AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದ ಮುಂಬರುವ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Team India's Full Schedule 2025: ಭಾರತ ತಂಡವು ಮುಂಬರುವ ಟಿ20 ವಿಶ್ವಕಪ್​ಗೂ ಮುನ್ನ ಒಟ್ಟು 4 ಸರಣಿಗಳನ್ನು ಆಡಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಎದುರಾಳಿಗಳಾಗಿ ಕಾಣಿಸಿಕೊಳ್ಳಲಿರುವುದು ವೆಸ್ಟ್ ಇಂಡೀಸ್, ಆಸ್ಟ್ರೇಲಿಯಾ, ಸೌತ್ ಆಫ್ರಿಕಾ ಹಾಗೂ ನ್ಯೂಝಿಲೆಂಡ್. ಈ ಸರಣಿಗಳ ಬಳಿಕ ಭಾರತ ತಂಡವು ಟಿ20 ವಿಶ್ವಕಪ್​ಗಾಗಿ ಸಜ್ಜಾಗಲಿದೆ.

ಟೀಮ್ ಇಂಡಿಯಾದ ಮುಂಬರುವ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ
Team India
ಝಾಹಿರ್ ಯೂಸುಫ್
|

Updated on: Aug 05, 2025 | 3:24 PM

Share

ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಪೂರ್ಣಗೊಂಡಿದೆ. 5 ಪಂದ್ಯಗಳ ಸರಣಿಯನ್ನು 2-2 ಅಂತರದಿಂದ ಸಮಗೊಳಿಸುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ. ಈ ಯಶಸ್ವಿ ಸರಣಿ ಬಳಿಕ ಟೀಮ್ ಇಂಡಿಯಾ ಆಡಲಿರುವುದು ಏಷ್ಯಾಕಪ್ ಎಂಬುದು ವಿಶೇಷ. ಅಂದರೆ ಆಗಸ್ಟ್​ನಲ್ಲಿ ನಿಗದಿಯಾಗಿದ್ದ ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಸರಣಿಯನ್ನು ಈಗಾಗಲೇ ರದ್ದುಗೊಳಿಸಲಾಗಿದೆ. ಹೀಗಾಗಿ ಈ ತಿಂಗಳಲ್ಲಿ ಯಾವುದೇ ಪಂದ್ಯ ನಡೆಯುವ ಸಾಧ್ಯತೆಯಿಲ್ಲ.

ಅದರಂತೆ ಸೆಪ್ಟೆಂಬರ್ 9 ರಿಂದ ಶುರುವಾಗಲಿರುವ ಏಷ್ಯಾಕಪ್ ಮೂಲಕ ಟೀಮ್ ಇಂಡಿಯಾ ಮತ್ತೆ ಕಣಕ್ಕಿಳಿಯಲಿದೆ. ಏಷ್ಯಾಕಪ್​ನಲ್ಲಿ ಭಾರತ ತಂಡವು ಸೆಪ್ಟೆಂಬರ್ 10 ರಂದು ಅಭಿಯಾನ ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ಯುಎಇ ತಂಡವನ್ನು ಎದುರಿಸಲಿದೆ. ಇದಾದ ಬಳಿಕ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಈ ಪಂದ್ಯವು ಸೆಪ್ಟೆಂಬರ್ 14 ರಂದು ನಡೆಯಲಿದೆ.  ಭಾರತ ತಂಡದ ಮುಂದಿನ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ…

ಭಾರತದ ಏಷ್ಯಾಕಪ್ ಸಂಪೂರ್ಣ ವೇಳಾಪಟ್ಟಿ:

  • ಭಾರತ vs ಯುಎಇ – ಸೆಪ್ಟೆಂಬರ್ 10 | ಬುಧವಾರ
  • ಭಾರತ vs ಪಾಕಿಸ್ತಾನ್ – ಸೆಪ್ಟೆಂಬರ್ 14 | ಭಾನುವಾರ
  • ಭಾರತ vs ಒಮಾನ್ – ಸೆಪ್ಟೆಂಬರ್ 19 | ಶುಕ್ರವಾರ

ಏಷ್ಯಾಕಪ್ ಸೂಪರ್ ಫೋರ್ ಹಂತದ ವೇಳಾಪಟ್ಟಿ:

  • ಬಿ1 vs ಬಿ2 20 ಸೆಪ್ಟೆಂಬರ್ | ಶನಿವಾರ
  • A1 vs A2 21 ಸೆಪ್ಟೆಂಬರ್ | ಭಾನುವಾರ
  • A2 vs B1 23 ಸೆಪ್ಟೆಂಬರ್ | ಮಂಗಳವಾರ
  • A1 vs B2 24 ಸೆಪ್ಟೆಂಬರ್ | ಬುಧವಾರ
  • A2 vs B2 25 ಸೆಪ್ಟೆಂಬರ್ | ಗುರುವಾರ
  • A1 vs B1 26 ಸೆಪ್ಟೆಂಬರ್ | ಶುಕ್ರವಾರ
  • (ಭಾರತವು A1 ಅಥವಾ A2 ಆಗಿರುತ್ತದೆ)

ಭಾರತ vs ವೆಸ್ಟ್ ಇಂಡೀಸ್ ಸರಣಿ ವೇಳಾಪಟ್ಟಿ:

  • ಅಕ್ಟೋಬರ್ 2: ಮೊದಲ ಟೆಸ್ಟ್  ಪಂದ್ಯ ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್ 
  • ಅಕ್ಟೋಬರ್ 10: ಎರಡನೇ ಟೆಸ್ಟ್ ಪಂದ್ಯ ಅರುಣ್ ಜೇಟ್ಲಿ ಕ್ರೀಡಾಂಗಣ, ದೆಹಲಿ 

ಭಾರತ vs ಆಸ್ಟ್ರೇಲಿಯಾ ಸರಣಿ ವೇಳಾಪಟ್ಟಿ:

  • ಅಕ್ಟೋಬರ್ 19: ಮೊದಲ ಏಕದಿನ ಪಂದ್ಯ ಪರ್ತ್ ಕ್ರೀಡಾಂಗಣ, ಪರ್ತ್
  • ಅಕ್ಟೋಬರ್ 23: ಎರಡನೇ ಏಕದಿನ ಪಂದ್ಯ ಅಡಿಲೇಡ್ ಓವಲ್
  • ಅಕ್ಟೋಬರ್ 25: ಮೂರನೇ ಏಕದಿನ ಪಂದ್ಯ ಸಿಡ್ನಿ ಕ್ರಿಕೆಟ್ ಮೈದಾನ, ಸಿಡ್ನಿ
  • ಅಕ್ಟೋಬರ್ 29: ಮೊದಲ ಟಿ20 ಪಂದ್ಯ  ಮನುಕಾ ಓವಲ್, ಕ್ಯಾನ್‌ಬೆರಾ
  • ಅಕ್ಟೋಬರ್ 31: ಎರಡನೇ ಟಿ20 ಪಂದ್ಯ ಮೆಲ್ಬೋರ್ನ್ ಕ್ರಿಕೆಟ್ ಮೈದಾನ
  • ನವೆಂಬರ್ 2,: ಮೂರನೇ ಟಿ20 ಪಂದ್ಯ ಬೆಲ್ಲೆರಿವ್ ಓವಲ್, ಹೋಬಾರ್ಟ್
  • ನವೆಂಬರ್ 6: ನಾಲ್ಕನೇ ಟಿ20 ಪಂದ್ಯ  ಗೋಲ್ಡ್ ಕೋಸ್ಟ್ ಕ್ರೀಡಾಂಗಣ, ಕ್ಯಾರಾರಾ
  • ನವೆಂಬರ್ 8: ಐದನೇ ಟಿ20 ಪಂದ್ಯ ದಿ ಗಬ್ಬಾ, ಬ್ರಿಸ್ಬೇನ್

ಭಾರತ vs ಸೌತ್ ಆಫ್ರಿಕಾ ಸರಣಿ ವೇಳಾಪಟ್ಟಿ:

  • ನವೆಂಬರ್ 14: ಮೊದಲ ಟೆಸ್ಟ್​  ಈಡನ್ ಗಾರ್ಡನ್ಸ್, ಕೋಲ್ಕತ್ತಾ
  • ನವೆಂಬರ್ 22: ಎರಡನೇ 2ನೇ ಟೆಸ್ಟ್ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ
  • ನವೆಂಬರ್ 30: ಮೊದಲ ಏಕದಿನ ಪಂದ್ಯ ಜೆಎಸ್‌ಸಿಎ ಅಂತರಾಷ್ಟ್ರೀಯ ಕ್ರೀಡಾಂಗಣ, ರಾಂಚಿ
  • ಡಿಸೆಂಬರ್ 3: ಎರಡನೇ ಏಕದಿನ ಪಂದ್ಯ ಶಹೀದ್ ವೀರ್ ನಾರಾಯಣ್ ಸಿಂಗ್ ಕ್ರೀಡಾಂಗಣ, ರಾಯ್‌ಪುರ
  • ಡಿಸೆಂಬರ್ 6: ಮೂರನೇ ಏಕದಿನ ಪಂದ್ಯ  ಡಾ. ವೈಎಸ್ ರಾಜಶೇಖರ ರೆಡ್ಡಿ ಸ್ಟೇಡಿಯಂ, ವಿಶಾಖಪಟ್ಟಣಂ
  • ಡಿಸೆಂಬರ್ 9: ಮೊದಲ ಟಿ20 ಪಂದ್ಯ ಬಾರಾಬತಿ ಕ್ರೀಡಾಂಗಣ, ಕಟಕ್
  • ಡಿಸೆಂಬರ್ 11: ಎರಡನೇ ಟಿ20 ಪಂದ್ಯಮಹಾರಾಜ ಯಾದವೀಂದ್ರ ಸಿಂಗ್ ಸ್ಟೇಡಿಯಂ, ನ್ಯೂ ಚಂಡೀಗಢ
  • ಡಿಸೆಂಬರ್ 14: ಮೂರನೇ ಟಿ20 ಪಂದ್ಯ- HPCA ಸ್ಟೇಡಿಯಂ, ಧರ್ಮಶಾಲಾ
  • ಡಿಸೆಂಬರ್ 17: ನಾಲ್ಕನೇ ಟಿ20 ಪಂದ್ಯ ಏಕಾನಾ ಕ್ರಿಕೆಟ್ ಕ್ರೀಡಾಂಗಣ, ಲಕ್ನೋ
  • ಡಿಸೆಂಬರ್ 19: ಐದನೇ ಟಿ20 ಪಂದ್ಯನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್

ಭಾರತ vs ನ್ಯೂಝಿಲೆಂಡ್ ಸರಣಿ ವೇಳಾಪಟ್ಟಿ:

  • ಜನವರಿ 11, 2026 – ಮೊದಲ ಟಿ20 ಪಂದ್ಯ – ನಾಗ್ಪುರ
  • ಜನವರಿ 13, 2026 – ಎರಡನೇ ಟಿ20 ಪಂದ್ಯ – ರಾಯಪುರ 
  • ಜನವರಿ 16, 2026 – ಮೂರನೇ ಟಿ20 ಪಂದ್ಯ – ಗುವಾಹಟಿ 
  • ಜನವರಿ 19, 2026 – ನಾಲ್ಕನೇ ಟಿ20 ಪಂದ್ಯ – ವಿಶಾಖಪಟ್ಟಣಂ
  • ಜನವರಿ 22, 2026 – ಐದನೇ ಟಿ20 ಪಂದ್ಯತಿರುವನಂತಪುರಂ
  • ಜನವರಿ 25, 2026 – ಮೊದಲ ಏಕದಿನ ಪಂದ್ಯಬರೋಡಾ
  • ಜನವರಿ 28, 2026 – ಎರಡನೇ ಏಕದಿನ ಪಂದ್ಯ – ರಾಜ್‌ಕೋಟ್
  • ಜನವರಿ 31, 2026 – ಮೂರನೇ ಏಕದಿನ ಪಂದ್ಯ ಇಂದೋರ್

ಇದನ್ನೂ ಓದಿ: Mohammed Siraj: ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಧನ್ಯವಾದಗಳು ಭಯ್ಯಾ..!

ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯ ಬಳಿಕ ಭಾರತ ತಂಡವು ಟಿ20 ವಿಶ್ವಕಪ್​ಗೆ ಸಜ್ಜಾಗಲಿದೆ. ಶ್ರೀಲಂಕಾ-ಭಾರತದಲ್ಲಿ ನಡೆಯಲಿರುವ 2026ರ ಟಿ20 ವಿಶ್ವಕಪ್ ಫೆಬ್ರವರಿ ಮತ್ತು ಮಾರ್ಚ್ ನಡುವೆ ನಡೆಯುವ ಸಾಧ್ಯತೆಯಿದೆ. ಇದಾದ ಬಳಿಕ ಟೀಮ್ ಇಂಡಿಯಾ ಆಟಗಾರರು ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ