ಭಾರತ-ನ್ಯೂಜಿಲೆಂಡ್ ಟೆಸ್ಟ್ ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ದಕ್ಷಿಣ ಆಫ್ರಿಕಾ ವಿರುದ್ದ ಭಾರತ ಟೆಸ್ಟ್ ಮತ್ತು ಏಕದಿನ ಸರಣಿಗಳನ್ನು ಆಡಲಿದ್ದು, ಇದಕ್ಕಾಗಿ ಶೀಘ್ರದಲ್ಲೇ ಟೀಮ್ ಇಂಡಿಯಾವನ್ನು ಪ್ರಕಟಿಸಲಿದೆ. ಮುಂಬೈ ಟೆಸ್ಟ್ ಬಳಿಕ ಭಾರತ ತಂಡವನ್ನು ಘೋಷಿಸಲಿದೆ ಎಂದು ತಿಳಿದು ಬಂದಿದೆ. ಆದರೆ ದಕ್ಷಿಣ ಆಫ್ರಿಕಾ ಸರಣಿಗಾಗಿ ಆಯ್ಕೆ ಮಾಡಲಾಗುವ ತಂಡದಿಂದ ಪ್ರಮುಖ ಆಟಗಾರರನ್ನು ಕೈಬಿಡುವುದು ಖಚಿತ ಎನ್ನಲಾಗಿದೆ. ಈ ಪಟ್ಟಿಯಲ್ಲಿ ಅಜಿಂಕ್ಯ ರಹಾನೆ ಹೆಸರು ಮುಂಚೂಣಿಯಲ್ಲಿದೆ.
ಅಜಿಂಕ್ಯ ರಹಾನೆ ಅತ್ಯಂತ ಕಳಪೆ ಫಾರ್ಮ್‌ನಲ್ಲಿದ್ದು, ಹೀಗಾಗಿ ಅವರನ್ನು ಕೈಬಿಡಲಿದೆ ಎಂದು ತಿಳಿದು ಬಂದಿದೆ. ಅಷ್ಟೇ ಅಲ್ಲದೆ ನ್ಯೂಜಿಲೆಂಡ್ ವಿರುದ್ದದ 2ನೇ ಟೆಸ್ಟ್ ಪಂದ್ಯದಲ್ಲೂ ಗಾಯದ ಕಾರಣ ಕಣಕ್ಕಿಳಿದಿರಲಿಲ್ಲ. ಹೀಗಾಗಿ ಅವರು ಆಯ್ಕೆಯಾಗುವುದು ಅನುಮಾನ. ಇನ್‌ಸೈಡ್ ಸ್ಪೋರ್ಟ್ ವರದಿಯ ಪ್ರಕಾರ, ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮುಂಬೈ ಟೆಸ್ಟ್ ನಂತರ ಟೀಮ್ ಇಂಡಿಯಾವನ್ನು ಘೋಷಿಸಲಿದೆ. ಆದರೆ ಈ ಪಟ್ಟಿಯಲ್ಲಿ ರಹಾನೆ ಅವರಿಲ್ಲ ಎನ್ನಲಾಗಿದೆ. ಅಜಿಂಕ್ಯ ರಹಾನೆ ಅವರ ಬದಲಿಗೆ ಉಪನಾಯಕನಾಗಿ ರೋಹಿತ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿಸಲಾಗಿದೆ.
ಈ ಬಗ್ಗೆ ಮಾತನಾಡಿದ ಬಿಸಿಸಿಐ ಅಧಿಕಾರಿಯೊಬ್ಬರು, “ರಹಾನೆಗೆ ಪರಿಸ್ಥಿತಿಗಳು ಕಠಿಣವಾಗಿವೆ. ಅವರು ಕಳಪೆ ಫಾರ್ಮ್‌ನಲ್ಲಿದ್ದಾರೆ. ರಹಾನೆ ಅವರು ಅತ್ಯುತ್ತಮ ವೃತ್ತಿಜೀವನವನ್ನು ಹೊಂದಿದ್ದಾರೆ. ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಅವರ ಆಯ್ಕೆಯು ತಂಡದ ಮ್ಯಾನೇಜ್ಮೆಂಟ್ ಕೈಯಲ್ಲಿದೆ. ಹೀಗಾಗಿ ಅವರ ಆಯ್ಕೆ ಆಗುವ ಸಾಧ್ಯತೆಯನ್ನೂ ಕೂಡ ತಳ್ಳಿ ಹಾಕುವಂತಿಲ್ಲ. ಆದರೆ, ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ರಹಾನೆ ಆಯ್ಕೆಯಾದರೂ ರೋಹಿತ್ ಶರ್ಮಾ ಅವರಿಗೆ ಉಪನಾಯಕ ಸ್ಥಾನ ನೀಡಲಿದೆ ಎಂದು ಬಿಸಿಸಿಐ ಅಧಿಕಾರಿ ತಿಳಿಸಿದ್ದಾರೆ.
ಇನ್ನು ನ್ಯೂಜಿಲೆಂಡ್ ಸರಣಿಯಲ್ಲಿ ಶ್ರೇಯಸ್ ಅಯ್ಯರ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಕಾನ್ಪುರದಲ್ಲಿ ನಡೆದ ಚೊಚ್ಚಲ ಪಂದ್ಯದಲ್ಲೇ ಅಯ್ಯರ್ ಶತಕ ಸಿಡಿಸಿದ್ದರು. ಇದೇ ವೇಳೆ ಮಧ್ಯಮ ಕ್ರಮಾಂಕದಲ್ಲಿ ಶುಭಮನ್ ಗಿಲ್ ಆಡುವ ಮಾತು ಕೂಡ ಮುನ್ನೆಲೆಗೆ ಬರುತ್ತಿದೆ. ಇಷ್ಟೇ ಅಲ್ಲ, ಟೀಮ್ ಇಂಡಿಯಾ ಮಯಾಂಕ್ ಅಗರ್ವಾಲ್ ಅವರನ್ನು ಆರಂಭಿಕರಾಗಿ ಉಳಿಸಿಕೊಂಡರೆ, ಮಧ್ಯಮ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಅವರನ್ನೂ ಆಡಬಹುದು. ಈ ಮಾದರಿಯಲ್ಲಿ ತಂಡವನ್ನು ರೂಪಿಸಿದರೆ ಅಜಿಂಕ್ಯ ರಹಾನೆಗೆ ತಂಡದಲ್ಲಿ ಅವಕಾಶ ಸಿಗುವುದು ಕೂಡ ಅನುಮಾನ ಎಂದೇ ಹೇಳಬಹುದು.
ಇದನ್ನೂ ಓದಿ: World Record: ಬರೋಬ್ಬರಿ 15 ಸಿಕ್ಸ್: ಕ್ರಿಕೆಟ್ ಇತಿಹಾಸದ ಅತೀ ವೇಗದ ಶತಕ
ಇದನ್ನೂ ಓದಿ: IPL 20222: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್ಸಿಬಿ ನಾಯಕ
ಇದನ್ನೂ ಓದಿ: Aakash Chopra: ಚಹಲ್ ಬದಲಿಗೆ RCB ಇವರನ್ನು ಟಾರ್ಗೆಟ್ ಮಾಡಲಿದೆ..!
ಇದನ್ನೂ ಓದಿ: IPL 2022: RCB ಅಭಿಮಾನಿಗಳಿಗೆ ಗುಡ್ ನ್ಯೂಸ್: ಮತ್ತೆ ಬರ್ತಾರಂತೆ ABD
(Team india selection for south africa tour just after mumbai test ajinkya rahane may excluded)