ಬರೋಬ್ಬರಿ 10 ಕೋಟಿ ರೂ. ಸಂಭಾವನೆ; ದ್ರಾವಿಡ್​ ಕೋಚಿಂಗ್​ನಲ್ಲಿ ಏಷ್ಯಾಕಪ್ಪು ಬರಲಿಲ್ಲ, ವಿಶ್ವಕಪ್ಪೂ ಬರಲಿಲ್ಲ..!

Rahul Dravid: ರಾಹುಲ್ ದ್ರಾವಿಡ್ ಅವರ ಕೋಚಿಂಗ್‌ನಲ್ಲಿ ಟೀಂ ಇಂಡಿಯಾ ಎರಡು ಐಸಿಸಿ ಟೂರ್ನಿಗಳನ್ನು ಆಡಿದ್ದು, ಎರಡರಲ್ಲೂ ಸೋತಿದೆ.

ಬರೋಬ್ಬರಿ 10 ಕೋಟಿ ರೂ. ಸಂಭಾವನೆ; ದ್ರಾವಿಡ್​ ಕೋಚಿಂಗ್​ನಲ್ಲಿ ಏಷ್ಯಾಕಪ್ಪು ಬರಲಿಲ್ಲ, ವಿಶ್ವಕಪ್ಪೂ ಬರಲಿಲ್ಲ..!
Rahul Dravid
Follow us
TV9 Web
| Updated By: ಪೃಥ್ವಿಶಂಕರ

Updated on:Nov 11, 2022 | 6:08 PM

2022 ರ ಟಿ 20 ವಿಶ್ವಕಪ್‌ನಲ್ಲಿ (T20 World Cup 2022) ಟೀಂ ಇಂಡಿಯಾದ ಪಯಣ ಕೊನೆಗೊಳ್ಳುತ್ತಿದ್ದಂತೆ ಆಟಗಾರರ ಮೇಲೆ ಪ್ರಶ್ನೆಗಳು ಹುಟ್ಟಿಕೊಂಡಿವೆ. ನಾಯಕ ರೋಹಿತ್ ಶರ್ಮಾ, ಕೆಎಲ್ ರಾಹುಲ್‌ನಿಂದ ವಿರಾಟ್ ಕೊಹ್ಲಿಯಂತಹ ಆಟಗಾರರ ಮೇಲೆ ಪ್ರಶ್ನೆಗಳನ್ನು ಎತ್ತಲಾಗುತ್ತಿದೆ. ಈ ಆಟಗಾರರು ತಮ್ಮ ಪ್ರತಿಭೆಗೆ ತಕ್ಕಂತೆ ಸೆಮಿಫೈನಲ್​ನಲ್ಲಿ ಆಡಿಲ್ಲ ಎಂಬುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೆ ಪವರ್‌ಪ್ಲೇಯಲ್ಲಿ ಟೀಂ ಇಂಡಿಯಾ (Team India) ಆಟಗಾರರ ಆಟದಲ್ಲಿ ಪವರ್ ಇರಲಿಲ್ಲ ಎಂಬುದು ಅಭಿಮಾನಿಗಳ ವಾದವಾಗಿದೆ. ಅಂದಹಾಗೆ, ಈ ಬೆಂಕಿಯ ಜ್ವಾಲೆ ಈಗ ಮುಖ್ಯ ಕೋಚ್ ರಾಹುಲ್ ದ್ರಾವಿಡ್​ವರೆಗೂ (Rahul Dravid) ಹರಡಿದೆ. ಭಾರತದ ಸೋಲಿನ ನಂತರ, ದ್ರಾವಿಡ್ ಕಾರ್ಯತಂತ್ರಗಳ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ. ಭಾರತದ ಅತ್ಯಂತ ದುಬಾರಿ ಕೋಚ್ ನಾಯಕತ್ವದಲ್ಲಿ ತಂಡ ವಿಫಲವಾದರೆ, ಟೀಂ ಇಂಡಿಯಾ ಐಸಿಸಿ ಈವೆಂಟ್​ಗಳನ್ನು ಗೆಲ್ಲುವುದು ಯಾವಾಗ ಎಂಬ ಪ್ರಶ್ನೆಗಳು ಉದ್ಭವಿಸುತ್ತಿವೆ.

ಕಳೆದ ವರ್ಷದ ಟಿ20 ವಿಶ್ವಕಪ್ ನಂತರ ರಾಹುಲ್ ದ್ರಾವಿಡ್ ತಂಡದ ಕೋಚ್ ಆಗಿ ಅಧಿಕಾರ ವಹಿಸಿಕೊಂಡರು. ಆ ಬಳಿಕ ರಾಹುಲ್ ದ್ರಾವಿಡ್ ಅವರ ಕೋಚಿಂಗ್‌ನಲ್ಲಿ ಟೀಂ ಇಂಡಿಯಾ ಎರಡು ಐಸಿಸಿ ಟೂರ್ನಿಗಳನ್ನು ಆಡಿದ್ದು, ಎರಡರಲ್ಲೂ ಸೋತಿದೆ. ವರ್ಷಕ್ಕೆ 10 ಕೋಟಿ ರೂ. ಸಂಭಾವನೆ ಪಡೆಯುವ ರಾಹುಲ್ ದ್ರಾವಿಡ್ ಕೋಚಿಂಗ್‌ನಲ್ಲಿ ಟೀಂ ಇಂಡಿಯಾದ ಪ್ರದರ್ಶನ ಹೇಗಿತ್ತು ಎಂಬುದರ ವಿವರ ಇಲ್ಲಿದೆ.

ದ್ರಾವಿಡ್ ಕೋಚಿಂಗ್​ನಲ್ಲಿ ಟೀಂ ಇಂಡಿಯಾದ ಪ್ರದರ್ಶನ

ದ್ರಾವಿಡ್ ತಂಡದ ಸಾರಥ್ಯವಹಿಸಿಕೊಂಡ ನಂತರ ಟೀಂ ಇಂಡಿಯಾ ತವರು ನೆಲದಲ್ಲಿ ನ್ಯೂಜಿಲೆಂಡ್‌ ವಿರುದ್ಧ ಟೆಸ್ಟ್ ಮತ್ತು ಟಿ20 ಸರಣಿ ಎರಡನ್ನೂ ಗೆದ್ದುಕೊಂಡಿತ್ತು. ಆ ಬಳಿಕ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೆಸ್ಟ್ ಮತ್ತು ಏಕದಿನ ಸರಣಿಯನ್ನು ಕಳೆದುಕೊಂಡಿತ್ತು. ಆದರೆ ವೆಸ್ಟ್ ಇಂಡೀಸ್ ವಿರುದ್ಧ ಟಿ20 ಮತ್ತು ಏಕದಿನ ಸರಣಿಯನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಹಾಗೆಯೇ ಶ್ರೀಲಂಕಾ ಪ್ರವಾಸದಲ್ಲಿ ಟೆಸ್ಟ್ ಮತ್ತು ಟಿ20 ಸರಣಿ ಎರಡನ್ನು ಗೆದ್ದುಕೊಂಡಿತ್ತು.

ಆದರೆ ತವರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಡಿದ ಟಿ20 ಸರಣಿಯನ್ನು ಟೀಂ ಇಂಡಿಯಾಕ್ಕೆ ಗೆಲ್ಲಲು ಸಾಧ್ಯವಾಗಲಿಲ್ಲ. ಇಂಗ್ಲೆಂಡ್‌ನಲ್ಲಿ ನಡೆದ ಏಕೈಕ ಟೆಸ್ಟ್‌ನಲ್ಲೂ ಸೋಲುಂಡಿತ್ತು. ಆದರೆ ಏಕದಿನ ಮತ್ತು ಟಿ20 ಸರಣಿಯನ್ನು ಗೆದ್ದುಬೀಗಿತ್ತು. ಆ ಬಳಿಕ ವೆಸ್ಟ್ ಇಂಡೀಸ್‌ನಲ್ಲಿ ಟಿ20 ಸರಣಿಯನ್ನು 4-1 ಅಂತರದಿಂದ ಗೆದ್ದುಕೊಂಡಿತು. ಆದರೆ ಏಷ್ಯಾಕಪ್‌ನಲ್ಲಿ ಸೂಪರ್-4 ಸುತ್ತಿನಿಂದ ಟೀಂ ಇಂಡಿಯಾ ಹೊರಬಿತ್ತು. ಆಸ್ಟ್ರೇಲಿಯಾ-ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯನ್ನು ಗೆದ್ದುಕೊಂಡಿತ್ತು. ಈಗ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಸೋಲು ಕಂಡಿದೆ.

ಇದನ್ನೂ ಓದಿ: ಟೀಂ ಇಂಡಿಯಾದಲ್ಲಿ ಈ 4 ಬದಲಾವಣೆಗಳಾದರೆ ಐಸಿಸಿ ಪ್ರಶಸ್ತಿ ಗೆಲ್ಲವುದು ಬಹಳ ಸುಲಭ..!

ರಾಹುಲ್ ದ್ರಾವಿಡ್ ತರಬೇತಿಯಲ್ಲಿನ ಲೋಪಗಳೇನು?

ರಾಹುಲ್ ದ್ರಾವಿಡ್ ಅವರ ಕೋಚಿಂಗ್‌ನಲ್ಲಿ ಆಟಗಾರರ ಆಯ್ಕೆ ಮತ್ತು ಬಳಕೆ ಬಗ್ಗೆ ಪ್ರಶ್ನೆಗಳು ಎದ್ದಿವೆ. ಆಟಗಾರರ ಗಾಯ ಮತ್ತು ಕೆಲಸದ ಹೊರೆ ನಿರ್ವಹಣೆಯೂ ದೊಡ್ಡ ಸಮಸ್ಯೆಯಾಗಿತ್ತು. ದ್ರಾವಿಡ್ ಕೋಚಿಂಗ್‌ನಲ್ಲಿ ಆಟಗಾರರ ಪಾತ್ರ ಸ್ಪಷ್ಟವಾಗಿ ಗೋಚರಿಸುವುದಿಲ್ಲ. ಅಗತ್ಯಕ್ಕಿಂತ ಹೆಚ್ಚು ಪ್ರಯೋಗಗಳನ್ನು ಮಾಡಿದರೂ ಅದರ ಪ್ರಕಾರ ಫಲಿತಾಂಶ ಬರಲಿಲ್ಲ.

ಇದೀಗ ರಾಹುಲ್ ದ್ರಾವಿಡ್ ನ್ಯೂಜಿಲೆಂಡ್ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗೆ ಡಿಸ್ಚಾರ್ಜ್ ಆಗಿದ್ದು, ಇದೀಗ ಬಾಂಗ್ಲಾದೇಶ ವಿರುದ್ಧದ ಸರಣಿಗೆ ಮತ್ತೆ ತಂಡಕ್ಕೆ ಮರಳಲಿದ್ದಾರೆ. ಕಿವೀಸ್ ಸರಣಿಗೆ ರಾಹುಲ್ ಬದಲು ವಿವಿಎಸ್ ಲಕ್ಷ್ಮಣ್​ಗೆ ಕೋಚ್ ಹುದ್ದೆ ನೀಡಲಾಗಿದೆ. ಈಗ ರಾಹುಲ್ ದ್ರಾವಿಡ್ ಅವಧಿ ಬಗ್ಗೆ ಮಾತನಾಡುವುದಾದರೆ, ಅವರು 2023 ರ ವಿಶ್ವಕಪ್​ವರೆಗೆ ಉಳಿಯುವುದು ಖಚಿತ. ಆದರೆ ಈ ಸಮಯದಲ್ಲಿ ಅವರು ತಮ್ಮನ್ನು ತಾವು ಸಾಬೀತುಪಡಿಸುವುದು ಬಹಳ ಮುಖ್ಯ.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:08 pm, Fri, 11 November 22

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು