IND vs NZ 3rd T20I: ಇಂದು ಭಾರತ-ನ್ಯೂಜಿಲೆಂಡ್ ಮೂರನೇ ಟಿ20: ಗೆಲ್ಲಲೇ ಬೇಕಾದ ಒತ್ತಡದಲ್ಲಿ ಕಿವೀಸ್ ಪಡೆ

India vs New Zealand: ಇಂದು ನೆಪಯರ್​ನ ಮಕ್ಲೆನ್ ಪಾರ್ಕ್​​ನಲ್ಲಿ ನಡೆಯಲಿರುವ ಭಾರತ-ನ್ಯೂಜಿಲೆಂಡ್ ನಡುವಣ ಕೊನೆಯ ಮೂರನೇ ಟಿ20 ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ. ಇದರಲ್ಲಿ ಭಾರತ ಗೆದ್ದರೆ ಸರಣಿ ವಶಪಡಿಸಿಕೊಂಡ ಸಾಧನೆ ಮಾಡಲಿದೆ.

IND vs NZ 3rd T20I: ಇಂದು ಭಾರತ-ನ್ಯೂಜಿಲೆಂಡ್ ಮೂರನೇ ಟಿ20: ಗೆಲ್ಲಲೇ ಬೇಕಾದ ಒತ್ತಡದಲ್ಲಿ ಕಿವೀಸ್ ಪಡೆ
IND vs NZ 3rd T20I
Follow us
TV9 Web
| Updated By: Vinay Bhat

Updated on:Nov 22, 2022 | 7:42 AM

ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಣ ಟಿ20 ಸರಣಿ ರೋಚಕ ಘಟ್ಟದಲ್ಲಿದೆ. ಮೂರು ಪಂದ್ಯಗಳ ಟಿ20 ಸರಣಿ ಪೈಕಿ ಮೊದಲ ಮ್ಯಾಚ್ ಮಳೆಗೆ ಆಹುತಿಯಾಯಿತು. ಭಾನುವಾರ ನಡೆದ ದ್ವಿತೀಯ ಪಂದ್ಯದಲ್ಲಿ ಟೀಮ್ ಇಂಡಿಯಾ 65 ರನ್​ಗಳ ಭರ್ಜರಿ ಗೆಲುವು ಸಾಧಿಸಿ 1-0 ಮುನ್ನಡೆ ಪಡೆದುಕೊಂಡಿದೆ. ಹೀಗಾಗಿ ಇಂದು ನೆಪಯರ್​ನ ಮಕ್ಲೆನ್ ಪಾರ್ಕ್​​ನಲ್ಲಿ ನಡೆಯಲಿರುವ ಕೊನೆಯ ಮೂರನೇ ಟಿ20 ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ. ಇದರಲ್ಲಿ ಭಾರತ ಗೆದ್ದರೆ ಸರಣಿ ವಶಪಡಿಸಿಕೊಂಡ ಸಾಧನೆ ಮಾಡಲಿದೆ. ನ್ಯೂಜಿಲೆಂಡ್ ಗೆದ್ದರೆ ಸರಣಿ ಸಮಬಲವಾಗಲಿದೆ. ಎಲ್ಲಾದರು ಮಳೆ ಬಂದು ಪಂದ್ಯ ರದ್ದಾದರೂ ಹಾರ್ದಿಕ್ ಪಾಂಡ್ಯ (Hardik Pandya) ಪಡೆಗೆ ಟ್ರೋಫಿ ಒಲಿಯಲಿದೆ.

ಭಾರತ ತಂಡ ಬ್ಯಾಟಿಂಗ್ – ಬೌಲಿಂಗ್​ನಲ್ಲಿ ಭರ್ಜರಿ ಫಾರ್ಮ್​ನಲ್ಲಿದೆ. ಸೂರ್ಯಕುಮಾರ್ ಯಾದವ್ ಹಾಗೂ ಇಶಾನ್ ಕಿಶನ್ ಕಳೆದ ಪಂದ್ಯದಲ್ಲಿ ತಂಡಕ್ಕೆ ಆಸರೆಯಾಗಿದ್ದರು. ಅದರಲ್ಲೂ ಸೂರ್ಯಕುಮಾರ್ ಕೇವಲ 51 ಎಸೆತಗಳಲ್ಲಿ ಬರೋಬ್ಬರಿ 11 ಫೋರ್ ಹಾಗೂ 7 ಮನಮೋಹಕ ಸಿಕ್ಸರ್ ಸಿಡಿಸಿ ಅಜೇಯ 111 ರನ್ ಚಚ್ಚಿದರು. ಇಂದುಕೂಡ ಸೂರ್ಯ ಬ್ಯಾಟ್​ನಿಂದ ಇದೇರೀತಿಯ ಆಟ ನಿರೀಕ್ಷಿಸಲಾಗಿದೆ. ಓಪನರ್ ಆಗಿ ಬಂದ ರಿಷಭ್ ಪಂತ್ ವೈಫಲ್ಯ ಅನುಭವಿಸಿದ್ದು, ಶುಭ್ಮನ್ ಗಿಲ್ ಪದಾರ್ಪಣೆ ಮಾಡುತ್ತಾರ ನೋಡಬೇಕಿದೆ.

ಶ್ರೇಯಸ್ ಅಯ್ಯರ್, ನಾಯಕ ಹಾರ್ದಿಕ್ ಪಾಂಡ್ಯ, ದೀಪಕ್ ಹೂಡ್ ಬ್ಯಾಟಿಂಗ್​ನಲ್ಲಿ ಇನ್ನಷ್ಟು ಮಿಂಚಬೇಕಿದೆ. ಭುವನೇಶ್ವರ್‌ ಕುಮಾರ್‌ ಮತ್ತು ಅರ್ಷದೀಪ್‌ ಸಿಂಗ್‌ ಹೊಸ ಚೆಂಡಿನೊಂದಿಗೆ ಉತ್ತಮ ದಾಳಿ ನಡೆಸುತ್ತಿದ್ದಾರೆ. ಮೊಹಮ್ಮದ್‌ ಸಿರಾಜ್‌ ಇವರಿಗೆ ಸಾಥ್ ನೀಡಬೇಕಷ್ಟೆ. ಟಿ20 ವಿಶ್ವಕಪ್​ನಲ್ಲಿ ಒಂದೂ ಪಂದ್ಯವನ್ನು ಆಡದ ಯುಜ್ವೇಂದ್ರ ಚಹಲ್ ಮೊದಲ ಪಂದ್ಯದಲ್ಲಿ ಕಠಿಣ ಬೌಲಿಂಗ್ ಮಾಡಿದ್ದರು. ವಾಷಿಂಗ್ಟನ್ ಸುಂದರ್ ಕಡೆಯಿಂದ ಕೂಡ ಇದೇರೀತಿಯ ಬೌಲಿಂಗ್ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ
Image
FIFA ವಿಶ್ವಕಪ್ ಫುಟ್‌ಬಾಲ್ ಪಂದ್ಯ ವರದಿ ಮಾಡುತ್ತಿದ್ದಾಗ ಹ್ಯಾಂಡ್ ಬ್ಯಾಗ್ ಕಳವು; ದೂರು ನೀಡಿದಾಗ ಕತಾರ್ ಪೊಲೀಸರ ಪ್ರತಿಕ್ರಿಯೆ ಕೇಳಿ ದಂಗಾದ ಪತ್ರಕರ್ತೆ
Image
FIFA World Cup ಕತಾರ್​​ನಲ್ಲಿ ಧಾರ್ಮಿಕ ಪ್ರವಚನ ನೀಡಲು ವಿವಾದಿತ ಇಸ್ಲಾಂ ಧರ್ಮ ಬೋಧಕ ಜಾಕಿರ್ ನಾಯಕ್​​ಗೆ ಆಹ್ವಾನ
Image
N Jagadeesan: ವಿಜಯ್ ಹಜಾರೆಯಲ್ಲಿ ಎನ್. ಜಗದೀಶನ್ ವಿಶ್ವದಾಖಲೆ: ರೋಹಿತ್ ಶರ್ಮಾ 264 ರನ್ ದಾಖಲೆ ಪುಡಿ ಪುಡಿ
Image
FIFA World Cup: ಫಿಫಾ ವಿಶ್ವಕಪ್​ನಲ್ಲಿಂದು ಮೂರು ಪಂದ್ಯ: ಭಾರತದಲ್ಲಿ ಎಷ್ಟು ಗಂಟೆಗೆ?, ಯಾವುದರಲ್ಲಿ ನೇರಪ್ರಸಾರ?

ಇತ್ತ ನಾಯಕ ಕೇನ್ ವಿಲಿಯಮ್ಸನ್ ಅವರೇ ತೃತೀಯ ಟಿ20 ಪಂದ್ಯಕ್ಕೆ ಅಲಭ್ಯರಾಗಿರುವುದು ಕಿವೀಸ್ ಪಡೆಗೆ ದೊಡ್ಡ ಹಿನ್ನಡೆ. ಪೂರ್ವ ನಿಯೋಜಿತ ವೈದ್ಯಕೀಯ ತಪಾಸಣೆ ಇರುವ ಕಾರಣ ತೃತೀಯ ಟಿ20 ಯಲ್ಲಿ ಕೇನ್ ಕಣಕ್ಕಿಳಿಯುತ್ತಿಲ್ಲ ಎಂದು ಸೋಮವಾರ ನ್ಯೂಜಿಲೆಂಡ್ ಕ್ರಿಕೆಟ್ (NZC) ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಇವರ ಬದಲು ಆಕ್ಲೆಂಡ್ ಏಸಸ್ ಬ್ಯಾಟ್ಸ್‌ಮನ್ ಮಾರ್ಕ್ ಚಾಪ್‌ಮನ್ ತಂಡವನ್ನು ಸೇರಿಕೊಳ್ಳಲಿದ್ದಾರೆ. ಏಕದಿನ ಪಂದ್ಯ ಆರಂಭವಾಗುವ ಹೊತ್ತಿಗೆ ವಿಲಿಯಮ್ಸನ್ ತಂಡವನ್ನು ಸೇರಿಕೊಳ್ಳಲಿದ್ದಾರಂತೆ.

ಕೇನ್ ಅಲಭ್ಯತೆಯಲ್ಲಿ ನ್ಯೂಜಿಲೆಂಡ್ ತಂಡವನ್ನು ಮೂರನೇ ಟಿ20 ಪಂದ್ಯದಲ್ಲಿ ಟಿಮ್ ಸೌಥೀ ನಾಯಕನಾಗಿ ಮುನ್ನಡೆಸುತ್ತಿದ್ದಾರೆ. ಮಾರ್ಟಿನ್ ಗಪ್ಟಿಲ್ ಮತ್ತು ಸ್ಟಾರ್ ಬೌಲರ್ ಟ್ರೆಂಟ್ ಬೌಲ್ಟ್ ಅನುಪಸ್ಥಿತಿ ಎದ್ದು ಕಾಣುತ್ತಿದೆ. ಕಳೆದ ಪಂದ್ಯದಲ್ಲಿ ಬ್ಯಾಟರ್​ಗಳು ಸಂಪೂರ್ಣ ವೈಫಲ್ಯ ಅನುಭವಿಸಿದ್ದರು. ಇಂದು ಗೆಲ್ಲಲೇ ಬೇಕಾದ ಪಂದ್ಯ ಆಗಿರುವುದರಿಂದ ಬ್ಯಾಟಿಂಗ್-ಬೌಲಿಂಗ್ ಎರಡೂ ವಿಭಾಗಗಳ ಮೇಲೆ ಒತ್ತಡವಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಪಂದ್ಯ ಮಧ್ಯಾಹ್ನ 12 ಗಂಟೆಗೆ ಆರಂಭವಾಗಲಿದೆ. ಬೆಳಗ್ಗೆ 11.30ಕ್ಕೆ ಟಾಸ್ ನಡೆಯಲಿದೆ. ನೇರ ಪ್ರಸಾರವು ಡಿಡಿ ಸ್ಪೋರ್ಟ್ಸ್‌ನಲ್ಲಿ ಮಾತ್ರ ಇರುತ್ತದೆ. ಲೈವ್ ಸ್ಟ್ರೀಮಿಂಗ್ ಅಮೆಜಾನ್ ಪ್ರೈಮ್‌ನಲ್ಲಿರಲಿದೆ.

ಭಾರತ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರಿಷಬ್ ಪಂತ್ (ಉಪನಾಯಕ/ ವಿಕೆಟ್‌ಕೀಪರ್‌), ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್‌), ವಾಷಿಂಗ್ಟನ್‌ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್.

ನ್ಯೂಜಿಲೆಂಡ್ ತಂಡ: ಟಿಮ್ ಸೌಥೀ (ನಾಯಕ), ಮಾರ್ಕ್ ಚಾಪ್‌ಮನ್, ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಲಾಕಿ ಫರ್ಗುಸನ್, ಡ್ಯಾರಿಲ್ ಮಿಚೆಲ್, ಆಡಮ್ ಮಿಲ್ನೆ, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಬ್ಲೇರ್ ಟಿಕ್ನರ್.

Published On - 7:42 am, Tue, 22 November 22

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್