IND vs WI: 3 ಸ್ಟಾರ್ ಪ್ಲೇಯರ್ಸ್ ಔಟ್: ಒಬ್ಬ ಪದಾರ್ಪಣೆ: ಮೊದಲ ಏಕದಿನಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI

India Playing XI vs West Indies: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕಾಗಿ ರೋಹಿತ್ ಶರ್ಮಾ ಪಡೆ ಅಹ್ಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಅಭ್ಯಾಸ ಶುರು ಮಾಡಿದೆ. ಹಾಗಾದ್ರೆ ಮೊದಲ ಏಕದಿನ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ ಇಲೆವೆನ್ ಹೇಗಿರಬಹುದು ಎಂಬುದನ್ನು ನೋಡುವುದಾದರೆ…

IND vs WI: 3 ಸ್ಟಾರ್ ಪ್ಲೇಯರ್ಸ್ ಔಟ್: ಒಬ್ಬ ಪದಾರ್ಪಣೆ: ಮೊದಲ ಏಕದಿನಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI
India Playing XI vs WI 1st ODI
Follow us
TV9 Web
| Updated By: Vinay Bhat

Updated on: Feb 04, 2022 | 11:33 AM

ಕೊರೊನಾದಿಂದ ಬಿರುಗಾಳಿ ಎದ್ದಿದ್ದ ಟೀಮ್ ಇಂಡಿಯಾದಲ್ಲಿ (Team India) ಈಗ ಶಾಂತಿ ಆವರಿಸಿದೆ. ಗುರುವಾರ ಎಲ್ಲ ಆಟಗಾರರಿಗೆ ಆರ್​ಟಿ-ಪಿಸಿಆರ್ ಟೆಸ್ಟ್ ಮಾಡಿಸಲಾಗಿದ್ದು ವರದಿಯಲ್ಲಿ ನೆಗೆಟಿವ್ ಬಂದಿದೆ. ಹೀಗಾಗಿ ಇದೀಗ ರೋಹಿತ್ ಪಡೆ ಅಹ್ಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಅಭ್ಯಾಸ ಶುರು ಮಾಡಿದೆ. ವೆಸ್ಟ್ ಇಂಡೀಸ್ (India vs West Indies) ವಿರುದ್ಧದ ಮೊದಲ ಏಕದಿನ ಪಂದ್ಯ ಫೆಬ್ರವರಿ 6 ಭಾನುವಾರದಂದು ನಡೆಯಲಿದೆ. ಆಘಾತ ಎಂದರೆ ಕೋವಿಡ್‌ ಸೋಂಕು ಕಾಣಿಸಿಕೊಂಡ ಆಟಗಾರರಾದ ರುತುರಾಜ್ ಗಾಯಕ್ವಾಡ್, ಶಿಖರ್ ಧವನ್‌ ಮತ್ತು ಶ್ರೇಯಸ್ ಅಯ್ಯರ್ ಅವರು ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಇವರು ಒಂದು ವಾರಗಳ ಕಾಲ ಪ್ರತ್ಯೇಕವಾಸದಲ್ಲಿ ಇರಬೇಕಾಗಿದೆ. ನಂತರ ಮತ್ತೆ ಕೋವಿಡ್ ಟೆಸ್ಟ್ ನಡೆಸಲಿದ್ದು, ಆಗ ಆರ್‌ಟಿ-ಪಿಸಿಆರ್‌ ವರದಿ ನೆಗೆಟಿವ್ ಆದರೆ ಮಾತ್ರ ವಿಂಡೀಸ್ ವಿರುದ್ಧದ ಟಿ20 ಸರಣಿಗೆ ಲಭ್ಯರಿರುತ್ತಾರೆ ಎಂದು ವರದಿಯಾಗಿದೆ. ಇದರ ನಡುವೆ ಬಿಸಿಸಿಐ ಹಿರಿಯ ಆಯ್ಕೆ ಸಮಿತಿ ಏಕದಿನ ತಂಡಕ್ಕೆ ಮಯಾಂಕ್ ಅಗರ್ವಾಲ್ ಮತ್ತು ಇಶಾನ್ ಕಿಶನ್ ಅವರನ್ನು ಆಯ್ಕೆ ಮಾಡಿದೆ. ಹಾಗಾದ್ರೆ ಮೊದಲ ಏಕದಿನ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ ಇಲೆವೆನ್ (India Playing XI) ಹೇಗಿರಬಹುದು ಎಂಬುದನ್ನು ನೋಡುವುದಾದರೆ…

ರೋಹಿತ್ ಶರ್ಮಾ ಜೊತೆ ಓಪನಿಂಗ್ ಯಾರು?:

ಶಿಖರ್ ಧವನ್ ಇಲ್ಲದ ಕಾರಣ ನಾಯಕ ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್ ಆರಂಭಿಸುವವರು ಯಾರು ಎಂಬ ಪ್ರಶ್ನೆ ಎದ್ದಿದೆ. ಕೆಎಲ್ ರಾಹುಲ್ ಕೂಡ ಮೊದಲ ಏಕದಿನಕ್ಕೆ ಅಲಭ್ಯರಾಗಿದ್ದಾರೆ. ಇವರು ಸಹೋದರಿಯ ವಿವಾಹದ ಕಾರಣದಿಂದ ಹೊರಗುಳಿದಿದ್ದಾರೆ. ರುತುರಾಜ್ ಗಾಯಕ್ವಾಡ್ ಕೂಡ ಲಭ್ಯರಿಲ್ಲ. ಹೀಗಾಗಿ ಹಿಟ್​ಮ್ಯಾನ್ ಜೊತೆ ಮಯಾಂಕ್ ಅಗರ್ವಾಲ್ ಅಥವಾ ಇಶಾನ್ ಕಿಶನ್ ಕಣಕ್ಕಿಳಿಯಲಿದ್ದಾರೆ.

ದೀಪಕ್ ಹೂಡ ಪದಾರ್ಪಣೆ:

ದೀಪಕ್ ಹೂಡ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡುವುದು ಬಹುತೇಕ ಖಚಿತವಾಗಿದೆ. ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಇಲ್ಲದ ಕಾರಣ ಇವರು ಸ್ಥಾನ ಪಡೆಯಬಹುದು. ಈ ಹಿಂದೆ ಇವರು ಭಾರತ ತಂಡಕ್ಕೆ ಆಯ್ಕೆಯಾಗಿದ್ದರೂ ಆಡುವ ಬಳಗದಲ್ಲಿ ಸ್ಥಾನ ಸಿಕ್ಕಿರಲಿಲ್ಲ. ಇದೀಗ ಸಿಕ್ಕ ಅವಕಾಶವನ್ನು ಯಾವರೀತಿ ಉಪಯೋಗಿಸಿಕೊಳ್ಳುತ್ತಾರೆ ಎಂಬುದು ನೋಡಬೇಕಿದೆ.

ಕುಲ್ದೀಪ್-ಚಹಾಲ್ ಕಮ್​ಬ್ಯಾಕ್?:

ಟೀಮ್ ಇಂಡಿಯಾದ ಎವರ್​ಗ್ರೀನ್ ಸ್ಪಿನ್ ಜೋಡಿ ಕುಲ್ದೀಪ್ ಯಾದವ್ ಮತ್ತು ಯುಜ್ವೇಂದ್ರ ಚಹಾಲ್ ಕಣಕ್ಕಿಳಿಯುತ್ತಾರ ಎಂಬುದು ಕುತೂಹಲ.

ರೋಹಿತ್ ನಾಯಕತ್ವದಡಿಯಲ್ಲಿ ಕೊಹ್ಲಿ:

ಇದೇ ಮೊದಲ ಬಾರಿಗೆ ವಿರಾಟ್ ಕೊಹ್ಲಿ ಅವರು ರೋಹಿತ್ ಶರ್ಮಾ ನಾಯಕತ್ವದಡಿಯಲ್ಲಿ ಸಂಪೂರ್ಣ ಬ್ಯಾಟ್ಸ್​ಮನ್ ಆಗಿ ಕಣಕ್ಕಿಳಿಯಲಿದ್ದಾರೆ. ಸೂರ್ಯಕುಮಾರ್ ಯಾದವ್ ಮತ್ತು ರಿಷಭ್ ಪಂತ್ ಕೂಡ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಬೌಲಿಂಗ್ ಹೇಗರಲಿದೆ?:

ಮೊಹಮ್ಮದ್ ಸಿರಾಜ್ ಪ್ರಮುಖ ಬೌಲರ್ ಆಗಿ ಕಣಕ್ಕಿಳಿಯಲಿದ್ದಾರೆ. ಇವರಿಗೆ ಪ್ರಸಿದ್ಧ್ ಕೃಷ್ಣ ಸಾಥ್ ನೀಡಲಿದ್ದಾರೆ. ಆದರೆ, ದೀಪಕ್ ಚಹಾರ್ ಮತ್ತು ಶಾರ್ದೂಲ್ ಠಾಕೂರ್ ಪೈಕಿ ಯಾರಿಗೆ ಸ್ಥಾನ ಎಂಬುದು ಕುತೂಹಲ ಮೂಡಿಸಿದೆ.

ಭಾರತದ ಸಂಭಾವ್ಯ ಪ್ಲೇಯಿಂಗ್ XI:

ರೋಹಿತ್ ಶರ್ಮಾ, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದೀಪಕ್ ಹೂಡ, ಶಾರ್ದೂಲ್ ಠಾಕೂರ್/ದೀಪಕ್ ಚಹಾರ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಹಾಲ್, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್/ ವಾಷಿಂಗ್ಟನ್ ಸುಂದರ್.

India vs Sri Lanka: ಬೆಂಗಳೂರಿನಲ್ಲಿ ನಡೆಯಲಿದೆ ಭಾರತ vs ಶ್ರೀಲಂಕಾ ಡೇ ನೈಟ್ ಟೆಸ್ಟ್: ಯಾವಾಗ..?

Virat Kohli: U19 ವಿಶ್ವಕಪ್ ಫೈನಲ್​ಗೂ ಮುನ್ನ ಕೊಹ್ಲಿಯಿಂದ ಭಾರತೀಯ ಕಿರಿಯರಿಗೆ ಫೋನ್ ಕಾಲ್: ಏನಂದ್ರು?

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್