AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಕನಸನ್ನು ನುಚ್ಚುನೂರು ಮಾಡಿದ ಟೀಮ್ ಇಂಡಿಯಾ

Champions Trophy 2025: ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡ ಫೈನಲ್​ಗೇರಿದೆ. ಅದರಂತೆ ಮಾರ್ಚ್ 9 ರಂದು ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯಲಿದೆ. ಇತ್ತ ಭಾರತ ತಂಡ ಫೈನಲ್​ಗೇರುತ್ತಿದ್ದಂತೆ ಪಾಕಿಸ್ತಾನದ ಕನಸು ನುಚ್ಚುನೂರಾಗಿದೆ.

ಪಾಕಿಸ್ತಾನದ ಕನಸನ್ನು ನುಚ್ಚುನೂರು ಮಾಡಿದ ಟೀಮ್ ಇಂಡಿಯಾ
Virat Kohli - Pakistan
ಝಾಹಿರ್ ಯೂಸುಫ್
|

Updated on: Mar 05, 2025 | 6:55 AM

Share

ಗೆದ್ದಿದ್ದು ಟೀಮ್ ಇಂಡಿಯಾ. ಸೋತಿದ್ದು ಆಸ್ಟ್ರೇಲಿಯಾ. ಕನಸು ನುಚ್ಚುನೂರಾಗಿದ್ದ ಪಾಕಿಸ್ತಾನದ್ದು. ಹೌದು, 29 ವರ್ಷಗಳ ಬಳಿಕ ಐಸಿಸಿ ಟೂರ್ನಿ ಆಯೋಜಿಸಿರುವ ಪಾಕಿಸ್ತಾನದ ಕನಸಿಗೆ ಭಾರತ ತಂಡ ಕೊಳ್ಳಿ ಇಟ್ಟಿದೆ. ಅದು ಸಹ ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಬಗ್ಗು ಬಡಿಯುವ ಮೂಲಕ.

ದುಬೈನ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್ ಮಾಡಿತು. ಅದರಂತೆ ಸ್ಟೀವ್ ಸ್ಮಿತ್ (73) ಅವರ ಅರ್ಧಶತಕ ಹಾಗೂ ಅಲೆಕ್ಸ್ ಕ್ಯಾರಿ (61) ಹಾಫ್ ಸೆಂಚುರಿಯೊಂದಿಗೆ ಆಸ್ಟ್ರೇಲಿಯಾ ತಂಡ 49.3 ಓವರ್​ಗಳಲ್ಲಿ 264 ರನ್ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಶುಭ್​ಮನ್ ಗಿಲ್ (8) ಹಾಗೂ ರೋಹಿತ್ ಶರ್ಮಾ (28) ಬೇಗನೆ ಔಟಾಗಿದ್ದರಿಂದ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಇನಿಂಗ್ಸ್ ಕಟ್ಟಿದರು.

ಮೂರನೇ ವಿಕೆಟ್​ಗೆ 91 ರನ್​ಗಳ ಜೊತೆಯಾಟವಾಡಿದ ಬಳಿಕ ಶ್ರೇಯಸ್ ಅಯ್ಯರ್ (45) ಔಟಾದರು. ಇದಾಗ್ಯೂ ಏಕಾಂಗಿ ಹೋರಾಟ ಮುಂದುವರೆಸಿದ ಕೊಹ್ಲಿ 98 ಎಸೆತಗಳಲ್ಲಿ 84 ರನ್ ಬಾರಿಸಿ ಟೀಮ್ ಇಂಡಿಯಾದ ಗೆಲುವನ್ನು ಖಚಿತಪಡಿಸಿದರು. ಅಂತಿಮವಾಗಿ ಭಾರತ ತಂಡ 48.1 ಓವರ್​ಗಳಲ್ಲಿ 6 ವಿಕೆಟ್​ ಕಳೆದುಕೊಂಡು 267 ರನ್ ಬಾರಿಸಿ 4 ವಿಕೆಟ್​ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡ ಫೈನಲ್​ಗೇರಿದೆ.

ಪಾಕಿಸ್ತಾನದ ಕನಸು ನುಚ್ಚುನೂರು:

ಇತ್ತ ಟೀಮ್ ಇಂಡಿಯಾ ಫೈನಲ್​ಗೇರುತ್ತಿದ್ದಂತೆ ಅತ್ತ ಪಾಕಿಸ್ತಾನದ ಕನಸು ನುಚ್ಚುನೂರಾಗಿದೆ. ಅಂದರೆ 29 ವರ್ಷಗಳ ಬಳಿಕ ಐಸಿಸಿ ಟೂರ್ನಿಗೆ ಆತಿಥ್ಯವಹಿಸಿರುವ ಪಾಕಿಸ್ತಾನಕ್ಕೆ ಫೈನಲ್ ಮ್ಯಾಚ್ ಆಯೋಜಿಸುವ ಅವಕಾಶ ಕೈತಪ್ಪಿದೆ.

ಏಕೆಂದರೆ ಹೈಬ್ರಿಡ್ ಮಾದರಿಯಲ್ಲಿ ನಡೆಯುತ್ತಿರುವ ಈ ಟೂರ್ನಿಯಲ್ಲಿ ಟೀಮ್ ಇಂಡಿಯಾ ಫೈನಲ್​ಗೇರಿದರೆ ಅಂತಿಮ ಪಂದ್ಯವನ್ನು ದುಬೈನಲ್ಲೇ ಆಯೋಜಿಸಲು ಈ ಮೊದಲೇ ನಿರ್ಧರಿಸಲಾಗಿತ್ತು. ಅದರಂತೆ ಇದೀಗ ಭಾರತ ತಂಡ ಫೈನಲ್​ಗೆ ಎಂಟ್ರಿ ಕೊಟ್ಟಿದೆ.

ಇದನ್ನೂ ಓದಿ: Virat Kohli: ಮಾಸ್ಟರ್ ಚೇಸ್ ಮಾಸ್ಟರ್​ನ ವಿಶ್ವ ದಾಖಲೆ

ಇದರೊಂದಿಗೆ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯ ದುಬೈನ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ಆಯೋಜನೆಗೊಳ್ಳುವುದು ಖಚಿತವಾಗಿದೆ. ಫೈನಲ್​ ಮ್ಯಾಚ್ ಎಲ್ಲಿ ಎಂಬುದು ಖಚಿತವಾಗುತ್ತಿದ್ದಂತೆ 29 ವರ್ಷಗಳ ಬಳಿಕ ಐಸಿಸಿ ಟೂರ್ನಿಯ ಮಹತ್ವದ ಪಂದ್ಯವನ್ನು ಆಯೋಜಿಸುವ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​​ನ ಕನಸು ನುಚ್ಚುನೂರಾಗಿದೆ.

Follow Us
ಮತಗಳಿರುವ ಬಾಕ್ಸ್​ ಸೀಲ್ ಓಪನ್ ಆರೋಪಕ್ಕೆ ಸ್ಪಷ್ಟನೆ ನೀಡಿದ ರಾಜೇಗೌಡ
ಮತಗಳಿರುವ ಬಾಕ್ಸ್​ ಸೀಲ್ ಓಪನ್ ಆರೋಪಕ್ಕೆ ಸ್ಪಷ್ಟನೆ ನೀಡಿದ ರಾಜೇಗೌಡ
ಶೃಂಗೇರಿ ಮರು ಮತ ಎಣಿಕೆಯಲ್ಲಿ ಗೆಲುವು: ಶಾಸಕ ಟಿಡಿ ರಾಜೇಗೌಡ ಹೇಳಿದ್ದಿಷ್ಟು
ಶೃಂಗೇರಿ ಮರು ಮತ ಎಣಿಕೆಯಲ್ಲಿ ಗೆಲುವು: ಶಾಸಕ ಟಿಡಿ ರಾಜೇಗೌಡ ಹೇಳಿದ್ದಿಷ್ಟು
ತಾಯಿನ ಕಂಡು ರಸ್ತೆಯಲ್ಲಿ ಓಡಿ ಬಂದ ಮಗುವಿನ ಮೇಲೆ ಹರಿದ ಲಾರಿ
ತಾಯಿನ ಕಂಡು ರಸ್ತೆಯಲ್ಲಿ ಓಡಿ ಬಂದ ಮಗುವಿನ ಮೇಲೆ ಹರಿದ ಲಾರಿ
ಗ್ಯಾಸ್ ದರ ಇಳಿಸುವಂತೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಮೋದಿಗೆ ಪತ್ರ
ಗ್ಯಾಸ್ ದರ ಇಳಿಸುವಂತೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಮೋದಿಗೆ ಪತ್ರ
ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು
ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು
ರಣಬಿಸಿಲಿಗೆ ಪ್ರಾಣಿ, ಪಕ್ಷಿ, ಮನುಷ್ಯರ ನರಳಾಟ; ರಾಯಚೂರಿನಲ್ಲಿ ಇಬ್ಬರ ಸಾವು
ರಣಬಿಸಿಲಿಗೆ ಪ್ರಾಣಿ, ಪಕ್ಷಿ, ಮನುಷ್ಯರ ನರಳಾಟ; ರಾಯಚೂರಿನಲ್ಲಿ ಇಬ್ಬರ ಸಾವು
‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್
‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್
ಗೃಹಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ ಆರೋಪ
ಗೃಹಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ ಆರೋಪ
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ