India Squad: ಏಕೈಕ ಬದಲಾವಣೆ: ಏಷ್ಯಾಕಪ್​ನಲ್ಲಿ ಸೋತ ತಂಡವೇ ಟಿ20 ವಿಶ್ವಕಪ್​ಗೂ ಆಯ್ಕೆ..!

India Squad For T20 World Cup 2022: ಆಯ್ಕೆ ಸಮಿತಿ ಜಸ್​ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ಅವರ ಕಂಬ್ಯಾಕ್​ ಅನ್ನೇ ಹೈಲೈಟ್ ಮಾಡುವ ಮೂಲಕ ಏಷ್ಯಾಕಪ್​ನಲ್ಲಿ ಆಡಿದ 13 ಆಟಗಾರರನ್ನೇ ತಂಡದಲ್ಲಿ ಉಳಿಸಿಕೊಂಡಿರುವುದು ಸ್ಪಷ್ಟ.

India Squad: ಏಕೈಕ ಬದಲಾವಣೆ: ಏಷ್ಯಾಕಪ್​ನಲ್ಲಿ ಸೋತ ತಂಡವೇ ಟಿ20 ವಿಶ್ವಕಪ್​ಗೂ ಆಯ್ಕೆ..!
Team India
Updated By: ಝಾಹಿರ್ ಯೂಸುಫ್

Updated on: Sep 13, 2022 | 11:24 AM

India Squad For T20 World Cup 2022: ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾ 15 ಸದಸ್ಯರ ಬಳಗವನ್ನೇ ಪ್ರಕಟಿಸಿದೆ. ಆದರೆ ಈ ಬಳಗದಲ್ಲಿ ಏಷ್ಯಾಕಪ್ ಆಡಿದ ಬಹುತೇಕ ಆಟಗಾರರು ಕಾಣಿಸಿಕೊಂಡಿದ್ದಾರೆ. ಅಂದರೆ ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಲಾದ ತಂಡದಲ್ಲಿ ಏಷ್ಯಾಕಪ್ ಆಡಿದ 13 ಸದಸ್ಯರು ಸ್ಥಾನ ಪಡೆದಿದ್ದಾರೆ. ಇನ್ನು ಉಳಿದ 2 ಸ್ಥಾನಗಳಲ್ಲಿ ಇಬ್ಬರು ವೇಗಿಗಳು ತಂಡಕ್ಕೆ ಕಂಬ್ಯಾಕ್ ಮಾಡಿದ್ದಾರೆ ಅಷ್ಟೇ. ಅಂದರೆ ಗಾಯಗೊಂಡಿರುವ ರವೀಂದ್ರ ಜಡೇಜಾ ತಂಡದಿಂದ ಹೊರಗುಳಿದಿದ್ದಾರೆ. ಅವರ ಸ್ಥಾನದಲ್ಲಿ ಅಕ್ಷರ್ ಪಟೇಲ್​ಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಅಕ್ಷರ್ ಪಟೇಲ್ ಈ ಹಿಂದೆಯೇ ಏಷ್ಯಾಕಪ್​ ತಂಡದಲ್ಲೂ ಕಾಣಿಸಿಕೊಂಡಿದ್ದರು. ಹೀಗಾಗಿ ಜಡೇಜಾ ಅವರಿಂದ ತೆರವಾಗಿದ್ದ ಸ್ಥಾನದಲ್ಲಿ ಇಲ್ಲಿ ಹರ್ಷಲ್ ಪಟೇಲ್​ ಅವರನ್ನು ಆಯ್ಕೆ ಮಾಡಲಾಗಿದೆ. ಇನ್ನು ಅವೇಶ್ ಖಾನ್ ಸ್ಥಾನದಲ್ಲಿ ಜಸ್​ಪ್ರೀತ್ ಬುಮ್ರಾ ಕಂಬ್ಯಾಕ್ ಮಾಡಿದ್ದಾರೆ.

ಇಲ್ಲಿ ವಿಶೇಷ ಎಂದರೆ ಜಸ್​ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ಅವರ ಕಂಬ್ಯಾಕ್​ ಎಂಬುದೇ ಟೀಮ್ ಇಂಡಿಯಾದಲ್ಲಿ ಕಂಡು ಬಂದ ದೊಡ್ಡ ಬದಲಾವಣೆ. ಇನ್ನು ಏಷ್ಯಾಕಪ್​ನಲ್ಲಿನ ಕಳಪೆ ಪ್ರದರ್ಶನದ ಕಾರಣ ತಂಡದಿಂದ ಹೊರಬಿದ್ದಿದ್ದು ಅವೇಶ್ ಖಾನ್ ಮಾತ್ರ. ಉಳಿದವರೆಲ್ಲರೂ ಟಿ20 ವಿಶ್ವಕಪ್​ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.

ಇದಾಗ್ಯೂ ಬ್ಯಾಟ್ಸ್​ಮನ್​ಗಳ ಪಟ್ಟಿಯಿಂದ ಯಾವುದೇ ಆಟಗಾರನನ್ನು ಕೈ ಬಿಡಲಾಗಿಲ್ಲ. ಅಥವಾ ಮೀಸಲು ಆಟಗಾರರ ಪಟ್ಟಿಗೂ ಸೇರ್ಪಡೆಗೊಳಿಸಲಾಗಿಲ್ಲ. ಇಲ್ಲಿ ಮತ್ತೊಂದು ವಿಶೇಷ ಎಂದರೆ ಮೀಸಲು ಆಟಗಾರರ ಪಟ್ಟಿಗೆ ಹೊಸ ಸೇರ್ಪಡೆ ಮೊಹಮ್ಮದ್ ಶಮಿ. ಏಷ್ಯಾಕಪ್​ನಲ್ಲಿ ಮೂವರನ್ನು ಮೀಸಲು ಆಟಗಾರರನ್ನಾಗಿ ಆಯ್ಕೆ ಮಾಡಿದ್ದರೆ, ಟಿ20 ವಿಶ್ವಕಪ್​ಗೆ ನಾಲ್ವರನ್ನು ಆಯ್ಕೆ ಮಾಡಲಾಗಿದೆ. ಇಲ್ಲಿ ನಾಲ್ಕನೇ ಸ್ಟಾಂಡ್​ಬೈ ಆಟಗಾರನಾಗಿ ಶಮಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಹಾಗೆಯೇ ಏಷ್ಯಾಕಪ್​​ನಲ್ಲಿ ಮೀಸಲು ಆಟಗಾರರ ಪಟ್ಟಿಯಲ್ಲಿದ್ದ ಅಕ್ಷರ್ ಪಟೇಲ್ ಈ ಬಾರಿ ಟೀಮ್ ಇಂಡಿಯಾದ ಖಾಯಂ ಸದಸ್ಯ ಎನಿಸಿಕೊಂಡಿದ್ದಾರೆ. ಇನ್ನು ರವಿ ಬಿಷ್ಣೋಯ್ ಅವರು ಮೀಸಲು ಪಟ್ಟಿಗೆ ಹಿಂಬಡ್ತಿ ಪಡೆದಿದ್ದಾರೆ. ಉಳಿದಂತೆ ದೀಪಕ್ ಚಹರ್ ಹಾಗೂ ಶ್ರೇಯಸ್ ಅಯ್ಯರ್ ಈ ಸಲ ಕೂಡ ಮೀಸಲು ಆಟಗಾರರಾಗಿಯೇ ಉಳಿದಿದ್ದಾರೆ.

ಟೀಮ್ ಇಂಡಿಯಾದ ಈ ಆಯ್ಕೆಯ ಬೆನ್ನಲ್ಲೇ ಇದೀಗ ಹೊಸ ಚರ್ಚೆಗಳು ಶುರುವಾಗಿದೆ. ಅದರಲ್ಲೂ ಏಷ್ಯಾಕಪ್​ನಲ್ಲಿನ ಹೀನಾಯ ಸೋಲಿನ ಹೊರತಾಗಿಯೂ ತಂಡದ ಬದಲಾವಣೆ ಎಂದರೆ ಕೇವಲ ಬೌಲರ್​ಗಳಿಗೆ ಸೀಮಿತವೇ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.  ಹಾಗೆಯೇ ಏಷ್ಯಾಕಪ್​ನಲ್ಲಿ ಕಳಪೆ ಪ್ರದರ್ಶನ ನೀಡಿದ ಆಟಗಾರರಿಗೆ ಈ ಬಾರಿ ಕೂಡ ತಂಡದಲ್ಲಿ ಅವಕಾಶ ಕಲ್ಪಿಸಿರುವುದರ ಬಗ್ಗೆ ಟೀಕೆಗಳು ವ್ಯಕ್ತವಾಗುತ್ತಿದೆ.

ಒಟ್ಟಿನಲ್ಲಿ ಬಿಸಿಸಿಐ ಆಯ್ಕೆ ಸಮಿತಿ ಜಸ್​ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ಅವರ ಕಂಬ್ಯಾಕ್​ ಅನ್ನೇ ಹೈಲೈಟ್ ಮಾಡುವ ಮೂಲಕ ಏಷ್ಯಾಕಪ್​ನಲ್ಲಿ ಆಡಿದ 13 ಆಟಗಾರರನ್ನೇ ತಂಡದಲ್ಲಿ ಉಳಿಸಿಕೊಂಡಿರುವುದು ಸ್ಪಷ್ಟ.

ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾ ಹೀಗಿದೆ:

 ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಮೀಸಲು ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹರ್.

 

ಏಷ್ಯಾಕಪ್​ಗೆ ಆಯ್ಕೆಯಾಗಿದ್ದ ಟೀಮ್ ಇಂಡಿಯಾ ಹೀಗಿದೆ:

ರೋಹಿತ್‌ ಶರ್ಮಾ (ನಾಯಕ), ಕೆ.ಎಲ್‌ ರಾಹುಲ್‌, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ದೀಪಕ್‌ ಹೂಡ, ರಿಷಭ್ ಪಂತ್‌ (ವಿಕೆಟ್‌ಕೀಪರ್‌), ದಿನೇಶ್‌ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್‌ ಪಾಂಡ್ಯ, ಭುವನೇಶ್ವರ್‌ ಕುಮಾರ್‌, ಅರ್ಷದೀಪ್‌ ಸಿಂಗ್‌, ಅವೇಶ್‌ ಖಾನ್‌, ಯುಜ್ವೇಂದ್ರ ಚಹಲ್‌, ಆರ್‌ ಅಶ್ವಿನ್‌, ರವಿ ಬಿಷ್ಣೋಯ್‌, ರವೀಂದ್ರ ಜಡೇಜಾ

ಮೀಸಲು ಆಟಗಾರರು: ದೀಪಕ್‌ ಚಹರ್‌, ಅಕ್ಷರ್‌ ಪಟೇಲ್‌ ಮತ್ತು ಶ್ರೇಯಸ್‌ ಅಯ್ಯರ್‌.