AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾದಲ್ಲಿ ಟೀಮ್ ಇಂಡಿಯಾ vs ಭಾರತ ನಡುವೆ ಪಂದ್ಯ

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಪರ್ತ್​ನಲ್ಲಿ ನಡೆದರೆ, 2ನೇ ಪಂದ್ಯಕ್ಕೆ ಅಡಿಲೇಡ್ ಆತಿಥ್ಯವಹಿಸಲಿದೆ. ವಿಶೇಷ ಎಂದರೆ ಈ ಸರಣಿಯ ದ್ವಿತೀಯ ಟೆಸ್ಟ್ ಪಂದ್ಯವು ಹೊನಲು ಬೆಳಕಿನಲ್ಲಿ ನಡೆಯಲಿದೆ. ಅಂದರೆ ಪಿಂಕ್ ಬಾಲ್ ಟೆಸ್ಟ್ ಪಂದ್ಯವಾಗಿರಲಿದೆ.

ಆಸ್ಟ್ರೇಲಿಯಾದಲ್ಲಿ ಟೀಮ್ ಇಂಡಿಯಾ vs ಭಾರತ ನಡುವೆ ಪಂದ್ಯ
Team India
ಝಾಹಿರ್ ಯೂಸುಫ್
|

Updated on: Oct 14, 2024 | 7:53 AM

Share

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾ ಹಾಗೂ ಭಾರತ ಎ ತಂಡಗಳು ಮುಖಾಮುಖಿಯಾಗಲಿದೆ. ನವೆಂಬರ್ 15 ರಿಂದ 17 ರವರೆಗೆ ನಡೆಯಲಿರುವ ಈ ಅಭ್ಯಾಸ ಪಂದ್ಯಕ್ಕಾಗಿ ವೆಸ್ಟರ್ನ್ ಆಸ್ಟ್ರೇಲಿಯನ್ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇಲ್ಲಿ ಭಾರತ ಟೆಸ್ಟ್ ತಂಡವನ್ನು ರೋಹಿತ್ ಶರ್ಮಾ ಅಥವಾ ಜಸ್​ಪ್ರೀತ್ ಬುಮ್ರಾ ಮುನ್ನಡೆಸುವ ಸಾಧ್ಯತೆಯಿದೆ. ವೈಯುಕ್ತಿಕ ಕಾರಣಗಳಿಂದಾಗಿ ಹಿಟ್​ಮ್ಯಾನ್ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗುವ ಸಾಧ್ಯತೆಯಿದ್ದು. ಹೀಗಾಗಿ ಹಂಗಾಮಿ ನಾಯಕರಾಗಿ ಬುಮ್ರಾ ಕಾಣಿಸಿಕೊಳ್ಳಬಹುದು.

ಅತ್ತ ಭಾರತ ಎ ತಂಡದ ನಾಯಕರಾಗಿ ರುತುರಾಜ್ ಗಾಯಕ್ವಾಡ್ ಕಾಣಿಸಿಕೊಳ್ಳಲಿದ್ದಾರೆ. ಇವರೊಂದಿಗೆ ದೇಶೀಯ ಅಂಗಳದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರು ಕೂಡ ಭಾರತ ಎ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ.

ಅದರಂತೆ ನವೆಂಬರ್ 15 ರಿಂದ ಭಾರತ ಮತ್ತು ಭಾರತ ಎ ತಂಡಗಳು ಆಸ್ಟ್ರೇಲಿಯಾದಲ್ಲಿ ಅಭ್ಯಾಸ ಪಂದ್ಯವಾಡಲಿದ್ದು, ಈ ಮೂಲಕ ಪ್ರತಿಷ್ಠಿತ ಟೆಸ್ಟ್ ಸರಣಿಗೆ ಸಿದ್ಧತೆ ಮಾಡಿಕೊಳ್ಳಲು ಟೀಮ್ ಇಂಡಿಯಾ ಪ್ಲ್ಯಾನ್ ರೂಪಿಸಿದೆ.

ಇದನ್ನೂ ಓದಿ: ಸಂಜು ಸ್ಯಾಮ್ಸನ್​​ ಸುಂಟರಗಾಳಿಗೆ ಹಳೆಯ ದಾಖಲೆಗಳು ಧೂಳೀಪಟ

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಯಾವಾಗ ಶುರು?

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಪರ್ತ್​ನಲ್ಲಿ ನಡೆದರೆ, ಎರಡನೇ ಪಂದ್ಯವು ಅಡಿಲೇಡ್​ನಲ್ಲಿ ಜರುಗಲಿದೆ.

ಹಾಗೆಯೇ ಮೂರನೇ ಪಂದ್ಯಕ್ಕೆ ಬ್ರಿಸ್ಬೇನ್​ ಆತಿಥ್ಯವಹಿಸಿದರೆ, ನಾಲ್ಕನೇ ಪಂದ್ಯವು ಮೆಲ್ಬೋರ್ನ್​ನಲ್ಲಿ ನಡೆಯಲಿದೆ. ಹಾಗೆಯೇ ಕೊನೆಯ ಪಂದ್ಯವು ಸಿಡ್ನಿಯಲ್ಲಿ ಜರುಗಲಿದೆ. ಈ ಸರಣಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ…

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ವೇಳಾಪಟ್ಟಿ:

ತಂಡಗಳು ದಿನಾಂಕ ಸಮಯ ಸ್ಥಳ
1ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ ಶುಕ್ರವಾರ, 22 ನವೆಂಬರ್ 2024 7:50 AM ಪರ್ತ್
2ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ (D/N) ಶುಕ್ರವಾರ, 6 ಡಿಸೆಂಬರ್ 2024 9:30 AM ಅಡಿಲೇಡ್
3ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ ಶನಿವಾರ, 14 ಡಿಸೆಂಬರ್ 2024 5:50 AM ಬ್ರಿಸ್ಬೇನ್
4ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ ಗುರುವಾರ, 26 ಡಿಸೆಂಬರ್ 2024 5 AM ಮೆಲ್ಬೋರ್ನ್
5ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ ಶುಕ್ರವಾರ, 3 ಜನವರಿ 2025 5 AM ಸಿಡ್ನಿ

ಪಿಂಕ್ ಬಾಲ್ ಟೆಸ್ಟ್:

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಪಿಂಕ್ ಬಾಲ್ ಟೆಸ್ಟ್ ಆಡಲಿದೆ. ಅಂದರೆ ಅಡಿಲೇಡ್​ನಲ್ಲಿ ನಡೆಯಲಿರುವ ಈ ಸರಣಿಯ ದ್ವಿತೀಯ ಟೆಸ್ಟ್ ಪಂದ್ಯವು ಹೊನಲು ಬೆಳಕಿನಲ್ಲಿ ಜರುಗಲಿದೆ. ಹೀಗಾಗಿ ಈ ಮ್ಯಾಚ್​ನಲ್ಲಿ ಉಭಯ ತಂಡಗಳಿಂದ ರೋಚಕ ಪೈಪೋಟಿ ನಿರೀಕ್ಷಿಸಬಹುದು.

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ