Team India: ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ ಸ್ಪಿನ್ನರ್​ಗಳು

Team India: 189 ರನ್​ಗಳ ಬೃಹತ್ ಗುರಿ ಪಡೆದ ವೆಸ್ಟ್ ಇಂಡೀಸ್ ತಂಡವು ಮೊದಲ ಓವರ್​ 3ನೇ ಎಸೆತದಲ್ಲೇ ಪ್ರಥಮ ವಿಕೆಟ್ ಕಳೆದುಕೊಂಡಿತು. ಅಕ್ಷರ್ ಪಟೇಲ್ ಎಸೆದ ಚೆಂಡಿಗೆ ಜೇಸನ್ ಹೋಲ್ಡರ್ ಕ್ಲೀನ್ ಬೌಲ್ಡ್ ಆಗಿದ್ದರು.

Team India: ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ ಸ್ಪಿನ್ನರ್​ಗಳು
Team India Spinners
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 08, 2022 | 2:23 PM

ವೆಸ್ಟ್ ಇಂಡೀಸ್ (India vs West Indies) ವಿರುದ್ದದ 5ನೇ ಟಿ20 ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ 4-1 ಅಂತರದಿಂದ ಸರಣಿ ಗೆದ್ದುಕೊಂಡಿದೆ. 4ನೇ ಪಂದ್ಯದ ಗೆಲುವಿನೊಂದಿಗೆ ಸರಣಿ ವಶಪಡಿಸಿಕೊಂಡಿದ್ದ ಟೀಮ್ ಇಂಡಿಯಾ (Team India) ಪಾಲಿಗೆ 5ನೇ ಪಂದ್ಯವು ಔಪಚಾರಿಕವಾಗಿತ್ತು. ಹೀಗಾಗಿಯೇ ಮೊದಲ ನಾಲ್ಕು ಪಂದ್ಯಗಳಲ್ಲಿ ಅವಕಾಶ ವಂಚಿತರಾಗಿದ್ದ ಆಟಗಾರರು ಐದನೇ ಪಂದ್ಯದಲ್ಲಿ ಕಣಕ್ಕಿಳಿದಿದ್ದರು. ಹೀಗೆ ಅವಕಾಶ ಪಡೆದ ಟೀಮ್ ಇಂಡಿಯಾದ ಸ್ಪಿನ್ನರ್​ಗಳು ಹೊಸ ಇತಿಹಾಸ ನಿರ್ಮಿಸಿರುವುದು ವಿಶೇಷ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಹಂಗಾಮಿ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಭಾರತದ ಪರ ಇನಿಂಗ್ಸ್ ಆರಂಭಿಸಿದ ಶ್ರೇಯಸ್ ಅಯ್ಯರ್ ಹಾಗೂ ಇಶಾನ್ ಕಿಶನ್ ಉತ್ತಮ ಆರಂಭ ಒದಗಿಸಿದ್ದರು. ಈ ವೇಳೆ 11 ರನ್​ಗಳಿಸಿ ಕಿಶನ್ ಔಟಾದರೆ, ಶ್ರೇಯಸ್ ಅಯ್ಯರ್ 40 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 8 ಫೋರ್​ ಒಳಗೊಂಡ 64 ರನ್ ಬಾರಿಸಿ ಮಿಂಚಿದ್ದರು. ಇನ್ನು ಅಂತಿಮ ಹಂತದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಹಾರ್ದಿಕ್ ಪಾಂಡ್ಯ 16 ಎಸೆತಗಳಲ್ಲಿ 28 ರನ್​ ಚಚ್ಚಿದರು. ಪರಿಣಾಮ ಟೀಮ್ ಇಂಡಿಯಾ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 188 ರನ್​ ಕಲೆಹಾಕಿತು.

189 ರನ್​ಗಳ ಬೃಹತ್ ಗುರಿ ಪಡೆದ ವೆಸ್ಟ್ ಇಂಡೀಸ್ ತಂಡವು ಮೊದಲ ಓವರ್​ 3ನೇ ಎಸೆತದಲ್ಲೇ ಪ್ರಥಮ ವಿಕೆಟ್ ಕಳೆದುಕೊಂಡಿತು. ಅಕ್ಷರ್ ಪಟೇಲ್ ಎಸೆದ ಚೆಂಡಿಗೆ ಜೇಸನ್ ಹೋಲ್ಡರ್ ಕ್ಲೀನ್ ಬೌಲ್ಡ್ ಆಗಿ ಹೊರ ನಡೆದರು. ಇದರ ಬೆನ್ನಲ್ಲೇ ಬ್ರೂಕ್ಸ್​ರನ್ನು ಸ್ಟಂಪ್ ಔಟ್ ಮಾಡುವ ಮೂಲಕ ಅಕ್ಷರ್ ಮತ್ತೊಂದು ಯಶಸ್ಸು ತಂದುಕೊಟ್ಟರು.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇದಾದ ಬಳಿಕ ವೆಸ್ಟ್ ಇಂಡೀಸ್ ತಂಡ ಚೇತರಿಸಿಕೊಂಡಿಲ್ಲ ಎಂದೇ ಹೇಳಬಹುದು. ಏಕೆಂದರೆ ಒಂದೆಡೆ ಅಕ್ಷರ್ ಪಟೇಲ್ ಆರಂಭದಲ್ಲೇ ವಿಂಡೀಸ್ ಬ್ಯಾಟ್ಸ್​ಮನ್​ಗಳನ್ನು ಕಟ್ಟಿಹಾಕಿದ್ರೆ, ಮಧ್ಯಮ ಓವರ್​ಗಳ ವೇಳೆ ಬಂದ ಕುಲ್ದೀಪ್ ಯಾದವ್ ಹಾಗೂ ರವಿ ಬಿಷ್ಣೋಯ್ ಸ್ಪಿನ್ ಮೋಡಿ ಮೂಲಕ ಕೆರಿಬಿಯನ್ ದೈತ್ಯರನ್ನು ಕಾಡಿದರು.

ಪರಿಣಾಮ 3 ಓವರ್​ಗಳಲ್ಲಿ 15 ರನ್ ನೀಡಿದ ಅಕ್ಷರ್ ಪಟೇಲ್ 3 ವಿಕೆಟ್ ಕಬಳಿಸಿದರು. ಮತ್ತೊಂದೆಡೆ ಕುಲ್ದೀಪ್ ಯಾದವ್ 4 ಓವರ್​ಗಳಲ್ಲಿ 1 ಮೇಡನ್ ಸೇರಿದಂತೆ ಕೇವಲ 12 ರನ್​ ನೀಡಿ 3 ವಿಕೆಟ್ ಉರುಳಿಸಿದರು. ಈ ಇಬ್ಬರು ಅನುಭವಿ ಸ್ಪಿನ್ನರ್​ಗಳ ನಡುವೆ ಗೂಗ್ಲಿ ಮೋಡಿ ಮಾಡಿದ ಯುವ ಸ್ಪಿನ್ನರ್ ರವಿ ಬಿಷ್ಣೋಯ್ 2.4 ಓವರ್​ಗಳಲ್ಲಿ 16 ರನ್​ ನೀಡಿ 4 ವಿಕೆಟ್ ಪಡೆದರು. ಇದರೊಂದಿಗೆ ವೆಸ್ಟ್ ಇಂಡೀಸ್ ತಂಡವು 15.4 ಓವರ್​​ಗಳಲ್ಲಿ 100 ರನ್​ಗಳಿಗೆ ಸರ್ವಪತನ ಕಂಡಿತು.

ವಿಶೇಷ ಎಂದರೆ ವೆಸ್ಟ್ ಇಂಡೀಸ್​ನ 10 ವಿಕೆಟ್​ಗಳನ್ನು ಟೀಮ್ ಇಂಡಿಯಾದ ಸ್ಪಿನ್ನರ್​ಗಳೇ ಕಬಳಿಸಿದ್ದರು. ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ತಂಡವೊಂದರ ಸ್ಪಿನ್​ ಬೌಲರ್​ಗಳು ಎದುರಾಳಿ ತಂಡದ 10 ವಿಕೆಟ್​ಗಳನ್ನು ಉರುಳಿಸಿರುವುದು ಇದೇ ಮೊದಲು. ಈ ಮೂಲಕ ಟೀಮ್ ಇಂಡಿಯಾದ ಸ್ಪಿನ್ನರ್​ಗಳಾದ ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್ ಹಾಗೂ ರವಿ ಬಿಷ್ಣೋಯ್ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ವಿಶ್ವದ ಯಾವುದೇ ತಂಡದ ಸ್ಪಿನ್ ಬೌಲರ್​ಗಳು ಮಾಡದ ಸಾಧನೆಯನ್ನು ಟೀಮ್ ಇಂಡಿಯಾ ತ್ರಿಮೂರ್ತಿ ಸ್ಪಿನ್ನರ್​ಗಳು ಮಾಡಿದ್ದಾರೆ.

Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ