Team India: ಬಲಿಷ್ಠ ಬ್ಯಾಟಿಂಗ್ ಪಡೆಗೆ ಬಲ ತುಂಬಿದ ಬೌಲರ್​ಗಳು

Team India: ಟೀಮ್ ಇಂಡಿಯಾದಲ್ಲಿ ಮರೆಯಾಗಿದ್ದ ಸಾಂಘಿಕ ಪ್ರದರ್ಶನ ಈ ಬಾರಿಯ ಏಷ್ಯಾಕಪ್​ನಲ್ಲಿ ಮತ್ತೆ ಗೋಚರಿಸಲಾರಂಭಿಸಿದೆ. ಇದಕ್ಕೆ ಸಾಕ್ಷಿಯೇ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಅಗ್ರ ಕ್ರಮಾಂಕದ ನಾಲ್ವರು ಅಬ್ಬರಿಸಿರುವುದು. ಇಲ್ಲಿ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಅರ್ಧಶತಕ ಬಾರಿಸಿದರೆ, 3ನೇ ಮತ್ತು 4ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಶತಕ ಸಿಡಿಸಿದ್ದರು.

Team India: ಬಲಿಷ್ಠ ಬ್ಯಾಟಿಂಗ್ ಪಡೆಗೆ ಬಲ ತುಂಬಿದ ಬೌಲರ್​ಗಳು
Team India
Follow us
| Updated By: ಝಾಹಿರ್ ಯೂಸುಫ್

Updated on: Sep 14, 2023 | 3:41 PM

ಏಷ್ಯಾಕಪ್​ನಲ್ಲಿ ಬಲಿಷ್ಠ ಬ್ಯಾಟಿಂಗ್ ಪಡೆಯೊಂದಿಗೆ ಕಾಣಿಸಿಕೊಂಡ ಟೀಮ್ ಇಂಡಿಯಾ ಪರ ಬೌಲರ್​ಗಳು ಪರಾಕ್ರಮ ಮೆರೆಯುತ್ತಿದ್ದಾರೆ. ಇದಕ್ಕೆ ಸಾಕ್ಷಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ವಿರುದ್ಧ ದಾಖಲೆಯ 228 ರನ್​ಗಳ ಭರ್ಜರಿ ಜಯ ಸಾಧಿಸಿರುವುದು. ಅಂದರೆ ಇಲ್ಲಿ ಭಾರತ ತಂಡವು ಗೆಲುವಿಗಾಗಿ ಕೇವಲ ಬ್ಯಾಟ್ಸ್​ಮನ್​ಗಳನ್ನು ಮಾತ್ರ ನೆಚ್ಚಿಕೊಂಡಿಲ್ಲ ಎಂಬುದು ಸ್ಪಷ್ಟ.

ಸೂಪರ್-4 ಹಂತದಲ್ಲಿ ಪಾಕಿಸ್ತಾನ್ ವಿರುದ್ಧ ಟೀಮ್ ಇಂಡಿಯಾ ಬ್ಯಾಟರ್​ಗಳು ಅಬ್ಬರಿಸಿದ್ದರು. ಅಷ್ಟೇ ಅಲ್ಲದೆ ಕೇವಲ 2 ವಿಕೆಟ್ ನಷ್ಟಕ್ಕೆ 356 ರನ್​ ಕಲೆಹಾಕಿದ್ದರು. ಭಾರತೀಯ ಅಗ್ರ ಕ್ರಮಾಂಕದ ಬ್ಯಾಟರ್​ಗಳ ಅಬ್ಬರ ನೋಡಿದಾಗ ಪಿಚ್​ ಬ್ಯಾಟ್ಸ್​​​ಮನ್​ಗಳಿಗೆ ಸಹಕಾರಿ ಎನ್ನಲಾಗಿತ್ತು.

ಆದರೆ ಪಾಕ್ ಬೌಲರ್​ಗಳ ಪಾಲಿಗೆ ನರಕ ಸೃದಶವಾಗಿದ್ದ ಪಿಚ್​ನಲ್ಲಿ ಟೀಮ್ ಇಂಡಿಯಾ ಬೌಲರ್​ಗಳು ಕರಾರುವಾಕ್ ದಾಳಿ ಸಂಘಟಿಸಿದರು. ಅಷ್ಟೇ ಅಲ್ಲದೆ ಪಾಕ್ ತಂಡವನ್ನು ಕೇವಲ 128 ರನ್​ಗಳಿಗೆ ಆಲೌಟ್ ಮಾಡಿ ಅಮೋಘ ಗೆಲುವು ದಾಖಲಿಸಿತು. ಇದಾದ ಬಳಿಕ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು ಮುಗ್ಗರಿಸಿದರು. ಆದರೆ ಈ ಬಾರಿ ಕೂಡ ಭಾರತ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ಬೌಲರ್​ಗಳು ಪ್ರಮುಖ ಪಾತ್ರವಹಿಸಿದರು.

214 ರನ್​ಗಳ ಸುಲಭ ಸವಾಲು ಬೆನ್ನತ್ತಿದ ಶ್ರೀಲಂಕಾ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಜಸ್​ಪ್ರೀತ್ ಬುಮ್ರಾ ಯಶಸ್ವಿಯಾಗಿದ್ದರು. ಆ ಬಳಿಕ ಕುಲ್ದೀಪ್ ಯಾದವ್ ಸ್ಪಿನ್ ಮೋಡಿ. ಅಷ್ಟರಲ್ಲಾಗಲೇ ಶ್ರೀಲಂಕಾ ತಂಡವು 172 ರನ್​ಗಳಿಗೆ ಆಲೌಟ್. ಅಂದರೆ ಎರಡೂ ಪಂದ್ಯಗಳಲ್ಲೂ ಭಾರತೀಯ ಬೌಲರ್​ಗಳು ಕರಾರುವಾಕ್ ದಾಳಿ ಸಂಘಟಿಸಿರುವುದು ಸ್ಪಷ್ಟ.

ಬೂಮ್ ಬೂಮ್ ಎಂಟ್ರಿ:

ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಅವರ ಎಂಟ್ರಿಯೊಂದಿಗೆ ಭಾರತ ತಂಡವು ಬೌಲಿಂಗ್ ವಿಭಾಗದಲ್ಲಿ ಮತ್ತಷ್ಟು ಬಲಿಷ್ಠವಾಗಿದೆ. ಎದುರಾಳಿ ಬ್ಯಾಟ್ಸ್‌ಮನ್‌ಗಳ ಮೇಲೆ ಹೊಸ ಚೆಂಡಿನೊಂದಿಗೆ ಒತ್ತಡ ಹೇರುವಲ್ಲಿ ಬುಮ್ರಾ ಯಶಸ್ವಿಯಾಗುತ್ತಿದ್ದಾರೆ. ಇದರ ಫಲವಾಗಿ ಮೊದಲ ಪವರ್​ಪ್ಲೇನಲ್ಲಿ ಭಾರತಕ್ಕೆ ಯಶಸ್ಸು ಸಿಗುತ್ತಿದೆ.

ಇನ್ನು ಮಧ್ಯಮ ಕ್ರಮಾಂಕದ ಬ್ಯಾಟರ್​ಗಳಿಗೆ ಪೆವಿಲಿಯನ್ ಹಾದಿ ತೋರಿಸುವಲ್ಲಿ ಎಡಗೈ ಸ್ಪಿನ್ನ ಕುಲ್ದೀಪ್ ಯಾದವ್ ನಿಸ್ಸೀಮರು ಎಂಬುದನ್ನು ಬ್ಯಾಕ್ ಟು ಬ್ಯಾಕ್ ಪಂದ್ಯಗಳಲ್ಲಿ ಸಾಬೀತುಪಡಿಸಿದ್ದಾರೆ. ಇದಕ್ಕೆ ಸಾಕ್ಷಿಯೇ ಪಾಕ್ ವಿರುದ್ಧದ 5 ವಿಕೆಟ್​ಗಳು ಹಾಗೂ ಶ್ರೀಲಂಕಾ ವಿರುದ್ಧದ 4 ವಿಕೆಟ್​ಗಳು.

ಬ್ಯಾಟರ್​ಗಳಿಗೆ ಬೌಲರ್​ಗಳ ಸಾಥ್:

ಟೀಮ್ ಇಂಡಿಯಾದಲ್ಲಿ ಮರೆಯಾಗಿದ್ದ ಸಾಂಘಿಕ ಪ್ರದರ್ಶನ ಈ ಬಾರಿಯ ಏಷ್ಯಾಕಪ್​ನಲ್ಲಿ ಮತ್ತೆ ಗೋಚರಿಸಲಾರಂಭಿಸಿದೆ. ಇದಕ್ಕೆ ಸಾಕ್ಷಿಯೇ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಅಗ್ರ ಕ್ರಮಾಂಕದ ನಾಲ್ವರು ಅಬ್ಬರಿಸಿರುವುದು. ಇಲ್ಲಿ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಅರ್ಧಶತಕ ಬಾರಿಸಿದರೆ, 3ನೇ ಮತ್ತು 4ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಶತಕ ಸಿಡಿಸಿದ್ದರು.

ಇನ್ನು ಬೌಲಿಂಗ್​ನಲ್ಲಿ ಕುಲ್ದೀಪ್ ಯಾದವ್ 5 ವಿಕೆಟ್ ಪಡೆದರೆ, ಬುಮ್ರಾ ಆರಂಭಿಕ ವಿಕೆಟ್ ಕಬಳಿಸಿದ್ದರು. ಇಂತಹದೊಂದು ಸಾಂಘಿಕ ಪ್ರದರ್ಶನ ಫಲವಾಗಿ ಟೀಮ್ ಇಂಡಿಯಾ ಪಾಕ್ ತಂಡವನ್ನು ಹೀನಾಯವಾಗಿ ಸೋಲಿಸಲು ಸಾಧ್ಯವಾಗಿದೆ. ಹಾಗೆಯೇ ಶ್ರೀಲಂಕಾ ವಿರುದ್ಧ ಕಡಿಮೆ ಸ್ಕೋರ್​ಗಳಿಸಿದರೂ ಗೆಲುವು ದಾಖಲಿಸಿದೆ.

ಇದನ್ನೂ ಓದಿ: ಕಿಂಗ್ ಕೊಹ್ಲಿಯ 1 ಶತಕಕ್ಕೆ 10 ದಾಖಲೆಗಳು ಉಡೀಸ್..!

ಅತ್ತ ಈ ಟೂರ್ನಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿರುವ ರೋಹಿತ್ ಶರ್ಮಾ ಒಟ್ಟು 194 ರನ್​ ಕಲೆಹಾಕಿದ್ದಾರೆ. ಈ ಮೂಲಕ ಈ ಬಾರಿಯ ಏಷ್ಯಾಕಪ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಮತ್ತೊಂದೆಡೆ ಕುಲ್ದೀಪ್ ಯಾದವ್ ಒಟ್ಟು 9 ವಿಕೆಟ್ ಉರುಳಿಸುವ ಮೂಲಕ ವಿಕೆಟ್ ಟೇಕರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅಂದರೆ ಇಲ್ಲಿ ಟೀಮ್ ಇಂಡಿಯಾ ಬ್ಯಾಟರ್-ಬೌಲರ್​ಗಳ ಜುಗಲ್​ಬಂದಿಯಿಂದ ಎದುರಾಳಿಗಳು ಕಂಗೆಟ್ಟಿದ್ದಾರೆ. ಈ ಕಂಗೆಡಿಸುವಿಕೆ ಮುಂಬರುವ ಏಕದಿನ ವಿಶ್ವಕಪ್​ನಲ್ಲೂ ಮುಂದುವರೆಯಲಿದೆಯಾ ಕಾದು ನೋಡಬೇಕಿದೆ.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ