ಟೀಮ್ ಇಂಡಿಯಾ ಜೆರ್ಸಿ ಮೇಲೆ ಪಾಕಿಸ್ತಾನದ ಹೆಸರು..!
Champions Trophy 2025: ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಫೆಬ್ರವರಿ 19 ರಿಂದ ಶುರುವಾಗಲಿದೆ. ಅಂದರೆ ನಾಳೆಯಿಂದ ಆರಂಭವಾಗಲಿರುವ ಈ ಟೂರ್ನಿಯ ಫೈನಲ್ ಪಂದ್ಯ ಮಾರ್ಚ್ 9 ರಂದು ನಡೆಯಲಿದೆ. ಹೈಬ್ರಿಡ್ ಮಾದರಿಯಲ್ಲಿ ಜರುಗಲಿರುವ ಈ ಟೂರ್ನಿಯ ಬಹುತೇಕ ಮ್ಯಾಚ್ಗಳು ಪಾಕಿಸ್ತಾನದಲ್ಲಿ ನಡೆಯಲಿದ್ದು, ಭಾರತ ತಂಡದ ಪಂದ್ಯಗಳಿಗೆ ದುಬೈ ಆತಿಥ್ಯವಹಿಸಲಿದೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯಲಿರುವ ಟೀಮ್ ಇಂಡಿಯಾದ ನೂತನ ಜೆರ್ಸಿ ಅನಾವರಣಗೊಂಡಿದೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಧರಿಸಿದ್ದ ವಿನ್ಯಾಸವನ್ನೇ ಚಾಂಪಿಯನ್ಸ್ ಟ್ರೋಫಿಗೂ ಮುಂದುವರೆಸಲಾಗಿದೆ. ಅಲ್ಲದೆ ಜೆರ್ಸಿಯ ಬಲ ಭಾಗದಲ್ಲಿ ಚಾಂಪಿಯನ್ಸ್ ಟ್ರೋಫಿ ಲೋಗೊವನ್ನು ನೀಡಲಾಗಿದೆ.
ವಿಶೇಷ ಎಂದರೆ ಈ ಲೋಗೊ ಜೊತೆ ಆತಿಥ್ಯ ರಾಷ್ಟ್ರವಾದ ಪಾಕಿಸ್ತಾನದ ಹೆಸರು ಕಾಣಿಸಿಕೊಂಡಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಜೆರ್ಸಿ ಮೇಲೆ ಪಾಕಿಸ್ತಾನದ ಹೆಸರು ಕಾಣಿಸಿಕೊಳ್ಳುವುದಿಲ್ಲ ಎಂದು ವರದಿಯಾಗಿತ್ತು. ಆದರೆ ಐಸಿಸಿ ಟೂರ್ನಿಯಲ್ಲಿ ಆತಿಥ್ಯ ದೇಶದ ಹೆಸರು ನಮೂದಿಸುವುದು ಕಡ್ಡಾಯ. ಹೀಗಾಗಿ ಚಾಂಪಿಯನ್ಸ್ ಟ್ರೋಫಿ ಲೋಗೊ ಜೊತೆ ಪಾಕಿಸ್ತಾನದ ಹೆಸರು ಸಹ ಟೀಮ್ ಇಂಡಿಯಾ ಜೆರ್ಸಿ ಮೇಲೆ ಕಾಣಿಸಿಕೊಂಡಿದೆ.

ಟೀಮ್ ಇಂಡಿಯಾ ಜೆರ್ಸಿ ಮೇಲೆ ಪಾಕಿಸ್ತಾನದ ಹೆಸರು
ಒನ್ಲಿ ಇಂಡಿಯಾ:
ಚಾಂಪಿಯನ್ಸ್ ಟ್ರೋಫಿ ಜೆರ್ಸಿ ಮುಂಭಾಗದಲ್ಲಿ ಯಾವುದೇ ಜಾಹೀರಾತು ಕಾಣಿಸಿಕೊಳ್ಳುವುದಿಲ್ಲ. ಐಸಿಸಿ ನಿಯಮದ ಪ್ರಕಾರ, ಜೆರ್ಸಿ ಮುಂಭಾಗದಲ್ಲಿ ಜಾಹೀರಾತು ಪ್ರಕಟಿಸುವಂತಿಲ್ಲ. ಬದಲಾಗಿ ಆಯಾ ದೇಶಗಳ ಹೆಸರು ಮಾತ್ರ ಇರಬೇಕು.
ಅದರಂತೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡದ ಜೆರ್ಸಿ ಮೇಲೆ INDIA ಎಂದು ಮಾತ್ರ ಕಾಣಿಸಿಕೊಳ್ಳಲಿದೆ. ಇನ್ನು ಈ ಜೆರ್ಸಿಯ ಮತ್ತೊಂದು ವೈಶಿಷ್ಟ್ಯವೆಂದರೆ ಭುಜದ ಮೇಲೆ ತ್ರಿವರ್ಣ ಧ್ವಜದ ಚಿತ್ರವಿರುವುದು. ಈ ವಿನ್ಯಾಸವೇ ಭಾರತ ತಂಡದ ಹೊಸ ಜೆರ್ಸಿಯನ್ನು ಭಿನ್ನವಾಗಿಸಿದೆ ಎನ್ನಬಹುದು.
ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಜೆರ್ಸಿ:
View this post on Instagram
ಚಾಂಪಿಯನ್ಸ್ ಟ್ರೋಫಿ ಯಾವಾಗ ಶುರು?
ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಫೆಬ್ರವರಿ 19 ರಿಂದ ಶುರುವಾಗಲಿದೆ. ಹಾಗೆಯೇ ಫೈನಲ್ ಪಂದ್ಯ ಮಾರ್ಚ್ 9 ರಂದು ನಡೆಯಲಿದೆ. ಹೈಬ್ರಿಡ್ ಮಾದರಿಯಲ್ಲಿ ಜರುಗಲಿರುವ ಈ ಟೂರ್ನಿಯ ಬಹುತೇಕ ಮ್ಯಾಚ್ಗಳು ಪಾಕಿಸ್ತಾನದಲ್ಲಿ ನಡೆಯಲಿದ್ದು, ಭಾರತ ತಂಡದ ಪಂದ್ಯಗಳಿಗೆ ದುಬೈ ಆತಿಥ್ಯವಹಿಸಲಿದೆ.
ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯಲಿರುವ 8 ತಂಡಗಳ ಪಟ್ಟಿ ಇಲ್ಲಿದೆ
ಚಾಂಪಿಯನ್ಸ್ ಟ್ರೋಫಿ ಟೀಮ್ ಇಂಡಿಯಾ ವೇಳಾಪಟ್ಟಿ:
- ಭಾರತ vs ಬಾಂಗ್ಲಾದೇಶ್: ಫೆಬ್ರವರಿ 20 (ದುಬೈ)
- ಭಾರತ vs ಪಾಕಿಸ್ತಾನ್: ಫೆಬ್ರವರಿ 23 (ದುಬೈ)
- ಭಾರತ vs ನ್ಯೂಝಿಲೆಂಡ್: ಮಾರ್ಚ್ 2 (ದುಬೈ)
- ಸೆಮಿಫೈನಲ್ (ಅರ್ಹತೆ ಪಡೆದರೆ): ಮಾರ್ಚ್ 4 (ದುಬೈ)
- ಫೈನಲ್ (ಅರ್ಹತೆ ಪಡೆದರೆ): ಮಾರ್ಚ್ 9 (ದುಬೈ)
ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 2.30 ರಿಂದ ಶುರುವಾಗಲಿದೆ.
