಡದಿಂದ ಗೇಟ್​ಪಾಸ್ ಸಿಗಬಹುದು.

ಹಾರ್ದಿಕ್-ಜುರೆಲ್ ಔಟ್?

ಅಲ್ಲದೆ, ಮುಂಬರುವ ಚಾಂಪಿಯನ್ಸ್ ಟ್ರೋಫಿಯನ್ನು ಗಮನದಲ್ಲಿಟ್ಟುಕೊಂಡು ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಬಹುದು. ಹಾರ್ದಿಕ್ ಸ್ಥಾನದಲ್ಲಿ ಮುಂಬೈ ಆಲ್‌ರೌಂಡರ್ ಶಿವಂ ದುಬೆ ಅವರನ್ನು ಕಣಕ್ಕಿಳಿಸಬಹುದು. ಗಾಯದ ಕಾರಣದಿಂದಾಗಿ ರಿಂಕು ಸಿಂಗ್ ಎರಡನೇ ಮತ್ತು ಮೂರನೇ ಪಂದ್ಯಗಳಲ್ಲಿ ಆಡಿರಲಿಲ್ಲ. ಆದರೀಗ ಸಂಪೂರ್ಣ ಚೇತರಿಸಿಕೊಂಡಿರುವ ರಿಂಕು ಕಣಕ್ಕಿಳಿಯುವುದು ಖಚಿತವಾಗಿರುವುದರಿಂದ ಧ್ರುವ್ ಜುರೇಲ್ ಬೆಂಚ್ ಮೇಲೆ ಕುಳಿತುಕೊಳ್ಳಬೇಕಾಗುತ್ತದೆ.

ಭಾರತ ಸಂಭಾವ್ಯ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಶಿವಂ ದುಬೆ, ರಿಂಕು ಸಿಂಗ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ ಮತ್ತು ವರುಣ್ ಚಕ್ರವರ್ತಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ