Mohammed Siraj: ಮೊಹಮ್ಮದ್ ಸಿರಾಜ್​ಗೆ ಕೂಡಿಬಂತು ಕಂಕಣ ಭಾಗ್ಯ?: ವಧು ಯಾರು ಗೊತ್ತೇ?

Mohammed Siraj Marriage: 29 ವರ್ಷದ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ ಮೊಹಮ್ಮದ್ ಸಿರಾಜ್ ಮದುವೆಗೆ ಸಂಬಂಧಿಸಿದ ಸುದ್ದಿಯೊಂದು ವೈರಲ್ ಆಗುತ್ತಿದೆ. ಸಿರಾಜ್ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ಸದ್ಯದಲ್ಲೇ ಮದುವೆ ಆಗಲಿದ್ದಾರಂತೆ. ವಧು ಕೂಡ ಹೈದರಾಬಾದ್‌ನವರೇ ಆಗಿದ್ದಾರೆ.

Mohammed Siraj: ಮೊಹಮ್ಮದ್ ಸಿರಾಜ್​ಗೆ ಕೂಡಿಬಂತು ಕಂಕಣ ಭಾಗ್ಯ?: ವಧು ಯಾರು ಗೊತ್ತೇ?
Mohammed Siraj Marriage
Follow us
Vinay Bhat
|

Updated on: Nov 21, 2023 | 3:06 PM

ಭಾರತ ಕ್ರಿಕೆಟ್ ತಂಡದ ಸ್ಟಾರ್ ವೇಗಿ ಮೊಹಮ್ಮದ್ ಸಿರಾಜ್ (Mohammed Siraj) ಅವರಿಗೆ ಈ ಬಾರಿಯ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅಷ್ಟೇನು ಅದೃಷ್ಟ ಕೈಹಿಡಿಯಲಿಲ್ಲ. ಆಡಿದ 11 ಪಂದ್ಯಗಳಲ್ಲಿ 33.50 ಸರಾಸರಿಯಲ್ಲಿ 14 ವಿಕೆಟ್ ಪಡೆದರು. ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೋಡಿ ಮಾಡುವಲ್ಲಿ ವಿಫಲರಾಗಿ ದುಬಾರಿಯಾದರು. ಪಂದ್ಯ ಮುಗಿದ ಬಳಿಕ ವಿಶ್ವಕಪ್ ಎತ್ತಿ ಹಿಡಿಯಲು ಸಾಧ್ಯವಾಗಲಿಲ್ಲ ಎಂಬ ದುಃಖದಲ್ಲಿ ಕಣ್ಣೀರು ಕೂಡ ಇಟ್ಟಿದ್ದರು. ವಿಶ್ವಕಪ್ ಮುಗಿದು ಎರಡು ದಿನವಾಗಿದೆ. ಇದೀಗ ಹೊಸ ಸುದ್ದಿ ಏನೆಂದರೆ, ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ ಹೈದರಾಬಾದ್ ವೇಗಿ ಮೊಹಮ್ಮದ್ ಸಿರಾಜ್ ಮದುವೆಯಾಗಲು ಹೊರಟಿದ್ದಾರಂತೆ.

29 ವರ್ಷದ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ ಸಿರಾಜ್ ಮದುವೆಗೆ ಸಂಬಂಧಿಸಿದ ಸುದ್ದಿಯೊಂದು ವೈರಲ್ ಆಗುತ್ತಿದೆ. ಸಿರಾಜ್ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ಸದ್ಯದಲ್ಲೇ ಮದುವೆ ಆಗಲಿದ್ದಾರಂತೆ. ವಧು ಕೂಡ ಹೈದರಾಬಾದ್‌ನವರೇ ಆಗಿದ್ದಾರೆ. ಈ ವರ್ಷದ ಕೊನೆಯಲ್ಲಿ ಅಥವಾ ಮುಂದಿನ ವರ್ಷದ ಮಧ್ಯದಲ್ಲಿ ಸಿರಾಜ್ ಮದುವೆ ನಡೆಯಲಿದೆ ಎಂದು ವರದಿಯಾಗಿದೆ. ಸಿರಾಜ್ ಮದುವೆಗೆ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಆಗಮಿಸಲಿದ್ದಾರಂತೆ. ಆದರೆ, ಈ ಸುದ್ದಿ ಎಷ್ಟು ಸತ್ಯ ಎಂಬುದು ತಿಳಿದಿಲ್ಲ. ಸಿರಾಜ್ ಕಡೆಯಿಂದಲೇ ಅಧಿಕೃತ ಘೋಷಣೆ ಆಗಬೇಕು.

IND vs AUS, WC Final: ಮುಂಬೈ ತಲುಪಿದ ವಿರಾಟ್ ಕೊಹ್ಲಿ-ರೋಹಿತ್ ಶರ್ಮಾ: ಕ್ಯಾಮೆರಾ ಕಂಡು ಗರಂ ಅನುಷ್ಕಾ

ಇದನ್ನೂ ಓದಿ
Image
ನೀನು ಮಟನ್ ತಿಂದಿದ್ದರಿಂದ ಭಾರತ ಸೋತಿತು ಎಂದ ತಮ್ಮನನ್ನೇ ಕೊಂದ ಅಣ್ಣ
Image
ಕೊನೆಗೂ ಸಿಕ್ತು ಮೋದಿ ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್​ಗೆ ಬಂದ ವಿಡಿಯೋ
Image
ಸೋಲಿನ ನಂತರ ರೋಹಿತ್ ಪತ್ನಿಯ ಸಹೋದರನ ಜೊತೆ ಸಂಬಂಧ ಕೈಬಿಟ್ಟ ಕೊಹ್ಲಿ
Image
ಮುಂದಿನ ಐಸಿಸಿ ಏಕದಿನ ವಿಶ್ವಕಪ್ ಯಾವಾಗ, ಎಲ್ಲಿ ನಡೆಯಲಿದೆ ಗೊತ್ತೇ?

ಹಾಗಂತ ಸಿರಾಜ್ ಮದುವೆ ಬಗ್ಗೆ ಸುದ್ದಿಯಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಕೂಡ ಸಿರಾಜ್ ಸದ್ಯದಲ್ಲೇ ವಿವಾಹವಾಗಲಿದ್ದಾರೆ ಎಂಬ ಸುದ್ದಿ ವೈರಲ್ ಆಗಿತ್ತು. ಅವರು ತಮ್ಮ ಬಾಲ್ಯದ ಗೆಳತಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಹರಿದಾಡಿದ್ದವು. ಈ ಬಗ್ಗೆ ಅವರ ಬಳಿ ಕೇಳಿದಾಗ ಪ್ರತಿಕ್ರಿಯಿಸಲು ಸಿರಾಜ್ ನಿರಾಕರಿಸಿದ್ದರು. ಇದೀಗ ಪುನಃ ಸಿರಾಜ್ ಮದುವೆ ಬಗ್ಗೆ ಸುದ್ದಿ ಹಬ್ಬಿದೆ.

ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡಿ ಬೆಳಕಿಗೆ ಬಂದ ಮೊಹಮ್ಮದ್ ಸಿರಾಜ್, ತಮ್ಮ ಮಾರಕ ವೇಗದಿಂದ ಬೇಗನೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದುಕೊಂಡರು. ಭಾರತ ತಂಡದ ಹಲವು ವಿಜಯಗಳಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದಾರೆ. ಒಂದೇ ಓವರ್​ನಲ್ಲಿ ನಾಲ್ಕು ವಿಕೆಟ್ ಪಡೆದ ಭಾರತದ ಏಕೈಕ ಬೌಲರ್ ಎಂಬ ಅಪರೂಪದ ಹೆಗ್ಗಳಿಕೆಗೂ ಸಿರಾಜ್ ಪಾತ್ರರಾಗಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ