AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: ಕೊನೆಯ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 3 ಬದಲಾವಣೆ

India vs Afghanistan 3rd ODI: ಭಾರತವು ಅಫ್ಘಾನಿಸ್ತಾನ ವಿರುದ್ಧದ ಸರಣಿ ಗೆದ್ದಿದ್ದರಿಂದ, 3ನೇ ಏಕದಿನ ಪಂದ್ಯದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಹಲವು ಬದಲಾವಣೆಗಳಾಗಲಿವೆ. ಹರ್ಷಿತ್ ರಾಣಾಗೆ ಅವಕಾಶ ಸಿಗುವ ಸಾಧ್ಯತೆಯಿದ್ದು, ಅರ್ಷದೀಪ್ ಸಿಂಗ್ ಹೊರಗುಳಿಯಲಿದ್ದಾರೆ. ಯಶಸ್ವಿ ಜೈಸ್ವಾಲ್ ಬದಲಿಗೆ ಶುಭ್ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿಯುವ ನಿರೀಕ್ಷೆಯಿದೆ. ಬೆಂಚ್ ಕಾಯ್ದ ಆಟಗಾರರಿಗೆ ಈ ಪಂದ್ಯದಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ.

IND vs AFG: ಕೊನೆಯ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 3 ಬದಲಾವಣೆ
Team India
ಪೃಥ್ವಿಶಂಕರ
|

Updated on: Jun 19, 2026 | 10:32 PM

Share

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಅಂತಿಮ ಪಂದ್ಯ ಜೂನ್ 20 ರ ಶನಿವಾರ ಚೆನ್ನೈನಲ್ಲಿ ನಡೆಯಲಿದೆ. ಈ ಸರಣಿಯನ್ನು ಈಗಾಗಲೇ ಭಾರತ ತಂಡ 2-0 ಅಂತರದಿಂದ ಗೆದ್ದುಕೊಂಡಿರುವ ಕಾರಣ ಕೊನೆಯ ಏಕದಿನ ಪಂದ್ಯಕ್ಕೆ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಬದಲಾವಣೆ ಮಾಡುವ ಸಾಧ್ಯತೆಗಳಿವೆ. ಅದರಂತೆ ಬೆಂಚ್ ಕಾದ ಕೆಲವು ಆಟಗಾರರಿಗೆ ಈ ಪಂದ್ಯದಲ್ಲಿ ಆಡುವ ಅವಕಾಶ ಸಿಗಬಹುದು. ಇದಕ್ಕೆ ಪೂರಕವಾಗಿ ಬೌಲಿಂಗ್ ಆಲ್‌ರೌಂಡರ್ ಹರ್ಷಿತ್ ರಾಣಾ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಹಾಗೆಯೇ ಕೊನೆಯ ಪಂದ್ಯವನ್ನು ಅರ್ಷ್‌ದೀಪ್ ಸಿಂಗ್ ಆಡುವುದಿಲ್ಲ ಎಂತಲೂ ಹೇಳಲಾಗುತ್ತಿದೆ. ಹೀಗಾಗಿ ತಂಡದಲ್ಲಿ ಕನಿಷ್ಠ ಎರಡರಿಂದ ಮೂರು ಬದಲಾವಣೆಗಳು ಆಗುವುದು ಖಚಿತವಾಗಿದೆ.

ಹರ್ಷಿತ್ ರಾಣಾಗೆ ಅವಕಾಶ

ಮೊಣಕಾಲಿನ ಗಾಯದಿಂದಾಗಿ ಹರ್ಷಿತ್ ರಾಣಾ 2026 ರ ಟಿ20 ವಿಶ್ವಕಪ್ ಮತ್ತು 2026 ರ ಐಪಿಎಲ್ ಅನ್ನು ತಪ್ಪಿಸಿಕೊಂಡಿದ್ದರು. ಈಗ ಅವರು ಸಂಪೂರ್ಣವಾಗಿ ಫಿಟ್ ಆಗಿರುವುದರಿಂದ, ಮುಂಬರುವ ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಗಳಿಗೆ ಮುಂಚಿತವಾಗಿ ಅವರಿಗೆ ಪ್ಲೇಯಿಂಗ್ XI ನಲ್ಲಿ ಅವಕಾಶ ನೀಡುವ ಬಗ್ಗೆ ತಂಡದ ಆಡಳಿತ ಮಂಡಳಿ ಪರಿಗಣಿಸುವ ಸಾಧ್ಯತೆಯಿದೆ. ಹರ್ಷಿತ್ ಆಗಮನದಿಂದ ಬೌಲಿಂಗ್ ವಿಭಾಗದಲ್ಲಿ ಒಂದು ಬದಲಾವಣೆಯಾಗುವುದು ಖಚಿತವಾಗಿದೆ. ಹಾಗೆಯೇ ಅರ್ಷದೀಪ್ ಸಿಂಗ್ ಈ ಪಂದ್ಯದಲ್ಲಿ ಆಡದಿದ್ದರೆ, ಮತ್ತೊಬ್ಬ ವೇಗಿಗೆ ಆಡುವ ಅವಕಾಶ ಸಿಗಬಹುದು.

ಯಶಸ್ವಿ ಜೈಸ್ವಾಲ್​ಗೆ ಕೋಕ್

ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್ ಜೊತೆ ಯಶಸ್ವಿ ಜೈಸ್ವಾಲ್ ಅವರಿಗೆ ಆರಂಭಿಕರಾಗಿ ಆಡುವ ಅವಕಾಶ ನೀಡಲಾಗಿತ್ತು. ಆದರೆ ಸಿಕ್ಕ ಅವಕಾಶವನ್ನು ಬಳಸಿಕೊಳ್ಳುವಲ್ಲಿ ಜೈಸ್ವಾಲ್ ವಿಫಲರಾದರು. ಆದ್ದರಿಂದ, ಮೂರನೇ ಪಂದ್ಯದಲ್ಲಿ ರೋಹಿತ್ ಮತ್ತು ಶುಭಮನ್ ಗಿಲ್ ಮತ್ತೊಮ್ಮೆ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ. ಇಶಾನ್ ಕಿಶನ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದರೆ, ಶ್ರೇಯಸ್ ಅಯ್ಯರ್ ನಾಲ್ಕನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ಕೆಎಲ್ ರಾಹುಲ್ ಐದನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲಿದ್ದು, ಆಲ್‌ರೌಂಡರ್​ಗಳಾಗಿ ನಿತೀಶ್ ಕುಮಾರ್ ರೆಡ್ಡಿ ಮತ್ತು ವಾಷಿಂಗ್ಟನ್ ಸುಂದರ್ ಆಡುವ ಸಾಧ್ಯತೆಗಳಿವೆ.

IND vs AFG: ಕೊನೆಯ ಏಕದಿನ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಕ್ಕೆ ಯುವ ವೇಗಿಯ ಆಗಮನ

ಭಾರತದ ಸಂಭಾವ್ಯ 11: ರೋಹಿತ್ ಶರ್ಮಾ, ಶುಭ್​ಮನ್ ಗಿಲ್ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಗುರ್ನೂರ್ ಬ್ರಾರ್, ಪ್ರಸಿದ್ಧ್ ಕೃಷ್ಣ/ಅರ್ಷದೀಪ್ ಸಿಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ