
ಶ್ರೀಲಂಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಟೀಂ ಇಂಡಿಯಾ (India vs Sri Lanka), ಐದಕ್ಕೆ ಐದೂ ಪಂದ್ಯಗಳನ್ನು ಗೆದ್ದು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ಅಂದರೆ ಹರ್ಮನ್‌ಪ್ರೀತ್ ಕೌರ್ (Harmanpreet Kaur) ಪಡೆ ಐದು ಪಂದ್ಯಗಳ ಟಿ20ಐ ಸರಣಿಯನ್ನು 5-0 ಅಂತರದಿಂದ ಗೆದ್ದುಕೊಂಡಿದೆ. ತಿರುವನಂತಪುರದಲ್ಲಿ ನಡೆದ ಐದನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ ಏಳು ವಿಕೆಟ್‌ಗೆ 175 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಗುರಿ ಬೆನ್ನಟ್ಟಿದ ಶ್ರೀಲಂಕಾ ನಿಗದಿತ 20 ಓವರ್‌ಗಳಲ್ಲಿ ಏಳು ವಿಕೆಟ್‌ಗೆ 160 ರನ್ ಗಳಿಸಲಷ್ಟೇ ಶಕ್ತವಾಗಿ 15 ರನ್‌ಗಳಿಂದ ಸೋಲೊಪ್ಪಿಕೊಂಡಿತು.
ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡಿತು. ಹೀಗಾಗಿ ಬ್ಯಾಟಿಂಗ್ ಆರಂಭಿಸಿದ ಭಾರತವು ಕೇವಲ 41 ರನ್‌ಗಳಿಗೆ ತನ್ನ ಮೊದಲ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತು. ನಂತರ ತಂಡದ ಬ್ಯಾಟಿಂಗ್ ವಿಭಾಗ 77 ರನ್ ಕಲೆಹಾಕುವ ಮೊದಲೇ ಪೆವಿಲಿಯನ್ ಸೇರಿಕೊಂಡಿತು. ತಂಡದ ಪರ ಏಕಾಂಗಿ ಹೋರಾಟ ನಡೆಸಿದ ಹರ್ಮನ್‌ಪ್ರೀತ್ ಕೌರ್ ಅದ್ಭುತ ಇನ್ನಿಂಗ್ಸ್ ಆಡಿ 43 ಎಸೆತಗಳಲ್ಲಿ ಒಂಬತ್ತು ಬೌಂಡರಿ ಮತ್ತು ಒಂದು ಸಿಕ್ಸರ್ ಸಹಿತ 68 ರನ್ ಗಳಿಸಿದರು. ಹಾಗೆಯೇ ಅರುಂಧತಿ ರೆಡ್ಡಿ 11 ಎಸೆತಗಳಲ್ಲಿ 27 ರನ್ ಗಳಿಸಿದರೆ, ಅಮನ್‌ಜೋತ್ ಕೌರ್ 21 ರನ್‌ಗಳ ಕೊಡುಗೆ ನೀಡಿದರು. ಪರಿಣಾಮವಾಗಿ, ಭಾರತ ತಂಡವು 20 ಓವರ್‌ಗಳಲ್ಲಿ ಏಳು ವಿಕೆಟ್‌ಗಳ ನಷ್ಟಕ್ಕೆ 175 ರನ್ ಗಳಿಸುವಲ್ಲಿ ಯಶಸ್ವಿಯಾಯಿತು.
5⃣ matches
5⃣ victories 👏#TeamIndia complete an emphatic series sweep with a 15-run win in Trivandrum 🥳Scorecard ▶️ https://t.co/E8eUdWSQXs#INDvSL | @IDFCFIRSTBank pic.twitter.com/tV5VlXq5GB
— BCCI Women (@BCCIWomen) December 30, 2025
176 ರನ್‌ಗಳ ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡ ಕಳಪೆ ಆರಂಭವನ್ನೇ ಪಡೆಯಿತು. ನಾಯಕಿ ಚಮರಿ ಅಟಪಟ್ಟು ಕೇವಲ 2 ರನ್ ಬಾರಿಸಿ ಔಟಾದರು. ಆದಾಗ್ಯೂ, ಹಸಿನಿ ಪೆರೆರಾ ಮತ್ತು ಇಮೇಶಾ ದುಲಾನಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಇಮೇಶಾ ದುಲಾನಿ 39 ಎಸೆತಗಳಲ್ಲಿ 8 ಬೌಂಡರಿ ಸೇರಿದಂತೆ 50 ರನ್ ಬಾರಿಸಿದರೆ, ಹಸಿನಿ ಪೆರೆರಾ ಕೂಡ 42 ಎಸೆತಗಳಲ್ಲಿ 8 ಬೌಂಡರಿ ಮತ್ತು 1 ಸಿಕ್ಸರ್ ಸಹಿತ 65 ರನ್ ಬಾರಿಸಿ ಶ್ರೀಲಂಕಾ ಗೆಲುವಿನ ಭರವಸೆಯನ್ನು ಮೂಡಿಸಿದರು. ಆದಾಗ್ಯೂ, ಭಾರತೀಯ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿ ಶ್ರೀಲಂಕಾವನ್ನು 160 ರನ್‌ಗಳಿಗೆ ಕಟ್ಟಿಹಾಕಿದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:34 pm, Tue, 30 December 25