AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA 2nd ODI: ರಾಯ್‌ಪುರದಲ್ಲಿ ಟೀಮ್ ಇಂಡಿಯಾ ದಾಖಲೆ ಹೇಗಿದೆ? ರೋಹಿತ್ ನಾಯಕತ್ವದಲ್ಲಿ ಭರ್ಜರಿ ಪ್ರದರ್ಶನ

India vs South Africa 2nd ODI: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಮೈದಾನದಲ್ಲಿ ಕೊನೆಯ ಏಕದಿನ ಪಂದ್ಯವನ್ನು 2023 ರಲ್ಲಿ ಆಡಲಾಗಿತ್ತು. ಸದ್ಯ ರಾಯ್‌ಪುರ ಕ್ರೀಡಾಂಗಣದಲ್ಲಿ ಇದುವರೆಗಿನ ಟೀಮ್ ಇಂಡಿಯಾದ ಏಕದಿನ ದಾಖಲೆ ಹೇಗಿದೆ ಎಂಬುದನ್ನು ನೋಡೋಣ.

IND vs SA 2nd ODI: ರಾಯ್‌ಪುರದಲ್ಲಿ ಟೀಮ್ ಇಂಡಿಯಾ ದಾಖಲೆ ಹೇಗಿದೆ? ರೋಹಿತ್ ನಾಯಕತ್ವದಲ್ಲಿ ಭರ್ಜರಿ ಪ್ರದರ್ಶನ
Team India (20)
ಮಾಲಾಶ್ರೀ ಅಂಚನ್​
| Updated By: Digi Tech Desk|

Updated on: Dec 03, 2025 | 7:41 AM

Share

ಬೆಂಗಳೂರು (ಡಿ. 03): ಭಾರತ (Indian Cricket Team) ಮತ್ತು ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯ ಡಿಸೆಂಬರ್ 3 ರಂದು ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ರಾಂಚಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯವನ್ನು ಟೀಮ್ ಇಂಡಿಯಾ 17 ರನ್‌ಗಳಿಂದ ಗೆದ್ದುಕೊಂಡಿತು. ಇದೀಗ, ಭಾರತ ತಂಡವು ಎರಡನೇ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸಲು ನೋಡುತ್ತಿದೆ. ಏತನ್ಮಧ್ಯೆ, ದಕ್ಷಿಣ ಆಫ್ರಿಕಾ ಈ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಉಳಿಯಲು ಬಯಸುತ್ತದೆ. ಸದ್ಯ ರಾಯ್‌ಪುರ ಕ್ರೀಡಾಂಗಣದಲ್ಲಿ ಇದುವರೆಗಿನ ಟೀಮ್ ಇಂಡಿಯಾದ ಏಕದಿನ ದಾಖಲೆ ಹೇಗಿದೆ ಎಂಬುದನ್ನು ನೋಡೋಣ.

ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ತಂಡವು ಕೇವಲ ಒಂದು ಏಕದಿನ ಪಂದ್ಯವನ್ನು ಆಡಿದ್ದು, ಗೆದ್ದಿದೆ. ಈ ಮೈದಾನದಲ್ಲಿ ಇಂಡಿಯಾ ಆಡಿದ ಏಕೈಕ ಏಕದಿನ ಪಂದ್ಯ 2023 ರಲ್ಲಿ ನ್ಯೂಜಿಲೆಂಡ್ ವಿರುದ್ಧವಾಗಿತ್ತು. ಆ ಪಂದ್ಯದಲ್ಲಿ, ರೋಹಿತ್ ನಾಯಕತ್ವದಲ್ಲಿ ಭಾರತ ತಂಡವು 8 ವಿಕೆಟ್‌ಗಳಿಂದ ಜಯಗಳಿಸಿತು. ಅಂದಿನಿಂದ, ಈ ಮೈದಾನದಲ್ಲಿ ಯಾವುದೇ ಏಕದಿನ ಪಂದ್ಯವನ್ನು ಆಡಲಾಗಿಲ್ಲ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಆ ಪಂದ್ಯವು ಕಡಿಮೆ ಸ್ಕೋರಿಂಗ್ ಪಂದ್ಯವಾಗಿತ್ತು.

ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 34.3 ಓವರ್‌ಗಳಲ್ಲಿ 108 ರನ್‌ಗಳಿಗೆ ಆಲೌಟ್ ಆಯಿತು. ಇದಕ್ಕೆ ಉತ್ತರವಾಗಿ, ಟೀಮ್ ಇಂಡಿಯಾ 20.1 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 111 ರನ್ ಗಳಿಸುವ ಮೂಲಕ ಪಂದ್ಯವನ್ನು ಸುಲಭವಾಗಿ ಗೆದ್ದುಕೊಂಡಿತು. ರೋಹಿತ್ ಶರ್ಮಾ ಅರ್ಧಶತಕ ಗಳಿಸಿದರು.

IND vs SA: ಸರಣಿ ನಿರ್ಧಾರಕ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ ಸಾಧ್ಯತೆ

ರಾಂಚಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 135 ರನ್ ಗಳಿಸಿದರೆ, ರೋಹಿತ್ ಶರ್ಮಾ 57 ರನ್ ಗಳಿಸಿದರು ಎಂಬುದು ಗಮನಿಸಬೇಕಾದ ಸಂಗತಿ. ಭಾರತದ ಗೆಲುವಿನಲ್ಲಿ ಇಬ್ಬರೂ ಆಟಗಾರರು ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಪ್ರಸ್ತುತ, ಟೀಮ್ ಇಂಡಿಯಾ ಸರಣಿಯಲ್ಲಿ 1-0 ಮುನ್ನಡೆಯಲ್ಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ