ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಫೈನಲ್ಗೇರಲು ಟೀಮ್ ಇಂಡಿಯಾ ಮುಂದೆ ಒಟ್ಟು 10 ಪಂದ್ಯಗಳಿವೆ. ಈ ಹತ್ತು ಟೆಸ್ಟ್ ಪಂದ್ಯಗಳಲ್ಲಿ ಐದು ಮ್ಯಾಚ್ಗಳು ತವರಿನಲ್ಲಿ ನಡೆದರೆ, ಮತ್ತೈದು ಪಂದ್ಯಗಳು ಆಸ್ಟ್ರೇಲಿಯಾದಲ್ಲಿ ಜರುಗಲಿದೆ. ಇಲ್ಲಿ ಮೊದಲ 5 ಮ್ಯಾಚ್ಗಳು ತವರಿನಲ್ಲಿ ನಡೆಯುತ್ತಿರುವುದರಿಂದ ಭಾರತ ತಂಡಕ್ಕೆ WTC ಫೈನಲ್ಗೇರಲು ಉತ್ತಮ ಅವಕಾಶವಿದೆ.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಫೈನಲ್ ಆಡಲಿವೆ. ಪ್ರಸ್ತುತ ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ಅಗ್ರಸ್ಥಾನದಲ್ಲಿದೆ. ಒಟ್ಟು 68.51 ಗೆಲುವಿನ ಶೇಕಡಾವಾರು ಹೊಂದಿರುವ ಟೀಮ್ ಇಂಡಿಯಾ ಫೈನಲ್ಗೆ ಪ್ರವೇಶಿಸಬೇಕಿದ್ದರೆ ಮುಂದಿನ 5 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಸಾಕು.
ಅಂದರೆ ಬಾಂಗ್ಲಾದೇಶ್ ವಿರುದ್ಧದ 2 ಟೆಸ್ಟ್ ಪಂದ್ಯಗಳಲ್ಲಿ ಮತ್ತು ನ್ಯೂಝಿಲೆಂಡ್ ವಿರುದ್ಧದ ಮೂರು ಟೆಸ್ಟ್ನಲ್ಲಿ ಭಾರತ ತಂಡವು ಜಯಭೇರಿ ಬಾರಿಸಿದರೆ ಒಟ್ಟು ಗೆಲುವಿನ ಶೇಕಡಾವಾರು 79.76% ಆಗಲಿದೆ. ಇದರೊಂದಿಗೆ ಫೈನಲ್ ಆಡುವುದು ಸಹ ಖಚಿತವಾಗಲಿದೆ.
ಒಂದು ವೇಳೆ ಬಾಂಗ್ಲಾದೇಶ್ ಮತ್ತು ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ ಕ್ಲೀನ್ ಸ್ವೀಪ್ ಮಾಡಿಕೊಂಡರೆ, ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಐದು ಟೆಸ್ಟ್ ಪಂದ್ಯಗಳ ಫಲಿತಾಂಶ ಲೆಕ್ಕಕ್ಕೆ ಬರುವುದಿಲ್ಲ. ಏಕೆಂದರೆ ಅದಕ್ಕೂ ಮುನ್ನವೇ ಟೀಮ್ ಇಂಡಿಯಾ ಫೈನಲ್ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ.
ಹೀಗಾಗಿ ಬಾಂಗ್ಲಾದೇಶ್ ಹಾಗೂ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗಳು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದು. ಅದರಲ್ಲೂ ಈ ಸರಣಿಗಳು ಭಾರತದಲ್ಲೇ ನಡೆಯುತ್ತಿರುವುದರಿಂದ ಟೀಮ್ ಇಂಡಿಯಾಗೆ ಪ್ಲಸ್ ಪಾಯಿಂಟ್ ಆಗಲಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಗೂ ಮುನ್ನ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳುವುದನ್ನು ಎದುರು ನೋಡಬಹುದು.
ಒಂದು ವೇಳೆ ಬಾಂಗ್ಲಾದೇಶ್ ಮತ್ತು ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗಳನ್ನು ಟೀಮ್ ಇಂಡಿಯಾ ಕ್ಲೀನ್ ಸ್ವೀಪ್ ಮಾಡಿಕೊಂಡರೆ, ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಐದು ಪಂದ್ಯಗಳಲ್ಲೂ ಸೋತರೂ ಯಾವುದೇ ಸಮಸ್ಯೆಯಾಗುವುದಿಲ್ಲ. ಬದಲಾಗಿ ಮೊದಲ ಅಥವಾ ಎರಡನೇ ಸ್ಥಾನದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಆಡಲು ಅವಕಾಶ ಪಡೆಯಲಿದೆ.
ಹೀಗಾಗಿಯೇ ಬಾಂಗ್ಲಾದೇಶ್ ಮತ್ತು ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗಳು ಟೀಮ್ ಇಂಡಿಯಾದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಕನಸಿಗೆ ನಿರ್ಣಾಯಕ. ಒಂದು ವೇಳೆ ಈ ಸರಣಿಯಲ್ಲಿ ಕೆಲ ಪಂದ್ಯಗಳಲ್ಲಿ ಸೋತರೂ, ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡಬೇಕಾಗುತ್ತದೆ. ಅದರಲ್ಲೂ ಸರಣಿ ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಬಹುದು.
ಇದಕ್ಕೂ ಮುನ್ನವೇ ತವರಿನಲ್ಲಿ ಬಾಂಗ್ಲಾ-ಕಿವೀಸ್ ಪಡೆಯನ್ನು ಮಣಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಅರ್ಹತೆ ಪಡೆಯಲು ಟೀಮ್ ಇಂಡಿಯಾ ಪ್ಲ್ಯಾನ್ ರೂಪಿಸಿದೆ. ಅದರಂತೆ ಟೀಮ್ ಇಂಡಿಯಾ ಮೂರನೇ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಆಡಲಿದೆಯಾ ಕಾದು ನೋಡಬೇಕಿದೆ.
ಭಾರತ vs ಬಾಂಗ್ಲಾದೇಶ್ ಸರಣಿ:
ತಂಡಗಳು | ದಿನಾಂಕ | ಸಮಯ | ಸ್ಥಳ |
1ನೇ ಟೆಸ್ಟ್, ಭಾರತ vs ಬಾಂಗ್ಲಾದೇಶ | ಗುರುವಾರ, 19 ಸೆಪ್ಟೆಂಬರ್ 2024 | 9:30 AM | ಚೆನ್ನೈ |
2ನೇ ಟೆಸ್ಟ್, ಭಾರತ vs ಬಾಂಗ್ಲಾದೇಶ | ಶುಕ್ರವಾರ, 27 ಸೆಪ್ಟೆಂಬರ್ 2024 | 9:30 AM | ಕಾನ್ಪುರ |
1ನೇ ಟಿ20, ಭಾರತ vs ಬಾಂಗ್ಲಾದೇಶ | ಭಾನುವಾರ, 6 ಅಕ್ಟೋಬರ್ 2024 | 7 PM | ಧರ್ಮಶಾಲಾ |
2ನೇ ಟಿ20, ಭಾರತ vs ಬಾಂಗ್ಲಾದೇಶ | ಬುಧವಾರ, 9 ಅಕ್ಟೋಬರ್ 2024 | 7 PM | ದೆಹಲಿ |
3ನೇ ಟಿ20, ಭಾರತ vs ಬಾಂಗ್ಲಾದೇಶ | ಶನಿವಾರ, 12 ಅಕ್ಟೋಬರ್ 2024 | 7 PM | ಹೈದರಾಬಾದ್ |
ತಂಡಗಳು | ದಿನಾಂಕ | ಸಮಯ | ಸ್ಥಳ |
1ನೇ ಟೆಸ್ಟ್, ಭಾರತ vs ನ್ಯೂಝಿಲೆಂಡ್ | ಬುಧವಾರ, 16 ಅಕ್ಟೋಬರ್ 2024 | 9:30 AM | ಚೆನ್ನೈ |
2ನೇ ಟೆಸ್ಟ್, ಭಾರತ vs ನ್ಯೂಝಿಲೆಂಡ್ | ಗುರುವಾರ, 24 ಅಕ್ಟೋಬರ್ 2024 | 9:30 AM | ಕಾನ್ಪುರ |
3ನೇ ಟೆಸ್ಟ್, ಭಾರತ vs ನ್ಯೂಝಿಲೆಂಡ್ | ಶುಕ್ರವಾರ, 1 ನವೆಂಬರ್ 2024 | 9:30 AM | ಹೈದರಾಬಾದ್ |
ಭಾರತ vs ಆಸ್ಟ್ರೇಲಿಯಾ ಸರಣಿ:
ತಂಡಗಳು | ದಿನಾಂಕ | ಸಮಯ | ಸ್ಥಳ |
1ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ | ಶುಕ್ರವಾರ, 22 ನವೆಂಬರ್ 2024 | 7:50 AM | ಪರ್ತ್ |
2ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ (D/N) | ಶುಕ್ರವಾರ, 6 ಡಿಸೆಂಬರ್ 2024 | 9:30 AM | ಅಡಿಲೇಡ್ |
3ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ | ಶನಿವಾರ, 14 ಡಿಸೆಂಬರ್ 2024 | 5:50 AM | ಬ್ರಿಸ್ಬೇನ್ |
4ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ | ಗುರುವಾರ, 26 ಡಿಸೆಂಬರ್ 2024 | 5 AM | ಮೆಲ್ಬೋರ್ನ್ |
5ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ | ಶುಕ್ರವಾರ, 3 ಜನವರಿ 2025 | 5 AM | ಸಿಡ್ನಿ |