AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL ಟೆಸ್ಟ್​ ಟೀಮ್ ಇಂಡಿಯಾ ಪಾಲಿಗೆ ಐತಿಹಾಸಿಕ ಪಂದ್ಯ

India vs Sri Lanka Test 2026: ಭಾರತ ಮತ್ತು ಶ್ರೀಲಂಕಾ ನಡುವಣ ಟೆಸ್ಟ್ ಸರಣಿಯು ಆಗಸ್ಟ್ 15 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಗಾಲೆಯ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದರೆ, ದ್ವಿತೀಯ ಪಂದ್ಯವು ಆಗಸ್ಟ್ 23 ರಂದು ಕೊಲಂಬೋದ ಎಸ್‌ಎಸ್‌ಸಿ ಮೈದಾನದಲ್ಲಿ ಜರುಗಲಿದೆ.

IND vs SL ಟೆಸ್ಟ್​ ಟೀಮ್ ಇಂಡಿಯಾ ಪಾಲಿಗೆ ಐತಿಹಾಸಿಕ ಪಂದ್ಯ
Team IndiaImage Credit source: BCCI
ಝಾಹಿರ್ ಯೂಸುಫ್
|

Updated on: Aug 05, 2026 | 12:12 PM

Share

15 ಆಗಸ್ಟ್ 2026 ರಂದು ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ಏಕೆಂದರೆ ಈ ಪಂದ್ಯವು ಭಾರತೀಯ ಕ್ರಿಕೆಟ್ ಇತಿಹಾಸದ ಒಟ್ಟಾರೆ 600ನೇ ಟೆಸ್ಟ್ ಪಂದ್ಯವಾಗಿದೆ. ಅಂದರೆ ಇದು ಭಾರತ ಆಡುತ್ತಿರುವ 600ನೇ ಟೆಸ್ಟ್ ಪಂದ್ಯ. ಹೀಗಾಗಿಯೇ ಈ ಪಂದ್ಯವು ಇದೀಗ ಭಾರತ ತಂಡದ ಪಾಲಿನ ಐತಿಹಾಸಿಕ ಪಂದ್ಯವಾಗಿ ಮಾರ್ಪಟ್ಟಿದೆ.

1932 ರಿಂದ 2026:

ಟೀಮ್ ಇಂಡಿಯಾ ತನ್ನ ಮೊದಲ ಅಧಿಕೃತ ಟೆಸ್ಟ್ ಪಂದ್ಯವನ್ನು ಆಡಿದ್ದು 1932 ರಲ್ಲಿ ಇಂಗ್ಲೆಂಡ್ ವಿರುದ್ಧ. ಅಲ್ಲಿಂದ ಆರಂಭವಾದ ಈ ಸುದೀರ್ಘ 94 ವರ್ಷಗಳ ಸುದೀರ್ಘ ಪ್ರಯಾಣದಲ್ಲಿ ಭಾರತೀಯ ಕ್ರಿಕೆಟ್ ಹಲವು ಏಳು-ಬೀಳುಗಳನ್ನು ಕಂಡಿದೆ.

ಸಿ.ಕೆ. ನಾಯ್ಡು ಅವರ ಮೊದಲ ನಾಯಕತ್ವದಿಂದ ಹಿಡಿದು ಇಂದಿನ ಯುವ ಪೀಳಿಗೆಯವರೆಗೆ ಒಟ್ಟು 38 ದಿಗ್ಗಜ ನಾಯಕರು ಈ ತಂಡವನ್ನು ಮುನ್ನಡೆಸಿದ್ದಾರೆ.

ಈ ಎಲ್ಲಾ 38 ನಾಯಕರ ಶ್ರಮ, ನೂರಾರು ಆಟಗಾರರ ಬೆವರು ಮತ್ತು ಕೋಟ್ಯಂತರ ಅಭಿಮಾನಿಗಳ ಪ್ರಾರ್ಥನೆಯ ಫಲವಾಗಿ ಇಂದು ಭಾರತ ತನ್ನ 600ನೇ ಟೆಸ್ಟ್ ಪಂದ್ಯದ ಹೊಸ್ತಿಲಲ್ಲಿ ಬಂದು ನಿಂತಿದೆ.

ಭಾರತದ ಟೆಸ್ಟ್ ಮೈಲುಗಲ್ಲು:

  • 1ನೇ ಟೆಸ್ಟ್ (1932): ಸಿ.ಕೆ. ನಾಯ್ಡು (ಇಂಗ್ಲೆಂಡ್ ವಿರುದ್ಧ)
  • 100ನೇ ಟೆಸ್ಟ್ (1967): ಮನ್ಸೂರ್ ಅಲಿ ಖಾನ್ ಪಟೌಡಿ (ಇಂಗ್ಲೆಂಡ್ ವಿರುದ್ಧ)
  • 200ನೇ ಟೆಸ್ಟ್ (1982): ಸುನಿಲ್ ಗವಾಸ್ಕರ್ (ಪಾಕಿಸ್ತಾನ ವಿರುದ್ಧ)
  • 300ನೇ ಟೆಸ್ಟ್ (1996): ಸಚಿನ್ ತೆಂಡೂಲ್ಕರ್ (ಸೌತ್ ಆಫ್ರಿಕಾ ವಿರುದ್ಧ)
  • 400ನೇ ಟೆಸ್ಟ್ (2006): ರಾಹುಲ್ ದ್ರಾವಿಡ್ (ವೆಸ್ಟ್ ಇಂಡೀಸ್ ವಿರುದ್ಧ)
  • 500ನೇ ಟೆಸ್ಟ್ (2016): ವಿರಾಟ್ ಕೊಹ್ಲಿ (ನ್ಯೂಝಿಲೆಂಡ್ ವಿರುದ್ಧ)
  • 600ನೇ ಟೆಸ್ಟ್ (2026): ಶುಭ್‌ಮನ್ ಗಿಲ್ (ಶ್ರೀಲಂಕಾ ವಿರುದ್ಧ – ಗಾಲೆ)

ಐತಿಹಾಸಿಕ ಪಂದ್ಯಕ್ಕೆ ಗಿಲ್ ಸಾರಥ್ಯ:

ಭಾರತದ ಈ ಮಹತ್ವದ 600ನೇ ಟೆಸ್ಟ್ ಪಂದ್ಯವನ್ನು ಮುನ್ನಡೆಸುವ ಮಹಾನ್ ಗೌರವ ಯುವ ಆಟಗಾರ ಶುಭ್‌ಮನ್ ಗಿಲ್ ಹೆಗಲಿಗೇರಿದೆ. ಕಪಿಲ್ ದೇವ್, ಎಂ.ಎಸ್. ಧೋನಿ, ಸೌರವ್ ಗಂಗೂಲಿ, ವಿರಾಟ್ ಕೊಹ್ಲಿಯಂತಹ ದಿಗ್ಗಜರು ಅಲಂಕರಿಸಿದ್ದ ಸ್ಥಾನದಲ್ಲಿ ನಿಂತು ಗಿಲ್ ಹೊಸ ಇತಿಹಾಸ ಸೃಷ್ಟಿಸುವ ಇರಾದೆಯಲ್ಲಿದ್ದಾರೆ.

ಮತ್ತೊಂದೆಡೆ, ಭಾರತ ತಂಡವು ಬರೋಬ್ಬರಿ 9 ವರ್ಷಗಳ ಸುದೀರ್ಘ ಬಿಡುವಿನ ಬಳಿಕ ಶ್ರೀಲಂಕಾ ಮಣ್ಣಿನಲ್ಲಿ ಟೆಸ್ಟ್ ಸರಣಿ ಆಡುತ್ತಿರುವುದು, ಈ ಪಂದ್ಯದ ಮೇಲಿನ ಕುತೂಹಲ ಹಾಗೂ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಇದನ್ನೂ ಓದಿ: LPL ನಲ್ಲಿ ತಂಡ ಖರೀದಿಸಿದ ಝಹೀರ್ ಖಾನ್!

ಒಟ್ಟಾರೆಯಾಗಿ, ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯಂದೇ ಆರಂಭವಾಗಲಿರುವ ಈ 600ನೇ ಟೆಸ್ಟ್ ಪಂದ್ಯವು ಭಾರತೀಯ ಕ್ರೀಡಾ ಇತಿಹಾಸದಲ್ಲಿ ಮತ್ತೊಂದು ಹೊಸ ಮೈಲಿಗಲ್ಲನ್ನು ಬರೆಯುವುದರಲ್ಲಿ ಯಾವುದೇ ಸಂಶಯವಿಲ್ಲ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ