AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್​ ಗೆದ್ದ ಟೀಮ್ ಇಂಡಿಯಾಗೆ ಸಿಕ್ಕ ಬಹುಮಾನ ಮೊತ್ತವೆಷ್ಟು ಗೊತ್ತಾ?

India Women vs South Africa Women, Final: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 298 ರನ್​ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 45.3 ಓವರ್​ಗಳಲ್ಲಿ 246 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 52 ರನ್​ಗಳ ಜಯಭೇರಿ ಬಾರಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ವಿಶ್ವಕಪ್​ ಗೆದ್ದ ಟೀಮ್ ಇಂಡಿಯಾಗೆ ಸಿಕ್ಕ ಬಹುಮಾನ ಮೊತ್ತವೆಷ್ಟು ಗೊತ್ತಾ?
Team India
ಝಾಹಿರ್ ಯೂಸುಫ್
|

Updated on: Nov 03, 2025 | 8:05 AM

Share

ಭಾರತ ಮಹಿಳಾ ತಂಡದ ಬಹುಕಾಲದ ಕನಸು ಕೊನೆಗೂ ನನಸಾಗಿದೆ. ಅದು ಕೂಡ ತವರಿನಲ್ಲಿ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್​ನ 13ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 50 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 298 ರನ್​ಗಳು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 45.3 ಓವರ್​​ಗಳಲ್ಲಿ 246 ರನ್​ಗೆ ಆಲೌಟ್ ಆಗಿದೆ. ಈ ಮೂಲಕ ಭಾರತ ಮಹಿಳಾ ತಂಡ 52 ರನ್​ಗಳ ಜಯ ಸಾಧಿಸಿ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದೊಂದಿಗೆ ಟೀಮ್ ಇಂಡಿಯಾ ಕೋಟಿ ರೂ. ಬಹುಮಾನ ಮೊತ್ತವನ್ನು ಸಹ ಪಡೆದುಕೊಂಡಿದೆ.

ವಿಶ್ವಕಪ್​ ಗೆದ್ದ ಭಾರತ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತವೆಷ್ಟು?

ಮಹಿಳಾ ಏಕದಿನ ವಿಶ್ವಕಪ್ ಆರಂಭಕ್ಕೂ ಮುನ್ನ ಐಸಿಸಿ ಅಧ್ಯಕ್ಷ ಜಯ್ ಶಾ ಅವರು ಪ್ರಶಸ್ತಿ ಮೊತ್ತವನ್ನು ಹೆಚ್ಚಿಸುವುದಾಗಿ ತಿಳಿಸಿದ್ದರು. ಅದರಂತೆ ಇದೀಗ ಚಾಂಪಿಯನ್ ಪಟ್ಟ ಅಲಂಕರಿಸಿದ ಟೀಮ್ ಇಂಡಿಯಾಗೆ ಬಹುಮಾನ ಮೊತ್ತವಾಗಿ 4.48 ಅಮೆರಿಕನ್ ಮಿಲಿಯನ್ ಡಾಲರ್ ಲಭಿಸಿದೆ. ಅಂದರೆ ಭಾರತೀಯ ರೂಪಾಯಿ ಮೌಲ್ಯ ಸುಮಾರು 40 ಕೋಟಿ ರೂ.

2022 ರಲ್ಲಿ ಆಸ್ಟ್ರೇಲಿಯಾ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ವೇಳೆ ಐಸಿಸಿ ನೀಡಿದ್ದ ಬಹುಮಾನ ಮೊತ್ತ 1.32 ಮಿಲಿಯನ್ ಯುಎಸ್ ಡಾಲರ್ (ಸುಮಾರು 12 ಕೋಟಿ ರೂ.) ಮಾತ್ರ. ಇದೀಗ ಮಹಿಳಾ ಟೂರ್ನಿಯ ಪ್ರಶಸ್ತಿಯನ್ನು ದುಪ್ಪಟ್ಟು ಮಾಡಲಾಗಿರುವುದು ವಿಶೇಷ.

ಇನ್ನು ರನ್ನರ್ ಅಪ್ ಆಗಿರುವ ಸೌತ್ ಆಫ್ರಿಕಾ 2.24 ಮಿಲಿಯನ್ ಅಮೆರಿಕನ್ ಡಾಲರ್ ಬಹುಮಾನ ಮೊತ್ತವಾಗಿ ಪಡೆದುಕೊಂಢಿದೆ. ಅಂದರೆ ಭಾರತೀಯ ರೂಪಾಯಿ ಮೌಲ್ಯ ಸುಮಾರು 20 ಕೋಟಿ ರೂ.

ಹಾಗೆಯೇ ಸೆಮಿಫೈನಲ್ ಆಡಿದ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡಗಳು ತಲಾ 1.12 ಮಿಲಿಯನ್ ಅಮೆರಿಕನ್ ಡಾಲರ್ (ಸುಮಾರು 10 ಕೋಟಿ ರೂ.) ಪಡೆಯಲಿದ್ದಾರೆ.

ಇನ್ನು ಮಹಿಳಾ ಏಕದಿನ ವಿಶ್ವಕಪ್ ಪಂದ್ಯಾವಳಿಯ ಒಟ್ಟು ಬಹುಮಾನದ ಮೊತ್ತ USD 13.88 ಮಿಲಿಯನ್ (ರೂ. 123 ಕೋಟಿ) ಆಗಿದ್ದು, ಇದು 2022 ರಲ್ಲಿ ನ್ಯೂಝಿಲೆಂಡ್‌ನಲ್ಲಿ ನಡೆದ ಹಿಂದಿನ ಆವೃತ್ತಿಯಲ್ಲಿ ನೀಡಲಾಗಿದ್ದ USD 3.5 ಮಿಲಿಯನ್ (ರೂ. 31 ಕೋಟಿ) ಗಿಂತ ಸುಮಾರು ನಾಲ್ಕು ಪಟ್ಟು ಹೆಚ್ಚು ಎಂಬುದು ವಿಶೇಷ.

ಗಮನಾರ್ಹವಾಗಿ, ಈ ಸಂಖ್ಯೆ 2023 ರ ಪುರುಷರ ಕ್ರಿಕೆಟ್ ವಿಶ್ವಕಪ್‌ನ USD 10 ಮಿಲಿಯನ್ (ಸುಮಾರು ರೂ. 89 ಕೋಟಿ) ಬಹುಮಾನ ಮೊತ್ತವನ್ನು ಮೀರಿದೆ. ಅಂದರೆ ಪುರುಷರ ಏಕದಿನ ವಿಶ್ವಕಪ್​ನಲ್ಲಿ ನೀಡಲಾಗಿದ್ದು ಒಟ್ಟು 89 ಕೋಟಿ ರೂ. ಬಹುಮಾನ ಮೊತ್ತ. ಆದರೆ ಈ ಬಾರಿ ಮಹಿಳಾ ತಂಡಗಳಿಗೆ ಐಸಿಸಿ ಒಟ್ಟು 123 ಕೋಟಿ ರೂ. ಬಹುಮಾನ ಮೊತ್ತ ವಿತರಿಸಿದೆ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ