VIDEO: ಸೂರ್ಯಕುಮಾರ್ ಯಾದವ್ ಕಾಲಿಗೆ ಗಂಭೀರ ಗಾಯ: ವಿಡಿಯೋ ವೈರಲ್
Suryakumar Yadav: ಟಿ20 ವಿಶ್ವಕಪ್ನಲ್ಲಿ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾ ಪಾಲಿಗೆ ಅನಿವಾರ್ಯ. ಏಕೆಂದರೆ ಮಧ್ಯಮ ಕ್ರಮಾಂಕದಲ್ಲಿ ಹೊಡಿಬಡಿ ಬ್ಯಾಟಿಂಗ್ ಮೂಲಕ ಸೂರ್ಯ ಅಬ್ಬರಿಸುತ್ತಿದ್ದಾರೆ. ಇದಕ್ಕೆ ಸಾಕ್ಷಿ ಅವರು ಟಿ20 ಕ್ರಿಕೆಟ್ನಲ್ಲಿ ಕೇವಲ 56 ಇನಿಂಗ್ಸ್ಗಳ ಮೂಲಕ 2 ಸಾವಿರ ರನ್ ಪೂರೈಸಿದರು. ಅಷ್ಟೇ ಅಲ್ಲದೆ ಸೌತ್ ಆಫ್ರಿಕಾ ವಿರುದ್ಧ ಟಿ20 ಸರಣಿಯಲ್ಲಿ ಶತಕ ಸಿಡಿಸುವ ಮೂಲಕ ಟೀಮ್ ಇಂಡಿಯಾ ಪರ ಅತೀ ಕಡಿಮೆ ಇನಿಂಗ್ಸ್ಗಳಲ್ಲಿ 4 ಸೆಂಚುರಿ ಸಿಡಿಸಿದ ದಾಖಲೆಯನ್ನೂ ಕೂಡ ಬರೆದಿದ್ದಾರೆ.
ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ (Suryakumar Yadav) ಗಂಭೀರವಾಗಿ ಗಾಯಗೊಂಡಿದ್ದಾರೆ. ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದ ವೇಳೆ ಸೂರ್ಯ ಗಾಯಕ್ಕೆ ತುತ್ತಾಗಿದ್ದರು. ಇದಾಗ್ಯೂ ಈ ಗಾಯ ಗಂಭೀರವಲ್ಲ ಎನ್ನಲಾಗಿತ್ತು. ಆದರೀಗ ಸೂರ್ಯಕುಮಾರ್ ನಡೆದಾಡಲು ಊರುಗೋಲಿನ ನೆರವು ಪಡೆಯುತ್ತಿರುವುದು ವಿಡಿಯೋದಿಂದ ಬಹಿರಂಗವಾಗಿದೆ.
ಸೌತ್ ಆಫ್ರಿಕಾ ವಿರುದ್ಧದ 3ನೇ ಟಿ20 ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಸೂರ್ಯಕುಮಾರ್ ಯಾದವ್ ಅವರ ಪಾದವು ಟ್ವಿಸ್ಟ್ ಆಗಿತ್ತು. ಹೀಗಾಗಿ ಅವರು ಅರ್ಧದಲ್ಲೇ ಮೈದಾನ ತೊರೆದಿದ್ದರು. ಆ ಬಳಿಕ ಗಾಯದ ಬಗ್ಗೆ ಹೆಚ್ಚಿನ ಮಾಹಿತಿ ಹೊರಬಿದ್ದಿರಲಿಲ್ಲ.
ಇದೀಗ ಗಾಯವು ಗಂಭೀರವಾಗಿರುವ ಕಾರಣ ಸೂರ್ಯಕುಮಾರ್ ಯಾದವ್ ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಅಷ್ಟೇ ಅಲ್ಲದೆ ಐಪಿಎಲ್ಗೂ ಮುನ್ನ ಅವರು ಯಾವುದೇ ಸ್ಪರ್ಧಾತ್ಮಕ ಕ್ರಿಕೆಟ್ ಆಡುವುದಿಲ್ಲ ಎಂದು ತಿಳಿದು ಬಂದಿದೆ.
ಒಂದು ವೇಳೆ ಅವರು ಐಪಿಎಲ್ ಚೇತರಿಸಿಕೊಳ್ಳದಿದ್ದರೆ ಟಿ20 ವಿಶ್ವಕಪ್ನಿಂದಲೂ ಹೊರಬೀಳಲಿದ್ದಾರೆ. ಏಕೆಂದರೆ ಐಪಿಎಲ್ ಮುಕ್ತಾಯದ ಬೆನ್ನಲ್ಲೇ ಜೂನ್ 4 ರಿಂದ ಟಿ20 ವಿಶ್ವಕಪ್ ಶುರುವಾಗಲಿದೆ. ಹೀಗಾಗಿ ಮುಂದಿನ 2 ತಿಂಗಳಲ್ಲಿ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಬೇಕಿದೆ.
View this post on Instagram
ಇತ್ತ ಎಡಗಾಲಿಗೆ ವಾಕಿಂಗ್ ಬೂಟ್ ಧರಿಸಿ, ಊರುಗೋಲಿನ ನೆರವಿನೊಂದಿಗೆ ನಡೆದಾಡುತ್ತಿರುವ ವಿಡಿಯೋವನ್ನು ಸೂರ್ಯಕುಮಾರ್ ಯಾದವ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ನೋಡಿ ಇದೀಗ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದು, ಇದಾಗ್ಯೂ ಐಪಿಎಲ್ ವೇಳೆ ಸಂಪೂರ್ಣವಾಗಿ ಚೇತರಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ ಟೀಮ್ ಇಂಡಿಯಾದ 360 ಡಿಗ್ರಿ ಖ್ಯಾತಿಯ ಸೂರ್ಯಕುಮಾರ್ ಯಾದವ್.
ಇದನ್ನೂ ಓದಿ: Suryakumar Yadav: ದಾಖಲೆಯ ಶತಕ ಸಿಡಿಸಿದ ಸೂರ್ಯಕುಮಾರ್ ಯಾದವ್
ಟೀಮ್ ಇಂಡಿಯಾಗೆ ಸ್ಕೈ ಅನಿವಾರ್ಯ:
ಟಿ20 ವಿಶ್ವಕಪ್ನಲ್ಲಿ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾ ಪಾಲಿಗೆ ಅನಿವಾರ್ಯ. ಏಕೆಂದರೆ ಮಧ್ಯಮ ಕ್ರಮಾಂಕದಲ್ಲಿ ಹೊಡಿಬಡಿ ಬ್ಯಾಟಿಂಗ್ ಮೂಲಕ ಸೂರ್ಯ ಅಬ್ಬರಿಸುತ್ತಿದ್ದಾರೆ. ಇದಕ್ಕೆ ಸಾಕ್ಷಿ ಅವರು ಟಿ20 ಕ್ರಿಕೆಟ್ನಲ್ಲಿ ಕೇವಲ 56 ಇನಿಂಗ್ಸ್ಗಳ ಮೂಲಕ 2 ಸಾವಿರ ರನ್ ಪೂರೈಸಿದರು. ಅಷ್ಟೇ ಅಲ್ಲದೆ ಸೌತ್ ಆಫ್ರಿಕಾ ವಿರುದ್ಧ ಟಿ20 ಸರಣಿಯಲ್ಲಿ ಶತಕ ಸಿಡಿಸುವ ಮೂಲಕ ಟೀಮ್ ಇಂಡಿಯಾ ಪರ ಅತೀ ಕಡಿಮೆ ಇನಿಂಗ್ಸ್ಗಳಲ್ಲಿ 4 ಸೆಂಚುರಿ ಸಿಡಿಸಿದ ದಾಖಲೆಯನ್ನೂ ಕೂಡ ಬರೆದಿದ್ದಾರೆ. ಹೀಗಾಗಿ ಮುಂಬರುವ ಟಿ20 ವಿಶ್ವಕಪ್ನಲ್ಲಿ ಭಾರತದ ಗೆಲುವಿನಲ್ಲಿ ಸೂರ್ಯಕುಮಾರ್ ಯಾದವ್ ಪಾತ್ರ ಬಹಳ ಮುಖ್ಯವಾಗಿರಲಿದೆ.