Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasprit bumrah: ಈ ಕಾರಣಕ್ಕಾಗಿ ಬುಮ್ರಾಗೆ ಟೆಸ್ಟ್ ನಾಯಕತ್ವ ಕೊಡಬೇಡಿ; ಟೀಂ ಇಂಡಿಯಾ ಮಾಜಿ ಬೌಲಿಂಗ್ ಕೋಚ್

Jasprit bumrah: ಬುಮ್ರಾ ವೇಗದ ಬೌಲರ್. ವೇಗದ ಬೌಲರ್‌ಗಳಿಗೆ ವಿಶ್ರಾಂತಿ ಬೇಕು, ಹೀಗಾಗಿ ಬುಮ್ರಾಗೆ ನಾಯಕತ್ವ ವಹಿಸುವುದು ಕಷ್ಟ ಎಂದಿದ್ದಾರೆ.

Jasprit bumrah: ಈ ಕಾರಣಕ್ಕಾಗಿ ಬುಮ್ರಾಗೆ ಟೆಸ್ಟ್ ನಾಯಕತ್ವ ಕೊಡಬೇಡಿ; ಟೀಂ ಇಂಡಿಯಾ ಮಾಜಿ ಬೌಲಿಂಗ್ ಕೋಚ್
ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಜಸ್ಪ್ರೀತ್ ಬುಮ್ರಾ ಭಾರತ ತಂಡದ ಟಾಪ್ 10ರೊಳಗೆ ಸ್ಥಾನ ಗಳಿಸಿದ್ದಾರೆ. ಬೆಂಗಳೂರು ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್ ಪಡೆದಿದ್ದ ಬುಮ್ರಾ ನಾಲ್ಕನೇ ಸ್ಥಾನಕ್ಕೆ ತಲುಪಿದ್ದಾರೆ.
Follow us
TV9 Web
| Updated By: ಪೃಥ್ವಿಶಂಕರ

Updated on: Jan 30, 2022 | 5:40 PM

ಎರಡು ವಾರಗಳ ಹಿಂದೆ ವಿರಾಟ್ ಕೊಹ್ಲಿ ಏಕಾಏಕಿ ಟೆಸ್ಟ್ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ವಿರಾಟ್ ಕೊಹ್ಲಿ ಹಠಾತ್ ನಿರ್ಗಮನದ ನಂತರ, ಭಾರತ ಟೆಸ್ಟ್ ತಂಡದ ನಾಯಕ ಯಾರು? ಎಂಬುದರ ಬಗ್ಗೆ ಸಾಕಷ್ಟು ವಾದ-ವಿವಾದಗಳು ನಡೆಯುತ್ತಿವೆ. ರೋಹಿತ್ ಶರ್ಮಾದಿಂದ ಜಸ್ಪ್ರೀತ್ ಬುಮ್ರಾವರೆಗಿನ ವಿಭಿನ್ನ ಹೆಸರುಗಳು ಟೆಸ್ಟ್ ತಂಡದ ನಾಯಕತ್ವದ ಓಟದಲ್ಲಿವೆ. ಜಸ್ಪ್ರೀತ್ ಬುಮ್ರಾ (jasprit bumrah) ಉಪನಾಯಕ ಕೆಎಲ್ ರಾಹುಲ್ ಟೆಸ್ಟ್ ತಂಡದ ನಾಯಕತ್ವದ ಆಸೆಯನ್ನು ಮರೆಮಾಚಿಲ್ಲ. ಹಾಗಾದರೆ ಟೆಸ್ಟ್ ತಂಡದ ನಾಯಕ ಯಾರಾಗಲಿದ್ದಾರೆ? ಈ ಬಗ್ಗೆ ಸಾಕಷ್ಟು ಕುತೂಹಲ ಮೂಡಿದೆ. ನಿಯಮಿತ ಏಕದಿನ ಹಾಗೂ ಟಿ20 ನಾಯಕರಾಗಿ ರೋಹಿತ್ ಶರ್ಮಾ ಸದ್ಯ ಮುನ್ನಡೆಸಲ್ಲಿದ್ದಾರೆ. ಮಂಡಿರಜ್ಜು ಗಾಯದಿಂದಾಗಿ ರೋಹಿತ್ ದಕ್ಷಿಣ ಆಫ್ರಿಕಾದಲ್ಲಿ ನಡೆದ ಟೆಸ್ಟ್ ಮತ್ತು ಏಕದಿನ ಸರಣಿಯಿಂದ ಹೊರಗುಳಿದಿದ್ದರು. ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ನಾಯಕತ್ವದ ಸಾಮರ್ಥ್ಯವನ್ನು ಸಾಬೀತುಪಡಿಸುವ ಅವಕಾಶ ಸಿಕ್ಕಿದೆ.

ಬುಮ್ರಾ ಒಬ್ಬ ನಾಯಕನಂತೆ ಯೋಚಿಸುತ್ತಾರೆ ರೋಹಿತ್ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ನಾಯಕತ್ವ ವಹಿಸಿಕೊಂಡಿದ್ದರು. ಆದರೆ ಹೆಚ್ಚು ಪ್ರಭಾವ ಬೀರಲಾಗಲಿಲ್ಲ. ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರನ್ನು ಟೆಸ್ಟ್ ತಂಡದ ನಾಯಕನ ಸ್ಥಾನಕ್ಕೆ ಹೇಳಲಾಗುತ್ತಿದೆ. ಈ ಬಗ್ಗೆ ಭಾರತದ ಮಾಜಿ ಬೌಲಿಂಗ್ ಕೋಚ್ ಭರತ್ ಅರುಣ್ ಅಭಿಪ್ರಾಯ ವ್ಯಕ್ತಪಡಿಸಿದ್ದು ಜಸ್ಪ್ರೀತ್ ಬುಮ್ರಾ ನಾಯಕನಂತೆ ಯೋಚಿಸುತ್ತಾನೆ. ಆ ಸಾಮರ್ಥ್ಯ ಅವನಲ್ಲಿದೆ. ಆದರೆ ಅವರಿಗೆ ನಾಯಕತ್ವ ಸಿಗುವುದು ಕಷ್ಟ. ಬುಮ್ರಾ ಅವರು ನಾಯಕತ್ವವನ್ನು ಪಡೆದ ನಂತರ ಎಲ್ಲಾ ಮೂರು ಸ್ವರೂಪಗಳಿಗೆ ಲಭ್ಯವಿರಬೇಕು, ಅದು ಅವರಿಗೆ ಸಾಧ್ಯವೇ? ಈ ಪ್ರಶ್ನೆಯನ್ನು ಭರತ್ ಅರುಣ್ ಎತ್ತಿದ್ದಾರೆ. ಬುಮ್ರಾ ವೇಗದ ಬೌಲರ್. ವೇಗದ ಬೌಲರ್‌ಗಳಿಗೆ ವಿಶ್ರಾಂತಿ ಬೇಕು, ಹೀಗಾಗಿ ಬುಮ್ರಾಗೆ ನಾಯಕತ್ವ ವಹಿಸುವುದು ಕಷ್ಟ ಎಂದಿದ್ದಾರೆ. ಸರಣಿಯಲ್ಲಿ ಬುಮ್ರಾಗೆ ವಿಶ್ರಾಂತಿಯ ಅಗತ್ಯವಿದೆ, ಆಗ ಮಾತ್ರ ಅವರು ಫಿಟ್ ಆಗಿರಲು ಸಾಧ್ಯ ಎಂದು ಭರತ್ ಅರುಣ್ ಹೇಳಿದ್ದಾರೆ.

ಈ ಮೂವರಿಗೆ ನಾಯಕತ್ವ ವಹಿಸುವ ಸಾಮರ್ಥ್ಯ ದಕ್ಷಿಣ ಆಫ್ರಿಕಾದಲ್ಲಿ ನಡೆದ ಏಕದಿನ ಸರಣಿಗೆ ಜಸ್ಪ್ರೀತ್ ಬುಮ್ರಾ ಭಾರತದ ಉಪನಾಯಕರಾಗಿದ್ದರು. ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ ವಿರಾಟ್ ಕೊಹ್ಲಿ ಆಡಲಿಲ್ಲ, ಅವರ ಸ್ಥಾನಕ್ಕೆ ರಾಹುಲ್ ನಾಯಕ ಮತ್ತು ಬುಮ್ರಾ ಅವರನ್ನು ಉಪನಾಯಕರನ್ನಾಗಿ ನೇಮಿಸಲಾಯಿತು. ಟೀಂ ಇಂಡಿಯಾದ ಮಾಜಿ ಬೌಲಿಂಗ್ ಕೋಚ್ ಭರತ್ ಅರುಣ್ ಪ್ರಕಾರ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್ ಮತ್ತು ರಿಷಬ್ ಪಂತ್ ತಂಡವನ್ನು ಮುನ್ನಡೆಸುವ ಸಾಮರ್ಥ್ಯ ಹೊಂದಿದ್ದಾರೆ. ಬ್ಯಾಟ್ಸ್‌ಮನ್‌ನನ್ನು ನಾಯಕನನ್ನಾಗಿ ಮಾಡಬಹುದು, ಏಕೆಂದರೆ ಅವನು ವಿರಾಮವಿಲ್ಲದೆ ನಿರಂತರ ಸರಣಿಯನ್ನು ಆಡಬಹುದು ಎಂದಿದ್ದಾರೆ.

ಇದನ್ನೂ ಓದಿ:IND vs SA: ಬರೋಬ್ಬರಿ ಎರಡೂವರೆ ವರ್ಷ, 925 ಎಸೆತಗಳ ನಂತರ ವಿಕೆಟ್ ಪಡೆದ ಜಸ್ಪ್ರೀತ್ ಬುಮ್ರಾ..!

IND vs SA: ಟೀಂ ಇಂಡಿಯಾದ ಟೆಸ್ಟ್ ನಾಯಕತ್ವ ವಹಿಸಿಕೊಳ್ಳಲು ನಾನು ಸಿದ್ಧ ಎಂದ ಬುಮ್ರಾ! ಬಿಸಿಸಿಐ ನಿಲುವೇನು?

ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು