AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

26 ದಿನಗಳಲ್ಲಿ 10 ಟಿ20 ಪಂದ್ಯಗಳನ್ನಾಡಲಿದೆ ಟೀಮ್ ಇಂಡಿಯಾ

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಏಕದಿನ ಸರಣಿಯನ್ನು ಟೀಮ್ ಇಂಡಿಯಾ ಗೆದ್ದುಕೊಂಡಿದೆ. ಮೂರು ಮ್ಯಾಚ್​ಗಳ ಈ ಸರಣಿ ಮೊದಲೆರಡು ಪಂದ್ಯಗಳಲ್ಲಿ ಭಾರತ ತಂಡ ಗೆದ್ದರೆ, ಮೂರನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಜಯ ಸಾಧಿಸಿತ್ತು. ಇದೀಗ ಉಭಯ ತಂಡಗಳು 5 ಪಂದ್ಯಗಳ ಟಿ20 ಸರಣಿಗಾಗಿ ಸಜ್ಜಾಗುತ್ತಿದೆ.

26 ದಿನಗಳಲ್ಲಿ 10 ಟಿ20 ಪಂದ್ಯಗಳನ್ನಾಡಲಿದೆ ಟೀಮ್ ಇಂಡಿಯಾ
Team India Image Credit source: GettyImages
ಝಾಹಿರ್ ಯೂಸುಫ್
|

Updated on: Oct 05, 2026 | 8:50 AM

Share

ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿ ಮುಗಿಸಿರುವ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ 10 ಟಿ20 ಪಂದ್ಯಗಳನ್ನಾಡಲಿದೆ. ಅದು ಸಹ ಕೇವಲ 26 ದಿನಗಳಲ್ಲಿ. ಅದು ಸಹ ಸ್ವದೇಶ ಹಾಗೂ ವಿದೇಶದಲ್ಲಿ ಎಂಬುದು ವಿಶೇಷ. ಅಂದರೆ ಮೊದಲಿಗೆ ತವರಿನಲ್ಲಿ ಟಿ20 ಸರಣಿ ಆಡಲಿರುವ ಭಾರತ, ಇದರ ಬೆನ್ನಲ್ಲೇ ನ್ಯೂಝಿಲೆಂಡ್​ಗೆ ತೆರಳಲಿದೆ.

  • ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟಿ20 ಸರಣಿಯು ಅಕ್ಟೋಬರ್ 6 ರಿಂದ ಶುರುವಾಗಲಿದೆ. ಈ ಸರಣಿ ಮುಗಿಯುವುದು ಅಕ್ಟೋಬರ್ 17 ರಂದು.
  • ಅಕ್ಟೋಬರ್ 22 ರಿಂದ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟಿ20 ಸರಣಿ ಆರಂಭವಾಗಲಿದೆ. ಈ ಸರಣಿ ಮುಗಿಯುವುದು ನವೆಂಬರ್ 1 ರಂದು.

ಸ್ವದೇಶ-ವಿದೇಶದಲ್ಲಿ ನಡೆಯಲಿರುವ ಈ ಮ್ಯಾರಾಥಾನ್ ಸರಣಿಯಲ್ಲಿ ಟೀಮ್ ಇಂಡಿಯಾ 10 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿಯಲಿದ್ದು, ಈ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ…

ಭಾರತ vs ವೆಸ್ಟ್ ಇಂಡೀಸ್ ಟಿ20 ಸರಣಿ ವೇಳಾಪಟ್ಟಿ:

ಪಂದ್ಯ ದಿನಾಂಕ ಕ್ರೀಡಾಂಗಣ ಸಮಯ (IST)
ಮೊದಲ ಟಿ20 ಪಂದ್ಯ 6 ಅಕ್ಟೋಬರ್ 2026 ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ ಸಂಜೆ 7:00
ಎರಡನೇ ಟಿ20 ಪಂದ್ಯ 9 ಅಕ್ಟೋಬರ್ 2026 JSCA ಇಂಟರ್ನ್ಯಾಷನಲ್ ಸ್ಟೇಡಿಯಂ, ರಾಂಚಿ ಸಂಜೆ 7:00
ಮೂರನೇ ಟಿ20 ಪಂದ್ಯ 11 ಅಕ್ಟೋಬರ್ 2026 ಹೋಳ್ಕರ್ ಸ್ಟೇಡಿಯಂ, ಇಂದೋರ್ ಸಂಜೆ 7:00
ನಾಲ್ಕನೇ ಟಿ20 ಪಂದ್ಯ 14 ಅಕ್ಟೋಬರ್ 2026 ರಾಜೀವ್ ಗಾಂಧಿ ಸ್ಟೇಡಿಯಂ, ಹೈದರಾಬಾದ್ ಸಂಜೆ 7:00
ಐದನೇ ಟಿ20 ಪಂದ್ಯ 17 ಅಕ್ಟೋಬರ್ 2026 ಎಂ. ಚಿನ್ನಸ್ವಾಮಿ ಸ್ಟೇಡಿಯಂ, ಬೆಂಗಳೂರು ಸಂಜೆ 7:00

ಭಾರತ vs ನ್ಯೂಝಿಲೆಂಡ್ ಟಿ20 ಸರಣಿ ವೇಳಾಪಟ್ಟಿ:

ಪಂದ್ಯ ದಿನಾಂಕ ಕ್ರೀಡಾಂಗಣ ಸಮಯ (IST)
ಮೊದಲ ಟಿ20 ಪಂದ್ಯ 22 ಅಕ್ಟೋಬರ್ 2026 ಹ್ಯಾಗ್ಲಿ ಓವಲ್, ಕ್ರೈಸ್ಟ್‌ಚರ್ಚ್ ಮಧ್ಯಾಹ್ನ 12:30
ಎರಡನೇ ಟಿ20 ಪಂದ್ಯ 24 ಅಕ್ಟೋಬರ್ 2026 ಹ್ಯಾಗ್ಲಿ ಓವಲ್, ಕ್ರೈಸ್ಟ್‌ಚರ್ಚ್ ಮಧ್ಯಾಹ್ನ 12:30
ಮೂರನೇ ಟಿ20 ಪಂದ್ಯ 27 ಅಕ್ಟೋಬರ್ 2026 ಸ್ಕೈ ಸ್ಟೇಡಿಯಂ, ವೆಲ್ಲಿಂಗ್ಟನ್ ಮಧ್ಯಾಹ್ನ 12:30
ನಾಲ್ಕನೇ ಟಿ20 ಪಂದ್ಯ 30 ಅಕ್ಟೋಬರ್ 2026 ಈಡನ್ ಪಾರ್ಕ್, ಆಕ್ಲೆಂಡ್ ಮಧ್ಯಾಹ್ನ 12:30
ಐದನೇ ಟಿ20 ಪಂದ್ಯ 1 ನವೆಂಬರ್ 2026 ಸೆಡ್ಡನ್ ಪಾರ್ಕ್, ಹ್ಯಾಮಿಲ್ಟನ್ ಮಧ್ಯಾಹ್ನ 12:30

ಯಾವ ಚಾನೆಲ್​ಗಳಲ್ಲಿ ನೇರ ಪ್ರಸಾರ?

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟಿ20 ಸರಣಿಯನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್​ವರ್ಕ್​ನ ಚಾನೆಲ್​ಗಳಲ್ಲಿ  ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್​ಸ್ಟಾರ್ ಆ್ಯಪ್​ನಲ್ಲೂ ಲೈವ್ ಸ್ಟ್ರೀಮಿಂಗ್ ಇರಲಿದೆ.

ಇದನ್ನೂ ಓದಿ: ಪ್ರಯೋಗಗಳ ಕಾಲ ಮುಗಿಯಿತು: ಸ್ಪಷ್ಟ ಗುರಿ ತಿಳಿಸಿದ ಶುಭ್​ಮನ್ ಗಿಲ್

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟಿ20 ಸರಣಿಯು ಸೋನಿ ಸ್ಪೋರ್ಟ್ಸ್​ ನೆಟ್​ವರ್ಕ್​ನ ಚಾನೆಲ್​ಗಳಲ್ಲಿ ಲೈವ್ ಇರಲಿದೆ. ಹಾಗೆಯೇ ಸೋನಿ ಲಿವ್ ಆ್ಯಪ್​ನಲ್ಲೂ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಪಾಕಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಆರೋಪ: ಏಳು ಜನರ ವಿರುದ್ಧ FIR
ಪಾಕಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಆರೋಪ: ಏಳು ಜನರ ವಿರುದ್ಧ FIR
ಪೈಪ್‌ಲೈನ್ ಒಡೆದು ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ಪೈಪ್‌ಲೈನ್ ಒಡೆದು ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು