
ಪ್ರಸ್ತುತ ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸದಲ್ಲಿದ್ದು, ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಈ ನಡುವೆ ಬಿಸಿಸಿಐ (BCCI) ಮತ್ತೊಂದು ಪ್ರವಾಸದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪ್ರವಾಸದಲ್ಲಿ ಟೀಂ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ವಾಸ್ತವವಾಗಿ ಬಿಸಿಸಿಐ, 2026 ರಲ್ಲಿ ಟೀಂ ಇಂಡಿಯಾ ಕೈಗೊಳ್ಳಲಿರುವ ಇಂಗ್ಲೆಂಡ್ ಪ್ರವಾಸದ (Team India’s 2026 England Tour) ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪ್ರವಾಸದಲ್ಲಿ ಮೇಲೆ ಹೇಳಿದಂತೆ ಏಕದಿನ ಹಾಗೂ ಟಿ20 ಸರಣಿ ನಡೆಯಲಿದೆ. ಬಿಡುಗಡೆಯಾಗಿರುವ ವೇಳಾಪಟ್ಟಿಯ ಪ್ರಕಾರ ಭಾರತ ಜುಲೈ 1, 2026 ರಿಂದ ಇಂಗ್ಲೆಂಡ್‌ನಲ್ಲಿ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಈ ಪ್ರವಾಸದಲ್ಲಿ ವಿರಾಟ್ ಕೊಹ್ಲಿ (Virat Kohli) ಮತ್ತು ರೋಹಿತ್ ಶರ್ಮಾ (Rohit Sharma) ಕೂಡ ಆಡುವುದನ್ನು ನಾವು ಕಾಣಬಹುದು.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವು ಜುಲೈ 1, 2026 ರಂದು ಡರ್ಹಾಮ್‌ನಲ್ಲಿ ನಡೆಯಲಿದೆ. ಉಳಿದ ನಾಲ್ಕು ಪಂದ್ಯಗಳು ಕ್ರಮವಾಗಿ ಜುಲೈ 4, 7, 9 ಮತ್ತು 11 ರಂದು ನಡೆಯಲಿವೆ. ಎರಡು ದಿನಗಳ ವಿಶ್ರಾಂತಿಯ ನಂತರ ಏಕದಿನ ಸರಣಿ ಆರಂಭವಾಗಲಿದೆ. ಸರಣಿಯ ಮೊದಲ ಪಂದ್ಯ ಜುಲೈ 14 ರಂದು ನಡೆಯಲಿದೆ. ಸರಣಿಯ ಎರಡನೇ ಪಂದ್ಯ ಜುಲೈ 16 ರಂದು ನಡೆಯಲಿದೆ. ಮೂರನೇ ಮತ್ತು ಕೊನೆಯ ಏಕದಿನ ಪಂದ್ಯ ಜುಲೈ 18 ರಂದು ನಡೆಯಲಿದೆ. ಇದರೊಂದಿಗೆ ಸರಣಿ ಮುಕ್ತಾಯಗೊಳ್ಳಲಿದೆ.
ಸೂರ್ಯಕುಮಾರ್ ಯಾದವ್ ಎಂದಿನಂತೆ ಟಿ20 ತಂಡವನ್ನು ಮುನ್ನಡೆಸಲಿದ್ದಾರೆ. ಆದರೆ ರೋಹಿತ್ ಶರ್ಮಾ ಏಕದಿನ ತಂಡವನ್ನು ಮುನ್ನಡೆಸುತ್ತಾರೋ ಇಲ್ಲವೋ ಎಂಬುದನ್ನು ಬಿಸಿಸಿಐ ಶೀಘ್ರದಲ್ಲೇ ನಿರ್ಧರಿಸಬಹುದು. ಬಾಂಗ್ಲಾದೇಶ ಪ್ರವಾಸ ಮುಂದೂಡಲ್ಪಟ್ಟ ನಂತರ, ಟೀಂ ಇಂಡಿಯಾ ಪ್ರಸ್ತುತ ಯಾವುದೇ ಏಕದಿನ ಪಂದ್ಯವನ್ನು ಹೊಂದಿಲ್ಲ. ಈ ವರ್ಷ ಟೀಂ ಇಂಡಿಯಾ 6 ಏಕದಿನ ಪಂದ್ಯಗಳನ್ನು ಆಡಬೇಕಾಗಿದೆ, ಆದರೆ ಕ್ರಿಕೆಟ್ ಅಭಿಮಾನಿಗಳು ಇದಕ್ಕಾಗಿ ಕಾಯಬೇಕಾಗುತ್ತದೆ.
5⃣ T20Is. 3⃣ ODIs
📍 England
Fixtures for #TeamIndia‘s limited over tour of England 2026 announced 🙌#ENGvIND pic.twitter.com/Bp8gDYudXW
— BCCI (@BCCI) July 24, 2025
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:07 pm, Thu, 24 July 25